ಮಹಾರಾಷ್ಟ್ರ ಚುನಾವಣೆ; ಎಬಿಪಿ-ಸಿವೋಟರ್ ಎಕ್ಸಿಟ್ ಫೋಲ್

ಮುಂಬೈ, ಅಕ್ಟೋಬರ್ 21 : ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟ 204 ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಚುನಾವಣೋತ್ತರ ಸಮೀಕ್ಷೆ ಹೇಳಿದೆ. ಅಕ್ಟೋಬರ್ 24ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಮಹಾರಾಷ್ಟ್ರ ವಿಧಾನಸಭೆಯ 288 ಕ್ಷೇತ್ರಗಳಿಗೆ ಸೋಮವಾರ ಮತದಾನ ನಡೆಯಿತು. ಶೇ 55.45ರಷ್ಟು ಮತದಾನವಾಗಿದ್ದು, ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರದೆ.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪಕ್ಷವನ್ನು ಪುನಃ ರಾಜ್ಯದಲ್ಲಿ ಅಧಿಕಾರಕ್ಕೆ ತರಲಿದ್ದಾರೆಯೇ? ಎಂದು ದೇಶವೇ ಕುತೂಹಲದಿಂದ ಕಾಯುತ್ತಿದೆ. ರಾಜ್ಯದಲ್ಲಿ ಶಿವಸೇನೆ ಜೊತೆ ಮೈತ್ರಿ ಮಾಡಿಕೊಂಡು ಬಿಜೆಪಿ ಚುನಾವಣಾ ಕಣಕ್ಕಿಳಿದಿದೆ.

Maharashtra assembly elections 2019 : ABP C Voter Exit Poll Results

ABP and C voter ಚುನಾವಣೋತ್ತರ ಸಮೀಕ್ಷೆ ಪ್ರಕಾರ ಬಿಜೆಪಿ-ಶಿವಸೇನೆ ಮೈತ್ರಿಕೂಟ 204, ಕಾಂಗ್ರೆಸ್ 69, ಇತರರು 15 ಕ್ಷೇತ್ರಗಳಲ್ಲಿ ಜಯಗಳಿಸಲಿದ್ದಾರೆ.

ಮಹಾರಾಷ್ಟ್ರದಲ್ಲಿ ಬಿಜೆಪಿ ಶೇ 46, ಐಎನ್‌ಸಿ ಶೇ 37 ಮತ್ತು ಇತರರು ಶೇ 17ರಷ್ಟು ಮತಗಳನ್ನು ಪಡೆಯಲಿದ್ದಾರೆ ಎಂದು ಎಬಿಪಿ-ಸಿವೋಟರ್ ಚುನಾವಣೋತ್ತರ ಸಮೀಕ್ಷೆ ಹೇಳಿದೆ.

ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳನ್ನು ಸೇರಿಸಿ ನೋಡಿದಾಗ ಮಹಾರಾಷ್ಟ್ರದ 288 ಕ್ಷೇತ್ರಗಳಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟ 213, ಕಾಂಗ್ರೆಸ್ 61 ಮತ್ತು ಇತರರು 14 ಕ್ಷೇತ್ರಗಳಲ್ಲಿ ಜಯಗಳಿಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+