ಜಗತ್ತು ಮಾತನಾಡಿತು, ‘ನಾಸಾ’ ಮಾಡಿ ತೋರಿಸಿತು..! ಇದು ಶತಮಾನದ ಸಾಧನೆ..!
ಬಾಹ್ಯಾಕಾಶ ಊಹೆಗೆ ನಿಲುಕದಷ್ಟು ವಿಶಾಲ. ಅದರ ಆಳ-ಅಗಲ ವಿಜ್ಞಾನಿಗಳಿಗೂ ಸರಿಯಾಗಿ ಅರ್ಥವಾಗಿಲ್ಲ. ಹೀಗಾಗಿ ವಿಜ್ಞಾನಿಗಳು ಬಾಹ್ಯಾಕಾಶದ ವಿಚಾರದಲ್ಲಿ ಕಲ್ಪನೆಗಳನ್ನೇ ಆಧಾರ ಮಾಡಿಕೊಳ್ಳುತ್ತಾರೆ. ಆದರೆ ಕೆಲವು ಸಂದರ್ಭದಲ್ಲಿ ಕಲ್ಪನೆ ಸತ್ಯವಾಗುತ್ತವೆ. ಈಗಲೂ ಅಷ್ಟೇ ಹಿಂದೆ ಎಂದೂ ಮಾನವ ಸಾಧಿಸಲಾಗದ ಬಹುದೊಡ್ಡ ಗುರಿಯನ್ನು ನಾಸಾ ತಲುಪಿಬಿಟ್ಟಿದೆ. ಇದೇ ಮೊಟ್ಟ ಮೊದಲ ಬಾರಿಗೆ ಭೂಮಿ ಬಿಟ್ಟು ಬೇರೆ ಗ್ರಹದಲ್ಲಿ ಮಾನವ ನಿರ್ಮಿತ ಹೆಲಿಕಾಪ್ಟರ್ ಹಾರಾಡಿದೆ. ಫೆಬ್ರವರಿಯಲ್ಲಿ ನಾಸಾ ನಿರ್ಮಿತ 'ಪೆರ್‌ಸೆವೆರನ್ಸ್' ರೋವರ್ ಮಂಗಳನ ಮೇಲೆ ಲ್ಯಾಂಡ್ ಆಗಿತ್ತು.
ಪೆರ್‌ಸೆವೆರನ್ಸ್ ತನ್ನ ಹೊಟ್ಟೆಯಲ್ಲಿ ಜೋಪಾನವಾಗಿ ಹೆಲಿಕಾಪ್ಟರ್‌ನ್ನು ಇಟ್ಟಕೊಂಡು ಪ್ರಯಾಣ ಬೆಳೆಸಿತ್ತು. ಕೆಲವು ದಿನದ ಹಿಂದೆ ಮಂಗಳ ಗ್ರಹದ ನೆಲದ ಮೇಲೆ ಹೆಲಿಕಾಪ್ಟರ್‌ನ ಇಳಿಸಿದ್ದ ನಾಸಾ ನಿರ್ಮಿತ ರೋವರ್, ಅದರ ಹಾರಟಕ್ಕೆ ಸಿದ್ಧತೆ ನಡೆಸಿತ್ತು. ಆದರೆ ಅದು ಸುಲಭದ ವಿಚಾರವಾಗಿರಲಿಲ್ಲ. ಅಲ್ಲಿ ಹೆಜ್ಜೆಹೆಜ್ಜೆಗೂ ಅಪಾಯ ಎದುರಾಗಿತ್ತು.
ಹೀಗಾಗಿ ಹಲವು ಬಾರಿ ಹೆಲಿಕಾಪ್ಟರ್ ಹಾರಾಟಕ್ಕೆ ಮುಹೂರ್ತ ಫಿಕ್ಸ್ ಆಗಿದ್ದರೂ ಕ್ಯಾನ್ಸಲ್ ಆಗಿತ್ತು. ಅಂತಿಮವಾಗಿ ಅಮೆರಿಕದ ಕಾಲಮಾನ ಏಪ್ರಿಲ್ 19ರಂದು ಹೆಲಿಕಾಪ್ಟರ್ ತನ್ನ ಮೊದಲ ಹಾರಾಟ ನಡೆಸಿದೆ. ಇದರ ವಿಡಿಯೋ ತುಣುಕನ್ನು ನಾಸಾ ರಿಲೀಸ್ ಮಾಡಿದೆ.

