ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೃದಯ ಸಂಬಂಧಿತ ಕಾಯಿಲೆಯ ರೋಗಿಗಳಲ್ಲಿ ಕೊರೊನಾವೈರಸ್ ಲಸಿಕೆಯ ಅಡ್ಡಪರಿಣಾಮವೇನು?

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 9: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಪ್ರತಿಯೊಬ್ಬ ಸೋಂಕಿತರ ಮೇಲೂ ಪರಿಣಾಮ ಬೀರಿದೆ. ಇದರ ಮಧ್ಯೆ ದೀರ್ಘಕಾಲಿಕ ರೋಗಗಳಿಂದ ಬಳಲುತ್ತಿರುವ ರೋಗಿಗಳಲ್ಲಿ ವೈರಸ್ ಮತ್ತಷ್ಟು ಅಪಾಯಕಾರಿಯಾಗಲಿದೆ ಎಂದು ಗೊತ್ತಾಗಿದೆ.

ಕೊವಿಡ್-19 ಸೋಂಕಿನ ಜೊತೆಗೆ ಹೃದಯ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳಲ್ಲಿ ಒಂದಕ್ಕಿಂತ ಹೆಚ್ಚು ಅಪಾಯ ಎದುರಾಗಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ನವದೆಹಲಿ ಓಖ್ಲಾ ರಸ್ತೆ ಫೋರ್ಟಿಸ್ ಎಸ್ಕಾರ್ಟ್ಸ್ ಹಾರ್ಟ್ ಇನ್ಸ್ ಟಿಟ್ಯೂಟ್ ಇಂಟರ್ವೆನ್ಶನಲ್ ಕಾರ್ಡಿಯಾಲಜಿ ತಜ್ಞರಾದ ಡಾ. ನಿಶಿತ್ ಚಂದ್ರ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

 ಲಸಿಕೆ ಪಡೆಯದೇ ಇರುವುದಕ್ಕಿಂತ ಯಾವುದಾದರೂ ಒಂದು ಲಸಿಕೆ ಪಡೆಯಿರಿ ಲಸಿಕೆ ಪಡೆಯದೇ ಇರುವುದಕ್ಕಿಂತ ಯಾವುದಾದರೂ ಒಂದು ಲಸಿಕೆ ಪಡೆಯಿರಿ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮಧ್ಯೆ ಹೃದಯರಕ್ತನಾಳ ಸಂಬಂಧಿತ ಕಾಯಿಲೆಗಳನ್ನು ಹೊಂದಿರುವ ರೋಗಿಗಳು ಅತ್ಯಂತ ಕೆಟ್ಟ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಹೃದಯ ಸಂಬಂಧಿತ ಕಾಯಿಲೆ ರೋಗಿಗಳು ದಿಢೀರ್ ಸಾವನ್ನಪ್ಪುತ್ತಾರೆ ಅಥವಾಸ ಸೋಂಕಿನ ತೀವ್ರತೆಯ ಭಯದಲ್ಲೇ ಬದುಕುತ್ತಿದ್ದಾರೆ. ಕೊರೊನಾವೈರಸ್ ಸೋಂಕು ಮತ್ತು ಅದಕ್ಕೆ ನೀಡುವ ಲಸಿಕೆಯು ಹೃದಯ ರಕ್ತನಾಳ ಸಂಬಂಧಿತ ರೋಗಿಗಳಲ್ಲಿ ಯಾವ ರೀತಿ ಪರಿಣಾಮವನ್ನು ಬೀರಲಿದೆ ಎಂಬುದರ ಕುರಿತು ಒಂದು ವಿಶೇಷ ವರದಿಗಾಗಿ ಮುಂದೆ ಓದಿ.

