ಮೇ 11ರ ರಾಷ್ಟ್ರೀಯ ತಂತ್ರಜ್ಞಾನ ದಿನ: ಈ ದಿನದ ವಿಶೇಷತೆ, ಇತಿಹಾಸ, ಮಹತ್ವ
ನವದೆಹಲಿ, ಮೇ 11: ಭಾರತದಲ್ಲಿ ಪ್ರತಿವರ್ಷ ಮೇ 9ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ. ಈ ದಿನವು ದೇಶದಲ್ಲಿ ಮಹತ್ವದ ಐತಿಹಾಸಿಕ ಪ್ರಾಮುಖ್ಯತೆಯನ್ನು ಹೊಂದಿದೆ.
ಕಳೆದ 1998ರ ಮೇ 11ರಂದು ರಾಜಸ್ಥಾನದ ಪೋಖ್ರಾನ್‌ನಲ್ಲಿ ಪರಮಾಣು ಶಸ್ತ್ರಾಸ್ತ್ರಗಳನ್ನು ಯಶಸ್ವಿಯಾಗಿ ಪರೀಕ್ಷಿಸಲಾಗಿತ್ತು. ಅಂದಿನಿಂದ ಈ ದಿನವನ್ನು ಭಾರತದ ತಾಂತ್ರಿಕ ಪ್ರಗತಿಯ ಸಾಧನೆಯಾಗಿ ಸ್ಮರಿಸಲಾಗುತ್ತಿದೆ.
ರಾಜಸ್ಥಾನದ ಪೋಖ್ರಾನ್‌ನಲ್ಲಿ ಪರಮಾಣು ಪರೀಕ್ಷೆಗಳನ್ನು ನಡೆಸಿದಾಗಲೇ ಬೆಂಗಳೂರಿನಲ್ಲಿ ಹಾರಿಸಲಾದ ಭಾರತದ ಮೊದಲ ಸ್ವದೇಶಿ ವಿಮಾನವಾದ ಹಂಸ -3ರ ಹಾರಾಟವನ್ನು ಸಹ ಈ ದಿನವು ನೆನಪಿಸುತ್ತದೆ.

ದೇಶದ ವಿಜ್ಞಾನಿಗಳನ್ನು ಗೌರವಿಸುವ ದಿನವಿದು
ಭಾರತೀಯ ವಿಜ್ಞಾನಿಗಳ ಗಮನಾರ್ಹ ಶ್ರಮ ಮತ್ತು ಸಾಧನೆಗಳನ್ನು ಗೌರವಿಸಲು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತದೆ. ಪ್ರತಿ ವರ್ಷ ಈ ದಿನದಂದು, ಅಧಿಕಾರಿಗಳು ತಮ್ಮ ಸಾಧನೆಗಳಿಗಾಗಿ ಭಾರತದ ವಿಜ್ಞಾನಿಗಳನ್ನು ಗೌರವಿಸುತ್ತಾರೆ. ತಾಂತ್ರಿಕ ಬೆಳವಣಿಗೆಯು ದೇಶದ ಜೀವನೋಪಾಯ ಮತ್ತು ಸ್ಥಾನಮಾನದ ಮೇಲೆ ಪರಿಣಾಮ ಬೀರುತ್ತಿದೆ ಎಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳಬಹುದು.

ರಾಷ್ಟ್ರೀಯ ತಂತ್ರಜ್ಞಾನ ದಿನದ ಹಿಂದಿನ ಇತಿಹಾಸ
ರಾಷ್ಟ್ರೀಯ ತಂತ್ರಜ್ಞಾನ ದಿನದ ಇತಿಹಾಸವು ನಮ್ಮನ್ನು 1998ರಲ್ಲಿ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮೇ 11 ಅನ್ನು ದೇಶಕ್ಕೆ ಮಹತ್ವದ ಸಾಧನೆಯ ದಿನವೆಂದು ಘೋಷಿಸಿದ ದಿನಕ್ಕೆ ಕರೆದುಕೊಂಡು ಹೋಗುತ್ತದೆ. ಇದೇ ಮೇ 11ರ 1998ರಂದು, ರಾಜಸ್ಥಾನದ ಪೋಖ್ರಾನ್‌ನಲ್ಲಿ ಸರಣಿ ಪರಮಾಣು ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸುವ ಮೂಲಕ ಭಾರತವು ಪ್ರಮುಖ ತಾಂತ್ರಿಕ ಪ್ರಗತಿಯನ್ನು ಸಾಧಿಸಿತ್ತು.

ಮೂರು ವಿಭಾಗಗಳಲ್ಲಿ ರಾಷ್ಟ್ರೀಯ ಪ್ರಶಸ್ತಿ ಘೋಷಣೆ
ಪ್ರತಿ ವರ್ಷ, ತಂತ್ರಜ್ಞಾನ ಅಭಿವೃದ್ಧಿ ಮಂಡಳಿ (TDB) ಮೂರು ವಿಭಾಗಗಳಲ್ಲಿ ರಾಷ್ಟ್ರೀಯ ಪ್ರಶಸ್ತಿಗಳು, MSME ಪ್ರಶಸ್ತಿಗಳು ಮತ್ತು ಸ್ಟಾರ್ಟ್ಅಪ್ ಪ್ರಶಸ್ತಿಗಳ ಅಡಿಯಲ್ಲಿ ತಂತ್ರಜ್ಞಾನಗಳ ವಾಣಿಜ್ಯೀಕರಣಕ್ಕಾಗಿ ರಾಷ್ಟ್ರೀಯ ಪ್ರಶಸ್ತಿಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸುತ್ತದೆ. ಹೊಸ ಸ್ವದೇಶಿ ತಂತ್ರಜ್ಞಾನದ ಮೂಲಕ ವಾಣಿಜ್ಯೀಕರಣ ಮತ್ತು ಕೈಗಾರಿಕೆಗಳಲ್ಲಿ ಯಶಸ್ವಿಯಾದವರಿಗೆ ಈ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತದೆ.

ರಾಷ್ಟ್ರೀಯ ತಂತ್ರಜ್ಞಾನ ದಿನದ ಗುರಿ
ರಾಷ್ಟ್ರೀಯ ತಂತ್ರಜ್ಞಾನದ ದಿನದ 2022ರ ಗುರಿಯು "ಸುಸ್ಥಿರ ಭವಿಷ್ಯಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಯೋಜಿತ ವಿಧಾನ"ವಾಗಿದೆ. ಈ ವಿಷಯವನ್ನು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಬಿಡುಗಡೆ ಮಾಡಿದ್ದಾರೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications