ಆಕಾಶದಲ್ಲಿ ಒಂದು ವಿಸ್ಮಯ, ನಾಸಾ ಸಾಧನೆಗೆ ಕ್ಷಣಗಣನೆ..!

ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ವಿಜ್ಞಾನಿಗಳು ಬಹುಶಃ ಇವತ್ತು ರಾತ್ರಿ ನಿದ್ದೆ ಮಾಡೋದಿಲ್ಲ. ಏಕೆಂದರೆ 'ನಾಸಾ' ಸಂಸ್ಥೆಗೆ ಇಂದು ಅವಿಸ್ಮರಣೀಯ ದಿನ. ಇಷ್ಟು ದಿನ ನಾಸಾ ಮಾಡಿದ ಸಾಧನೆ ಒಂದು ಕಡೆಯಾದರೆ, ಇಂದು ನಾಸಾ ಸಾಧಿಸಲಿರುವುದು ಮಾನವನ ಬದುಕನ್ನೇ ಬದಲಾಯಿಸಬಲ್ಲದು. ಹೌದು, ಮಂಗಳನ ಮಣ್ಣು ಹೊತ್ತು ತರಲಿರುವ ನಾಸಾದ 'ಪೆರ್‌ಸೆವೆರನ್ಸ್' ನೌಕೆ ಮಂಗಳ ಗ್ರಹದ ನೆಲ ಮುಟ್ಟಲು ಕೌಂಟ್‌ಡೌನ್‌ ಈಗ ಶುರುವಾಗಿದೆ.

ಮೊದಲ ಬಾರಿ ಮಂಗಳನ ಅಂಗಳಕ್ಕೆ ನುಗ್ಗಿ ಅಧ್ಯಯನ ನಡೆಸಿದ್ದ ಕೀರ್ತಿ ಹೊಂದಿರುವ ನಾಸಾ ಮತ್ತೊಂದು ಸವಾಲಿಗೆ ಸಿದ್ಧವಾಗಿದೆ. ಜುಲೈನಲ್ಲಿ 'ಪೆರ್‌ಸೆವೆರನ್ಸ್' ಉಡಾವಣೆ ಮಾಡಿದ್ದ ನಾಸಾ, ರೋವರ್‌ನ್ನು ಮಂಗಳನ ಮೇಲೆ ಇಳಿಸಲಿದೆ. ಮಂಗಳನ 'ಜೆಝೀರೋ' ಕುಳಿ ಮೇಲೆ ನಾಸಾ ರೋವರ್ ಲ್ಯಾಂಡ್ ಆಗಲಿದೆ. ಈ ಬಾರಿ ಮಂಗಳ ಗ್ರಹದ ಮಣ್ಣನ್ನು ಭೂಮಿಗೆ ತರಲು ತುದಿಗಾಲಲ್ಲಿ ನಿಂತಿದೆ ನಾಸಾ. ಇದಕ್ಕೆ ಬೇಕಾದ ಸಕಲ ವ್ಯವಸ್ಥೆಯನ್ನೂ 'ಪೆರ್‌ಸೆವೆರನ್ಸ್' ಹೊಂದಿದೆ. ಇನ್ನೇನು ಕೆಲವೇ ಗಂಟೆಗಳಲ್ಲಿ ಈ ಸಾಧನೆ ಮಾಡಲಿದೆ ನಾಸಾ.

ರೋವರ್‌ನಲ್ಲಿ 23 ಕ್ಯಾಮರಾ, 1 ಡ್ರಿಲ್ಲರ್..!

ರೋವರ್‌ನಲ್ಲಿ 23 ಕ್ಯಾಮರಾ, 1 ಡ್ರಿಲ್ಲರ್..!

