ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ 11ರ ರಾಷ್ಟ್ರೀಯ ತಂತ್ರಜ್ಞಾನ ದಿನ: ಈ ದಿನದ ವಿಶೇಷತೆ, ಇತಿಹಾಸ, ಮಹತ್ವ

|
Google Oneindia Kannada News

ನವದೆಹಲಿ, ಮೇ 11: ಭಾರತದಲ್ಲಿ ಪ್ರತಿವರ್ಷ ಮೇ 9ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ. ಈ ದಿನವು ದೇಶದಲ್ಲಿ ಮಹತ್ವದ ಐತಿಹಾಸಿಕ ಪ್ರಾಮುಖ್ಯತೆಯನ್ನು ಹೊಂದಿದೆ.

ಕಳೆದ 1998ರ ಮೇ 11ರಂದು ರಾಜಸ್ಥಾನದ ಪೋಖ್ರಾನ್‌ನಲ್ಲಿ ಪರಮಾಣು ಶಸ್ತ್ರಾಸ್ತ್ರಗಳನ್ನು ಯಶಸ್ವಿಯಾಗಿ ಪರೀಕ್ಷಿಸಲಾಗಿತ್ತು. ಅಂದಿನಿಂದ ಈ ದಿನವನ್ನು ಭಾರತದ ತಾಂತ್ರಿಕ ಪ್ರಗತಿಯ ಸಾಧನೆಯಾಗಿ ಸ್ಮರಿಸಲಾಗುತ್ತಿದೆ.

ಹರಿಯಾಣದಲ್ಲಿ 7000 ವರ್ಷಗಳ ಹಿಂದಿನ ಹರಪ್ಪ ನಗರದ ಉತ್ಖನನ ಹರಿಯಾಣದಲ್ಲಿ 7000 ವರ್ಷಗಳ ಹಿಂದಿನ ಹರಪ್ಪ ನಗರದ ಉತ್ಖನನ

ರಾಜಸ್ಥಾನದ ಪೋಖ್ರಾನ್‌ನಲ್ಲಿ ಪರಮಾಣು ಪರೀಕ್ಷೆಗಳನ್ನು ನಡೆಸಿದಾಗಲೇ ಬೆಂಗಳೂರಿನಲ್ಲಿ ಹಾರಿಸಲಾದ ಭಾರತದ ಮೊದಲ ಸ್ವದೇಶಿ ವಿಮಾನವಾದ ಹಂಸ -3ರ ಹಾರಾಟವನ್ನು ಸಹ ಈ ದಿನವು ನೆನಪಿಸುತ್ತದೆ.

ದೇಶದ ವಿಜ್ಞಾನಿಗಳನ್ನು ಗೌರವಿಸುವ ದಿನವಿದು

ದೇಶದ ವಿಜ್ಞಾನಿಗಳನ್ನು ಗೌರವಿಸುವ ದಿನವಿದು

ಭಾರತೀಯ ವಿಜ್ಞಾನಿಗಳ ಗಮನಾರ್ಹ ಶ್ರಮ ಮತ್ತು ಸಾಧನೆಗಳನ್ನು ಗೌರವಿಸಲು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತದೆ. ಪ್ರತಿ ವರ್ಷ ಈ ದಿನದಂದು, ಅಧಿಕಾರಿಗಳು ತಮ್ಮ ಸಾಧನೆಗಳಿಗಾಗಿ ಭಾರತದ ವಿಜ್ಞಾನಿಗಳನ್ನು ಗೌರವಿಸುತ್ತಾರೆ. ತಾಂತ್ರಿಕ ಬೆಳವಣಿಗೆಯು ದೇಶದ ಜೀವನೋಪಾಯ ಮತ್ತು ಸ್ಥಾನಮಾನದ ಮೇಲೆ ಪರಿಣಾಮ ಬೀರುತ್ತಿದೆ ಎಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳಬಹುದು.

