Monkeypox Do's And Don'ts: ಮಂಕಿಪಾಕ್ಸ್ ಕುರಿತು ಸುರಕ್ಷತೆ ಹೇಗೆ ಸಾಧ್ಯ?

ನವದೆಹಲಿ, ಆಗಸ್ಟ್ 3: ಭಾರತದಲ್ಲಿ ಮಂಕಿಪಾಕ್ಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಕ್ರಮೇಣ ಏರುಮುಖವಾಗಿ ಸಾಗುತ್ತಿದೆ. ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಬೆನ್ನಲ್ಲೇ ಭಯ ಹುಟ್ಟಿಸುತ್ತಿರುವ ಮಂಕಿಪಾಕ್ಸ್ ಬಗ್ಗೆಯೂ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕಿದೆ.

ಮಂಕಿಪಾಕ್ಸ್ ಸೋಂಕಿನಿಂದ ಜನರು ತಮ್ಮನ್ನು ತಾವು ಯಾವ ರೀತಿಯಲ್ಲಿ ರಕ್ಷಿಸಿಕೊಳ್ಳಬೇಕು ಎಂಬುದನ್ನು ತಿಳಿದುಕೊಳ್ಳಬೇಕಿದೆ. ಮಂಕಿಪಾಕ್ಸ್ ಸೋಂಕಿತರು ಹೇಗೆ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಅರಿತುಕೊಳ್ಳಬೇಕಿದೆ. ಅದೇ ರೀತಿ ಪ್ರತಿಯೊಬ್ಬರು ಮಂಕಿಪಾಕ್ಸ್ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕಿದೆ.

ಭಾರತದಲ್ಲಿ ಮಂಕಿಪಾಕ್ಸ್ ಸೋಂಕಿನ ಬಗ್ಗೆ ಜನರು ವಹಿಸಿಕೊಳ್ಳಬೇಕಾದ ಎಚ್ಚರಿಕೆ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಮಂಕಿಪಾಕ್ಸ್ ತಡೆಗಟ್ಟುವುದಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಎಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.

ಮಂಕಿಪಾಕ್ಸ್ ಬಗ್ಗೆ ಪ್ರಾಥಮಿಕ ಮಾಹಿತಿ

ಮಂಕಿಪಾಕ್ಸ್ ಬಗ್ಗೆ ಪ್ರಾಥಮಿಕ ಮಾಹಿತಿ

ಮಂಕಿಪಾಕ್ಸ್ ಒಂದು ಝೂನೋಟಿಕ್ ಕಾಯಿಲೆಯಾಗಿದ್ದು, ಸಿಡುಬುಗೆ ಕಾರಣವಾಗುವ ವೈರಸ್‌ಗಳ ಒಂದೇ ಕುಟುಂಬಕ್ಕೆ ಸೇರಿದೆ. ಈ ರೋಗವು ಪಶ್ಚಿಮ ಮತ್ತು ಮಧ್ಯ ಆಫ್ರಿಕಾದಂತಹ ಪ್ರದೇಶಗಳಲ್ಲಿ ಸ್ಥಳೀಯವಾಗಿದೆ. ಆದರೆ ಇತ್ತೀಚೆಗೆ, ಆಸ್ಟ್ರೇಲಿಯಾ, ಯುಕೆ ಮತ್ತು ಯುಎಸ್ ಸೇರಿದಂತೆ ಇತರೆ ರಾಷ್ಟ್ರಗಳಲ್ಲೂ ಹೆಚ್ಚಾಗುತ್ತಿದೆ.

