ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜುಲೈ 1 ರಾಷ್ಟ್ರೀಯ ವೈದ್ಯರ ದಿನ: ಈ ದಿನದ ವಿಶೇಷತೆ ಮತ್ತು ಮಹತ್ವ?

|
Google Oneindia Kannada News

ನವದೆಹಲಿ, ಜೂನ್ 30: ಆರೋಗ್ಯವೇ ಭಾಗ್ಯ ಎಂಬುದು ಸಾರ್ವಕಾಲಿಕ ಸತ್ಯ. ವೈದ್ಯೋ ನಾರಾಯಣ ಹರಿ ಎನ್ನುವ ಸಾಲು ಅದಕ್ಕೆ ಸಾಕ್ಷಿ ಎನ್ನುವಂತಿದೆ. ಆರೋಗ್ಯವನ್ನು ರಕ್ಷಿಸುವ ಅನಾರೋಗ್ಯಕ್ಕೆ ಮದ್ದು ನೀಡುವ ವೈದ್ಯರನ್ನು ದೇವರಿಗೆ ಹೋಲಿಸುವ ಪದ್ಧತಿ ಅನಾದಿ ಕಾಲದಿಂದಲೂ ಚಾಲ್ತಿಯಲ್ಲಿದೆ.

ಅನಾರೋಗ್ಯಕ್ಕೆ ತುತ್ತಾದ ರೋಗಿಗಳಿಗೆ ಚಿಕಿತ್ಸೆ ನೀಡುವ ಮೂಲಕ ಪುನರ್ಜನ್ಮ ನೀಡುವ ವೈದ್ಯರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯ. ಶ್ರೇಷ್ಠ ವೈದ್ಯ ಹಾಗೂ ಪಶ್ಚಿಮ ಬಂಗಾಳದ ಎರಡನೇ ಮುಖ್ಯಮಂತ್ರಿ ಬಿಧನ್ ಚಂದ್ರ ರಾಯ್ ಜನ್ಮದಿನ ಹಾಗೂ ಪುಣ್ಯಸ್ಮರಣೆ ಜ್ಞಾಪಕಾರ್ಥವಾಗಿ ಜುಲೈ 1ರಂದು ರಾಷ್ಟ್ರೀಯ ವೈದ್ಯರ ದಿನವನ್ನಾಗಿ ಆಚರಿಸಲಾಗುತ್ತದೆ.

ಕೊರೊನಾ 2ನೇ ಅಲೆ: ದೇಶದಲ್ಲಿ 776 ವೈದ್ಯರ ಸಾವುಕೊರೊನಾ 2ನೇ ಅಲೆ: ದೇಶದಲ್ಲಿ 776 ವೈದ್ಯರ ಸಾವು

ಭಾರತದಲ್ಲಿ ವೈದ್ಯಕೀಯ ರಂಗದಲ್ಲಿ ನಿಸ್ವಾರ್ಥ ರೀತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರತಿಯೊಬ್ಬ ವೈದ್ಯರನ್ನು ಗೌರವಿಸುವ ಉದ್ದೇಶದಿಂದ ಪ್ರತಿವರ್ಷ ರಾಷ್ಟ್ರೀಯ ವೈದ್ಯರ ದಿನ ಎಂದು ಆಚರಿಸಲಾಗುತ್ತದೆ. ಭಾರತದಲ್ಲಿ ಮಾತ್ರ ವೈದ್ಯರ ದಿನವನ್ನು ಆಚರಿಸಲಾಗುತ್ತಿಲ್ಲ. ಬದಲಿಗೆ ಬೇರೆ ಬೇರೆ ರಾಷ್ಟ್ರಗಳಲ್ಲಿ ಬೇರೆ ಬೇರೆ ದಿನವನ್ನು ರಾಷ್ಟ್ರೀಯ ವೈದ್ಯರ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ.

ಯಾವ ರಾಷ್ಟ್ರಗಳಲ್ಲಿ ಯಾವ ಯಾವ ದಿನ ವೈದ್ಯರ ದಿನಾಚರಣೆ?

ಯಾವ ರಾಷ್ಟ್ರಗಳಲ್ಲಿ ಯಾವ ಯಾವ ದಿನ ವೈದ್ಯರ ದಿನಾಚರಣೆ?

ಭಾರತದಲ್ಲಿ ಜುಲೈ 1ರಂದು ರಾಷ್ಟ್ರೀಯ ವೈದ್ಯರ ದಿನವನ್ನಾಗಿ ಆಚರಿಸಲಾಗುತ್ತದೆ. ಅದೇ ರೀತಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿ ಮಾರ್ಚ್ 30, ಕ್ಯೂಬಾದಲ್ಲಿ ಡಿಸೆಂಬರ್ 3, ಇರಾನ್ ನಲ್ಲಿ ಆಗಸ್ಟ್ 23ರಂದು ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಾಗುತ್ತದೆ. ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದ ಜಾರ್ಜಿಯಾದಲ್ಲಿ 1933 ಮಾರ್ಚ್ ತಿಂಗಳಿನಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ವೈದ್ಯರ ದಿನಾಚರಣೆ ಶುರು ಮಾಡಲಾಗಿತ್ತು. ಅಂದು ವೈದ್ಯರಿಗೆ ಕಾರ್ಡ್ ಕಳುಹಿಸಿ ಮೂಲಕ ಹಾಗೂ ನಿಧನರಾದ ಶ್ರೇಷ್ಠ ವೈದ್ಯರ ಸಮಾಧಿಗೆ ಪುಷ್ಪಾರ್ಪಣೆ ಮಾಡಿ ಈ ದಿನವನ್ನು ಆಚರಿಸಲಾಯಿತು.

ಶ್ರೇಷ್ಠ ವೈದ್ಯ ಬಿಧನ್ ಚಂದ್ರ ರಾಯ್ ಬಗ್ಗೆ ಮೋದಿ ಉಲ್ಲೇಖ

ಶ್ರೇಷ್ಠ ವೈದ್ಯ ಬಿಧನ್ ಚಂದ್ರ ರಾಯ್ ಬಗ್ಗೆ ಮೋದಿ ಉಲ್ಲೇಖ

ಜೂನ್ 27ರಂದು 78ನೇ ಸಂಚಿಕೆಯ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತದ ಶ್ರೇಷ್ಠ ವೈದ್ಯ ಬಿಧನ್ ಚಂದ್ರ ರಾಯ್ ಬಗ್ಗೆ ಉಲ್ಲೇಖಿಸಿದರು. "ಜುಲೈ 1ರಂದು ನಾವು ರಾಷ್ಟ್ರೀಯ ವೈದ್ಯರ ದಿನವನ್ನಾಗಿ ಆಚರಿಸುತ್ತೇವೆ. ಕೊವಿಡ್-19 ಸಂದಿಗ್ಧ ಪರಿಸ್ಥಿತಿಯಲ್ಲಿ ದೇಶವನ್ನು ರಕ್ಷಿಸುವುದಕ್ಕಾಗಿ ತಮ್ಮನ್ನೇ ಅರ್ಪಿಸಿಕೊಂಡಿರುವ ಹಾಗೂ ಹೋರಾಡುತ್ತಿರುವ ವೈದ್ಯರಿಗೆ ನಾವೆಲ್ಲರೂ ಕಡ್ಡಾಯವಾಗಿ ಗೌರವ ಸಲ್ಲಿಸಬೇಕು," ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದರು.

ರಾಜ್ಯದಲ್ಲಿ ಮೃತಪಟ್ಟ 28 ವೈದ್ಯರ ಕುಟುಂಬಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲರಾಜ್ಯದಲ್ಲಿ ಮೃತಪಟ್ಟ 28 ವೈದ್ಯರ ಕುಟುಂಬಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ

ರಾಷ್ಟ್ರೀಯ ವೈದ್ಯರ ದಿನದ ಮಹತ್ವ ಮತ್ತು ಇತಿಹಾಸ

ರಾಷ್ಟ್ರೀಯ ವೈದ್ಯರ ದಿನದ ಮಹತ್ವ ಮತ್ತು ಇತಿಹಾಸ

ಭಾರತದಲ್ಲಿ 1991ರಿಂದ ರಾಷ್ಟ್ರೀಯ ವೈದ್ಯ ದಿನ ಆಚರಣೆ ಶುರು ಮಾಡಲಾಗಿದೆ. ಪಶ್ಚಿಮ ಬಂಗಾಳದ ಎರಡನೇ ಮುಖ್ಯಮಂತ್ರಿ ಹಾಗೂ ಶ್ರೇಷ್ಠ ವೈದ್ಯ ಬಿಧನ್ ಚಂದ್ರ ರಾಯ್ ನೀಡಿರುವ ಕೊಡುಗೆ ಜ್ಞಾಪಕಾರ್ಥವಾಗಿ ಜುಲೈ 1 ಅನ್ನು ರಾಷ್ಟ್ರೀಯ ವೈದ್ಯ ದಿನವಾಗಿ ಆಚರಿಸಲು ತೀರ್ಮಾನಿಸಲಾಗಿದೆ. ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ ಹಾಗೂ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಸ್ಥಾಪನೆಯಲ್ಲಿ ಬಿಧನ್ ಚಂದ್ರ ರಾಯ್ ಪ್ರಮುಖ ಪಾತ್ರ ವಹಿಸಿದ್ದರು. ಈ ಹಿನ್ನೆಲೆ ಅವರ ಜನ್ಮ ದಿನ ಮತ್ತು ಪುಣ್ಯಸ್ಮರಣೆ ದಿನವನ್ನೇ ರಾಷ್ಟ್ರೀಯ ವೈದ್ಯಕೀಯ ದಿನ ಎಂದು ಘೋಷಿಸಲಾಯಿತು.

ಯಾರು ಈ ಶ್ರೇಷ್ಠ ವೈದ್ಯ ಬಿಧನ್ ಚಂದ್ರ ರಾಯ್?

ಯಾರು ಈ ಶ್ರೇಷ್ಠ ವೈದ್ಯ ಬಿಧನ್ ಚಂದ್ರ ರಾಯ್?

ಶ್ರೇಷ್ಠ ವೈದ್ಯ ಎನಿಸಿರುವ ಬಿಧನ್ ಚಂದ್ರ ರಾಯ್ ಜುಲೈ 1 1882ರಲ್ಲಿ ಜನಿಸಿದ್ದರು. ಪಶ್ಚಿಮ ಬಂಗಾಳದ ಎರಡನೇ ಮುಖ್ಯಮಂತ್ರಿಯಾಗಿ, ವೈದ್ಯರಾಗಿ ಬಿ ಸಿ ರಾಯ್ ವೈದ್ಯಕೀಯ ರಂಗಕ್ಕೆ ಅಮೋಘ ಕೊಡುಗೆಗಳನ್ನು ನೀಡಿದ್ದಾರೆ. ಜಾದವಪುರ್ ಟಿ ಬಿ ಆಸ್ಪತ್ರೆ, ಚಿತ್ತರಂಜನ್ ಸೇವಾ ಸದನ, ಕಮಲಾ ನೆಹರೂ ಮೆಮೋರಿಯಲ್ ಆಸ್ಪತ್ರೆ, ವಿಕ್ಟೋರಿಯಾ ಇನ್ಸ್ ಟಿಟ್ಯೂಶನ್, ಚಿತ್ತರಂಜನ್ ಕ್ಯಾನ್ಸರ್ ಆಸ್ಪತ್ರೆ ಹಾಗೂ ಮಹಿಳೆಯರು ಮತ್ತು ಮಕ್ಕಳಿಗೆ ವಿಶೇಷವಾಗಿ ತೆರೆದಿರುವ ಚಿತ್ತರಂಜನ್ ಸೇವಾ ಸದನಗಳ ಸ್ಥಾಪನೆಯಲ್ಲಿ ಬಿ ಸಿ ರಾಯ್ ಪಾತ್ರ ಪ್ರಮುಖವಾಗಿದೆ. ಇವರ ಸೇವೆಯನ್ನು ಪರಿಗಣಿಸಿ 1961ರ ಫೆಬ್ರವರಿ 4ರಂದು ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವೈದ್ಯಕೀಯ ರಂಗದಲ್ಲಿ ಸಾಧನೆ ತೋರಿದ ಬಿಧನ್ ಚಂದ್ರ ರಾಯ್ 1962ರ ಜುಲೈ 1ರಂದು ವಿಧಿವಶರಾದರು.

English summary
National Doctor's Day on July 1; Know History and Significance in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X