ರಾಷ್ಟ್ರೀಯ ತಂತ್ರಜ್ಞಾನ ದಿನದ ಹಿಂದಿನ ಇತಿಹಾಸ

ರಾಷ್ಟ್ರೀಯ ತಂತ್ರಜ್ಞಾನ ದಿನದ ಹಿಂದಿನ ಇತಿಹಾಸ

ರಾಷ್ಟ್ರೀಯ ತಂತ್ರಜ್ಞಾನ ದಿನದ ಇತಿಹಾಸವು ನಮ್ಮನ್ನು 1998ರಲ್ಲಿ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮೇ 11 ಅನ್ನು ದೇಶಕ್ಕೆ ಮಹತ್ವದ ಸಾಧನೆಯ ದಿನವೆಂದು ಘೋಷಿಸಿದ ದಿನಕ್ಕೆ ಕರೆದುಕೊಂಡು ಹೋಗುತ್ತದೆ. ಇದೇ ಮೇ 11ರ 1998ರಂದು, ರಾಜಸ್ಥಾನದ ಪೋಖ್ರಾನ್‌ನಲ್ಲಿ ಸರಣಿ ಪರಮಾಣು ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸುವ ಮೂಲಕ ಭಾರತವು ಪ್ರಮುಖ ತಾಂತ್ರಿಕ ಪ್ರಗತಿಯನ್ನು ಸಾಧಿಸಿತ್ತು.

ಮೂರು ವಿಭಾಗಗಳಲ್ಲಿ ರಾಷ್ಟ್ರೀಯ ಪ್ರಶಸ್ತಿ ಘೋಷಣೆ

ಮೂರು ವಿಭಾಗಗಳಲ್ಲಿ ರಾಷ್ಟ್ರೀಯ ಪ್ರಶಸ್ತಿ ಘೋಷಣೆ

ಪ್ರತಿ ವರ್ಷ, ತಂತ್ರಜ್ಞಾನ ಅಭಿವೃದ್ಧಿ ಮಂಡಳಿ (TDB) ಮೂರು ವಿಭಾಗಗಳಲ್ಲಿ ರಾಷ್ಟ್ರೀಯ ಪ್ರಶಸ್ತಿಗಳು, MSME ಪ್ರಶಸ್ತಿಗಳು ಮತ್ತು ಸ್ಟಾರ್ಟ್ಅಪ್ ಪ್ರಶಸ್ತಿಗಳ ಅಡಿಯಲ್ಲಿ ತಂತ್ರಜ್ಞಾನಗಳ ವಾಣಿಜ್ಯೀಕರಣಕ್ಕಾಗಿ ರಾಷ್ಟ್ರೀಯ ಪ್ರಶಸ್ತಿಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸುತ್ತದೆ. ಹೊಸ ಸ್ವದೇಶಿ ತಂತ್ರಜ್ಞಾನದ ಮೂಲಕ ವಾಣಿಜ್ಯೀಕರಣ ಮತ್ತು ಕೈಗಾರಿಕೆಗಳಲ್ಲಿ ಯಶಸ್ವಿಯಾದವರಿಗೆ ಈ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತದೆ.

ರಾಷ್ಟ್ರೀಯ ತಂತ್ರಜ್ಞಾನ ದಿನದ ಗುರಿ

ರಾಷ್ಟ್ರೀಯ ತಂತ್ರಜ್ಞಾನ ದಿನದ ಗುರಿ

ರಾಷ್ಟ್ರೀಯ ತಂತ್ರಜ್ಞಾನದ ದಿನದ 2022ರ ಗುರಿಯು "ಸುಸ್ಥಿರ ಭವಿಷ್ಯಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಯೋಜಿತ ವಿಧಾನ"ವಾಗಿದೆ. ಈ ವಿಷಯವನ್ನು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಬಿಡುಗಡೆ ಮಾಡಿದ್ದಾರೆ.

English summary
National Technology Day 2022: Date, Theme, History and Significance in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X