ಸರ್ಕಾರಿ ನೌಕರರಿಗೆ ಇಷ್ಟು ಪ್ರಮಾಣದಲ್ಲಿ ತುಟ್ಟಿಭತ್ಯೆ ಪರಿಹಾರ ಗ್ಯಾರಂಟಿ!
ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ಮುಂದಾಗಿರುವ ಶುಭ ಸುದ್ದಿ ಸಿಕ್ಕಿದೆ. ಈಗ ತುಟ್ಟಿಭತ್ಯೆ ಪರಿಹಾರ (DA arrear) ಬಾಕಿ ಎಂದಿಗೆ ಸಿಗಬಹುದು ಎಂಬ ನಿರೀಕ್ಷೆಗೆ ಉತ್ತರ ಸಿಕ್ಕಿದೆ. ಕೇಂದ್ರ ಸರ್ಕಾರ ಈ ಬಗ್ಗೆ ನಿರ್ಧಾರ ಕೈಗೊಂಡಿದ್ದು, ಡಿಆರ್ ಬಾಕಿ ಮೊತ್ತ ಪಾವತಿ ಬಗ್ಗೆ ಸುಳಿವು ನೀಡಿದ್ದು, ಹೊಸ ವರ್ಷದಲ್ಲಿ ಸರಿ ಸುಮಾರು 2 ಲಕ್ಷ ರು ನಷ್ಟು ಬಾಕಿಮೊತ್ತ ಸಿಗಲಿದೆ.
ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರವಾಗಲಿದ್ದು, ಬಹುತೇಕ ಇದೇ ಮೊತ್ತಕ್ಕೆ ಸಮ್ಮತಿ ಸಿಗಲಿದೆ ಎಂದು ಅನೇಕ ಮಾಧ್ಯಮಗಳು ವರದಿ ಮಾಡಿವೆ. ಈ ಮೂಲಕ ಕೋವಿಡ್ ಸಾಂಕ್ರಾಮಿಕ ಕಾಲದಲ್ಲಿ ಲಕ್ಷಾಂತರ ಕೇಂದ್ರ ಸರ್ಕಾರಿ ನೌಕರರಿಗೆ ನೆಮ್ಮದಿಯ ಸುದ್ದಿ ಸಿಗುವ ಸಾಧ್ಯತೆಯಿದೆ. 18 ತಿಂಗಳ ತುಟ್ಟಿಭತ್ಯೆ ಬಾಕಿಯ ಬಗ್ಗೆ ಮೋದಿ ಸರ್ಕಾರ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿದೆ.
ತುಟ್ಟಿಭತ್ಯೆ ಪ್ರಸ್ತುತ ಶೇಕಡಾ 31 ರಷ್ಟಿದೆ. ತುಟ್ಟಿಭತ್ಯೆ ಪರಿಹಾರ ಶೇ 3ರಷ್ಟಿದೆ. ಈ ವರ್ಷ ಜುಲೈ ಮೊದಲು, ಇದು 17 ಪ್ರತಿಶತದಷ್ಟಿತ್ತು, ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ಡಿಎ ಶೇ 28ರಿಂದ ಶೇ 31ಕ್ಕೇರಿಕೆಯಾಗಲಿದೆ.

ವೆಚ್ಚ ಇಲಾಖೆಯ ವಾರ್ಷಿಕ ವರದಿಯ ಪ್ರಕಾರ
ವೆಚ್ಚ ಇಲಾಖೆಯ ವಾರ್ಷಿಕ ವರದಿಯ ಪ್ರಕಾರ, ದೇಶದಲ್ಲಿ ಒಟ್ಟು 48 ಲಕ್ಷ ಕೇಂದ್ರ ನೌಕರರು ಮತ್ತು ಸುಮಾರು 68.62 ಲಕ್ಷ ಪಿಂಚಣಿದಾರರಿದ್ದಾರೆ. ಪಿಂಚಣಿದಾರರಿಗೆ ಡಿಆರ್ ನಿಲ್ಲಿಸುವ ನಿರ್ಧಾರ ಸರಿಯಲ್ಲ ಎಂದು ಭಾರತೀಯ ಪಿಂಚಣಿದಾರರ ವೇದಿಕೆ ಅಕ್ಟೋಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿತ್ತು. ಪಿಂಚಣಿದಾರರ ಜೀವನೋಪಾಯಕ್ಕೆ ಹಣ ಬಹಳ ಮುಖ್ಯವಾಗಿದ್ದು, ಅದನ್ನು ನಿಲ್ಲಿಸುವುದು ಪಿಂಚಣಿದಾರರ ಹಿತದೃಷ್ಟಿಯಿಂದ ಸರಿಯಾದ ಕ್ರಮವಲ್ಲ ಎಂದು ಪತ್ರದಲ್ಲಿ ಬರೆಯಲಾಗಿತ್ತು. ಸಂಪುಟ ಕಾರ್ಯದರ್ಶಿಯೊಂದಿಗಿನ ಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಬೇಕಾಗಿದ್ದರೂ, ಪ್ರಧಾನಿ ಮೋದಿ ಬಾಕಿಯಿರುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದು. ಈ ವಿಚಾರದಲ್ಲಿ ಪಿಂಚಣಿದಾರರು ಮಧ್ಯಪ್ರವೇಶಿಸುವಂತೆ ಅವರಿಗೆ ಪತ್ರ ಬರೆದಿದ್ದರು. ಬಾಕಿದಾರರಿಗೆ ಗ್ರೀನ್ ಸಿಗ್ನಲ್ ಸಿಕ್ಕರೆ ನೌಕರರು ಮತ್ತು ಪಿಂಚಣಿದಾರರ ಖಾತೆಗೆ ಭಾರಿ ಮೊತ್ತ ಬರಲಿದೆ.

