ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Laxman Savadi: ಕಾಂಗ್ರೆಸ್ ಸೇರ್ಪಡೆಗೊಂಡ ಲಕ್ಷ್ಮಣ ಸವದಿ ಪರಿಚಯ

|
Google Oneindia Kannada News

ಬೆಂಗಳೂರು, ಏಪ್ರಿಲ್ 14: ಬಿಜೆಪಿಯ ಹಿರಿಯ ಮುಖಂಡ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಬಿಜೆಪಿಗೆ ರಾಜೀನಾಮೆ ನೀಡಿ, ಏಪ್ರಿಲ್ 14, 2023ರಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅಥಣಿಯಲ್ಲಿ ಟಿಕೆಟ್ ಸಿಗದೇ ಇದ್ದ ಕಾರಣ, ಅವರು ಬಿಜೆಪಿ ತೊರೆದಿದ್ದಾರೆ.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆ ಮಾಡುವಾಗ ಗೆದ್ದ ಶಾಸಕರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಆದರೆ, 2018ರ ವಿಧಾನಸಭೆ ಚುನಾವಣೆಯಲ್ಲಿ ಸೋತರೂ ಲಕ್ಷ್ಮಣ ಸವದಿ ಸಚಿವರಾಗಿದ್ದರು.

ಮಾಜಿ ಶಾಸಕ ಲಕ್ಷ್ಮಣ ಸವದಿಗೆ ಒಲಿದು ಬಂದ ಸಚಿವ ಸ್ಥಾನಮಾಜಿ ಶಾಸಕ ಲಕ್ಷ್ಮಣ ಸವದಿಗೆ ಒಲಿದು ಬಂದ ಸಚಿವ ಸ್ಥಾನ

Minister Laxman Sangappa Savadi Profile

ಲಿಂಗಾಯತ (ಗಾಣಿಗ) ಸಮುದಾಯಕ್ಕೆ ಸೇರಿದ ಲಕ್ಷ್ಮಣ ಸವದಿ ಯಡಿಯೂರಪ್ಪ ಆಪ್ತ ಬಗಳದಲ್ಲಿ ಗುರುತಿಸಿಕೊಂಡಿದ್ದಾರೆ. ರಾಜ್ಯ ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷರಾಗಿ ಲಕ್ಷ್ಮಣ ಸವದಿ ಅವರನ್ನು ಯಡಿಯೂರಪ್ಪ ನೇಮಕ ಮಾಡಿದ್ದು, ಈಗ ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಮಹೇಶ್ ಕುಮಟಳ್ಳಿ ವಿರುದ್ಧ ಲಕ್ಷ್ಮಣ ಸವದಿ ಸೋಲು ಕಂಡಿದ್ದರು. 2020ರ ಫೆಬ್ರವರಿ 17ರಂದು ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆದ್ದು ಅವರು ಸಚಿವ ಸ್ಥಾನವನ್ನು ಭದ್ರಪಡಿಸಿಕೊಂಡರು.

ಯಡಿಯೂರಪ್ಪ ಸಂಪುಟ ಸೇರಿ ಬಿ. ಡಿ. ಜತ್ತಿ ದಾಖಲೆ ಮುರಿದ ಶೆಟ್ಟರ್ಯಡಿಯೂರಪ್ಪ ಸಂಪುಟ ಸೇರಿ ಬಿ. ಡಿ. ಜತ್ತಿ ದಾಖಲೆ ಮುರಿದ ಶೆಟ್ಟರ್

ರಾಜಕೀಯಕ್ಕೆ ಬಂದಾಗ ಜನತಾ ಪರಿವಾರದ ಜೊತೆ ಗುರುತಿಸಿಕೊಂಡಿದ್ದ ಲಕ್ಷ್ಮಣ ಸವದಿ 1999ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಸೋಲು ಕಂಡಿದ್ದರು. 2004ರಲ್ಲಿ ಬಿಜೆಪಿ ಸೇರಿದ ಅವರು ಸತತ ಮೂರು ಚುನಾವಣೆಗಳಲ್ಲಿ ಜಯಗಳಿಸಿದರು.

ಪಕ್ಷ ನಿಷ್ಠೆ, ಜನಪರ ಕಾಳಜಿಯ ಕೋಟ ಶ್ರೀನಿವಾಸ ಪೂಜಾರಿ ಪರಿಚಯಪಕ್ಷ ನಿಷ್ಠೆ, ಜನಪರ ಕಾಳಜಿಯ ಕೋಟ ಶ್ರೀನಿವಾಸ ಪೂಜಾರಿ ಪರಿಚಯ

ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಸಹಕಾರ ಖಾತೆ ಸಚಿವರಾಗಿದ್ದರು. ವಿಧಾನಸಭೆ ಕಲಾಪ ನಡೆಯುವಾಗ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರ ನೋಡಿದ ಆರೋಪ ಎದುರಾದಾಗ ಸಚಿವ ಸ್ಥಾನ ಕಳೆದುಕೊಂಡರು.

2013ರ ಚುನಾವಣೆಯಲ್ಲಿ 74,299 ಮತಗಳನ್ನು ಪಡೆದು ಜಯಗಳಿಸಿದ್ದ ಲಕ್ಷ್ಮಣ ಸವದಿ, 2018ರ ಚುನಾವಣೆಯಲ್ಲಿ 79,763 ಮತಗಳನ್ನು ಪಡೆದು ಕಾಂಗ್ರೆಸ್‌ನ ಮಹೇಶ್ ಕಮಟಳ್ಳಿ ವಿರುದ್ಧ ಸೋಲು ಕಂಡರು.

ಪಿಯುಸಿ ವ್ಯಾಸಂಗ ಮಾಡಿರುವ ಲಕ್ಷ್ಮಣ ಸವದಿ 2006-2007ರಲ್ಲಿ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ. ಕರ್ನಾಟಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರಾಗಿ, ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.

ಬೆಳಗಾವಿಯ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ ನಿರ್ದೇಶಕರಾಗಿ, ಹುತಾತ್ಮ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಜಮಖಂಡಿ ಸಕ್ಕರೆ ಕಾರ್ಖನೆ ಮತ್ತು ಸಂಗಮೇಶ್ವರ ಸಕ್ಕರೆ ಕಾರ್ಖನೆ ಬೈಲಹೊಂಗಲ ನಿರ್ದೇಶಕರಾಗಿದ್ದಾರೆ.

English summary
Laxman Sangappa Savadi joined Karnataka Chief Minister B.S.Yediyurappa cabinet. Laxman Savadi lost 2018 assembly election in Athani assembly constituency. But get minister post.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X