• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಇಂಡಿಯಾ ಟುಡೇ ಸಮೀಕ್ಷೆ: ಬಿಹಾರದಲ್ಲಿ ಎನ್ಡಿಎ ಮತ್ತೆ ಅಧಿಕಾರಕ್ಕೆ

|

ಪಾಟ್ನಾ, ಅ. 20: ಬಿಹಾರ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಇಂಡಿಯಾ ಟುಡೇ- ಆಜ್ ತಕ್ ಸಂಸ್ಥೆ ಜೊತೆಗೆ ಲೋಕನೀತಿ-ಸಿಎಸ್ ಡಿಎಸ್ ಸಂಸ್ಥೆ ಅಕ್ಟೋಬರ್ 10 ರಿಂದ 17ರ ಅವಧಿಯಲ್ಲಿ ಈ ಸಮೀಕ್ಷೆ, ಅಭಿಪ್ರಾಯ ಸಂಗ್ರಹ ಮಾಡಿ, ಚುನಾವಣಾ ಪೂರ್ವ ವರದಿಯನ್ನು ನೀಡಿದೆ.

ಚುನಾವಣಾ ಪೂರ್ವ ಸಮೀಕ್ಷೆಯಂತೆ ಎನ್ಡಿಎ ಮತ್ತೆ ಅಧಿಕಾರಕ್ಕೇರುವುದು, ನಿತೀಶ್ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗುವುದು ನಿಶ್ಚಿತ ಎಂದು ಹೇಳಲಾಗಿದೆ.

ಲೋಕನೀತಿ-ಸಿಎಸ್ಡಿಎಸ್ ಅಭಿಮತ: ಬಿಹಾರಕ್ಕೆ ನಿತೀಶ್ ಸಿಎಂ

243 ಸದಸ್ಯ ಬಲ ಹೊಂದಿರುವ ಬಿಹಾರ ವಿಧಾನಸಭೆ ಅವಧಿಯು ನವೆಂಬರ್ 29 ರಂದು ಕೊನೆಗೊಳ್ಳಲಿದೆ. ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆಯೂ ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್ 28ರಂದು 16 ಜಿಲ್ಲೆಗಳ 71 ಕ್ಷೇತ್ರಗಳಿಗೆ 31,000 ಮತಗಟ್ಟೆಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಮೂರು ಹಂತದಲ್ಲಿ ಚುನಾವಣೆ

ಮೂರು ಹಂತದಲ್ಲಿ ಚುನಾವಣೆ

ನವೆಂಬರ್ 03ರಂದು ಎರಡನೆಯ ಹಂತದಲ್ಲಿ 17 ಜಿಲ್ಲೆಗಳಲ್ಲಿ 94 ಕ್ಷೇತ್ರಗಳಿಗೆ 42,000 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 07ರಂದು ಮೂರನೇ ಹಂತದಲ್ಲಿ 78 ಕ್ಷೇತ್ರಗಳಿಗೆ 15 ಜಿಲ್ಲೆಗಳಲ್ಲಿ ಅಂದಾಜು 33,500 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ಅಂತಿಮವಾಗಿ ನವೆಂಬರ್10ರಂದು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶವು ಹೊರ ಬೀಳಲಿದೆ.

ಎನ್ಡಿಎ ಜಯಭೇರಿ ಬಾರಿಸಲಿದೆ

ಎನ್ಡಿಎ ಜಯಭೇರಿ ಬಾರಿಸಲಿದೆ

243 ಸದಸ್ಯ ಬಲ ಹೊಂದಿರುವ ಬಿಹಾರ ವಿಧಾನಸಭೆಯಲ್ಲಿ ಮ್ಯಾಜಿಕ್ ನಂಬರ್ 122.