ಸಮಂಕಿಪಾಕ್ಸ್ ಸಿಡುಬಿಗೆ ಸಂಬಂಧಿಸಿದ ಒಂದು ಪಾಕ್ಸ್‌ವೈರಸ್ ಆಗಿದ್ದು, ಸಾಮಾನ್ಯವಾಗಿ ಮೊಡವೆ ಅಥವಾ ಗುಳ್ಳೆಗಳಂತಹ ಗಾಯಗಳನ್ನು ಉಂಟು ಮಾಡುತ್ತದೆ. ಇದರ ಜೊತೆ ಜ್ವರ, ತಲೆನೋವು, ಸ್ನಾಯು ನೋವು, ಶೀತ ಮತ್ತು ಉಸಿರಾಟ ಸಮಸ್ಯೆ ತರಹದ ಲಕ್ಷಣಗಳು ಸೋಂಕಿತರಲ್ಲಿ ಕಾಣಿಸಿಕೊಳ್ಳುತ್ತವೆ. ವೈರಸ್ ನಿಕಟ ಮತ್ತು ಆಗಾಗ್ಗೆ ಚರ್ಮದಿಂದ ಚರ್ಮಕ್ಕೆ ಸಂಪರ್ಕ ಹೊಂದುವುದರಿಂದ ಯಾರಿಗಾದರೂ ಸೋಂಕು ಹರಡಬಹುದು. ಸೋಂಕಿತ ಪ್ರಾಣಿಗಳಿಂದ ಜನರು ಮಂಕಿಪಾಕ್ಸ್ ಸೋಂಕಿಗೆ ತುತ್ತಾಗುವ ಅಪಾಯವಿರುತ್ತದೆ.

ದೇಶದಲ್ಲಿ ಮಂಕಿಪಾಕ್ಸ್ ಪ್ರಕರಣ ಸಂಖ್ಯೆ 8ಕ್ಕೆ ಏರಿಕೆ

ದೇಶದಲ್ಲಿ ಮಂಕಿಪಾಕ್ಸ್ ಪ್ರಕರಣ ಸಂಖ್ಯೆ 8ಕ್ಕೆ ಏರಿಕೆ

ಜಾಗತಿಕ ಮಟ್ಟದಲ್ಲಿ ಆತಂಕ ಹೆಚ್ಚಿಸಿರುವ ಮಂಕಿಪಾಕ್ಸ್ ಸೋಂಕು ಭಾರತಕ್ಕೂ ಲಗ್ಗೆ ಇಟ್ಟಿದ್ದು ಆಗಿದೆ. ಕೇರಳದಲ್ಲಿ ಮೊದಲ ಪ್ರಕರಣ ವರದಿಯಾದ ನಂತರದಲ್ಲಿ ದೆಹಲಿ ಕೂಡ ಮಂಕಿಪಾಕ್ಸ್ ಅಪಾಯಕ್ಕೆ ಸಿಲುಕಿರುವುದು ದೃಢಪಟ್ಟಿದೆ. ಮಂಗಳವಾರ ಕೇರಳದಲ್ಲಿ ಒಂದು, ದೆಹಲಿಯಲ್ಲಿ ಒಂದು ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಮಂಕಿಪಾಕ್ಸ್ ಸೋಂಕಿನಿಂದ ರಕ್ಷಿಸಿಕೊಳ್ಳುವುದಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬುದನ್ನು ಆರೋಗ್ಯ ಸಚಿವಾಲಯ ಪಟ್ಟಿ ಮಾಡಿದೆ.

ಮಂಕಿಪಾಕ್ಸ್ ನಿಂದ ಸುರಕ್ಷಿತವಾಗಿರಲು ಏನು ಮಾಡಬೇಕು

ಮಂಕಿಪಾಕ್ಸ್ ನಿಂದ ಸುರಕ್ಷಿತವಾಗಿರಲು ಏನು ಮಾಡಬೇಕು

ಕೇಂದ್ರ ಆರೋಗ್ಯ ಸಚಿವಾಲಯ ಪಟ್ಟಿ ಮಾಡಿದಂತೆ ಮಂಕಿಪಾಕ್ಸ್ ಸೋಂಕಿನಿಂದ ರಕ್ಷಣೆ ಪಡೆದುಕೊಳ್ಳುವುದಕ್ಕೆ ಏನು ಮಾಡಬೇಕು ಎಂಬುದನ್ನು ತಿಳಿಯೋಣ.

* ಮಂಕಿಪಾಕ್ಸ್ ಸೋಂಕು ದೃಢಪಟ್ಟ ರೋಗಿಯನ್ನು ಮೊದಲು ಪ್ರತ್ಯೇಕವಾಗಿ ಇರಿಸುವುದು

* ನಿಮ್ಮ ಕೈಗಳನ್ನು ನೀರು ಹಾಗೂ ಸೋಪಿನಿಂದ ತೊಳೆದುಕೊಳ್ಳುವುದು ಅಥವಾ ಹ್ಯಾಂಡ್ ಸ್ಯಾನಿಟೇಸರ್ ಬಳಸಬೇಕು

* ರೋಗಿಗಳ ಸಂಪರ್ಕದಲ್ಲಿ ಇರುವವರು ಮುಖಕ್ಕೆ ಮಾಸ್ಕ್ ಮತ್ತು ಕೈಗಳಿಗೆ ಬಿಸಾಡಬಹುದಾದ ಗ್ಲೌಸ್ ಅನ್ನು ಧರಿಸಬೇಕು

* ಸೋಂಕು ತಗುಲದಂತೆ ಮುನ್ನೆಚ್ಚರಿಕೆಯಾಗಿ ಸ್ವಚ್ಛತೆಯನ್ನು ಕಾಪಾಡುವುದು

ರೋಗದಿಂದ ಸುರಕ್ಷಿತವಾಗಿರಲು ಏನು ಮಾಡಬಾರದು?

ರೋಗದಿಂದ ಸುರಕ್ಷಿತವಾಗಿರಲು ಏನು ಮಾಡಬಾರದು?

* ಮಂಕಿಪಾಕ್ಸ್ ರೋಗಿಯು ಬಳಸಿದ ಲೈನನ್ ಬಟ್ಟೆ, ಬೆಡ್, ಟವಲ್ ಅನ್ನು ಮರುಬಳಕೆ ಮಾಡಬಾರದು

* ರೋಗಿಯು ಬಳಸಿರುವ ಬಟ್ಟೆಯನ್ನು ಬೇರೆಯವರು ಬಳಕೆ ಮಾಡಬಾರದು

* ಮಂಕಿಪಾಕ್ಸ್ ರೋಗಿಯು ಧರಿಸಿದ ಬಟ್ಟೆಯಲ್ಲು ಸೋಂಕಿತನಲ್ಲದ ವ್ಯಕ್ತಿಗೆ ಶುಭ್ರಗೊಳಿಸುವುದಕ್ಕೆ ನೀಡಬಾರದು

* ನಿಮ್ಮಲ್ಲಿ ಮಂಕಿಪಾಕ್ಸ್ ರೋಗದ ಲಕ್ಷಣಗಳು ಗೋಚರಿಸಿದರೆ, ಯಾವುದೇ ಸಾರ್ವಜನಿಕ ಸಭೆ ಮತ್ತು ಸಮಾರಂಭಗಳಲ್ಲಿ ಭಾಗವಹಿಸಬಾರದು

* ಸಾರ್ವಜನಿಕರಲ್ಲಿ ಮಂಕಿಪಾಕ್ಸ್ ಕುರಿತಾಗಿ ಸುಖಾಸುಮ್ಮನೆ ಭಯದ ವಾತಾವರಣವನ್ನು ಸೃಷ್ಟಿ ಮಾಡುವಂತಿಲ್ಲ

ಈಗಾಗಲೇ 80 ರಾಷ್ಟ್ರಗಳಲ್ಲಿ ವರದಿಯಾದ ಮಂಕಿಪಾಕ್ಸ್

ಈಗಾಗಲೇ 80 ರಾಷ್ಟ್ರಗಳಲ್ಲಿ ವರದಿಯಾದ ಮಂಕಿಪಾಕ್ಸ್

ವಿಶ್ವ ಆರೋಗ್ಯ ಸಂಸ್ಥೆ ನೀಡಿರುವ ಮಾಹಿತಿ ಪ್ರಕಾರ, ಜಗತ್ತಿನ 80 ರಾಷ್ಟ್ರಗಳಲ್ಲಿ ಸೇರಿ 18,500ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. "ತಮಗೆ ಸೋಂಕು ತಗುಲಿರುವ ಬಗ್ಗೆ ದೇಶಗಳು, ಸಮುದಾಯಗಳು ಮತ್ತು ಜನರು ಸ್ವಯಂಪ್ರೇರಿತರಾಗಿ ಮಾಹಿತಿ ನೀಡಿದರೆ ಹಾಗೂ ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡರೆ, ಮಂಕಿಪಾಕ್ಸ್ ಸೋಂಕು ಹರಡುವಿಕೆಯನ್ನು ತಕ್ಷಣಕ್ಕೆ ತಡೆಯುವುದಕ್ಕೆ ಸಾಧ್ಯವಿದೆ," ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಡಾ ಟೆಡ್ರೊಸ್ ಗೆಬ್ರೆಯೆಸಸ್ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+