20 ಸಾವಿರ ಕೋಟಿ ರೂಪಾಯಿ ವೆಚ್ಚದ ಯೋಜನೆ ಇದಾಗಿದೆ. ಮಂಗಳ ಗ್ರಹದ ಮೇಲೆ ಅತ್ಯುತ್ತಮವಾದ ಸಾಧನ ಬಳಸಿ ಅಧ್ಯಯನ ನಡೆಸುವುದಕ್ಕಾಗಿ ನಾಸಾ ವಿಶಿಷ್ಟವಾದ ರೋವರ್ ಸಿದ್ಧಪಡಿಸಿದೆ. ‘ಪೆರ್‌ಸೆವೆರನ್ಸ್' ಎಂದು ರೋವರ್‌ಗೆ ನಾಮಕರಣ ಮಾಡಲಾಗಿದೆ. ಸದ್ಯ ಭೂಮಿ ಮೇಲೆ ಲಭ್ಯವಿರುವ ಅತ್ಯುತ್ತಮ ಟೆಕ್ನಾಲಜಿ ಬಳಸಿ ರೋವರ್‌ ತಯಾರಿಸಿದೆ ನಾಸಾ. ರೋವರ್‌ನಲ್ಲಿ 23 ಕ್ಯಾಮರಾ ಅಳವಡಿಸಲಾಗಿದೆ. ಮಂಗಳನ ನೆಲ ಅಗೆಯಲು ಸಹಾಯಕವಾಗುವಂತೆ 1 ಡ್ರಿಲ್ಲರ್ ಕೂಡ ಇದೆ. ಈ ಡ್ರಿಲ್ಲರ್ ಸಹಾಯದಿಂದ ‘ಪೆರ್‌ಸೆವೆರನ್ಸ್' ರೋವರ್ ಮಂಗಳನ ಬಂಡೆ ಹಾಗೂ ಮಣ್ಣು ಅಗೆಯಲಿದೆ. ಹೀಗೆ ಅಗೆಯುವ ಮಣ್ಣು ಮತ್ತು ಕಲ್ಲನ್ನ ಕೊಳವೆ ಆಕಾರದ ಕಂಟೇನರ್‌ಗೆ ತುಂಬಲಿದೆ. ನಂತರ ಕಂಟೇನರ್‌ಗಳನ್ನ ಅಲ್ಲೇ ಬಿಟ್ಟು ಮುಂದೆ ಸಾಗಲಿದೆ. ಹೀಗೆ 10 ವರ್ಷಗಳ ಕಾಲ ರೋವರ್ ಮಂಗಳ ಗ್ರಹವನ್ನು ಸುತ್ತು ಹಾಕುತ್ತಾ, ಜೀವಿಗಳಿಗಾಗಿ ಹುಡುಕಾಟ ನಡೆಸಲಿದೆ.

2026ಕ್ಕೆ ಮತ್ತೊಂದು ರೋವರ್..!

2026ಕ್ಕೆ ಮತ್ತೊಂದು ರೋವರ್..!

ನಾಸಾ ಸಂಸ್ಥೆಯ ‘ಪೆರ್‌ಸೆವೆರನ್ಸ್' ರೋವರ್ ಲ್ಯಾಂಡ್ ಆದ 5 ವರ್ಷಗಳ ನಂತರ ಅಂದರೆ 2026ಕ್ಕೆ ಮತ್ತೊಂದು ರೋವರ್ ಲ್ಯಾಂಡ್ ಆಗಲಿದೆ. ಈ ಬಾರಿ ‘ಯೂರೋಪಿಯನ್ ಸ್ಪೇಸ್ ಏಜೆನ್ಸಿ' ಕಳುಹಿಸಿದ ಪುಟ್ಟ ರೋವರ್ ಮಂಗಳ ಗ್ರಹದ ಮೇಲೆ ಇಳಿಯಲಿದೆ. ನಂತರ ‘ಪೆರ್‌ಸೆವೆರನ್ಸ್' ಬಿಟ್ಟುಹೋದ ಕೊಳವೆ ಆಕಾರದ ಕಂಟೇನರ್‌ಗಳನ್ನ ಬೇಟೆಯಾಡುವ ಯೂರೋಪಿಯನ್ ರೋವರ್, ತನ್ನೊಳಗೆ ಈ ಪುಟ್ಟ ಪುಟ್ಟ ಕಂಟೇನರ್‌ಗಳನ್ನ ತುಂಬಿಸಿಕೊಳ್ಳಲಿದೆ. ನಂತರ ಅವನ್ನೆಲ್ಲಾ ಒಟ್ಟುಗೂಡಿಸಿ ಮತ್ತೊಂದು ದೊಡ್ಡ ಕಂಟೇನರ್‌ಗೆ ಶಿಫ್ಟ್ ಮಾಡುತ್ತದೆ. ಕೊನೆಯದಾಗಿ ಮಣ್ಣು ತುಂಬಿರುವ ದೊಡ್ಡ ಕಂಟೇನರ್ ತೆಗೆದು ಭದ್ರವಾಗಿ ಪುಟಾಣಿ ರಾಕೇಟ್‌ಗೆ ವರ್ಗಾಯಿಸಲಿದೆ.

