ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪ ಸಂಪುಟ ಸೇರಿದ ಶಶಿಕಲಾ ಜೊಲ್ಲೆ ಪರಿಚಯ

|
Google Oneindia Kannada News

Recommended Video

Cabinet Expansion : ನಿಪ್ಪಾಣಿ ಬಿಜೆಪಿ ಶಾಸಕಿ ಶಶಿಕಲಾ ಜೊಲ್ಲೆ ಪರಿಚಯ | Oneindia Kannada

ಬೆಂಗಳೂರು, ಆಗಸ್ಟ್ 20 : ಬೆಳಗಾವಿ ಜಿಲ್ಲೆ ಮತ್ತು ಉತ್ತರ ಕರ್ನಾಟಕ ಭಾಗದಿಂದ ಬಿಜೆಪಿ ಶಾಸಕಿಯಾಗಿ ಆಯ್ಕೆಯಾಗಿರುವ ಏಕೈಕ ಮಹಿಳೆ ಶಶಿಕಲಾ ಜೊಲ್ಲೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆ ಮಾಡಿದ್ದು, ಶಶಿಕಲಾ ಜೊಲ್ಲೆ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ.

49 ವರ್ಷದ ಶಶಿಕಾಲ ಅಣ್ಣಾ ಸಾಹೇಬ್ ಜೊಲ್ಲೆ ಮೂಲತಃ ಲಿಂಗಾಯತ ಸಮುದಾಯಕ್ಕೆ ಸೇರಿದವರು. ಮೂರು ಬಾರಿ ಚುನಾವಣೆ ಎದುರಿಸಿ, ಎರಡು ಬಾರಿ ಗೆದ್ದಿರುವ ಶಶಿಕಲಾ ಅವರು ಯಡಿಯೂರಪ್ಪ ಸಂಪುಟದಲ್ಲಿರುವ ಏಕೈಕ ಮಹಿಳಾ ಸಚಿವೆ.

ಕೈ ತಪ್ಪಿದ ಸಚಿವ ಸ್ಥಾನ : ಯಾರು, ಏನು ಹೇಳಿದರು?ಕೈ ತಪ್ಪಿದ ಸಚಿವ ಸ್ಥಾನ : ಯಾರು, ಏನು ಹೇಳಿದರು?

ಕರ್ನಾಟಕ-ಬೆಳಗಾವಿ ಗಡಿ ಭಾಗದ ನಿಪ್ಪಾಣಿ, ಚಿಕ್ಕೋಡಿಯಲ್ಲಿ ಶೈಕ್ಷಣಿಕ ಸಂಸ್ಥೆಗಳು, ಸಹಕಾರಿ ಬ್ಯಾಂಕ್‌ಗಳನ್ನು ಹೊಂದಿದ್ದಾರೆ. ಪಿಯುಸಿ ವ್ಯಾಸಂಗ ಮಾಡಿರುವ ಶಶಿಕಲಾ ಜೊಲ್ಲೆ ಅವರು, ಬಿಜೆಪಿಯ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ.

Nippani BJP MLA Shashikala Jolle Profile

2008ರಲ್ಲಿ ಮೊದಲ ಬಾರಿಗೆ ಚುನಾವಣಾ ಕಣಕ್ಕಿಳಿದ ಶಶಿಕಲಾ ಜೊಲ್ಲೆ 38, 585 ಮತಗಳನ್ನು ಪಡೆದು ಸೋತರು. 2013ರಲ್ಲಿ ನಿಪ್ಪಾಣಿ ಕ್ಷೇತ್ರದಲ್ಲಿ 81, 860 ಮತಗಳನ್ನು ಪಡೆದು ಕಾಂಗ್ರೆಸ್‌ನ ಪಾಂಡುರಂಗ ಪಾಟೀಲ್ ಸೋಲಿಸಿ ಮೊದಲ ಬಾರಿಗೆ ಶಾಸಕಿಯಾದರು.

Live Updates : ಯಡಿಯೂರಪ್ಪ ಸಂಪುಟ ಸೇರಿದ 17 ಶಾಸಕರುLive Updates : ಯಡಿಯೂರಪ್ಪ ಸಂಪುಟ ಸೇರಿದ 17 ಶಾಸಕರು

2018ರ ವಿಧಾನಸಭೆ ಚುನಾವಣೆಯಲ್ಲಿಯೂ ಪಕ್ಷ ಟಿಕೆಟ್ ನೀಡಿತು. 87, 006 ಮತಗಳನ್ನು ಪಡೆದು 2ನೇ ಬಾರಿಗೆ ಶಾಸಕಿಯಾದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದಾರೆ.

ಯಡಿಯೂರಪ್ಪ ಆಂಡ್ ಟೀಂ: ಸಂಪುಟ ವಿಸ್ತರಣೆ ಸಂತಸದ ಚಿತ್ರಗಳು

ಪತಿ ಸಂಸದರು : ಶಶಿಕಲಾ ಜೊಲ್ಲೆ ಅವರ ಪತಿ ಅಣ್ಣಾ ಸಾಹೇಬ್ ಜೊಲ್ಲೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ 2019ರ ಚುನಾವಣೆಯಲ್ಲಿ ಗೆದ್ದು ಸಂಸತ್ ಪ್ರವೇಶ ಮಾಡಿದ್ದಾರೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಶಶಿಕಲಾ ಜೊಲ್ಲೆಗೆ ನಿಪ್ಪಾಣಿಯಲ್ಲಿ, ಅಣ್ಣಾ ಸಾಹೇಬ್‌ ಜೊಲ್ಲೆಗೆ ಚಿಕ್ಕೋಡಿ-ಸದಲಗಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ನೀಡಿತ್ತು. ಪತಿ-ಪತ್ನಿ ಇಬ್ಬರೂ ಚುನಾವಣಾ ಕಣದಲ್ಲಿದ್ದರು. ಆದರೆ, ಅಣ್ಣಾ ಸಾಹೇಬ್ ಜೊಲ್ಲೆ ಸೋಲು ಕಂಡಿದ್ದರು.

English summary
Nippani BJP MLA Shashikala Jolle profile. Shashikala Jolle joined Chief Minister B.S.Yediyurappa cabinet. Shashikala Jolle only one women minister in cabinet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X