ನ್ಯೂಸ್ 18 ಚುನಾವಣೋತ್ತರ ಸಮೀಕ್ಷೆ : ಸುಮಲತಾಗೆ ಸೋಲು?
Recommended Video
ಬೆಂಗಳೂರು, ಮೇ 19 : 2019ರ ಲೋಕಸಭಾ ಚುನಾವಣೆಗೆ ಮತದಾನ ಮುಕ್ತಾಯಗೊಂಡಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಎರಡು ಹಂತದಲ್ಲಿ ಮತದಾನ ನಡೆದಿತ್ತು. ಮೇ 23ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಭಾನುವಾರ ಅಂತಿಮ ಹಂತದ ಮತದಾನ ಮುಕ್ತಾಯಗೊಂಡಿದ್ದು ವಿವಿಧ ರಾಷ್ಟ್ರೀಯ ವಾಹಿನಿಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆ ಫಲಿತಾಂಶ ಪ್ರಕಟವಾಗಿದೆ. ನ್ಯೂಸ್ 18 ಮತ್ತು IPSOS ಜಂಟಿಯಾಗಿ ನಡೆಸಿದ ಸಮೀಕ್ಷೆಯ ವರದಿಯೂ ಬಿಡುಗಡೆಯಾಗಿದೆ.
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 18 ಮತ್ತು 23ರಂದು ಚುನಾವಣೆ ನಡೆದಿತ್ತು. ಬಿಜೆಪಿ 27 ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದು (ಮಂಡ್ಯ ಹೊರತುಪಡಿಸಿ). ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದ್ದವು. ಕಾಂಗ್ರೆಸ್ 22, ಜೆಡಿಎಸ್ 6 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು.
ನ್ಯೂಸ್ 18 ಮತ್ತು IPSOS ಚುನಾವಣೋತ್ತರ ಸಮೀಕ್ಷೆ ಪ್ರಕಾರ ಕರ್ನಾಟಕದ ಬಿಜೆಪಿ 22, ಕಾಂಗ್ರೆಸ್-ಜೆಡಿಎಸ್ 6, ಇತರರು 0 ಕ್ಷೇತ್ರಗಳಲ್ಲಿ ಜಯಗಳಿಸಲಿದ್ದಾರೆ. ಈ ಫಲಿತಾಂಶದ ಪ್ರಕಾರ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಸೋಲು ಅನುಭವಿಸಲಿದ್ದಾರೆ. ಕಾಂಗ್ರೆಸ್ ಕಡಿಮೆ ಸ್ಥಾನಗಳಲ್ಲಿ ಜಯಗಳಿಸಲಿದೆ.

ಎರಡು ಹಂತದಲ್ಲಿ ಮತದಾನ
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 18 ಮತ್ತು 23ರಂದು ಎರಡು ಹಂತದಲ್ಲಿ ಮತದಾನ ನಡೆದಿತ್ತು. ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದು, ರಾಜ್ಯದ ಫಲಿತಾಂಶದ ಮೇಲೆ ಇಡೀ ದೇಶದ ಕಣ್ಣಿದೆ.

ನ್ಯೂಸ್ 18 ಮತ್ತು IPSOS ಫಲಿತಾಂಶ
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಬಗ್ಗೆ ನ್ಯೂಸ್ 18 ಮತ್ತು IPSOS ನಡೆಸಿದ ಚುನಾವಣೋತ್ತರ ಸಮೀಕ್ಷೆ ಪ್ರಕಾರ ಬಿಜೆಪಿ 22 ಸ್ಥಾನಗಳನ್ನು ಗಳಿಸುವ ಮೂಲಕ ಮೇಲುಗೈ ಸಾಧಿಸಲಿದೆ. ಕರ್ನಾಟಕದ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು 22 ಸ್ಥಾನಗಳಲ್ಲಿ ಜಯಗಳಿಸುತ್ತೇವೆ ಎಂದು ಹೇಳುತ್ತಿದ್ದರು.

ಮೈತ್ರಿಕೂಟಕ್ಕೆ 6 ಸೀಟುಗಳು
ನ್ಯೂಸ್ 18 ಮತ್ತು IPSOS ಚುನಾವಣೋತ್ತರ ಸಮೀಕ್ಷೆ ಪ್ರಕಾರ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ 6 ಸ್ಥಾನಗಳಲ್ಲಿ ಮಾತ್ರ ಜಯಗಳಿಸಲಿದೆ. 28 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 22, ಜೆಡಿಎಸ್ 6 ಸ್ಥಾನಗಳಲ್ಲಿ ಕಣಕ್ಕಿಳಿದಿವೆ.

ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ
ನ್ಯೂಸ್ 18 ಮತ್ತು IPSOS ಚುನಾವಣೋತ್ತರ ಸಮೀಕ್ಷೆ ಪ್ರಕಾರ ಮಂಡ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಜಯಗಳಿಸಲಿದ್ದಾರೆ. ಬಿಜೆಪಿ ಕ್ಷೇತ್ರದಲ್ಲಿ ಅಭ್ಯರ್ಥಿ ಕಣಕ್ಕಿಳಿಸದೇ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೆ ಬೆಂಬಲ ನೀಡಿತ್ತು.

ಕರ್ನಾಟಕದ ಒಟ್ಟಾರೆ ಫಲಿತಾಂಶ
ನ್ಯೂಸ್ 18 ಮತ್ತು IPSOS ಚುನಾವಣೋತ್ತರ ಸಮೀಕ್ಷೆಯ ಕರ್ನಾಟಕದ 28 ಕ್ಷೇತ್ರಗಳ ಅಂತಿಮ ಫಲಿತಾಂಶ ಹೀಗಿದೆ.
* ಬಿಜೆಪಿ 22
* ಕಾಂಗ್ರೆಸ್-ಜೆಡಿಎಸ್ 6
* ಇತರರು 0











Click it and Unblock the Notifications