ರಾಕೆಟ್ ಲಾಂಚ್ ಮಾಡಲಿದೆ ರೋವರ್

ರಾಕೆಟ್ ಲಾಂಚ್ ಮಾಡಲಿದೆ ರೋವರ್

ಇದು ಊಹೆಗೂ ನಿಲುಕದ ಅಚ್ಚರಿ. ರೋವರ್ ಮೂಲಕ ರಾಕೆಟ್ ಲಾಂಚ್ ಮಾಡುವ ಸಾಹಸಕ್ಕೆ ನಾಸಾ ಹಾಗೂ ಇಎಸ್‌ಎ ಕೈಹಾಕಿವೆ. ಮಂಗಳನ ಮಣ್ಣು ತುಂಬಿದ ಪುಟಾಣಿ ರಾಕೇಟ್ ಅನ್ನು 2026ರ ವೇಳೆಗೆ ಲಾಂಚ್ ಮಾಡಲಾಗುವುದು. ಈ ಕೆಲಸವನ್ನು ಯುರೋಪಿಯನ್ ರೋವರ್ ಮಾಡಲಿದೆ. ಹೀಗೆ ಪುಟಾಣಿ ರಾಕೆಟ್ ಲಾಂಚ್ ಮಾಡಲು ನಾಸಾ, ಇಎಸ್‌ಎ ಅತ್ಯುತ್ತಮ ತಂತ್ರಜ್ಞಾನ ಬಳಸಿಕೊಳ್ಳಲಿವೆ. ರಾಕೆಟ್ ಲಾಂಚರ್‌ಗೆ ಸ್ಫೋಟಕ ತುಂಬಿ ಬ್ಲಾಸ್ಟ್ ಮಾಡಲಾಗುವುದು. ಹೀಗೆ ಬ್ಲಾಸ್ಟ್ ಮಾಡಿ ಸೂಕ್ಷ್ಮವಾಗಿ ಪುಟಾಣಿ ರಾಕೆಟ್ ಅನ್ನ ಬಾಹ್ಯಾಕಾಶಕ್ಕೆ ಹಾರಿಸಲಾಗುವುದು. ಮಣ್ಣು ಹೊತ್ತು ಮಂಗಳನ ಬಾಹ್ಯಾಕಾಶದ ಕಡೆಗೆ ನುಗ್ಗುವ ರಾಕೆಟ್‌ಗೆ ಮಂಗಳ ಗ್ರಹದ ಕಕ್ಷೆಯಲ್ಲಿ ಸುತ್ತುವ ಯೂರೋಪ್‌ನ ಉಪಗ್ರಹವೇ ಟಾರ್ಗೆಟ್.

 ಉಪಗ್ರಹಕ್ಕೆ ಸ್ಯಾಂಪಲ್ ಶಿಫ್ಟ್..!

ಉಪಗ್ರಹಕ್ಕೆ ಸ್ಯಾಂಪಲ್ ಶಿಫ್ಟ್..!

ಕೊನೆಯದಾಗಿ ತನ್ನಲ್ಲಿರುವ ಎಲ್ಲಾ ಸ್ಯಾಂಪಲ್‌ಗಳನ್ನ ಈ ಪುಟಾಣಿ ರಾಕೆಟ್ ಯುರೋಪಿಯನ್ ಸ್ಪೇಸ್ ಏಜೆನ್ಸಿಗೆ ಸೇರಿದ ಸ್ಯಾಟಲೈಟ್‌ಗೆ ಶಿಫ್ಟ್ ಮಾಡಲಿದೆ. ಹೀಗೆ ಅಂಗಾರಕನ ಮಣ್ಣಿನ ಸ್ಯಾಂಪಲ್ ಹೊತ್ತು ಹೊರಡುವ ಉಪಗ್ರಹ 2032ರ ವೇಳೆಗೆ ಭೂಮಿಯನ್ನು ತಲುಪುವ ನಿರೀಕ್ಷೆ ಇದೆ. ಭೂಮಿಯ ಕಕ್ಷೆಯಲ್ಲಿ ಸುತ್ತುತ್ತಾ ಉತ್ತರ ಅಮೆರಿಕದ ಕಡೆಗೆ ಮಂಗಳನ ಕಲ್ಲು ಹಾಗೂ ಮಣ್ಣು ಇರುವ ಕಂಟೇನರ್ ಅನ್ನು ಉಪಗ್ರಹ ಎಸೆಯಲಿದೆ. ಹೀಗೆ ಭೂಮಿ ಮೇಲಿಂದ ಬೀಳುವ ಕಂಟೇನರ್ ಉತ್ತರ ಅಮೆರಿಕದಲ್ಲಿಯೇ ಬೀಳುವಂತೆ ಮಾಡಲು ಮಾಸ್ಟರ್ ಪ್ಲ್ಯಾನ್ ರೂಪಿಸಲಾಗಿದೆ.

Recommended Video

    ಬ್ರೆಜಿಲ್ ಹಾಗೂ ದಕ್ಷಿಣ ಆಫ್ರಿಕಾದಿಂದ ಬಂದ ನಾಲ್ವರಲ್ಲಿ ರೂಪಾಂತರಿ ವೈರಸ್ ಪತ್ತೆ | Oneindia Kannada
    12 ವರ್ಷ ಕಾಯಬೇಕು..!

    12 ವರ್ಷ ಕಾಯಬೇಕು..!

    ಇಷ್ಟೆಲ್ಲಾ ಸರ್ಕಸ್ ಮಾಡಿ ಮಂಗಳನ ಮಣ್ಣನ್ನು ಭೂಮಿಗೆ ತಂದ ನಂತರ ನಾಸಾ ಹಾಗೂ ಇಎಸ್‌ಎ ಒಟ್ಟಾಗಿ ಸಂಶೋಧನೆ ನಡೆಸಲಿವೆ. ಭೂಮಿಯಲ್ಲಿ 2032ರ ಹೊತ್ತಿಗೆ ಲಭ್ಯವಿರುವ ಅತ್ಯುತ್ತಮ ಲ್ಯಾಬ್ ಸಾಧನಗಳನ್ನು ಬಳಸಿ ಮಂಗಳನ ಮಣ್ಣಿನ ಸಂಶೋಧನೆ ನಡೆಸಲಾಗುವುದು. ಈ ಸಂಶೋಧನೆಗಾಗಿ ಹೊಸ ಸಾಧನ ಕಂಡುಹಿಡಿಯುವ ಪ್ಲ್ಯಾನ್ ಇದೆ. ಇದಿಷ್ಟನ್ನೂ ನೋಡಲು 12 ವರ್ಷ ಕಾಯಲೇಬೇಕು. ಮಂಗಳನ ಮಣ್ಣಿನ ಅಧ್ಯಯನದ ನಂತರ ವರದಿಗಾಗಿ ವಿಜ್ಞಾನಿಗಳು ಮತ್ತಷ್ಟು ವರ್ಷ ಕಾಯಬೇಕಿದೆ. ಒಟ್ಟಾರೆ ಹೇಳುವುದಾದರೆ ಈ ಯೋಜನೆ ಒಂದು ತಪಸ್ಸು. ಈ ತಪಸ್ಸಿನಲ್ಲಿ ನಾಸಾ ಹಾಗೂ ಇಎಸ್‌ಎ ಯಶಸ್ಸು ಕಾಣಲಿ ಎಂದು ಹಾರೈಸೋಣ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+