ತುಟ್ಟಿ ಪರಿಹಾರ ಎಷ್ಟು ಸಿಗಲಿದೆ?
ಜೆಸಿಎಂನ ರಾಷ್ಟ್ರೀಯ ಕೌನ್ಸಿಲ್‌ನ ಶಿವ ಗೋಪಾಲ್ ಮಿಶ್ರಾ ಪ್ರಕಾರ, ಲೆವೆಲ್-1 ನೌಕರರ ಡಿಎ ಬಾಕಿ 11,880 ರೂ.ನಿಂದ 37,554 ರೂ. ಆದರೆ, ಹಂತ-13 ಅಥವಾ ಹಂತ-14ಕ್ಕೆ, ಡಿಎ ಬಾಕಿ ಕ್ರಮವಾಗಿ 1,44,200 ಮತ್ತು 2,18,200 ರೂ ಮೊತ್ತ ಸಿಗಬೇಕಿದೆ. ಕೋವಿಡ್ -19 ಸಾಂಕ್ರಾಮಿಕದಿಂದಾಗಿ ಉದ್ಭವಿಸಿದ ಅಸಾಧಾರಣ ಪರಿಸ್ಥಿತಿಯಿಂದಾಗಿ ಕೇಂದ್ರ ಸರ್ಕಾರಿ ನೌಕರರಿಗೆ ಮೂರು ಹೆಚ್ಚುವರಿ ಕಂತುಗಳ ತುಟ್ಟಿ ಭತ್ಯೆ [ಡಿಎ] ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರವನ್ನು ಸ್ಥಗಿತಗೊಳಿಸಲಾಗಿತ್ತು.

ತುಟ್ಟಿ ಭತ್ಯೆ ಎಂದರೇನು?
ಕೇಂದ್ರ ಸರ್ಕಾರಿ ನೌಕರರ ಡಿಎ ಪರ್ಸಂಟೇಜ್ ತುಟ್ಟಿ ಭತ್ಯೆ(dearness allowance): ಭಾರತದಲ್ಲಿ, ತುಟ್ಟಿಭತ್ಯೆಯು ಒಬ್ಬ ವ್ಯಕ್ತಿಯ ಸಂಬಳದ ಭಾಗವಾಗಿದೆ. ತುಟ್ಟಿಭತ್ಯೆಯನ್ನು ಮೂಲ ಸಂಬಳದ ಶೇಕಡಾವಾರು ಲೆಕ್ಕ ಆಧಾರಿಸಿ ಲೆಕ್ಕಮಾಡಲಾಗುತ್ತದೆ. ನಂತರ, ಈ ಮೊತ್ತವನ್ನು ಮನೆ ಬಾಡಿಗೆ ಭತ್ಯೆಯ ಜೊತೆಗೆ ಮೂಲ ಸಂಬಳಕ್ಕೆ ಸೇರಿಸಿ ಒಟ್ಟು ಸಂಬಳವನ್ನು ಪಡೆಯಲಾಗುತ್ತದೆ.

ತುಟ್ಟಿಭತ್ಯೆ ಹೆಚ್ಚಳ ಲೆಕ್ಕಾಚಾರ
ತುಟ್ಟಿಭತ್ಯೆ ಹೆಚ್ಚಳ ಲೆಕ್ಕಾಚಾರ ಮಾಡುವುದು ಹೇಗೆ? ಕೇಂದ್ರ ಸರ್ಕಾರಿ ನೌಕರರ ಡಿಎ ಪರ್ಸಂಟೇಜ್: ಅಖಿಲ ಭಾರತ ಗ್ರಾಹಕ ದರ ಸೂಚಿ ಸರಾಸರಿ (ಬೇಸ್ ವರ್ಷ -2001=100) ಕಳೆದ 12 ತಿಂಗಳಿಗೆ 115.76/115.76X100.
ಸಾರ್ವಜನಿಕ ವಲಯದ ಸಿಬ್ಬಂದಿ ಡಿಎ ಪರ್ಸಂಟೇಜ್: ಅಖಿಲ ಭಾರತ ಗ್ರಾಹಕ ದರ ಸೂಚಿ ಸರಾಸರಿ (ಬೇಸ್ ವರ್ಷ -2001=100) ಕೊನೆ 3 ತಿಂಗಳಿಗೆ 126.33/126.33X100.
ತುಟ್ಟಿಭತ್ಯೆ ಇತಿಹಾಸ: 2014ರಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನವನ್ನು ಶೇಕಡಾ 14ರಷ್ಟು ಏರಿಕೆ ಮಾಡಲಾಗಿತ್ತು. ಆದರೆ, ಸರ್ಕಾರಿ ನೌಕರರು ಇದಕ್ಕೆ ತೃಪ್ತಿ ವ್ಯಕ್ತಪಡಿಸಿರಲಿಲ್ಲ. ಅಂದಿನ ಇಂದಿನವರೆಗೂ(ಈಗ ದರ ಶೇ 31ಕ್ಕೇರಿದೆ) ಬೇಡಿಕೆ ಮುಂದಿಡಲಾಗುತ್ತಿದೆ. ಇದರ ಜತೆಗೆ ಈಗ ನಿವೃತ್ತಿ ವಯಸ್ಸು 62ಕ್ಕೇರಿಸಿದರೆ 1.1 ಕೋಟಿ ಮಂದಿಗೆ ಲಾಭವಾಗಲಿದೆ ಎಂದು ವಾದಿಸುತ್ತಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications