Maha Kumbh Mela 2025: ಮಾಘ ಪೂರ್ಣಿಮೆ ಅಂಗವಾಗಿ ಭಕ್ತರಿಂದ ತುಂಬಿ ತುಳುಕಾಡಿದ ಪ್ರಯಾಗ್‌ರಾಜ್
ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ದಿನದಿಂದ ದಿನಕ್ಕೆ ಭಕ್ತರ ದಂಡು ಸಾಗರದಂತೆ ಹರಿದುಬರುತ್ತಿದೆ. ಇಂದು ಮಾಘ ಪೌರ್ಣಮಿ ಹಿನ್ನೆಲೆ ಇಂದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಪವಿತ್ರ ಸ್ನಾನ ಮಾಡಿದ್ದಾರೆ. ಮಹಾಕುಂಭ 2025ರ ಪವಿತ್ರ ಸ್ನಾನದ ದಿನಗಳಲ್ಲಿ ಒಂದಾದ ಮಾಘ ಪೂರ್ಣಿಮೆಯಾದ ಇಂದು ಬೆಳಿಗ್ಗೆ 8 ಗಂಟೆಗೆ ಪ್ರಯಾಗರಾಜ್‌ನ ತ್ರಿವೇಣಿ ಸಂಗಮದಲ್ಲಿ ಬರೋಬ್ಬರಿ 10 ಮಿಲಿಯನ್ ಯಾತ್ರಿಕರು ಈಗಾಗಲೇ ಪವಿತ್ರ ಸ್ನಾನ ಮಾಡಿದ್ದಾರೆ.
ಮಾಘ ಪೂರ್ಣಿಮೆಯ ಹಿನ್ನೆಲೆ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡುವ ಭಕ್ತರನ್ನು ಹೂವಿನ ದಳಗಳ ಪುಷ್ಪ ವರ್ಷದ ಮೂಲಕ ಸ್ವಾಗತಿಸಲಾಯಿತು. ಇಲ್ಲಿಯವರೆಗೆ ಸುಮಾರು 48.83 ಮಿಲಿಯನ್ ಭಕ್ತರು ಇಲ್ಲಿನ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ್ದಾರೆ. ಈ ಪ್ರದೇಶದಲ್ಲಿ ವಾಸಿಸುವ ಕಲ್ಪವಾಸಿಗಳ ಸಂಖ್ಯೆಯೇ 10 ಮಿಲಿಯನ್ ಮೀರಿದೆ ಎನ್ನಲಾಗಿದೆ.

ಮಾಘ ಪೂರ್ಣಿಮೆ ಸ್ನಾನದ ಶುಭ ಸಂದರ್ಭದಲ್ಲಿ ಎಲ್ಲ ಭಕ್ತರು, ಸಂತರು ಮತ್ತು ಧಾರ್ಮಿಕ ಮುಖಂಡರಿಗೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಶುಭಾಶಯಗಳನ್ನು ತಿಳಿಸಿದ್ದಾರೆ. "2025ರ ಮಹಾಕುಂಭದ ಪ್ರಯಾಗ್‌ರಾಜ್‌ನಲ್ಲಿ ಪವಿತ್ರ ತ್ರಿವೇಣಿಯಲ್ಲಿ ಪವಿತ್ರ ಸ್ನಾನಕ್ಕೆ ಬಂದ ಎಲ್ಲಾ ಪೂಜ್ಯ ಸಂತರು, ಧಾರ್ಮಿಕ ಮುಖಂಡರು, ಕಲ್ಪವಾಸಿಗಳು ಮತ್ತು ಭಕ್ತರಿಗೆ ಹೃತ್ಪೂರ್ವಕ ಶುಭಾಶಯಗಳು. ಮಾ ಗಂಗಾ, ಮಾ ಯಮುನಾ ಮತ್ತು ಮಾ ಸರಸ್ವತಿ ಎಲ್ಲರ ಆಸೆಗಳನ್ನು ಪೂರೈಸಲಿ" ಎಂದು ಸಿಎಂ ಯೋಗಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ.