10 ಅಡಿ ಅಷ್ಟೇ ಹಾರಿದ್ದು..!
ನಾಸಾ ವಿಜ್ಞಾನಿಗಳ ಯೋಜನೆ ಪ್ರಕಾರ ಹೆಲಿಕಾಪ್ಟರ್ ಮಂಗಳ ಗ್ರಹದ ಮೇಲೆ ಹಲವು ದಿನಗಳ ಹಾರಾಟವನ್ನ ನಡೆಸಬೇಕಿತ್ತು. ಈ ಮೂಲಕ ರೋವರ್ ಕಾರ್ಯಾಚರಣೆಗೆ ಸಪೋರ್ಟ್ ಮಾಡಬೇಕಿತ್ತು. ಆದ್ರೆ ಯಾವುದೂ ಅಂದುಕೊಂಡಂತೆ ನಡೆಯಲಿಲ್ಲ. ಬಹುಶಃ ಎಲ್ಲೋ ಎಡವಟ್ಟಾಗಿದೆ ಎಂಬ ಅನುಮಾನ ಮೂಡುತ್ತಿದೆ. 1.8 ಕೆಜಿ ತೂಕದ ಹೆಲಿಕಾಪ್ಟರ್ ಸುಮಾರು 10 ಅಡಿ ಎತ್ತರಕ್ಕೆ ಹಾರಿದ್ದು, ನಂತರ ಸೇಫ್ ಆಗಿ ಲ್ಯಾಂಡ್ ಆಗಿದೆ. ನಾಸಾ ಮತ್ತೊಂದು ಸುತ್ತಿನ ಹಾರಾಟಕ್ಕೆ ಸಿದ್ಧತೆ ನಡೆಸಿದೆ. ಆದರೆ 2ನೇ ಸುತ್ತಿನ ಹಾರಾಟಕ್ಕೆ ಡೇಟ್ ಫಿಕ್ಸ್ ಆಗಿಲ್ಲ.

ಮರಳಿ ಯತ್ನವ ಮಾಡು..!
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಏಪ್ರಿಲ್ 7 ರಂದು ನಾಸಾ ನಿರ್ಮಿತ ಹೆಲಿಕಾಪ್ಟರ್ ಮಂಗಳನ ಮೇಲೆ ಮೊದಲ ಹಾರಾಟ ನಡೆಸಬೇಕಿತ್ತು. ಆದರೆ ಅದು ನಡೆಯಲಿಲ್ಲ, ಏಪ್ರಿಲ್ 11ರಂದು ಮತ್ತೊಮ್ಮೆ ಹೆಲಿಕಾಪ್ಟರ್ ಹಾರಾಟಕ್ಕೆ ಸಿದ್ಧತೆ ನಡೆದಿತ್ತು. ಆದರೆ ಆಗಲೂ ತಾಂತ್ರಿಕ ಸಮಸ್ಯೆಯಿಂದ ಏಪ್ರಿಲ್ 14ಕ್ಕೆ ಟೈಂ ಫಿಕ್ಸ್ ಆಗಿತ್ತು. ಕಡೆಗೆ ಏಪ್ರಿಲ್ 14ರ ಡೇಟ್ ಫ್ಲಾಪ್ ಆಗಿ, ಈಗ ಏಪ್ರಿಲ್ 19ರಂದು ಹೆಲಿಕಾಪ್ಟರ್ ಹಾರಾಟಕ್ಕೆ ಸಕಲ ಸಿದ್ಧತೆ ಮಾಡಿಕೊಂಡು ಅಖಾಡ ಪ್ರವೇಶಿಸಿದ್ದರು ನಾನಾ ತಂತ್ರಜ್ಞರು. ಕಡೇ ಅವಕಾಶದಲ್ಲಿ ನಾಸಾ ಸಕ್ಸಸ್ ಆಗಿದೆ.

200 ಕೋಟಿ ವರ್ಷಗಳಷ್ಟು ಹಳೆ ಕೆರೆ
ಹೌದು, ಪೆರ್‌ಸೆವೆರನ್ಸ್ ರೋವರ್ ಲ್ಯಾಂಡ್ ಆಗಿರುವುದು ಮಂಗಳನ 'ಜೆಝೀರೋ' ಕುಳಿಯ ಮೇಲೆ. ಅಷ್ಟಕ್ಕೂ ಇದು ಕುಳಿ ಅಥವಾ ದೊಡ್ಡ ಗುಂಡಿ ಅಲ್ಲ. 200 ಕೋಟಿ ವರ್ಷಗಳ ಹಿಂದೆ ಇಲ್ಲೊಂದು ಕೆರೆಯೇ ಇತ್ತು. ಮಂಗಳ ಗ್ರಹದ ಬಹುತೇಕ ಪ್ರದೇಶಗಳಿಗೆ ಇದೇ ಕುಳಿಯಿಂದ ನೀರು ಹರಿಯುತ್ತಿತ್ತು. ಜೀವಿಗಳು ಈ ನೀರನ್ನು ಬಳಸಿ, ಬದುಕು ಕಟ್ಟಿಕೊಂಡಿದ್ದವು ಎಂಬ ವಾದವಿದೆ. ಆದರೆ ಕಾಲ ಕ್ರಮೇಣ ಆ ಕೆರೆ ನಾಶವಾಗಿ ಹೋಗಿದೆ ಎನ್ನುತ್ತಾರೆ ವಿಜ್ಞಾನಿಗಳು. ನಾಸಾ ವಿಜ್ಞಾನಿಗಳ ವಾದಕ್ಕೆ ಬಲ ನೀಡುವಂತೆ, 'ಜೆಝೀರೋ' ಕುಳಿ ಆಚೆ ಮತ್ತು ಈಚೆ ನೀರು ಬರಲು ಹಾಗೂ ಹೋಗಲು ದಾರಿ ಕೂಡ ಕಾಣುತ್ತದೆ. ಹೀಗಾಗಿ ಅಲ್ಲಿ ಜೀವಿಗಳು ಬದುಕಿರಬಹುದು ಅಥವಾ ಮೂಳೆ, ಪಳಿಯುಳಿಕೆ ಸಿಗಬಹುದು ಎಂಬ ವಿಶ್ವಾಸ ನಾಸಾ ವಿಜ್ಞಾನಿಗಳಿಗೆ ಇದೆ.

ಮಂಗಳನ ಮಣ್ಣು ತರಲಿದೆ ‘ನಾಸಾ’
ಮೊದಲ ಬಾರಿ ಮಂಗಳನ ಅಂಗಳಕ್ಕೆ ನುಗ್ಗಿ ಅಧ್ಯಯನ ನಡೆಸಿದ್ದ ಕೀರ್ತಿ ಹೊಂದಿರುವ ನಾಸಾ ಮತ್ತೊಂದು ಸವಾಲನ್ನು ಗೆದ್ದಿದೆ. ಪೆರ್‌ಸೆವೆರನ್ಸ್ ರೋವರ್ ಇದೀಗ ಲ್ಯಾಂಡ್ ಆಗಿರುವುದು ಮಂಗಳನ 'ಜೆಝೀರೋ' ಕುಳಿ ಮೇಲೆ. ಈವರೆಗೂ ಯಾರೂ ಈ ಸಾಹಸ ಮಾಡಿರಲಿಲ್ಲ. ಏಕೆಂದರೆ 'ಜೆಝೀರೋ' ಕುಳಿಯಲ್ಲಿ ತನ್ನ ಬಿಡಾರ ಹೂಡುವುದು ಯಾವುದೇ ದೇಶಕ್ಕೂ ಸಾಧ್ಯವಿರದ ಮಾತು. ಅಲ್ಲಿನ ಇಕ್ಕಟ್ಟಾದ ಪರಿಸ್ಥಿತಿ ಹಾಗೂ ವ್ಯತಿರಿಕ್ತ ವಾತಾವರಣ ಅಧ್ಯಯನಕ್ಕೆ ಸಹಕಾರಿ ಆಗಿರಲಿಲ್ಲ. ಆದರೆ ಇದನ್ನು ಸವಾಲಾಗಿ ಸ್ವೀಕರಿಸಿದ್ದ ನಾಸಾ, ತನ್ನ ರೋವರ್ ಲ್ಯಾಂಡ್ ಮಾಡುವಲ್ಲಿ ಯಶಸ್ಸು ಕಂಡಿದೆ.

6 ಚಕ್ರದ ರೋವರ್..!
ಪೆರ್‌ಸೆವೆರನ್ಸ್ ಭೂಮಿಯಿಂದ ಉಡಾವಣೆಯಾದಾಗ ಸುಮಾರು 1 ಟನ್ ತೂಕವಿತ್ತು. ಹಾಗೂ ರೋವರ್ ಎತ್ತರ 7.3 ಅಡಿಗಳಷ್ಟಾಗಿತ್ತು. ಉದ್ದ 6.7 ಅಡಿ ಇದ್ದು, ಮಂಗಳನ ಮೇಲೆ ಅಧ್ಯಯನ ನಡೆಸಲು ಅನುಕೂಲ ಆಗಲಿದೆ. ಪೆರ್‌ಸೆವೆರನ್ಸ್ ಕೈಗಳು ಕೂಡ 6 ಅಡಿಗಿಂತ ಉದ್ದವೇ ಇದೆ. ಮತ್ತು 6 ಚಕ್ರಗಳನ್ನು ಪೆರ್‌ಸೆವೆರನ್ಸ್ ಹೊಂದಿದ್ದು, 2020ರ ಜುಲೈನಲ್ಲಿ ಭೂಮಿಯಿಂದ ಬಾಹ್ಯಾಕಾಶಕ್ಕೆ ಹಾರಿತ್ತು. ಇದೀಗ ಮಂಗಳ ಗ್ರಹದ ಮೇಲೆ ಏಕಾಂಗಿಯಾಗಿ ಅಧ್ಯನ ನಡೆಸಲಿದೆ. ಉದ್ದವಾದ ರೊಬೊಟಿಕ್ ಕ್ರೇನ್ ಹಾಗೂ ಡ್ರಿಲ್ಲರ್ 'ಪೆರ್‌ಸೆವೆರನ್ಸ್'ಗೆ ಸಹಾಯ ಮಾಡಲಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications