ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಷ್ಟ್ರೀಯ ಶಿಕ್ಷಣ ದಿನಾಚರಣೆ, ಮಹತ್ವ, ಅಜಾದ್ ಹಿರಿಮೆ, ಟ್ವೀಟ್

|
Google Oneindia Kannada News

ಬೆಂಗಳೂರು, ನವೆಂಬರ್ 11: ಸ್ವಾತಂತ್ರ್ಯ ಭಾರತದ ಪ್ರಪ್ರಥಮ ಶಿಕ್ಷಣ ಸಚಿವ 'ಭಾರತರತ್ನ' ಡಾ.ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ ಜನ್ಮದಿನವನ್ನು 'ರಾಷ್ಟ್ರೀಯ ಶಿಕ್ಷಣ ದಿನ'ವನ್ನಾಗಿ ನವೆಂಬರ್ 11ರಂದು ಆಚರಿಸಲಾಗುತ್ತದೆ.

ಡಾ.ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಕೊಡುಗೆಗಳನ್ನು ಸ್ಮರಿಸಿಕೊಳ್ಳಲು ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಗುತ್ತದೆ.

ಗಾಂಧೀಜಿಯವರ 'ಸ್ವದೇಶಿ', 'ಸ್ವರಾಜ್' ಚಿಂತನೆಗಳಿಗೆ ಮಾರು ಹೋಗಿ ಅವರ ಒಡನಾಡಿಯಾಗಿದ್ದಾರೆ. ಅಬ್ದುಲ್ ಕಲಾಂ ಅವರು 1923ರ ವರ್ಷದಲ್ಲಿ ತಮ್ಮ 35ನೇ ವಯಸ್ಸಿನಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದವರು.

1931ರ ವರ್ಷದಲ್ಲಿ 'ದರ್ಶನ ಸತ್ಯಾಗ್ರಹ'ದ ಪ್ರಮುಖ ಆಯೋಜಕರಾಗಿದ್ದ ಮೌಲಾನಾ ಅವರು ಹಲವಾರು ಕಠಿಣ ಸೆರೆವಾಸಗಳನ್ನು ಕಂಡರು. ಕ್ವಿಟ್ ಇಂಡಿಯಾ ಚಳುವಳಿಯ ಸಂದರ್ಭದಲ್ಲಿ ಮೂರು ವರ್ಷಗಳ ಕಾಲ ಸತತವಾಗಿ ಸೆರೆಯಲ್ಲಿಯೇ ಇದ್ದರು

ನವೆಂಬರ್ 11, 1888ರಲ್ಲಿ ಜನಿಸಿದ್ದ ಮೌಲಾನಾ ಅವರು ಉರ್ದು ವಿದ್ವಾಂಸರಾಗಿದ್ದರು. ಅವರು ತಮ್ಮ ಬರವಣಿಗೆಗಾಗಿ 'ಆಜಾದ್' ಎಂಬ ನಾಮಾಂಕಿತವನ್ನು ಬಳಸುತ್ತಿದ್ದರು. ಹೀಗಾಗಿ ಅವರು ಮೌಲಾನಾ ಆಜಾದ್ ಎಂದೇ ಪ್ರಸಿದ್ದರು.

ಅಸಹಕಾರ ಚಳುವಳಿಯಲ್ಲಿ ಅತ್ಯಂತ ಕ್ರಿಯಾಶೀಲ ಯುವಕ

ಅಸಹಕಾರ ಚಳುವಳಿಯಲ್ಲಿ ಅತ್ಯಂತ ಕ್ರಿಯಾಶೀಲ ಯುವಕ

ಪತ್ರಕರ್ತರಾಗಿ ಬ್ರಿಟಿಷ್ ಆಡಳಿತ ವಿರುದ್ಧ ಬರೆಯುತ್ತಿದ್ದ ಲೇಖನಗಳಿಂದ ಮೌಲಾನಾ ಆಜಾದರು ಪ್ರಸಿದ್ಧಿ ಪಡೆದಿದ್ದರು. ಖಿಲಾಫತ್ ಚಳುವಳಿಯ ನೇತೃತ್ವ ವಹಿಸಿದ್ದ ಆಜಾದರು ಮಹಾತ್ಮ ಗಾಂಧೀಜಿಯವರ ನಿಕಟವರ್ತಿಗಳಾದರು. ಮಹಾತ್ಮರು ಆಯೋಜಿಸಿದ್ದ ಅಸಹಕಾರ ಚಳುವಳಿಯಲ್ಲಿ ಅತ್ಯಂತ ಕ್ರಿಯಾಶೀಲ ಯುವಕ ಎಂದು ಹೆಸರಾದರು

ಶಿಕ್ಷಣದ ಮಹತ್ವ ಸಾರಿದ ಆಜಾದ್

ಶಿಕ್ಷಣವೆಂದರೆ ಬರೀ ಓದುವುದಲ್ಲ, ಕಲಿಯುವುದು ಹಾಗೂ ಕಲಿಸುವುದು

ಅಜಾದ್ ಹಿರಿಮೆ

"Educationists must build capacities in spirit of inquiry, creativity, entrepreneurial & moral leadership among students", Maulana Abul Azad's advice was always progressive. My humble tribute to the great freedom fighter & academician

ಶಿಕ್ಷಣ ನೀತಿ

ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಿದ ಅಜಾದ್

English summary
November 11 has been celebrated as the National Education Day since 2008. The date has been chosen to commemorate the birth anniversary of independent India's first education minister – Maulana Abul Kalam Azad. Maulana Abul Kalam Azad was born Abul Kalam Ghulam Muhiyuddin on November 11, 1888.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X