ದೇಶದಲ್ಲಿ ಹೃದಯಾಘಾತ ಪ್ರಕರಣಗಳಲ್ಲಿ ಗಣನೀಯ ಏರಿಕೆ

ದೇಶದಲ್ಲಿ ಹೃದಯಾಘಾತ ಪ್ರಕರಣಗಳಲ್ಲಿ ಗಣನೀಯ ಏರಿಕೆ

ಭಾರತದಲ್ಲಿ ಕಳೆದ ಒಂದು ವರ್ಷದ ಅಂಕಿ-ಅಂಶಗಳನ್ನು ನೋಡಿದಾಗ ಕೊವಿಡ್-19 ಸೋಂಕಿನಿಂದ ಗುಣಮುಖರಾದ ನಂತರದಲ್ಲಿ ಬಹುತೇಕ ಜನರು ಹೃದಯಾಘಾತದಿಂದ ಮೃತಪಟ್ಟಿರುವುದುನ್ನು ನಾವು ನೋಡಿದ್ದೇವೆ. ಎರಡನೇ ಅಲೆಯ ಸಂದರ್ಭದಲ್ಲಿ ಒಂದು ಬಾರಿ ಸೋಂಕು ತಗುಲಿದ ವ್ಯಕ್ತಿಯು ದಿಢೀರನೇ ಹೃದಯಾಘಾತದಿಂದ ಪ್ರಾಣ ಬಿಟ್ಟ ಪ್ರಕರಣಗಳ ಸಂಖ್ಯೆ ಹೆಚ್ಚಾಯಿತು. ಈ ಬಗ್ಗೆ ಗಮನ ಹರಿಸಿದ ನಂತರದ ಹೃದಯ ಸಂಬಂಧಿ ಕಾಯಿಲೆ ಹೊಂದಿರುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಕೊವಿಡ್-19 ಲಸಿಕೆಯನ್ನು ಪಡೆದುಕೊಳ್ಳುವಂತೆ ಸಲಹೆ ನೀಡಲಾಗಿತ್ತು. ಹೃದಯರಕ್ತನಾಳದಲ್ಲಿ ಆರೋಗ್ಯ ಸಮಸ್ಯೆ ಎದುರಿಸುವ ಪ್ರತಿಯೊಬ್ಬರು ಲಸಿಕೆ ಪಡೆದುಕೊಳ್ಳುವುದು ತೀರಾ ಅಗತ್ಯ ಮತ್ತು ಅನಿವಾರ್ಯವಾಗಿದೆ ಎಂದು ಅವರು ಹೇಳಿದರು.

ಪುರುಷರಿಗಿಂತ ಮಹಿಳೆಯರಲ್ಲಿ ಹೆಚ್ಚಾಗಿ ಕೊರೊನಾ ಲಸಿಕೆ ಅಡ್ಡಪರಿಣಾಮ; ಕಾರಣ ಏನಿರಬಹುದು?ಪುರುಷರಿಗಿಂತ ಮಹಿಳೆಯರಲ್ಲಿ ಹೆಚ್ಚಾಗಿ ಕೊರೊನಾ ಲಸಿಕೆ ಅಡ್ಡಪರಿಣಾಮ; ಕಾರಣ ಏನಿರಬಹುದು?

ಕೊವಿಡ್ ಲಸಿಕೆ ಹೃದಯ ಸಂಬಂಧಿ ಕಾಯಿಲೆ ಉಳ್ಳವರಿಗೆ ಸುರಕ್ಷಿತವೇ?

ಕೊವಿಡ್ ಲಸಿಕೆ ಹೃದಯ ಸಂಬಂಧಿ ಕಾಯಿಲೆ ಉಳ್ಳವರಿಗೆ ಸುರಕ್ಷಿತವೇ?

