Manipur Republic TV P MARQ Exit Poll 2022: ಮತ್ತೆ ಅರಳಿದ ಕಮಲ
ಕೊರೊನಾ ಸಾಂಕ್ರಾಮಿಕದ ನಡುವೆ ಪಂಚರಾಜ್ಯಗಳ ವಿಧಾನಸಭೆ ಚುನಾವಣಾ ಪ್ರಕ್ರಿಯೆ ಮಾರ್ಚ್ 7ರಂದು ಮುಕ್ತಾಯ ಕಂಡಿದೆ. ಐದು ರಾಜ್ಯಗಳ ಪೈಕಿ ಮಣಿಪುರದ 60 ವಿಧಾನಸಭೆ ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆಸಲಾಯಿತು. ಮೊದಲ ಹಂತದಲ್ಲಿ ಶೇ 78.03ರಷ್ಟು ಶೇಕಡಾವಾರು ಮತದಾನ ಹಾಗೂ ಎರಡನೇ ಹಂತದಲ್ಲಿ 78.03ರಷ್ಟು ಶೇಕಡಾವಾರು ಮತದಾನ ದಾಖಲಾಗಿದೆ. ಮಾರ್ಚ್ 7ರಂದು ಸಂಜೆ ವೇಳೆ ಅನೇಕ ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷೆ ವರದಿ ಪ್ರಕಟಿಸುತ್ತಿವೆ. ಇಲ್ಲಿ ರಿಪಬ್ಲಿಕ್ ಟಿವಿ ಹಾಗೂ ಪಿ ಮಾರ್ಕ್( P MARQ ) ಸಂಸ್ಥೆ ನೀಡಿರುವ ವರದಿ ವಿವರವಿದೆ. ಸಮೀಕ್ಷೆ ಫಲಿತಾಂಶದಂತೆ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದ್ದು, ಮತ್ತೆ ಅಧಿಕಾರ ಗದ್ದುಗೆ ಏರಲಿದೆ.
ಉತ್ತರ ಪ್ರದೇಶದ 403 ವಿಧಾನಸಭೆ ಕ್ಷೇತ್ರಗಳಿಗೆ ಏಳು ಹಂತಗಳಲ್ಲಿ ಮತದಾನ ನಡೆಸಲಾಗಿದೆ. ಫೆಬ್ರವರಿ 10, 14, 20, 23 ಮತ್ತು ಮಾರ್ಚ್ 3 ಮತ್ತು 7 ರಂದು ಮತದಾನ ನಡೆಸಲಾಗಿದೆ. ಗೋವಾ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆಯಲಿದೆ.
ಪಂಜಾಬ್‌ನ 117 ವಿಧಾನಸಭೆ ಕ್ಷೇತ್ರಗಳಿಗೆ ಫೆಬ್ರವರಿ 20 ರಂದು ಮತದಾನ ನಡೆಯಲಿದೆ. ಮಣಿಪುರದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆದಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿ
ಪಕ್ಷ- ಸ್ಥಾನಗಳು
ಬಿಜೆಪಿ: 31-37
ಕಾಂಗ್ರೆಸ್: 13-19
ಎನ್‌ಪಿಪಿ: 3-9
ಎನ್‌ಪಿಎಫ್: 1-5
ಇತರೆ: 0-2
60 ಸ್ಥಾನಗಳ ಪೈಕಿ ಬಿಜೆಪಿಗೆ ಹೆಚ್ಚು ಸ್ಥಾನ ಸುಮಾರು 31 ರಿಂದ 37 ದಾಟಲಿದೆ. ಈ ಮೂಲಕ ಮತ್ತೊಮ್ಮೆ ಅಧಿಕಾರ ಗದ್ದುಗೇರಲಿದೆ. ಮ್ಯಾಜಿಕ್ ನಂಬರ್ 31 ಸುಲಭವಾಗಿ ದಾಟಲಿದ್ದು, ಇತರೆ ಪಕ್ಷಗಳ ನೆರವು ಅನಗತ್ಯ ಎಂದು ಸಮೀಕ್ಷೆ ಹೇಳಿದೆ.

