Maha Kumbh Mela 2025: 40 ಕೋಟಿ ಭಕ್ತರಿಗಾಗಿ ಮಹಾ ಕುಂಭಮೇಳದ ಸಿದ್ಧತೆ ಹೇಗಿದೆ?

ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿರುವ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ 2025ರ ಜನವರಿ 13ರಿಂದ ಫೆಬ್ರವರಿ 26ರವರೆಗೆ 12 ವರ್ಷಕ್ಕೊಮ್ಮೆ ನಡೆಯುವ ಮಹಾ ಕುಂಭಮೇಳ ನಡೆಯಲಿದೆ. 7,000 ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದ ಸಿದ್ಧತೆಗಳು ಈಗಾಗಲೇ ಅಂತಿಮ ಹಂತದಲ್ಲಿದೆ.

700 ವರ್ಷಗಳ ಇತಿಹಾಸ ಇರುವ ಕುಂಭ ಮೇಳವನ್ನು ವರ್ಷಗಳಿಗೆ ಅನುಗುಣವಾಗಿ ವಿವಿಧ ಹೆಸರುಗಳಿಂದ ಕರೆಯಲಾಗುತ್ತದೆ. ಸಾಮಾನ್ಯವಾಗಿ ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿರುವ ಸರಸ್ವತಿ, ಗಂಗಾ ಹಾಗೂ ಯಮುನಾ ನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಕುಂಭಮೇಳವನ್ನು ನಡೆಸಲಾಗುತ್ತದೆ.

Maha Kumbh Mela 2025 A Rs 7 000 Crore Super City for 40 Crore Pilgrims

ಇನ್ನು ಆರು ವರ್ಷಗಳಿಗೊಮ್ಮೆ ಅರ್ಧ ಕುಂಭ ಮೇಳ ನಡೆಸಲಾಗುತ್ತದೆ. ಹಾಗೂ ಸಂಪೂರ್ಣ ಹನ್ನೆರಡು ವರ್ಷಗಳಿಗೊಮ್ಮೆ ನಡೆಯುವ ಕುಂಭ ಮೇಳವನ್ನು ಮಹಾ ಕುಂಭ ಮೇಳ ಎಂದು ಕರೆಯಲಾಗುತ್ತದೆ. ಈ ಬಾರಿ ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ಮಹಾ ಕುಂಭಮೇಳ ನಡೆಯಲಿದ್ದು, ಈ ಬೃಹತ್‌ ಧಾರ್ಮಿಕ ಕಾರ್ಯಕ್ರಮದ ಸಿದ್ಧತೆಯ ವಿವರ ಇಲ್ಲಿದೆ.

ಮಹಾ ಕುಂಭಮೇಳದ ಸಿದ್ಧತೆ ಹೇಗಿದೆ?

ಈ ಬಾರಿಯ ಮಹಾ ಕುಂಭ ಮೇಳದಲ್ಲಿ 40 ಕೋಟಿ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, 10,000 ಹೆಕ್ಟೇರ್‌ಗಳ ವಿಶಾಲವಾದ ಪ್ರದೇಶದಲ್ಲಿ ಈ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಮಹಾ ಕುಂಭ ಮೇಳದ ಯಶಸ್ಸಿಗಾಗಿ ಉತ್ತರ ಪ್ರದೇಶದ ಸರ್ಕಾರ ಈಗಾಗಲೇ 7,000 ಕೋಟಿ ಅನುದಾನ ಘೋಷಿಸಿದೆ.

Maha Kumbh Mela 2025 A Rs 7 000 Crore Super City for 40 Crore Pilgrims

ಜಗತ್ತಿನಾದ್ಯಂತದಿಂದ ಬರುವ ಕೋಟ್ಯಂತರ ಭಕ್ತರಿಗಾಗಿ ವಿಶಾಲವಾದ ಪ್ರದೇಶದಲ್ಲಿ 1.5 ಲಕ್ಷ ಟೆಂಟ್‌ಗಳನ್ನು ನಿರ್ಮಿಸಲಾಗಿದೆ. ಭಕ್ತಾಧಿಗಳ ಸಂಚಾರಕ್ಕಾಗಿ 30 ಕಿರು ಸೇತುವೆಗಳನ್ನು ನಿರ್ಮಿಸಲಾಗಿದ್ದು, 400 ಕಿ.ಮೀಗೂ ಹೆಚ್ಚು ತಾತ್ಕಾಲಿಕ ರಸ್ತೆಗಳನ್ನು ರಚಿಸಲಾಗಿದೆ. ಇನ್ನು 69,000 ಬೀದಿ ದೀಪಗಳ ವ್ಯವಸ್ಥೆ ಮಾಡಲಾಗಿದ್ದು, ಇದರಿಂದ ಭಕ್ತರಿಗೆ ರಾತ್ರಿ ವೇಳೆಯೂ ಸೂಕ್ತವಾದ ರಕ್ಷಣೆ ಇರುತ್ತದೆ. ಇನ್ನು ಕುಂಭ ಮೇಳದ ಸ್ನಾನದ ವೇಳೆ ಯಾವುದೇ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ನದಿಯ ಉದ್ದಕ್ಕೂ 12 ಕಿಲೋ ಮೀಟರ್‌ ಘಾಟ್‌ಗಳನ್ನು ನಿರ್ಮಿಸಲಾಗಿದೆ.

ನೈರ್ಮಲ್ಯ ಮತ್ತು ತ್ಯಾಜ್ಯ ನಿರ್ವಹಣೆ ವ್ಯವಸ್ಥೆ

ಮಹಾ ಕುಂಭ ಮೇಳದಲ್ಲಿ ನೈರ್ಮಲ್ಯ ಮತ್ತು ತ್ಯಾಜ್ಯ ನಿರ್ವಹಣೆ ವ್ಯವಸ್ಥೆಯೇ ದೊಡ್ಡ ಸವಾಲಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ 1.5 ಲಕ್ಷ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಜೊತೆಗೆ 25,000 ಕಸದ ಬುಟ್ಟಿಗಳನ್ನು ಎಲ್ಲಡೆ ಇರಿಸಲಾಗಿದ್ದು, ಬುಟ್ಟಿಯಲ್ಲಿ ತುಂಬಿದ ಕಸ ವಿಲೇವಾರಿಗೆ 160 ತ್ಯಾಜ್ಯ ನಿರ್ವಹಣಾ ವಾಹನಗಳನ್ನು ನಿಯೋಜಿಸಲಾಗಿದೆ.

ಮಹಾ ಕುಂಭ ಮೇಳ ಹಿನ್ನೆಲೆಯಲ್ಲಿ ನಗರದ 29 ದೇವಾಲಯಗಳನ್ನು ನವೀಕರಿಸಲಾಗಿದೆ. ಈ ದೇವಾಲಯಗಳಿಗೆ ತೆರಳುವ ಜನರು ಮತ್ತು ವಾಹನಗಳ ಸಂಚಾರವನ್ನು ಸುಗಮಗೊಳಿಸಲು 11 ಕಿರು ಮಾರ್ಗಗಳನ್ನು ವಿನ್ಯಾಸಗೊಳಿಸಲಾಗಿದೆ. ಜೊತೆಗೆ 1,800 ಹೆಕ್ಟೇರ್‌ ಪ್ರದೇಶವನ್ನು ವಾಹನಗಳ ಪಾರ್ಕಿಂಗ್‌ಗಾಗಿ ಕಾಯ್ದಿರಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+