ಕೆಲವು ಸುರಕ್ಷತಾ ಕಾಳಜಿಗಳು ಅಥವಾ ಕೋವಿಡ್ -19 ಲಸಿಕೆಗಳ ಪ್ರತಿಕೂಲ ಪ್ರತಿಕ್ರಿಯೆಗಳನ್ನು ಹೊಂದಿರುತ್ತದೆ. ಗುಲ್ಲಿನ್-ಬ್ಯಾರೆ ಸಿಂಡ್ರೋಮ್, ರಕ್ತ ಹೆಪ್ಪುಗಟ್ಟುವಿಕೆ, ಮಯೋಕಾರ್ಡಿಟಿಸ್ (ಹೃದಯ ಸ್ನಾಯುವಿನ ಉರಿಯೂತ), ಅಥವಾ ಅನಾಫಿಲ್ಯಾಕ್ಸಿಸ್ (ಪ್ರತಿಜನಕಕ್ಕೆ ತೀವ್ರವಾದ ಅಲರ್ಜಿಯ ಪ್ರತಿಕ್ರಿಯೆ)ಯನ್ನು ಎದುರಿಸಬೇಕಾಗುತ್ತದೆ. ಲಸಿಕೆ ಪಡೆದುಕೊಂಡ ಒಂದು ವಾರದ ನಂತರದಲ್ಲಿ ಹೆಚ್ಚಿನ ಅಡ್ಡ ಪರಿಣಾಮಗಳು ಗೋಚರಿಸುತ್ತವೆ ಆದರೆ, ದೀರ್ಘಾವಧಿವರೆಗೂ ಅವು ಇರುವುದಿಲ್ಲ. ಲಸಿಕೆ ಪಡೆದ ಕೆಲವು ದಿನಗಳ ನಂತರದಲ್ಲಿ ಕಾಣಿಸಿಕೊಳ್ಳುವ ಅಡ್ಡ ಪರಿಣಾಮಗಳಿಗೆ ದೇಹವು ಒಗ್ಗಿಕೊಳ್ಳುತ್ತದೆ. ಅದು ಸರ್ವೇ ಸಾಮಾನ್ಯ ಅಡ್ಡಪರಿಣಾಮದಂತೆ ಗೋಚರಿಸುತ್ತದೆ. ಆದ್ದರಿಂದ ಸೂಕ್ತ ಸಮಯಕ್ಕೆ ರೋಗವನ್ನು ನಿರ್ಣಯ ಮಾಡಿದರೆ ಅದರ ನಿರ್ವಹಣೆ ಉತ್ತಮವಾಗಿರುತ್ತದೆ. ನಮ್ಮ ಆರೋಗ್ಯಕ್ಕೆ ತೀವ್ರ ಹಾನಿ ಉಂಟು ಮಾಡದಂತೆ ತಡೆಯಲು ಸಾಧ್ಯವಾಗುತ್ತದೆ.

ಕೊವಿಡ್-19 ಲಸಿಕೆ ಪಡೆದರಿಗೆ ಸಾಮಾನ್ಯ ಆರೋಗ್ಯ ಸಮಸ್ಯೆ

ಕೊವಿಡ್-19 ಲಸಿಕೆ ಪಡೆದರಿಗೆ ಸಾಮಾನ್ಯ ಆರೋಗ್ಯ ಸಮಸ್ಯೆ

ಜಗತ್ತಿನಲ್ಲಿ ಕೊರೊನಾವೈರಸ್ ಲಸಿಕೆ ಪಡೆದ ಪ್ರತಿಯೊಬ್ಬರಲ್ಲೂ ಜ್ವರ ಕಾಣಿಸಿಕೊಳ್ಳುವುದು ಇದೀಗ ಸರ್ವೇ ಸಾಮಾನ್ಯ ಲಕ್ಷಣವಾಗಿ ಬಿಟ್ಟಿದೆ. ಉದಾಹರಣೆಗೆ, ಗುಯಿಲಿನ್-ಬ್ಯಾರೆ ಸಿಂಡ್ರೋಮ್ ಬೆಳವಣಿಗೆ ಅಪಾಯವು ಸಾಮಾನ್ಯ ಸೋಂಕುಗಳಿಗೆ ಹೋಲಿಸಿದರೆ ಲಸಿಕೆಗಳಿಗೆ 17 ಪಟ್ಟು ಹೆಚ್ಚಾಗಿರುತ್ತದೆ. ಕೋವಿಡ್ -19 ಲಸಿಕೆಗಳು ಹೃದಯ ಸಂಬಂಧಿ ಕಾಯಿಲೆ ಇರುವವರಿಗೆ ಮಾತ್ರ ಸುರಕ್ಷಿತವಲ್ಲ. ಆದರೆ ಅವು ಬಹಳ ಮುಖ್ಯವಾಗಿವೆ ಎಂದು ವರದಿಗಳು ಸೂಚಿಸುತ್ತವೆ. ಕೊರೊನಾವೈರಸ್ ಸೋಂಕಿನ ರೂಪಾಂತರ ವೈರಸ್ ಹೃದಯ ಸಂಬಂಧಿತ ಕಾಯಿಲೆಗಳನ್ನು ಹೊಂದಿರುವವರಿಗೆ ಹೆಚ್ಚು ಅಪಾಯಕಾರಿಯಾಗಿವೆ ಎಂಬುದನ್ನು ನಾವು ಕಂಡುಕೊಂಡಿದ್ದೇವೆ. ಆದ್ದರಿಂದ ಸಾಧ್ಯವಾದಷ್ಟು ಬೇಗ ಕೊವಿಡ್-19 ಲಸಿಕೆ ಪಡೆದುಕೊಳ್ಳುವುದು ಹೆಚ್ಚು ಸುರಕ್ಷಿತ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಕೊರೊನಾವೈರಸ್ ಲಸಿಕೆ ಯಾವ ವಯಸ್ಸಿನವರಿಗೆ ಸುರಕ್ಷಿತ?