ಪಕ್ಷ- 2022 %ಫಲಿತಾಂಶ (2017 %ಫಲಿತಾಂಶ)
ಬಿಜೆಪಿ: 39.2% (2017ರಲ್ಲಿ36.3%)
ಕಾಂಗ್ರೆಸ್: 28.7% (35.5%)
ಎನ್‌ಪಿಪಿ: 14.2% (5.1%)
ಎನ್‌ಪಿಎಫ್: 6.4%
ಇತರೆ: 11.5% (-)
+++
ಮುಖ್ಯಮಂತ್ರಿ ಸ್ಥಾನಕ್ಕೆ ಯಾರು ಸೂಕ್ತ?
ಎನ್ ಬಿರೇನ್ ಸಿಂಗ್: 36%
ಓಕ್ರಾಮ್ ಐಬೋಬಿ: 17%
ಯುಮ್ನಾಮ್ ಜೋಯ್ ಕುಮಾರ್ ಸಿಂಗ್: 11%
ಗಯಿಖೆಂಗಾಮ್: 10%
ಇತರೆ: 5%

ಮಣಿಪುರದಲ್ಲಿ ಸಮಸ್ಯೆ / ಆಡಳಿತಕ್ಕೆ ಮಾರ್ಕ್ಸ್
ಮಣಿಪುರದಲ್ಲಿ ಸಮಸ್ಯೆ
ನಿರುದ್ಯೋಗ: ಶೇ 29
ಕುಡಿಯುವ ನೀರು: ಶೇ 24
ಕಳಪೆ ರಸ್ತೆ: ಶೇ 17
ಭ್ರಷ್ಟಾಚಾರ; ಶೇ 5
ಇತರೆ: ಶೇ 25
ಬಿಜೆಪಿ ಆಡಳಿತಕ್ಕೆ ಎಷ್ಟು ಮಾರ್ಕ್ಸ್?
ಅತ್ಯುತ್ತಮ: ಶೇ 22
ಉತ್ತಮ: ಶೇ 37
ಸಾಧಾರಣ: ಶೇ 29
ಕಳಪೆ: ಶೇ 12

ಚುನಾವಣಾಪೂರ್ವ ಸಮೀಕ್ಷೆಗಳು
ರಿಪಬ್ಲಿಕ್-ಪಿ ಮಾರ್ಕ್ ಸಮೀಕ್ಷೆ ಪ್ರಕಾರ ರಿಪಬ್ಲಿಕ್-ಪಿ ಮಾರ್ಕ್ ಸಮೀಕ್ಷೆ ಪ್ರಕಾರ, ಬಿಜೆಪಿಗೆ 31 ರಿಂದ 37 ಸ್ಥಾನಗಳು ಸಿಗುತ್ತವೆ. ಆಡಳಿತ ಪಕ್ಷಕ್ಕೆ ಕಠಿಣ ಪೈಪೋಟಿ ನೀಡದ ಕಾಂಗ್ರೆಸ್ 13-19 ಸ್ಥಾನಗಳನ್ನು ಪಡೆಯಬಹುದು. ಇದರ ಹೊರತಾಗಿ ಎನ್‌ಪಿಪಿ ಪಕ್ಷವು 3 ರಿಂದ 9 ಸ್ಥಾನ, ಎನ್‌ಪಿಎಫ್ ಪಕ್ಷವು 1 ರಿಂದ 5 ಸ್ಥಾನ, ಇತರರು 0 ರಿಂದ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆ ಮೂಲಕ ಮಣಿಪುರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ.
+++
ಮಣಿಪುರ ಚುನಾವಣೆಯಲ್ಲಿ ಶೇ.33 ರಷ್ಟು ಮತಗಳನ್ನು ಪಡೆಯುವ ಮೂಲಕ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಮುಖ್ಯಮಂತ್ರಿ ಅಭ್ಯರ್ಥಿಗೆ ಅತ್ಯಂತ ಜನಪ್ರಿಯ ಆಯ್ಕೆ ಎಂದು ಜನತೆ ಭವಿಷ್ಯ ನುಡಿದಿದ್ದಾರೆ. ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಒಕ್ರಾಮ್ ಇಬೋಬಿ ಸಿಂಗ್ ಅವರು ಶೇ 19 ರಷ್ಟು ಮತಗಳನ್ನು ಗಳಿಸಿ ಎರಡನೇ ಸ್ಥಾನ ಪಡೆದಿದ್ದರೆ, ಮತ್ತೊಬ್ಬ ಕಾಂಗ್ರೆಸ್ ನಾಯಕ ಎನ್ ಲೋಕೇನ್ ಸಿಂಗ್ ಅವರು ಶೇ 12 ರೊಂದಿಗೆ ಮೂರನೇ ಆಯ್ಕೆಯಾಗಿದ್ದಾರೆ ಎಂದು ಸಮೀಕ್ಷೆ ಬಹಿರಂಗಪಡಿಸಿದೆ.
+++
Zee News-DesignBoxed ಪ್ರಕಾರ, ಬಿಜೆಪಿ 33-37 ಸ್ಥಾನಗಳನ್ನು ಮತ್ತು ಕಾಂಗ್ರೆಸ್ 13-17 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ, NPF 4-6 ಸ್ಥಾನಗಳನ್ನು ಮತ್ತು NPP ಕೇವಲ 2-4 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ ಎಂದು ಹೇಳಲಾಗಿತ್ತು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications