Maruti Suzuki Swift: ಮಾರಾಟದಲ್ಲಿ ದಾಖಲೆ ಬರೆದ ಹೊಸ ಮಾರುತಿ ಸುಜುಕಿ ಸ್ವಿಫ್ಟ್
Maruti Suzuki Swift: ಸ್ವದೇಶಿ ಮಾರುತಿ ಸುಜುಕಿ ಮೊದಲಿನಿಂದಲೂ ಹೊಸ ಹೊಸ ಮಾದರಿ ಕಾರುಗಳನ್ನು ಬಿಡುಗಡೆ ಮಾಡುವ ಮೂಲಕ ಗ್ರಾಹಕರನ್ನು ಹೆಚ್ಚಿಸಿಕೊಳ್ಳುತ್ತಲೇ ಇದೆ. ಈ ಕಂಪನಿ ಈಗಲೂ ಕೂಡ ಹೆಚ್ಚೆಚ್ಚು ಗ್ರಾಹಕರನ್ನು ಸೆಳೆಯುವ ಉದ್ದೇಶದಿಂದ ಕೈಗೆಟಕುವ ದರಲ್ಲಿ ಉತ್ತಮ ಸೌಲಭ್ಯವುಳ್ಳ ಕಾರುಗಳನ್ನು ಮಾರುಕಟ್ಟೆಗೆ ತರುತ್ತಲೇ ಇದೆ. ಈ ಮೂಲಕ ಇದೀಗ ಕಾರುಗಳ ಮಾರಾಟದಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸಿದೆ.
ಭಾರತದಲ್ಲಿ 2005ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಂಡಿದ್ದ ಸ್ವಿಫ್ಟ್ ಕಾರು ಇದುವರೆಗೂ ಹೊಸ ಹೊಸ ವಿನ್ಯಾಸವನ್ನು ಪಡೆದುಕೊಳ್ಳುತ್ತಿದೆ. ಈ ಮೂಲಕ ಹೆಚ್ಚೆಚ್ಚು ಗ್ರಾಹಕರನ್ನು ಸೆಳೆಯುತ್ತಲೇ ಇದೆ. ಇದೀಗ ಪ್ರಸ್ತುತ ಮಾರುಕಟ್ಟೆಯಲ್ಲಿ 4ನೇ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಮಾರಾಟ ಆಗುತ್ತಿದ್ದು, ಇದುವರೆಗೂ ಈ ಕಾರು 30 ಲಕ್ಷ ಯುನಿಟ್ ಮಾರಾಟ ಆಗಿದ್ದು, ಇದು ದಾಖಲೆಯಾಗಿದೆ.

2005ರಲ್ಲಿ ಮೊದಲ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಿದ್ದ ಸ್ವಿಫ್ಟ್ ಕಾರು 2013ರಲ್ಲಿ ಎರಡನೇ ತಲೆಮಾರಿನ ವೈಶಿಷ್ಟ್ಯತೆ ಮತ್ತು 2018ರಲ್ಲಿ ಮೂರನೇ ತಲೆಮಾರಿನ ಹೊಸ ವಿನ್ಯಾಸದೊಂದಿಗೆ ಮಾರುಕಟ್ಟಗೆ ಲಗ್ಗೆ ಇಟ್ಟಿತ್ತು. ಈ ಮೂಲಕ ಪ್ರಸ್ತುತ ಮಾರುಕಟ್ಟೆಯಲ್ಲಿ ನಾಲ್ಕನೇ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಮಾರಾಟ ಆಗುತ್ತಿದ್ದು, 30 ಲಕ್ಷ ಗ್ರಾಹಕರನ್ನು ಸೆಳೆಯುವ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ.
ಸ್ಪೋರ್ಟಿ ಆಗಿರುವ ವಿನ್ಯಾಸ, ಹೆಚ್ಚು ಮೈಲೇಜ್ ಮತ್ತು ಕಡಿಮೆ ನಿರ್ವಹಣಾ ವೆಚ್ಚದೊಂದಿಗೆ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಂಡಿರುವ ಸ್ವಿಫ್ಟ್ ಕಾರು ಗ್ರಾಹಕರ ಅಭಿರುಚಿಗೆ ತಕ್ಕಂತೆ ಹಲವು ಬದಲಾವಣೆಯೊಂದಿಗೆ ಮಾರಾಟ ಆಗುತ್ತಿದೆ. ಇದೀಗ ಮಾರುಕಟ್ಟೆಯಲ್ಲಿರುವ ಹೊಸ ಸ್ವಿಫ್ಟ್ ಆವೃತ್ತಿಯು ಹಿಂದಿಗಿಂತಲೂ ಭಾರೀ ಬದಲಾವಣೆಯೊಂದಿಗೆ ಬಿಡುಗಡೆ ಆಗಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ವಿಎಕ್ಸ್ಐ(ಆಪ್ಷನ್), ಜೆಡ್ಎಕ್ಸ್ಐ ಮತ್ತು ಜೆಡ್ಎಕ್ಸ್ಐ ಪ್ಲಸ್ ವೆರಿಯೆಂಟ್‌ಗಳೊಂದಿಗೆ ಮಾರಾಟ ಆಗುತ್ತಿದೆ.
ಇನ್ನು ಈ ಹೊಸ ಸ್ವಿಫ್ಟ್ ಕಾರು ಇದೀಗ ನವದೆಹಲಿ ಎಕ್ಸ್ ಶೋರೂಂ ದರ 6.49 ಲಕ್ಷದಿಂದ 9.50 ಲಕ್ಷ ಬೆಲೆ ಹೊಂದಿದ್ದು, ಇದರಲ್ಲಿ ಹಲವಾರು ಉತ್ತಮ ಸೌಲಭ್ಯಗಳನ್ನು ಕಾಣಬಹುದಾಗಿದೆ. ಸ್ವಿಫ್ಟ್ ಹೊಸ ಕಾರಿನಲ್ಲಿ ಈ ಬಾರಿ ಮತ್ತೊಂದು ವಿಶೇಷ ಎಂದರೆ ಮೂರು ಸಿಲಿಂಡರ್ ವೈಶಿಷ್ಟತೆಯ 1.2 ಲೀಟರ್ ಜೆಡ್ 12ಇ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, ಇದು 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ.
ಈ ಮೂಲಕ ಇದು 82 ಹಾರ್ಸ್ ಪವರ್ ಮತ್ತು 112 ಎನ್ಎಂ ಟಾರ್ಕ್ ಉತ್ಪಾದನಾ ಸಾಮರ್ಥ್ಯ ಹೊಂದಿದ್ದು, ಇದರಲ್ಲಿ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್ ಗೆ 24.8 ಕಿಲೋ ಮೀಟರ್ ಮೈಲೇಜ್ ನೀಡಿದರೆ, ಆಟೋಮ್ಯಾಟಿಕ್ ಮಾದರಿಯು 25.75 ಕಿಲೋ ಮೀಟರ್ ಮೈಲೇಜ್ ಕೊಡುತ್ತದೆ.
ಹೊಸ ಕಾರಿನಲ್ಲಿ ಮರುವಿನ್ಯಾಸಗೊಳಿಸಲಾದ ಫ್ರಂಟ್ ಬಂಪರ್ ಸೇರಿದಂತೆ ಎಲ್ಇಡಿ ಹೆಡ್ ಲೈಟ್ಸ್, 9 ಇಂಚಿನ ಫ್ಲೋಟರಿಂಗ್ ಟಚ್ ಸ್ಕ್ರೀನ್ ಇನ್ಪೋಟೈನ್ ಮೆಂಟ್ ಸಿಸ್ಟಂ, ಪ್ರೀಮಿಯಂ ಆಗಿರುವ ಫ್ರಾಬ್ರಿಕ್ ಸೀಟ್‌ಗಳು, ವೈರ್ ಲೆಸ್ ಚಾರ್ಜಿಂಗ್, ಆಟೋ ಕ್ಲೈಮೆಟ್ ಕಂಟ್ರೋಲ್ ಸೇರಿದಂತೆ ಹಲವು ಸೌಲಭ್ಯಗಳು ಇದ್ದು, ಇವುಗಳು ಗ್ರಾಹಕರನ್ನು ಸೆಳೆಯುತ್ತಲೇ ಇವೆ. ಇನ್ನು ಸುರಕ್ಷತೆಗಾಗಿ 6 ಏರ್ ಬ್ಯಾಗ್‌ಗಳು, ಐಸೋಫಿಕ್ಸ್ ಆ್ಯಂಕರ್ಸ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಎಬಿಎಸ್ ಜೊತೆ ಇಬಿಡಿ, ಹಿಲ್ ಸ್ಟಾರ್ಟ್ ಅಸಿಸ್ಟ್ ಸೇರಿ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.












Click it and Unblock the Notifications