Meghalaya assembly election 2023; ಅಂತಿಮ ಫಲಿತಾಂಶ, ಮತಗಳಿಕೆ
ಮೇಘಾಲಯ ವಿಧಾನಸಭೆ ಚುನಾವಣೆ 2023ರ ಫಲಿತಾಂಶ ಪ್ರಕಟವಾಗಿದೆ. ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
2023ರ ಮೇಘಾಲಯ ವಿಧಾನಸಭೆ ಚುನಾವಣೆ ಫಲಿತಾಂಶ ಮಾರ್ಚ್ 2ರ ಗುರುವಾರ ಪ್ರಕಟವಾಗಿದೆ. ರಾಜ್ಯದ ಒಟ್ಟು ವಿಧಾನಸಭಾ ಕ್ಷೇತ್ರಗಳು 60. ಆದರೆ 59 ಕ್ಷೇತ್ರಗಳಿಗೆ ಫೆಬ್ರವರಿ 27ರಂದು ಮತದಾನ ನಡೆದಿತ್ತು. ಶಿಲ್ಲಾಂಗ್ ವಿಧಾನಸಭಾ ಕ್ಷೇತ್ರದ ಯುನೈಟೆಡ್ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿ ಎಚ್. ಡಿ. ಆರ್. ಲಿಂಗ್ಡೊ ಮೃತಪಟ್ಟ ಕಾರಣ ಆ ಕ್ಷೇತ್ರದ ಚುನಾವಣೆ ಮುಂದೂಡಲಾಗಿದೆ.
2018ರ ಚುನಾವಣೆಯಲ್ಲಿ ರಾಜ್ಯದಲ್ಲಿ ಮೇಘಾಲಯ ಡೆಮಾಕ್ರಟಿಕ್ ಅಲಯನ್ಸ್ (ಎಂಡಿಎ) ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ನ್ಯಾಷನಲ್ ಪೀಪಲ್ಸ್ ಪಾರ್ಟಿಯ ಕಾನ್ರಾಡ್ ಸಂಗ್ಮಾ ಮುಖ್ಯಮಂತ್ರಿಯಾಗಿದ್ದರು. 2023ರ ಚುನಾವಣೆಯಲ್ಲಿ ಎನ್‌ಪಿಪಿ, ಟಿಎಂಸಿ, ಬಿಜೆಪಿ, ಕಾಂಗ್ರೆಸ್, ಯುನೈಟೆಡ್ ಡೆಮಾಕ್ರೆಟಿಕ್ ಪಕ್ಷ ಸೇರಿದಂತೆ ವಿವಿಧ ಪಕ್ಷಗಳ 369 ಅಭ್ಯರ್ಥಿಗಳು ಕಣದಲ್ಲಿದ್ದರು.

ಗುರುವಾರ ಬೆಳಗ್ಗೆ 8 ಗಂಟೆಗೆ ಆರಂಭವಾದ ಮತ ಎಣಿಕೆ ಕಾರ್ಯ ಸಂಜೆಯ ತನಕ ನಡೆಯಿತು. ಕೇಂದ್ರ ಚುನಾವಣಾ ಆಯೋಗ ಮತ ಎಣಿಕೆ ಕಾರ್ಯ ಪೂರ್ಣಗೊಂಡ ಬಳಿಕ ಅಂತಿಮ ಫಲಿತಾಂಶವನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಈ ಬಾರಿಯ ಚುನಾವಣೆಯಲ್ಲಿಯೂ 26 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಎನ್‌ಪಿಪಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರ ನಡೆಸಲಿದೆ. ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ದಕ್ಷಿಣ ತುರಾ ವಿಧಾನಸಭಾ ಕ್ಷೇತ್ರದಲ್ಲಿ 5016 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಈ ಬಾರಿಯ ಚುನಾವಣೆ ಕುತೂಹಲಕ್ಕೆ ಕಾರಣವಾಗಿತ್ತು. ರಾಜ್ಯದ ಮಾಜಿ ಮುಖ್ಯಮಂತ್ರಿ, ಟಿಎಂಸಿ ನಾಯಕ ಮುಕುಲ್ ಸಂಗ್ಮಾ ಎನ್‌ಪಿಪಿ ಪಕ್ಷಕ್ಕೆ ಪ್ರಬಲ ಪೈಪೋಟಿ ನೀಡಲಿದ್ದಾರೆ ಎಂದು ನಿರೀಕ್ಷೆ ಮಾಡಲಾಗಿತ್ತು. ಮೊದಲ ಎರಡು ಸುತ್ತುಗಳಲ್ಲಿ ಟಿಎಂಸಿ ಎನ್‌ಪಿಪಿಗೆ ಪ್ರಬಲ ಪೈಪೋಟಿ ನೀಡಿತು. ಬಳಿಕ ಎನ್‌ಪಿಪಿ ಸ್ಪಷ್ಟ ಮುನ್ನಡೆ ಪಡೆದುಕೊಂಡಿತು. ಅಂತಿಮವಾಗಿ ಟಿಎಂಸಿ ಪಕ್ಷ 5 ಸ್ಥಾನಗಳಲ್ಲಿ ಮಾತ್ರ ಜಯಗಳಿಸಲು ಸಾಧ್ಯವಾಯಿತು. 2021ರಲ್ಲಿ ಮುಕುಲ್ ಸಂಗ್ಮಾ ಕಾಂಗ್ರೆಸ್ ತೊರೆದು 11 ಶಾಸಕರ ಜೊತೆ ಟಿಎಂಸಿ ಸೇರಿದ್ದರು. ಆದರೆ ಇದು ಚುನಾವಣೆಯಲ್ಲಿ ಯಾವುದೇ ಪ್ರಭಾವ ಬೀರಲಿಲ್ಲ.

