ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಏಕೆ ಆಚರಿಸುತ್ತಾರೆ, ಏನಿದರ ಮಹತ್ವ?

|
Google Oneindia Kannada News

ದೇಶದ ಅಭಿವೃದ್ಧಿಗೆ ವಿಜ್ಞಾನಿಗಳ ಕೊಡುಗೆಗಳನ್ನು ಗುರುತಿಸಲು ಪ್ರತಿ ವರ್ಷ ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತದೆ. ಈ ದಿನ 1928 ರಲ್ಲಿ ಭಾರತೀಯ ಭೌತಶಾಸ್ತ್ರಜ್ಞ ಚಂದ್ರಶೇಖರ ವೆಂಕಟ ರಾಮನ್ ಸ್ಪೆಕ್ಟ್ರೋಸ್ಕೋಪಿ ಕ್ಷೇತ್ರದಲ್ಲಿ ಒಂದು ಪ್ರಮುಖ ಆವಿಷ್ಕಾರವನ್ನು ಮಾಡಿದರು. ನಂತರ ಅದನ್ನು ರಾಮನ್ ಎಫೆಕ್ಟ್ ಎಂದು ಹೆಸರಿಸಲಾಯಿತು. ಅವರ ಕೆಲಸಕ್ಕಾಗಿ, ಸಿವಿ ರಾಮನ್ ಅವರಿಗೆ 1930 ರಲ್ಲಿ ಭೌತಶಾಸ್ತ್ರದ ಪ್ರತಿಷ್ಠಿತ ನೊಬೆಲ್ ಪ್ರಶಸ್ತಿಯನ್ನು ನೀಡಲಾಯಿತು. 2022ರ ರಾಷ್ಟ್ರೀಯ ವಿಜ್ಞಾನ ದಿನದ ಥೀಮ್ ಹೀಗಿದೆ 'ಸುಸ್ಥಿರ ಭವಿಷ್ಯಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಯೋಜಿತ ವಿಧಾನ'.

ನ್ಯಾಷನಲ್ ಕೌನ್ಸಿಲ್ ಫಾರ್ ಸೈನ್ಸ್ ಅಂಡ್ ಟೆಕ್ನಾಲಜಿ ಕಮ್ಯುನಿಕೇಷನ್ (NCSTC), 1986 ರಲ್ಲಿ ಫೆಬ್ರವರಿ 28 ಅನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಘೋಷಿಸಲು ಭಾರತ ಸರ್ಕಾರವನ್ನು ಕೇಳಿತು. ಸರ್ಕಾರವು ಈ ದಿನವನ್ನು ರಾಷ್ಟ್ರೀಯ ವಿಜ್ಞಾನ ದಿನವೆಂದು ಅಂಗೀಕರಿಸಿ ಘೋಷಿಸಿತು. ಮೊದಲ ರಾಷ್ಟ್ರೀಯ ವಿಜ್ಞಾನ ದಿನವನ್ನು ಫೆಬ್ರವರಿ 28, 1987 ರಂದು ಆಚರಿಸಲಾಯಿತು. ಅಂದಿನಿಂದ ಈ ದಿನವನ್ನು ದೇಶದ ಅಭಿವೃದ್ಧಿಗೆ ವಿಜ್ಞಾನಿಗಳ ಕೊಡುಗೆಗಳನ್ನು ಗುರುತಿಸಲು ನೆನೆಯಲು ಆಚರಿಸಲಾಗುತ್ತದೆ.

ವಿಜ್ಞಾನಕ್ಕೆ ಹೊಸ ಆಯಾಮ ನೀಡಿದ ಭಾರತರತ್ನ ಸಿ.ವಿ ರಾಮನ್ವಿಜ್ಞಾನಕ್ಕೆ ಹೊಸ ಆಯಾಮ ನೀಡಿದ ಭಾರತರತ್ನ ಸಿ.ವಿ ರಾಮನ್

ರಾಷ್ಟ್ರೀಯ ವಿಜ್ಞಾನ ದಿನ: ಮಹತ್ವ

ವಿಜ್ಞಾನದ ಮಹತ್ವದ ಬಗ್ಗೆ ಅರಿವು ಮೂಡಿಸಲು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತದೆ. ಸಾರ್ವಜನಿಕ ಭಾಷಣಗಳು, ರೇಡಿಯೋ, ಟಿವಿ, ವಿಜ್ಞಾನ ಚಲನಚಿತ್ರಗಳು, ವಿಷಯಗಳು ಮತ್ತು ಪರಿಕಲ್ಪನೆಗಳ ಕುರಿತು ವಿಜ್ಞಾನ ಪ್ರದರ್ಶನಗಳು, ಚರ್ಚೆಗಳು, ರಸಪ್ರಶ್ನೆ ಸ್ಪರ್ಧೆಗಳು, ಉಪನ್ಯಾಸಗಳು ಮತ್ತು ವಿಜ್ಞಾನ ಮಾದರಿ ಪ್ರದರ್ಶನಗಳನ್ನು ಆಯೋಜಿಸುವ ಮೂಲಕ ಶಿಕ್ಷಣ ಸಂಸ್ಥೆಗಳು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸುತ್ತವೆ. ಕರ್ನಾಟಕದಲ್ಲೂ ಈ ದಿನವನ್ನು ಆಚರಿಸಲಾಗುತ್ತದೆ.

 National Science Day 2022: Date, History, Theme and Significance of Vigyan Diwas in Kannada

ಗೌರಿಬಿದನೂರಿನಲ್ಲಿ ವಿಜ್ಞಾನ ಕೇಂದ್ರ

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ, ಹೊಸಕೋಟೆ ಬಳಿ ಸರ್ಕಾರವು ಶಿಕ್ಷಣ ತಜ್ಞ, ವೈಜ್ಞಾನಿಕ ಮನೋಭಾವದ ಡಾ. ಎಚ್. ನರಸಿಂಹಯ್ಯ ಹೆಸರಿನಲ್ಲಿ ವಿಜ್ಞಾನ ಕೇಂದ್ರವೊಂದನ್ನು ಆರಂಭಿಸಿದ್ದು, ಜನರ ಗಮನ ಸೆಳೆಯುತ್ತಿದೆ. ಕ್ಲಾಸ್ ರೂಮ್ ಗಳಲ್ಲಿ, ಲ್ಯಾಬೊರೆಟರಿಗಳಲ್ಲಿ, ವಿಜ್ಞಾನ ಗಣಿತದ ಬಗ್ಗೆ ಕೇಳಿ ತಿಳಿಯವುದರ ಬದಲು, ಪರಿಚಯಿಸುವ,ಅನುಭವಿಸುವ ಹಾಗೂ ಮಕ್ಕಳಲ್ಲಿ ಚಿಂತನೆ ಉದ್ಭವ ಆಗುವ ರೀತಿಯಲ್ಲಿ ಕಲಿಯುವ ಉದ್ದೇಶದಿಂದ ನಿರ್ಮಿಸಲಾಗಿದೆ. ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಅಂತರಾಷ್ಟ್ರೀಯ ವಿಜ್ಞಾನ ಕೇಂದ್ರವನ್ನಾಗಿ ಸರ್ಕಾರ ಮೇಲ್ದರ್ಜೆಗೆರಿಸಿದ್ದು, ವಿವಿಧ ಗ್ಯಾಲರಿಗಳ ಶಂಕು ಸ್ಥಾಪನೆ, ಉದ್ಘಾಟನೆ ಮಾಡಲಾಗುತ್ತಿದೆ. ಯುವ ಪೀಳಿಗೆಯಲ್ಲಿ ವೈಜ್ಞಾನಿಕ ಮನೋಧರ್ಮ ಬೆಳೆಯಲು ವಿಜ್ಞಾನ ಕೇಂದ್ರ ಸಹಕಾರಿಯಾಗಿದ್ದು, ಸದುಪಯೋಗ ಪಡಿಸಿಕೊಳ್ಳಿ ಎಂದು ಗೌರಿಬಿದನೂರು ಕ್ಷೇತ್ರದ ಶಾಸಕ ಎನ್.ಎಚ್. ಶಿವಶಂಕರರೆಡ್ಡಿ ಮನವಿ ಮಾಡಿದ್ದಾರೆ.

'ವಿಜ್ಞಾನ ನಮ್ಮ ಸಂಸ್ಕೃತಿ ಮತ್ತು ಧರ್ಮಗಳ ಭಾಗವಾಗಬೇಕು'

ಬದುಕಿನ ಪ್ರತೀ ಸಮಸ್ಯೆಗೂ ವಿಜ್ಞಾನದಲ್ಲಿ ಪರಿಹಾರವಿದೆ. ಆದ್ದರಿಂದ ಮಕ್ಕಳಲ್ಲಿ ಪೂರ್ವ ಪ್ರಾಥಮಿಕ ಹಂತದಿಂದಲೇ ಗಣಿತ ಮತ್ತು ವಿಜ್ಞಾನಗಳ ಬಗ್ಗೆ ಒಲವು ಮೂಡಿಸಬೇಕು. ಈಗ ಮಾನವಿಕಗಳ ಕಲಿಕೆಯಲ್ಲೂ ತಂತ್ರಜ್ಞಾನ ನಿರ್ಣಾಯಕ ಪಾತ್ರ ವಹಿಸುತ್ತಿದೆ. ವಿದ್ಯಾರ್ಥಿಗಳು ಏನನ್ನೇ ಕಲಿತರೂ ವೈಜ್ಞಾನಿಕ ಮನೋಭಾವವನ್ನು ರೂಢಿಸಿಕೊಳ್ಳಬೇಕು. ಜೊತೆಗೆ ವಿಜ್ಞಾನವು ನಮ್ಮ ಸಂಸ್ಕೃತಿ ಮತ್ತು ಧರ್ಮಗಳ ಭಾಗವಾಗಬೇಕು ಎಂದು ಉನ್ನತ ಶಿಕ್ಷಣ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

Recommended Video

ಭಾರತದ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಉಕ್ರೇನ್‌‌ನ್ನು ಯಾಕೆ ಆಯ್ಕೆ ಮಾಡಿಕೊಳ್ತಾರೆ? | Oneindia Kannada

English summary
National Science Day is celebrated every year on February 28 to mark and recognize the contributions of scientists towards the development of the country.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X