Maha Kumbh Mela 2025: ಕುಂಭಮೇಳದಲ್ಲಿರುವ ಕರ್ನಾಟಕ ರಾಜಕಾರಣಿಯ ಮಗಳು ಯಾರೆಂದು ಗೆಸ್ ಮಾಡಿ!
ಉತ್ತರ ಪ್ರದೇಶದ ಪ್ರಯಾಗ್ ರಾಜ್ನ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕೋಟ್ಯಂತರ ಭಕ್ತರು, ಸಾಧು-ಸಂತರು ನಾಗಸಾಧುಗಳು, ವಿದೇಶಿ ಭಕ್ತರು ಮಾತ್ರವಲ್ಲದೇ ದೇಶದ ಹಾಗೂ ವಿದೇಶದ ಗಣ್ಯರು ಕೂಡ ಭಾಗಿಯಾಗುತ್ತಿದ್ದಾರೆ. ಜನವರಿ 13ರಿಂದ ಆರಂಭವಾದ ಮಹಾ ಕುಂಭ ಮೇಳದಲ್ಲಿ ಈವರೆಗೂ ಸುಮಾರು ಮೂವತ್ತು ಕೋಟಿ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಅಂದರೆ ಪ್ರತಿ ದಿನ ಅಂದಾಜು ಒಂದು ಕೋಟಿ ಭಕ್ತರು ಪವಿತ್ರ ಸ್ನಾನ ಕೈಗೊಳ್ಳುತ್ತಿದ್ದಾರೆ.
ಕರ್ನಾಟಕದಿಂದಲೂ ಸಾವಿರಾರು ಭಕ್ತರು ಮಹಾ ಕುಂಭಮೇಳಕ್ಕೆ ಭೇಟಿ ನೀಡುತ್ತಿದ್ದು, ಇದೀಗ ಕರ್ನಾಟಕದ ರಾಜಕೀಯದ ಪ್ರಬಲ ನಾಯಕರ ಪುತ್ರಿ ಭೇಟಿ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಡಿಕೆಎಸ್ ಹೆಗ್ಡೆ ಅವರು ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಭೇಟಿ ನೀಡಿದ್ದಾರೆ.

ಗಂಗಾ, ಯಮುನಾ ಹಾಗೂ ಸರಸ್ವತಿ ಮಹಾ ನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಕೈಗೊಂಡಿರುವ ಐಶ್ವರ್ಯಾ ಡಿಕೆಎಸ್ ಹೆಗ್ಡೆ ಅವರು ಮಹಾ ಕುಂಭಮೇಳವನ್ನು ಮನಸಾರೆ ಹೊಗಳಿದ್ದಾರೆ. ಪ್ರಯಾಗ್ ರಾಜ್‌ನ ಮಹಾ ಕುಂಭಮೇಳಕ್ಕೆ ಹೋಗಿ ಪುಣ್ಯಸ್ನಾನ ಮಾಡಿರುವ ವಿಡಿಯೋವನ್ನು ಐಶ್ವರ್ಯಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
'ಇದು ಪದಗಳಿಗೆ ಮೀರಿದ ಅನುಭವ. ಪ್ರಪಂಚದ ಅತಿ ದೊಡ್ಡ ಉತ್ಸವಗಳಲ್ಲಿ ಒಂದಾದ ಮಹಾ ಕುಂಭಮೇಳದ ಸಂಪೂರ್ಣ ಶಕ್ತಿ, ಏಕತೆ ಮತ್ತು ಆಧ್ಯಾತ್ಮಿಕ ಆಳವು ನನ್ನನ್ನು ಮಂತ್ರಮುಗ್ಧಳನ್ನಾಗಿಸಿತು. ಅಲ್ಲಿನ ಭಕ್ತಿ ನಿಜವಾದ ದೈವಿಕ ಭಾವನೆಯ ವಾತಾವರಣವನ್ನು ಸೃಷ್ಟಿಸಿದೆ' ಎಂದು ತಮ್ಮ ಪ್ರಯಾಗ್ ರಾಜ್‌ನ ಮಹಾ ಕುಂಭಮೇಳದ ಅನುಭವವನ್ನು ಹಂಚಿಕೊಂಡಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಡಿಕೆಎಸ್ ಹೆಗ್ಡೆ ಅವರ ಪ್ರಯಾಗ್ ರಾಜ್ ಭೇಟಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅನೇಕರು ಟೀಕೆ ವ್ಯಕ್ತಪಡಿಸಿದ್ದಾರೆ. ಮಹಾ ಕುಂಭಮೇಳದ ಬಗ್ಗೆ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಐಶ್ವರ್ಯಾ ಡಿಕೆಎಸ್ ಹೆಗ್ಡೆ ಅವರ ವಿಡಿಯೋ ಟ್ಯಾಗ್ ಮಾಡಿ ಪ್ರಶ್ನಿಸುತ್ತಿದ್ದಾರೆ.












Click it and Unblock the Notifications