2018ರ ತನಕ ರಾಜ್ಯದಲ್ಲಿ ಆಡಳಿತ ನಡೆಸಿದ್ದ ಕಾಂಗ್ರೆಸ್ ಪಕ್ಷ ಕಳೆದ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡಿತ್ತು. 2023ರ ಚುನಾವಣೆಯಲ್ಲಿಯೂ ಪಕ್ಷ ಭಾರೀ ಹಿನ್ನಡೆ ಅನುಭವಿಸಿದೆ. ಎರಡಂಕಿ ಸೀಟುಗಳನ್ನು ಗೆಲ್ಲಲು ಪಕ್ಷ ವಿಫಲವಾಗಿದ್ದು, ಬುಡಕಟ್ಟು ಸಮುದಾಯ, ಕ್ರೈಸ್ತರ ಪ್ರಾಬಲ್ಯವಿರುವ ರಾಜ್ಯದಲ್ಲಿ 5 ಸ್ಥಾನಗಳಲ್ಲಿ ಜಯಗಳಿಸಿದೆ. ರಾಷ್ಟ್ರೀಯ ಪಕ್ಷವಾದ ಬಿಜೆಪಿ ಸಹ ಕಳೆದ ಚುನಾವಣೆಯಲ್ಲಿ 2 ಸೀಟುಗಳನ್ನು ಗೆದ್ದಿತ್ತು. ಚುನಾವಣೋತ್ತರ ಮೈತ್ರಿಯಲ್ಲಿ ಮೇಘಾಲಯ ಡೆಮಾಕ್ರಟಿಕ್ ಅಲಯನ್ಸ್ ಬೆಂಬಲಿಸಿತ್ತು. ಒಬ್ಬರು ಶಾಸಕರು ಸಚಿವರು ಆಗಿದ್ದರು. ಆದರೆ ಈ ಬಾರಿ ಪಕ್ಷ ಸ್ವತಂತ್ರವಾಗಿ 60 ಕ್ಷೇತ್ರಗಳಲ್ಲೂ ಅಭ್ಯರ್ಥಿ ಕಣಕ್ಕಿಳಿಸಿತ್ತು. ಅಂತಿಮವಾಗಿ ಪಕ್ಷ ಪಡೆದ ಸೀಟುಗಳು 2.
ಯಾವ ಪಕ್ಷಕ್ಕೆ ಎಷ್ಟು ಸೀಟು?; ಮೇಘಾಲಯ ವಿಧಾನಸಭೆ ಚುನಾವಣೆ 2023ರಲ್ಲಿ 26 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಹಾಲಿ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಚುನಾವಣೆಯಲ್ಲಿ ಪಕ್ಷ ಪಡೆದ ಮತಗಳು ಶೇ 31.5.
ಯುಡಿಪಿ ಪಕ್ಷ 11 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ 2ನೇ ಅತಿ ದೊಡ್ಡ ಪಕ್ಷವಾಗಿದೆ. ಪಕ್ಷ ಪಡೆದ ಮತಗಳು ಶೇ 16.2.
ಟಿಎಂಸಿ 5 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಶೇ 13.8ರಷ್ಟು ಮತಗಳನ್ನು ಪಡೆದಿದೆ. ಕಾಂಗ್ರೆಸ್ ಸಹ 5 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಶೇ 13.1ರಷ್ಟು ಮತಗಳನ್ನು ಪಡೆದಿದೆ. ಬಿಜೆಪಿ 2ಸ್ಥಾನಗಳಲ್ಲಿ ಜಯಗಳಿಸಿದೆ, ಮತಗಳಿಕೆ ಪ್ರಮಾಣ ಶೇ 9.33 ಆಗಿದೆ. ಉಳಿದಂತೆ ಹೆಚ್‌ಎಸ್‌ಪಿಡಿಪಿ 2, ಪಿಡಿಎಫ್ 2, ವಿಪಿಪಿ 4, ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿದ್ದಾರೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications