ಮಾತೃಭೂಮಿ-ಸಿ ವೋಟರ್ ಸಮೀಕ್ಷೆ: ಕೇರಳದಲ್ಲಿ ಮತ್ತೆ ಪಿಣರಾಯಿ 'ವಿಜಯ'ನ್
ಕೇರಳದಲ್ಲಿ ಏಪ್ರಿಲ್ 6ರಂದು ಚುನಾವಣೆಯಲಿದ್ದು, ಪ್ರಚಾರದ ಭರಾಟೆ ಜೋರಾಗಿದೆ. ಆಡಳಿತಾರೂಢ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್) ಮೈತ್ರಿಕೂಟ ಮತ್ತು ಪ್ರಮುಖ ವಿರೋಧಪಕ್ಷ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ನಡುವೆ ತೀವ್ರ ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷಿಸಲಾಗಿದೆ. ಇನ್ನು ಕೇರಳದಲ್ಲಿ ತನ್ನ ಬೇರೂರಲು ಪ್ರಯತ್ನಿಸುತ್ತಿರುವ ಬಿಜೆಪಿ ಒಂದಷ್ಟು ಮತಗಳನ್ನು ಪಡೆದುಕೊಳ್ಳುವ ಹೋರಾಟದಲ್ಲಿದೆ.
ಮಾತೃಭೂಮಿ ಸಿ-ವೋಟರ್ ಸಮೀಕ್ಷೆ ಶುಕ್ರವಾರ ಪ್ರಕಟಗೊಂಡಿದ್ದು, ಎಡಪಕ್ಷಗಳ ಮೈತ್ರಿಕೂಟ 75-83 ಸೀಟುಗಳನ್ನು ಪಡೆದು ಅಧಿಕಾರದಲ್ಲಿ ಮುಂದುವರಿಯಲಿದೆ ಎಂದು ಹೇಳಿದೆ. ಹೀಗಾಗಿ ಪಿಣರಾಯಿ ವಿಜಯನ್ ಅವರ ಸರ್ಕಾರ ಮತ್ತೆ ಅಧಿಕಾರಕ್ಕೆ ಏರಲಿದೆ ಎಂದು ಭವಿಷ್ಯ ನುಡಿದಿದೆ.
ಚುನಾವಣಾಪೂರ್ವ ಸಮೀಕ್ಷೆಯ ಪ್ರಕಾರ, ಎಲ್‌ಡಿಎಫ್ 75-83 ಸೀಟುಗಳನ್ನು ಪಡೆದುಕೊಳ್ಳಲಿದೆ. ಅದರ ಪ್ರಮುಖ ವಿರೋಧಪಕ್ಷದ ಯುಡಿಎಫ್ 56-64 ಸೀಟುಗಳಲ್ಲಿ ಗೆಲ್ಲಲಿದೆ. ಇನ್ನು ಎನ್‌ಡಿಎ 0-2 ಸೀಟುಗಳನ್ನು ಪಡೆಯಬಹುದು. ಸಮೀಕ್ಷೆ ಪ್ರಕಾರ ಯುಡಿಎಫ್ 60, ಎಲ್‌ಡಿಎಫ್ 79 ಮತ್ತು ಎನ್‌ಡಿಎ 1 ಸರಾಸರಿ ಸಂಖ್ಯೆಗಳನ್ನು ಪಡೆದುಕೊಳ್ಳಲಿವೆ. ಎಲ್‌ಡಿಎಫ್ ಶೇ 40.9ರಷ್ಟು ಮತಗಳನ್ನು ಪಡೆದರೆ, ಯುಡಿಎಫ್ ಶೇ 37.9 ಮತ್ತು ಎನ್‌ಡಿಎ ಶೇ 16.6ರಷ್ಟು ಮತಗಳನ್ನು ಪಡೆಯಲಿದೆ.

ಸರ್ಕಾರದ ಬಗ್ಗೆ ಜನರ ಅಭಿಪ್ರಾಯ
ಶೇ 40.5ರಷ್ಟು ಜನರು ಎಡ ಸರ್ಕಾರದ ವಿರುದ್ಧ ಅಭಿಪ್ರಾಯ ಮಂಡಿಸಿದ್ದು, ಬದಲಾವಣೆ ಬಯಸಿದ್ದಾರೆ. ಇನ್ನು ಶೇ 27.6ರಷ್ಟು ಜನರು ಎಲ್‌ಡಿಎಫ್ ವಿರುದ್ಧ ಅಸಮಾಧಾನ ಹೊಂದಿದ್ದರೂ, ಆ ಸರ್ಕಾರವೇ ಆಡಳಿತದಲ್ಲಿ ಇರುವುದು ಉತ್ತಮ ಎಂದಿದ್ದಾರೆ. ಇನ್ನು ಶೇ 31.9ರಷ್ಟು ಜನರು ಎಲ್‌ಡಿಎಫ್ ಪರ ಒಲವು ಹೊಂದಿದ್ದು, ಇದೇ ಸರ್ಕಾರವನ್ನು ಮತ್ತೆ ಅಧಿಕಾರದಲ್ಲಿ ನೋಡಲು ಬಯಸಿದ್ದಾರೆ.

ವಿರೋಧಪಕ್ಷದ ಕಾರ್ಯವೈಖರಿ
ಶೇ 42.6ರಷ್ಟು ಜನರು ವಿರೋಧಪಕ್ಷದ ವಿರುದ್ಧ ಕಿಡಿಕಾರಿದ್ದಾರೆ. ಶೇ 34.4ರಷ್ಟು ಜನರು ಯುಡಿಎಫ್ ಕಾರ್ಯನಿರ್ವಹಣೆಯನ್ನು ಶ್ಲಾಘಿಸಿದ್ದಾರೆ. ಇನ್ನು ಶೇ 20.1ರಷ್ಟು ಜನರಿಗೆ ವಿಪಕ್ಷ ಸಹಜವಾಗಿದೆ ಎಂಬ ಭಾವನೆ ಮೂಡಿದೆ. ಉಳಿದ ಶೇ 2.9 ಮಂದಿ ಇದಕ್ಕೆ ಪ್ರತಿಕ್ರಿಯೆ ನೀಡಿಲ್ಲ.

ಪ್ರಮುಖ ಸಮಸ್ಯೆ ಯಾವುದು?
ಶೇ 41.8- ನಿರುದ್ಯೋಗ
ಶೇ 10.4- ಭ್ರಷ್ಟಾಚಾರ
ಶೇ 4.8- ಕಾನೂನು ಮತ್ತು ಸುವ್ಯವಸ್ಥೆ

ಮತಗಳ ಮೇಲೆ ಪ್ರಭಾವ ಬೀರುವ ಅಂಶಗಳು
ಶೇ 25.2- ಚಿನ್ನದ ಕಳ್ಳ ಸಾಗಾಣಿಕೆ ಪ್ರಕರಣ
ಶೇ 20.2- ಶಬರಿಮಲೆ ದೇವಸ್ಥಾನ ವಿವಾದ
ಶೇ 13- ಕೋವಿಡ್ ನಿಯಂತ್ರಣ
ಶೇ 8- ಪ್ರವಾಹ ಪರಿಹಾರ ನಿಧಿ
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications