ಬಾಳಾ ಠಾಕ್ರೆ ಮೊಮ್ಮಗ ಆದಿತ್ಯ ಆಸ್ತಿ ಬಹಿರಂಗ, ಎಷ್ಟು ಕೋಟಿ ರು ಒಡೆಯ?
ಮುಂಬೈ, ಅಕ್ಟೋಬರ್ 03: ಇದೇ ಮೊದಲ ಬಾರಿಗೆ ಬಾಳಾ ಸಾಹೇಬ್ ಠಾಕ್ರೆ ಕುಟುಂಬದ ಸದಸ್ಯರೊಬ್ಬರು ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಠಾಕ್ರೆ ಅವರ ಮೊಮ್ಮಗ ಆದಿತ್ಯ ಇಂದು ವರ್ಲಿ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದಾರೆ.
ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ ಗುರುವಾರದಂದು ಮುಂಬೈನ ವರ್ಲಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ನಾಮಪತ್ರದ ಜೊತೆಗೆ ಆದಿತ್ಯ ಸಲ್ಲಿಸಿರುವ ಅಫಿಡವಿಟ್ ನ ಪ್ರಕಾರ ಅವರ ಬಳಿ 16.05 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಘೋಷಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ರೋಡ್ ಶೋ ನಲ್ಲಿ ಆದಿತ್ಯ ಠಾಕ್ರೆ ಪಾಲ್ಗೊಂಡಿದ್ದರು. 1966ರಲ್ಲಿ ಶಿವಸೇನಾ ಸ್ಥಾಪನೆಯಾಗಿದ್ದು, ಇಲ್ಲಿ ತನಕ ಬಾಳಾ ಠಾಕ್ರೆ ಕುಟುಂಬಸ್ಥರು ಚುನಾವಣೆ ಎದುರಿಸಿರಲಿಲ್ಲ. ಆದರೆ ಈ ಬಾರಿ ಆದಿತ್ಯ ಕಣಕ್ಕಿಳಿಯಲು ಬಯಸಿದ್ದರಿಂದ ಈ ಸ್ಥಾನದಿಂದ ಸ್ಪರ್ಧಿಸುತ್ತಿದ್ದ ಸುನಿಲ್ ಶಿಂಧೆ ಅವರು ತಮ್ಮ ಸ್ಥಾನವನ್ನು ಬಿಟ್ಟು ಕೊಟ್ಟಿದ್ದರು.

ಚರಾಸ್ತಿ ಹಾಗೂ ಸ್ಥಿರಾಸ್ತಿ ಮೌಲ್ಯ
ಆದಿತ್ಯ ಠಾಕ್ರೆ ನೀಡಿರುವ ಮಾಹಿತಿ ಪ್ರಕಾರ ಅವರ ಬಳಿ ಸ್ಥಿರಾಸ್ತಿ 4.67 ಕೋಟಿ ರು ಹಾಗೂ ಚರಾಸ್ತಿ 11.38 ಕೋಟಿ ರು ನಷ್ಟಿದೆ. 10 ಕೋಟಿ 36 ಲಕ್ಷದ 15 ಸಾವಿರದ 218 ರೂಪಾಯಿ ಬ್ಯಾಂಕಿನಲ್ಲಿ ಠೇವಣಿ ಹೊಂದಿದ್ದಾರೆ. ಕೈಯಲ್ಲಿ 30,000 ರೂಪಾಯಿ ನಗದು ಇಟ್ಟುಕೊಂಡಿದ್ದಾರೆ.

ಹೂಡಿಕೆ, ಕಾರು ವಿವರ
ಆದಿತ್ಯ ವಿವಿಧ ಬಾಂಡ್, ಷೇರುಗಳ ಮೇಲೆ 20.39 ಲಕ್ಷ ರು ಹೂಡಿಕೆ ಮಾಡಿದ್ದಾರೆ. ಆದಿತ್ಯ ಬಳಿ ವಿಶ್ವದರ್ಜೆಯ ಬಿಎಂಡಬ್ಲ್ಯೂ ಕಾರಿದೆ. ಅದರ ಮೌಲ್ಯ ಸುಮಾರು 6.5 ಲಕ್ಷ ರೂಪಾಯಿ. ಇದರ ಜೊತೆಗೆ 64 ಲಕ್ಷ 65 ಸಾವಿರ ಮೌಲ್ಯದ ಆಭರಣಗಳನ್ನು ಹೊಂದಿದ್ದಾರೆ. ಇದಲ್ಲದೆ 10 ಲಕ್ಷದ 22 ಸಾವಿರದ ಆಸ್ತಿ ಇನ್ನಿತರ ಆಸ್ತಿ ಇದೆ ಎಂದು ತೋರಿಸಿದ್ದಾರೆ. ಆದಿತ್ಯ ಠಾಕ್ರೆ ನೀಡಿರುವ ಅಫಿಡವಿಟ್ ಪ್ರಕಾರ ಸಾಲಗಾರರಲ್ಲ, ಆದಿತ್ಯ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣ ದಾಖಲಾಗಿಲ್ಲ.

ಬಿಜೆಪಿ ಜೊತೆ ಶಿವಸೇನಾ ಮೈತ್ರಿ
ಮಹಾರಾಷ್ಟ್ರದ ಒಟ್ಟು 288 ಕ್ಷೇತ್ರಗಳಲ್ಲಿ ಬಿಜೆಪಿ 150,ಶಿವಸೇನೆ 124 ಮತ್ತು ಇತರ ಸಣ್ಣ ಪುಟ್ಟ ಮೈತ್ರಿಪಕ್ಷಗಳು 14 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿವೆ. ಅಕ್ಟೋಬರ್ 21 ರಂದು ಮಹಾರಾಷ್ಟ್ರದಲ್ಲಿ ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 24 ರಂದು ಫಲಿತಾಂಶ ಹೊರಬೀಳಲಿದೆ. 2014ರಲ್ಲಿ ಬಿಜೆಪಿ ಹಾಗೂ ಶಿವಸೇನೆ ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು, 260 ಕ್ಷೇತ್ರಗಳ ಪೈಕಿ ಬಿಜೆಪಿ 122ರಲ್ಲಿ ಗೆಲುವು ಸಾಧಿಸಿತ್ತು. ಸೇನಾ 282 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 63ರಲ್ಲಿ ಜಯ ದಾಖಲಿಸಿತ್ತು.

ಯುವ ಸೇನಾ ಅಧ್ಯಕ್ಷ ಬಾಳಾ ಠಾಕ್ರೆ
2010ರಲ್ಲಿ ಯುವ ಸೇನಾದ ಅಧ್ಯಕ್ಷರಾಗಿ ಆಯ್ಕೆಯಾದರು.
2017ರಲ್ಲಿ ಮುಂಬೈ ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆಯಾದರು.
2018ರಿಂದ ಶಿವಸೇನಾ ಮುಖಂಡರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬಾಂಬಾ ಸ್ಕಾಟಿಷ್ ಶಾಲೆ, ಸೈಂಟ್ ಕ್ಸೇವಿಯರ್ ಕಾಲೇಜ್, ಕೆಸಿ ಕಾನೂನು ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದಾರೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications