ಹೊಸ ವರ್ಷಕ್ಕೆ ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳ, ಲೆಕ್ಕಾಚಾರ ಹೇಗೆ?
ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ಮುಂದಾಗಿರುವ ಸುದ್ದಿ ಓದಿರಬಹುದು. ಈಗ 2022ರ ಆರಂಭದಲ್ಲಿ ಮತ್ತೊಮ್ಮೆ ತುಟ್ಟಿಭತ್ಯೆ ಹೆಚ್ಚಳ ಹಾಗೂ ತುಟ್ಟಿ ಭತ್ಯೆ ಪರಿಹಾರ ಘೋಷಿಸಲು ಮೋದಿ ಸರ್ಕಾರ ಮುಂದಾಗಿರುವ ಸುದ್ದಿ ಬಂದಿದೆ. ಈ ಬಗ್ಗೆ ಡಿಸೆಂಬರ್ ಅಂತ್ಯದೊಳಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಒಪ್ಪಿಗೆ ಪಡೆಯಲಾಗುತ್ತದೆ. ಸರ್ಕಾರಿ ನೌಕರರಿಗೆ ಶೇ 3ರಷ್ಟು ಡಿಎ ಹೆಚ್ಚಳಕ್ಕೆ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಲಾಗಿದ್ದು, ಸದ್ಯದ ಮಾಹಿತಿಯಂತೆ ಡಿಎ ಶೇ 17ರಿಂದ ಶೇ 31ಕ್ಕೇರಿಕೆಯಾಗಿದೆ. ಒಂದು ವೇಳೆ ಮತ್ತೊಮ್ಮೆ ಡಿಎ ಹೆಚ್ಚಳವಾದರೆ, ಸರ್ಕಾರ ನೌಕರರ ಸಂಬಳ, ಡಿಎ ಲೆಕ್ಕಾಚಾರ ಹೇಗಿರಲಿದೆ ಎಂಬುದರ ವಿವರಣೆ ಇಲ್ಲಿದೆ...
ತುಟ್ಟಿಭತ್ಯೆ ಹೆಚ್ಚಳದ ಜೊತೆಗೆ 18 ತಿಂಗಳ ತುಟ್ಟಿಭತ್ಯೆ ಬಾಕಿಯ ಬಗ್ಗೆ ಮೋದಿ ಸರ್ಕಾರ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿದೆ. ತುಟ್ಟಿಭತ್ಯೆ ಪ್ರಸ್ತುತ ಶೇಕಡಾ 31 ರಷ್ಟಿದೆ. ಈ ವರ್ಷ ಜುಲೈ ಮೊದಲು, ಇದು 17 ಪ್ರತಿಶತದಷ್ಟಿತ್ತು, ತುಟ್ಟಿಭತ್ಯೆ ಪರಿಹಾರ(ಡಿಆರ್) ಕೂಡಾ ಶೇ 3ರಷ್ಟಿದೆ. ವೆಚ್ಚ ಇಲಾಖೆಯ ವಾರ್ಷಿಕ ವರದಿಯ ಪ್ರಕಾರ, ದೇಶದಲ್ಲಿ ಒಟ್ಟು 48 ಲಕ್ಷ ಕೇಂದ್ರ ನೌಕರರು ಮತ್ತು ಸುಮಾರು 68.62 ಲಕ್ಷ ಪಿಂಚಣಿದಾರರಿದ್ದಾರೆ.
ಕೋವಿಡ್ -19 ಸಾಂಕ್ರಾಮಿಕದಿಂದಾಗಿ ಉದ್ಭವಿಸಿದ ಅಸಾಧಾರಣ ಪರಿಸ್ಥಿತಿಯಿಂದಾಗಿ ಕೇಂದ್ರ ಸರ್ಕಾರಿ ನೌಕರರಿಗೆ ಮೂರು ಹೆಚ್ಚುವರಿ ಕಂತುಗಳ ತುಟ್ಟಿ ಭತ್ಯೆ [ಡಿಎ] ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರವನ್ನು ಸ್ಥಗಿತಗೊಳಿಸಲಾಗಿತ್ತು.

ಜನವರಿ 1 (4%), ಜುಲೈ 1 2020(3%) ಹಾಗೂ ಜನವರಿ 1, 2021 (4%) ಗೆ ಮೂರು ಬಾರಿ ಏರಿಕೆಯಾಗಿ ಶೇ 25ಕ್ಕೇರಿತ್ತು. ಜುಲೈ 1, 2021ಕ್ಕೆ ಪರಿಷ್ಕರಣೆಗೊಳ್ಳಲಿದ್ದು, ಶೇ 31ಕ್ಕೇರಿದೆ.
ಡಿಎ ಮತ್ತೆ ಎಷ್ಟು ಹೆಚ್ಚಳ?:
ಡಿಎ ಹೆಚ್ಚಳದ ಸುದ್ದಿ ಬಂದಿದ್ದರೂ ಪ್ರಮಾಣದ ಬಗ್ಗೆ ಇನ್ನೂ ಖಚಿತ ಮಾಹಿತಿಯಿಲ್ಲ, ಬಜೆಟ್ 2022ಕ್ಕೂ ಮುನ್ನ ಫಿಟ್ಮೆಂಟ್ ಪ್ರಕಾರ ಡಿಎ ಸುಮಾರು ಶೇ 3ರಷ್ಟು ಏರಿಕೆಯಾಗಬಹುದು, ಜೊತೆಗೆ ಸರ್ಕಾರಿ ನೌಕರರಿಗೆ ಬಡ್ತಿ, ತುಟ್ಟಿ ಭತ್ಯೆ ಪರಿಹಾರ, ಬಾಕಿ ಮೊತ್ತ ಎಲ್ಲವೂ ಸಿಗುವ ಸಾಧ್ಯತೆಯೂ ಇದೆ. ಒಂದು ವೇಳೆ ಮತ್ತೊಮ್ಮೆ ಶೇ 3ರಷ್ಟು ಏರಿಕೆಯಾದರೆ ಡಿಎ ಶೇ 34ಕ್ಕೇರಲಿದೆ. AICPI ಸೂಚ್ಯಂಕದ ಆಧಾರದ ಮೇಲೆ ಹೇಳುವುದಾದರೆ ಶೇ 3ರಷ್ಟು ಡಿಎ ಹೆಚ್ಚಳ ನಿರೀಕ್ಷಿಸಬಹುದು.
ತುಟ್ಟಿ ಭತ್ಯೆ(dearness allowance): ಭಾರತದಲ್ಲಿ, ತುಟ್ಟಿಭತ್ಯೆಯು ಒಬ್ಬ ವ್ಯಕ್ತಿಯ ಸಂಬಳದ ಭಾಗವಾಗಿದೆ. ತುಟ್ಟಿಭತ್ಯೆಯನ್ನು ಮೂಲ ಸಂಬಳದ ಶೇಕಡಾವಾರು ಲೆಕ್ಕ ಆಧಾರಿಸಿ ಲೆಕ್ಕಮಾಡಲಾಗುತ್ತದೆ. ನಂತರ, ಈ ಮೊತ್ತವನ್ನು ಮನೆ ಬಾಡಿಗೆ ಭತ್ಯೆಯ ಜೊತೆಗೆ ಮೂಲ ಸಂಬಳಕ್ಕೆ ಸೇರಿಸಿ ಒಟ್ಟು ಸಂಬಳವನ್ನು ಪಡೆಯಲಾಗುತ್ತದೆ.
ತುಟ್ಟಿಭತ್ಯೆ ಹೆಚ್ಚಳ ಮಾಡುವುದು ಹೇಗೆ?
ಕೇಂದ್ರ ಸರ್ಕಾರಿ ನೌಕರರ ಡಿಎ ಪರ್ಸಂಟೇಜ್:
ಅಖಿಲ ಭಾರತ ಗ್ರಾಹಕ ದರ ಸೂಚಿ ಸರಾಸರಿ (ಬೇಸ್ ವರ್ಷ -2001=100)
ಕಳೆದ 12 ತಿಂಗಳಿಗೆ 115.76/115.76X100.
ಸಾರ್ವಜನಿಕ ವಲಯದ ಸಿಬ್ಬಂದಿ ಡಿಎ ಪರ್ಸಂಟೇಜ್:
ಅಖಿಲ ಭಾರತ ಗ್ರಾಹಕ ದರ ಸೂಚಿ ಸರಾಸರಿ (ಬೇಸ್ ವರ್ಷ -2001=100) ಕೊನೆ 3 ತಿಂಗಳಿಗೆ 126.33/126.33X100.
ಬೇಸಿಕ್ ಸಂಬಳ 18,000 ರು
* ಹೊಸ ಡಿಎ (34%) 6120 ರು/ಪ್ರತಿ ತಿಂಗಳು
* ಹಾಲಿ ಡಿಎ (31%) 5580 ರು/ಪ್ರತಿ ತಿಂಗಳು
* ತುಟ್ಟಿಭತ್ಯೆ ಏರಿಕೆ ಎಷ್ಟು: 6120- 5580= 540 ರು/ ಪ್ರತಿ ತಿಂಗಳು
* ವಾರ್ಷಿಕ ಲೆಕ್ಕಾಚಾರದಂತೆ 540 ರು X 12= 6,480 ರು.
ಗರಿಷ್ಠ ಬೇಸಿಕ್ ಸಂಬಳ 56,900 ರು
* ಹೊಸ ಡಿಎ (34%) 19,346 ರು/ಪ್ರತಿ ತಿಂಗಳು
* ಹಾಲಿ ಡಿಎ (31%) 17,639 ರು/ಪ್ರತಿ ತಿಂಗಳು
* ತುಟ್ಟಿಭತ್ಯೆ ಏರಿಕೆ ಎಷ್ಟು: 19346-17639= 1,707 ರು/ ಪ್ರತಿ ತಿಂಗಳು
* ವಾರ್ಷಿಕ ಲೆಕ್ಕಾಚಾರದಂತೆ 1,707 ರು X 12= 20,484 ರು.












Click it and Unblock the Notifications