ಇಂದು ಮುಂಜಾನೆಯಿಂದಲೂ ಇಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇನ್ನೂ ಲಕ್ಷಾಂತರ ಜನರು ಆಗಮನದೊಂದಿಗೆ ಜನಸಂದಣಿಯು ಹೆಚ್ಚುತ್ತಲೇ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಮಾರು ಒಂದು ತಿಂಗಳಿನಿಂದ ನಡೆಯುತ್ತಿರುವ ಮಹಾಕುಂಭ ಮೇಳವು ಫೆಬ್ರವರಿ 26ರ ಮಹಾಶಿವರಾತ್ರಿಯಂದು ಅಂತಿಮ ಅಮೃತ ಸ್ನಾನದೊಂದಿಗೆ ಮುಕ್ತಾಯಗೊಳ್ಳಲಿದೆ.

ಶಿವರಾತ್ರಿಯಂದು ಐತಿಹಾಸಿಕ ಮಹಾಕುಂಭ ಮೇಳ ಸಂಪನ್ನಗೊಳ್ಳಲಿದೆ. ಅಂದು ಕೋಟ್ಯಂತರ ಭಕ್ತಾದಿಗಳು ಪ್ರಯಾಗ್‌ರಾಜ್‌ಗೆ ಬರಲಿದ್ದು, ಲಕ್ಷಾಂತರ ಭಕ್ತರು ಸಂಗಮದಲ್ಲಿ ಕೊನೆಯ ಪವಿತ್ರ ಸ್ನಾನದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸಂತರು, ಅಖಾಡಗಳು ಮತ್ತು ಆಧ್ಯಾತ್ಮಿಕ ನಾಯಕರು ಅಂದು ಶಿವನ ಕುರಿತಾದ ಪ್ರಾರ್ಥನೆಗಳು, ರುದ್ರಾಭಿಷೇಕ ಪೂಜೆಗಳು ಮತ್ತು ವಿಶೇಷ ಮೆರವಣಿಗೆಗಳನ್ನು ನಡೆಸಲಿದ್ದಾರೆ.
ಹಲವು ಮಂಗಳಕರವಾದ ದಿನಗಳಂದು ಪವಿತ್ರ ಸ್ನಾನಕ್ಕಾಗಿ ಭಕ್ತರು ಹರಿದು ಬರುತ್ತಿದ್ದಾರೆ. ಭಕ್ತರ ಸಂಖ್ಯೆ ಹೆಚ್ಚಾದ ಕಾರಣ ಇಲ್ಲಿ ಸ್ನಾನಘಟ್ಟಗಳು ಹಾಗೂ ಪ್ರಯಾಗ್‌ರಾಜ್‌ನಲ್ಲಿ ಎಲ್ಲ ವಿಶೇಷ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಮಾಘ ಪೂರ್ಣಿಮೆಯ ಹಿನ್ನೆಲೆ ಇಂದು ಪ್ರಯಾಗ್‌ರಾಜ್‌ನ ಸ್ನಾನಘಟ್ಟಗಳಲ್ಲಿ ಜನಸಂದಣಿ ತಡೆಗಟ್ಟಲು ಮಹಾಕುಂಭ ಮೇಳ ಪರಿಷತ್ತು ಸುಮಾರು 40 ಪೊಲೀಸರನ್ನು ಭದ್ರತೆಗೆ ನಿಯೋಜಿಸಿದೆ. ಇವರು ಸುಗಮ ಜನಸಂದಣಿ ನಿರ್ವಹಣೆಗಾಗಿ ಪ್ರತಿ ನದಿಯ ದಡದಲ್ಲಿ ಅನೌನ್ಸ್‌ಮೆಂಟ್‌ಗಳ ಮೂಲಕ ಭಕ್ತರನ್ನು ನಿಯಂತ್ರಣ ಮಾಡುತ್ತಿದ್ದಾರೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications