ಇಂಡಿಯಾ ಟುಡೆ ಎಕ್ಸಿಟ್ ಪೋಲ್: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಮುಖಭಂಗ
ಬೆಂಗಳೂರು, ಅಕ್ಟೋಬರ್ 21: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಈಗಷ್ಟೆ ಮುಗಿದಿದ್ದು ಚುನಾವಣೋತ್ತರ ಸಮೀಕ್ಷೆಗಳು ಹೊರಬೀಳುತ್ತಿವೆ.
ಮಹಾರಾಷ್ಟ್ರ ಮತ್ತು ಹರ್ಯಾಣಾ ಚುನಾವಣೆ ಸಂಬಂಧ ಚುನಾವಣೋತ್ತರ ಸಮೀಕ್ಷೆಯನ್ನು ಇಂಡಿಯಾ ಟುಡೆ ಮಾಡಿದ್ದು, ಇಂಡಿಯಾ ಟುಡೆ ಸಮೀಕ್ಷೆ ಪ್ರಕಾರ ಮಹಾರಾಷ್ಟ್ರದಲ್ಲಿ ಬಿಜೆಪಿ ಜಯಭೇರಿ ಭಾರಿಸಲಿದೆ.
ಮಹಾರಾಷ್ಟ್ರದ 288 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದೆ. ಕಾಂಗ್ರೆಸ್ ಮತ್ತು ಎನ್‌ಸಿಪಿ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿದೆ.

ಸಮೀಕ್ಷೆ ವರದಿ ಪ್ರಕಾರ ಬಿಜೆಪಿ ಮತ್ತು ಶಿವಸೇನೆ ಮೈತ್ರಿಯು 166-194 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಕಾಂಗ್ರೆಸ್-ಎನ್‌ಸಿಪಿ ಮೈತ್ರಿಯು 72-90 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಇತರೆ ಹಾಗೂ ಪಕ್ಷೇತರರು 22-34 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದಾರೆ.
ಮೈತ್ರಿಯ ಹೊರತಾಗಿ ಬಿಜೆಪಿಯ ಏಕಮೇವವಾಗಿ 109 ರಿಂದ 124 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಶಿವಸೇನೆಯು 57-70 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಕಾಂಗ್ರೆಸ್ ಪಕ್ಷವು 32-40 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಎನ್‌ಸಿಪಿಯು 40-50 ಸ್ಥಾನಗಳಲ್ಲಿ ವಿಜಯ ಸಾಧಿಸಲಿದೆ. ಇತರೆ ಪಕ್ಷ ಮತ್ತು ಪಕ್ಷಾಂತರ 22-34 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ.












Click it and Unblock the Notifications