ಮಹಾರಾಷ್ಟ್ರ ಚುನಾವಣೆ; Times Now-VMR ಎಕ್ಸಿಟ್ ಫೋಲ್

ಮುಂಬೈ, ಅಕ್ಟೋಬರ್ 21 : ದೇಶದ ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನ ಮುಕ್ತಾಯಗೊಂಡಿದೆ. ಚುನಾವಣೋತ್ತರ ಸಮೀಕ್ಷೆಗಳು ಪ್ರಕಟಗೊಳ್ಳುತ್ತಿದ್ದು, ಬಿಜೆಪಿ-ಶಿವಸೇನೆ ಮೈತ್ರಿಕೂಟಕ್ಕೆ ಜಯಸಿಗಲಿದೆ ಎಂದು ಸಮೀಕ್ಷೆ ಹೇಳಿದೆ.

ಮಹಾರಾಷ್ಟ್ರ ವಿಧಾನಸಭೆಯ 288 ಕ್ಷೇತ್ರಗಳಿಗೆ ಸೋಮವಾರ ಮತದಾನ ನಡೆಯಿತು. ಮತದಾನದ ಬಳಿಕ Times Now-VMR ಚುನಾವಣೋತ್ತರ ಸಮೀಕ್ಷೆ ನಡೆಸಿದವು. ಮಹಾರಾಷ್ಟ್ರದಲ್ಲಿ ಶೇ 55.45ರಷ್ಟು ಮತದಾನ ನಡೆದಿದೆ.

Maharashtra assembly elections 2019 : Times Now VMR Exit Poll Results

ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪಕ್ಷವನ್ನು ಪುನಃ ರಾಜ್ಯದಲ್ಲಿ ಅಧಿಕಾರಕ್ಕೆ ತರಲಿದ್ದಾರೆಯೇ? ಎಂದು ದೇಶವೇ ಕುತೂಹಲದಿಂದ ಕಾಯುತ್ತಿದೆ. ಚುನಾವಣಾ ಫಲಿತಾಂಶ ಅಕ್ಟೋಬರ್ 24ರಂದು ಪ್ರಕಟವಾಗಲಿದೆ.

Times Now-VMR ಚುನಾವಣೋತ್ತರ ಸಮೀಕ್ಷೆ ಪ್ರಕಾರ ಬಿಜೆಪಿ-ಶಿವಸೇನೆ ಮೈತ್ರಿಕೂಟ 230 ಕ್ಷೇತ್ರಗಳಲ್ಲಿ ಜಯಗಳಿಸಲಿದೆ. ಕಾಂಗ್ರೆಸ್-ಎನ್‌ಸಿಪಿ ಮೈತ್ರಿಕೂಟ 48 ಕ್ಷೇತ್ರಗಳಲ್ಲಿ ಜಯಗಳಿಸಲಿದೆ. ಇತರ ಪಕ್ಷಗಳು 10 ಕ್ಷೇತ್ರಗಳಲ್ಲಿ ಗೆಲ್ಲಲಿವೆ.

ಮಹಾರಾಷ್ಟ್ರ ರಾಜ್ಯದ ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳನ್ನು ಸೇರಿಸಿ ನೋಡಿದರೆ 288 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟ 213, ಕಾಂಗ್ರೆಸ್ 61 ಮತ್ತು ಇತರರು 14 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+