ಕೊರೊನಾವೈರಸ್ ಲಸಿಕೆ ಯಾವ ವಯಸ್ಸಿನವರಿಗೆ ಸುರಕ್ಷಿತ?

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಕಾಲದಲ್ಲಿ ಸುರಕ್ಷತೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ನೋಡುವುದಾದರೆ ಲಸಿಕೆಯು ಪ್ರತಿಯೊಬ್ಬರಿಗೂ ಮತ್ತು ಎಲ್ಲ ವಯೋಮಾನದವರಿಗೂ ಸುರಕ್ಷಿಕತವಾಗಿ ಇರುತ್ತದೆ. ಈ ವರ್ಷಾರಂಭದ ಹೊತ್ತಿಗೆ ಅಮೆರಿಕನ್ ಹಾರ್ಟ್ ಅಸೋಸಿಯೇಷನ್ ಲಸಿಕೆ ಪಡೆದುಕೊಳ್ಳುವ ಮಾನದಂಡ ಬಿಡುಗಡೆ ಮಾಡಿದ್ದು, ಎಲ್ಲ ವಯಸ್ಸಿನವರು ಲಸಿಕೆ ಪಡೆದುಕೊಳ್ಳಲು ಅರ್ಹರಾಗಿದ್ದಾರೆ ಎಂದು ಹೇಳಿದೆ. ಈ ಹೇಳಿಕೆಯಲ್ಲಿ ನಿರ್ದಿಷ್ಟವಾಗಿ ಹೃದಯರಕ್ತನಾಳದ ಅಪಾಯದ ಅಂಶಗಳು, ಹೃದಯ ಸಂಬಂಧಿತ ರೋಗಗಳು ಮತ್ತು ಹೃದಯಾಘಾತ ಮತ್ತು ಪಾರ್ಶ್ವವಾಯು ನಂತರ ಬದುಕುಳಿದವರನ್ನು ಲಸಿಕೆಯು ವೈರಸ್‌ನಿಂದ ಆಗುವ ಹೆಚ್ಚಿನ ಅಪಾಯವನ್ನು ತಪ್ಪಿಸಲು ಸಾಧ್ಯವಾಗುತ್ತದೆ.

ಸಾಮಾನ್ಯವಾಗಿ ಎದುರಾಗುವ ಅಡ್ಡ ಪರಿಣಾಮಗಳು?

ಸಾಮಾನ್ಯವಾಗಿ ಎದುರಾಗುವ ಅಡ್ಡ ಪರಿಣಾಮಗಳು?