ಲೋಕನೀತಿ-ಸಿಎಸ್ ಡಿಎಸ್ ಸಂಸ್ಥೆ ವರದಿಯಂತೆ ಅಂತಿಮ ಫಲಿತಾಂಶ ಹೀಗಿರಲಿದೆ

ಎನ್ಡಿಎ: 133 ರಿಂದ 143

ಮಹಾಘಟಬಂಧನ್: 88 ರಿಂದ 98

ಎಲ್ ಜೆಪಿ: 2 ರಿಂದ 6

ಇತರೆ: 6 ರಿಂದ 10

++++

ಶೇಕಡಾವಾರು ಫಲಿತಾಂಶ

ಎನ್ಡಿಎ: 38%

ಮಹಾಘಟಬಂಧನ್: 32%

ಜಿಡಿಎಸ್ ಎಫ್: 7%

ಎಲ್ ಜೆಪಿ: 6%

ಇತರೆ: 17%

ನಿತೀಶ್ ಸಿಎಂ ಸ್ಥಾನಕ್ಕೆ ಮೊದಲ ಆಯ್ಕೆ

ನಿತೀಶ್ ಸಿಎಂ ಸ್ಥಾನಕ್ಕೆ ಮೊದಲ ಆಯ್ಕೆ

ಆಡಳಿತ ವಿರೋಧಿ ಅಲೆ ಇದೆ ಎಂದು ವಿಪಕ್ಷಗಳು ಪ್ರಚಾರ ಆರಂಭಿಸಿದ್ದರೂ ಮತದಾರರ ಪಾಲಿಗೆ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ಮೊದಲ ಆಯ್ಕೆಯಾಗಿದ್ದಾರೆ. ಸುಮಾರು ಶೇ 30ರಷ್ಟು ಮಂದಿ ಲೋಕನೀತಿ-ಸಿಎಸ್ಡಿಎಸ್ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ನಿತೀಶ್ ಪರ ಮತ ಹಾಕಿದ್ದಾರೆ. ಆರ್ ಜೆಡಿಯ ತೇಜಸ್ವಿ ಯಾದವ್ ಶೇ 27ರಷ್ಟು ಮತ ಗಳಿಸಿ ಉತ್ತಮ ಸ್ಪರ್ಧೆ ನೀಡಿದ್ದಾರೆ. ಎಲ್ ಜೆಪಿಯ ಚಿರಾಗ್ ಪಾಸ್ವಾನ್ ಅವರು ಕೇವಲ ಶೇ 5 ಮತ ಪಡೆದಿದ್ದರೆ, ಬಿಜೆಪಿ ಮುಖಂಡ ಸುಶೀಲ್ ಮೋದಿ ಶೇ 4ರಷ್ಟು ಮತ ಗಳಿಸಿದ್ದಾರೆ.

2015ರಲ್ಲಿ ನಿತೀಶ್ ಸರ್ಕಾರದ ಬಗ್ಗೆ ಶೇ 80ರಷ್ಟು ಜನ ಸಮಾಧಾನ ವ್ಯಕ್ತಪಡಿಸಿದ್ದಾರೆ. ನಿತೀಶ್ ಕುಮಾರ್ ಅವರು 2020ರಲ್ಲಿ ಶೇ 52 ರಷ್ಟು ಮಂದಿ ಮಾತ್ರ ಸರ್ಕಾರದ ಬಗ್ಗೆ ನಂಬಿಕೆ ವ್ಯಕ್ತಪಡಿಸಿದ್ದಾರೆ.

ಬಿಹಾರ ಚುನಾವಣಾ ಸಮೀಕ್ಷೆ; ನಿತೀಶ್‌ಗೆ ಮತ್ತೊಂದು ಅವಕಾಶ ಬೇಕೆ?

2015ರಲ್ಲಿ ಬಂದ ಚುನಾವಣೆ ಫಲಿತಾಂಶ

2015ರಲ್ಲಿ ಬಂದ ಚುನಾವಣೆ ಫಲಿತಾಂಶ

2015ರಲ್ಲಿ ರಾಷ್ಟ್ರೀಯ ಜನತಾ ದಳ 80 ಸ್ಥಾನ, ಜನತಾ ದಳ ಯುನೈಟೆಡ್ 71, ಕಾಂಗ್ರೆಸ್ 27 ಗಳಿಸಿದ್ದವು. ಬಿಜೆಪಿ 53 ಸ್ಥಾನ, ಎಲ್ ಜೆಪಿ 2 ಹಾಗೂ ಹಿಂದೂಸ್ತಾನಿ ಅವಾಮ್ ಮೋರ್ಚಾ ಸೆಕ್ಯುಲರ್ 1, ಇತರೆ 10 ಸ್ಥಾನ. ಬಿಜೆಪಿ ಶೇ 24ರಷ್ಟು ಮತಗಳಿಕೆ, ಅರ್ ಜೆ ಡಿ ಶೇ 18 ಹಾಗೂ ಜೆಡಿಯು ಶೇ 17ರಷ್ಟು, ಕಾಂಗ್ರೆಸ್ ಶೇ 7, ಎಲ್ ಜೆಪಿ ಶೇ 4.8ರಷ್ಟು ಮತ ಗಳಿಸಿದ್ದವು.

ಸಮೀಕ್ಷೆ ಫಲಿತಾಂಶ: 4ನೇ ಬಾರಿಗೆ ನಿತೀಶ್ ನೇತೃತ್ವದ ಎನ್ಡಿಎ ಕ್ಲೀನ್ ಸ್ವೀಪ್

ಎಕ್ಸಿಟ್ ಪೋಲ್ ಪ್ರಸಾರಕ್ಕೆ ನಿರ್ಬಂಧ ಹೇರಲಾಗಿದೆ

ಎಕ್ಸಿಟ್ ಪೋಲ್ ಪ್ರಸಾರಕ್ಕೆ ನಿರ್ಬಂಧ ಹೇರಲಾಗಿದೆ

ಅಕ್ಟೋಬರ್ 28 ರ ಬುಧವಾರ ಸಂಜೆ 6.30 ರಿಂದ ನವೆಂಬರ್ 7ರ ತನಕ ಎಲೆಕ್ಟ್ರಾನಿಕ್ ಮಾಧ್ಯಮಗಳು ಎಕ್ಸಿಟ್ ಪೋಲ್ ಪ್ರಸಾರ ಮಾಡುವಂತಿಲ್ಲ ಎಂದು ನಿರ್ಬಂಧ ವಿಧಿಸಲಾಗಿದೆ. ಇದೇ ನಿಯಮ ಪ್ರಿಂಟ್ ಹಾಗೂ ವೆಬ್ ಮೀಡಿಯಾಗಳಿಗೂ ಅನ್ವಯವಾಗಲಿದ್ದು, ಯಾವ ರೀತಿ ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಸಾರ ಮಾಡುವಂತಿಲ್ಲ. ಇದು ಬಿಹಾರದ ವಿಧಾನಸಭೆ ಚುನಾವಣೆ, ಲೋಕಸಭೆ ಉಪ ಚುನಾವಣೆ ಎರಡಕ್ಕೂ ಅನ್ವಯವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ದಿಗ್ವಿಜಯ: ಸಿ ವೋಟರ್ ಸಮೀಕ್ಷೆ

English summary
India Today and Aajtak bring you Lokniti-CSDS Bihar Opinion Poll, a pre-poll survey that gives an insight into the minds of the voters, set to decide the fate of Bihar Assembly Elections 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X