ಕೊವಿಡ್-19 ಲಸಿಕೆ ಪಡೆದುಕೊಂಡ ಪ್ರತಿಯೊಬ್ಬರಲ್ಲೂ ಕೆಲವು ಸಾಮಾನ್ಯ ರೋಗದ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಲಸಿಕೆ ಪಡೆದ 24 ಗಂಟೆಗಳಲ್ಲಿ ಅಥವಾ ಕೆಲವು ಬಾರಿ ಅದಕ್ಕಿಂತ ಹೆಚ್ಚು ಅವಧಿವರೆಗೆ ಜ್ವರ, ತಲೆನೋವು, ಆಯಾಸ, ಕೀಲುನೋವು, ಕೈನೋವು ಗೋಚರಿಸುತ್ತದೆ. ಆರೋಗ್ಯವಂತ ವ್ಯಕ್ತಿ ಅಥವಾ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಯಾವುದೇ ವ್ಯಕ್ತಿಯಾಗಲಿ ಇಬ್ಬರಲ್ಲೂ ಒಂದೇ ರೀತಿಯ ಅಡ್ಡಪರಿಣಾಮಗಳು ಗೋಚರಿಸುತ್ತವೆ. ಹೃದಯ ಸಂಬಂಧಿ ಕಾಯಿಲೆ ಹೊಂದಿರುವ ರೋಗಿಯಲ್ಲಿ ಯಾವುದೇ ರೀತಿ ವಿಭಿನ್ನ ಲಕ್ಷಣಗಳು ಕಾಣಿಸಿಕೊಳ್ಳುವುದಿಲ್ಲ. ಅದೇನೇ ಇದ್ದರೂ ಲಸಿಕೆ ಪಡೆದ ನಂತರದಲ್ಲಿ ಒಂದು ಬಾರಿ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.

ಕೊವಿಡ್-19 ಲಸಿಕೆ ಪಡೆದರೆ ಸೋಂಕು ಅಂಟುವುದಿಲ್ಲವೇ?

ಕೊವಿಡ್-19 ಲಸಿಕೆ ಪಡೆದರೆ ಸೋಂಕು ಅಂಟುವುದಿಲ್ಲವೇ?

ಕೊರೊನಾವೈರಸ್ ಸೋಂಕು ಮತ್ತು ಲಸಿಕೆಯ ಬಗ್ಗೆ ಜನಸಾಮಾನ್ಯರು ಬಹುಮುಖ್ಯವಾಗಿ ತಿಳಿದುಕೊಳ್ಳಬೇಕಾದ ಒಂದು ಅಂಶವಿದೆ. ಹೃದಯ ಸಂಬಂಧಿತ ಕಾಯಿಲೆ ಹೊಂದಿರುವ ವ್ಯಕ್ತಿಯಾಗಲಿ ಅಥವಾ ಆರೋಗ್ಯವಂತ ವ್ಯಕ್ತಿಯೇ ಆಗಿರಲಿ. ಒಂದು ಬಾರಿ ಲಸಿಕೆ ಪಡೆದುಕೊಂಡ ನಂತರದಲ್ಲಿ ಕೊವಿಡ್-19 ಸೋಂಕು ಅಂಟಿಕೊಳ್ಳುವುದಿಲ್ಲ ಎಂಬು ಭಾವಿಸುವಂತಿಲ್ಲ. ಏಕೆಂದರೆ ಲಸಿಕೆಯು ಸೋಂಕಿನಿಂದ ರಕ್ಷಣೆ ನೀಡುತ್ತದೆಯೇ ವಿನಃ, ಸೋಂಕು ಅಂಟಿಕೊಳ್ಳದಂತೆ ತಡೆಯುವುದಿಲ್ಲ. ಲಸಿಕೆ ಪಡೆದುಕೊಂಡವರು ಆಸ್ಪತ್ರೆಗೆ ದಾಖಲಾಗುವಷ್ಟು ಗಂಭೀರ ಆರೋಗ್ಯ ಸಮಸ್ಯೆಗಳನ್ನು ಎದುರಿಸುವುದಿಲ್ಲ. ಪ್ರಸ್ತುತ ಸಂದರ್ಭದಲ್ಲಿ ಲಸಿಕೆ ಪಡೆದುಕೊಂಡವರಲ್ಲೂ ಕೊರೊನಾವೈರಸ್ ರೂಪಾಂತರ ವೈರಸ್ ಅಂಟಿಕೊಳ್ಳುತ್ತಿರುವದರಿಂದ ದೇಶದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆಯು ಗಣನೀಯ ಪ್ರಮಾಣದಲ್ಲಿ ಏರಿಕೆ ಆಗುತ್ತಿದೆ.

ಕೊರೊನಾವೈರಸ್ ಸೋಂಕಿನಿಂದ ರಕ್ಷಣೆ ಪಡೆದುಕೊಳ್ಳುವುದಕ್ಕೆ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಸುವುದು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಈ ನಿಯಮಗಳನ್ನು ಪಾಲಿಸುವಲ್ಲಿ ಸಾರ್ವಜನಿಕರು ಎಡವಿದರೆ ಮತ್ತೆ ಸೋಂಕಿನ ಅಪಾಯಕ್ಕೆ ಸಿಲುಕುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ.

ದೇಶದಲ್ಲಿ ಕೊರೊನಾೈರಸ್ ಲಸಿಕೆ ಪಡೆದವರ ಅಂಕಿ-ಸಂಖ್ಯೆ

ದೇಶದಲ್ಲಿ ಕೊರೊನಾೈರಸ್ ಲಸಿಕೆ ಪಡೆದವರ ಅಂಕಿ-ಸಂಖ್ಯೆ

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಯು ಸಮರೋಪಾದಿಯಲ್ಲಿ ನಡೆಯುತ್ತಿದೆ. ಕಳೆದ 9 ರಿಂದ 10 ಗಂಟೆಗಳಲ್ಲಿ 73 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 236 ದಿನಗಳಾಗಿದ್ದು, ಮಂಗಳವಾರ ರಾತ್ರಿ 7 ಗಂಟೆ ವೇಳೆಗೆ 73,80,510 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಈ ಪೈಕಿ 50,42,806 ಮಂದಿಗೆ ಮೊದಲ ಡೋಸ್ ಹಾಗೂ 23,37,704 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ಭಾರತದಲ್ಲಿ ಈವರೆಗೂ 71,52,54,153 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೂ 70,31,70,775 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ.

ಭಾರತದಲ್ಲಿ ಲಸಿಕೆ ವಿತರಣೆ ಹಂತಗಳು ಹೇಗಿದೆ?

ಭಾರತದಲ್ಲಿ ಲಸಿಕೆ ವಿತರಣೆ ಹಂತಗಳು ಹೇಗಿದೆ?

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿತ್ತು.

ದೇಶದಲ್ಲಿ ಯಾರಿಗೆ ಎಷ್ಟು ಪ್ರಮಾಣದ ಲಸಿಕೆ?

ದೇಶದಲ್ಲಿ ಯಾರಿಗೆ ಎಷ್ಟು ಪ್ರಮಾಣದ ಲಸಿಕೆ?

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 1,03,62,062 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 85,35,698 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,83,33,801 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,37,89,162 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೂ 54,58,47,706 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 16,94,06,447 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

18 ವರ್ಷ ಮೇಲ್ಪಟ್ಟ 28,57,04,140 ಮಂದಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 3,85,99,523 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ದೇಶದಲ್ಲಿ ಈವರೆಗೂ 45 ವರ್ಷ ಮೇಲ್ಪಟ್ಟ 14,01,00,086 ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 6,04,08,072 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ಲಸಿಕೆ ಪ್ರಮಾಣ?

ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ಲಸಿಕೆ ಪ್ರಮಾಣ?

2021ರ ಸೆಪ್ಟೆಂಬರ್ 8ರ ಅಂಕಿ-ಅಂಶಗಳ ಪ್ರಕಾರ, 70,31,70,775 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಿಂದ ಕಳುಹಿಸಲಾಗಿರುವ ಲಸಿಕೆಯ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

* ಪೂರೈಕೆಯಾದ ಲಸಿಕೆ ಪ್ರಮಾಣ - 70,31,70,775

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 8,02,550

* ಕೊವಿಡ್-19 ಲಸಿಕೆಯ ಲಭ್ಯತೆ - 5,64,50,070

English summary
Long term effects on heart health post Covid-19 vaccination in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X