• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ನಮ್ಮದೀಗ ನಮ್ಮತನವಲ್ಲದ ಬೊಂಬೆಯಾಟದ ಬದುಕು!

|

ಈಗೀಗ ಮನುಷ್ಯನ ಬದುಕು ಕೃತಕವಾಗುತ್ತಿರುವಂತೆ ಭಾಸವಾಗುತ್ತಿದೆ. ಭೇಟಿ, ಸಂಪರ್ಕ, ಮಾತುಕತೆ ಎಲ್ಲದರಲ್ಲೂ ವ್ಯವಹಾರಿಕತೆ ಎದ್ದು ಕಾಣುತ್ತಿದೆ. ಆತ್ಮೀಯತೆ ದೂರವಾಗಿ ಅವಕಾಶವಾದಿತನ ಹೆಚ್ಚುತ್ತಿದ್ದು, ನಮ್ಮಲ್ಲಿನ ಸ್ವಾಭಾವಿಕತೆ ಸದ್ದಿಲ್ಲದೆ ದೂರ ಸರಿಯುತ್ತಿದೆ. ಊಟ, ತಿಂಡಿಯಿಂದ ಆರಂಭವಾಗಿ ಕೆಲಸಕಾರ್ಯ, ರಾತ್ರಿ ನಿದ್ದೆ ಮಾಡುವವರೆಗೆ ನಮ್ಮಲ್ಲಿ ಕೃತಕತೆ ಕಾಣುತ್ತಿದೆ.

ನಮ್ಮ ಬದುಕಿನ ಹೆಚ್ಚಿನ ಕ್ಷಣಗಳನ್ನು ಮತ್ತೊಬ್ಬರಿಗೆ ಮೀಸಲಿಟ್ಟಿದ್ದೇವೆ. ಹೀಗೆಯೇ ಆಗಬೇಕೆಂಬ ಅಣತಿಯಂತೆ ನಮ್ಮ ಬದುಕನ್ನು ಸಾಗಿಸುತ್ತಿದ್ದೇವೆ. ನಮ್ಮದು ಅಂತ ಹೇಳುವುದಕ್ಕೂ ನಮ್ಮಲ್ಲಿ ಸಮಯ ಇಲ್ಲದಾಗಿದೆ. ಮಾಡುವ ಊಟದಿಂದ ನಿದ್ದೆವರೆಗೂ ಮತ್ಯಾರನ್ನೋ ಅವಲಂಬಿಸಿದ್ದೇವೆ.

ಒತ್ತಡದ ಬದುಕಿನಲ್ಲಿ ಮನಸ್ಸನ್ನು ಆರೋಗ್ಯವಾಗಿಡುವುದು ಹೇಗೆ?

ಹೀಗಾಗಿ ನಮ್ಮತನ ಮಾಯವಾಗಿ ಮತ್ಯಾರೋ ಕೈಯ್ಯಲ್ಲಿ ಆಡುವ ಬೊಂಬೆಗಳಾಗುತ್ತಿದ್ದೇವೆ. ಮಾತನಾಡುವಾಗಲೂ ನಮ್ಮಲ್ಲಿ ಗಂಭೀರತೆ ಇಲ್ಲ. ನಮ್ಮ ಮುಂದಿರುವ ವ್ಯಕ್ತಿ ಜತೆ ಮುಖಕೊಟ್ಟು ಮಾತನಾಡುವ ವ್ಯವಧಾನ ನಮಗಿಲ್ಲ. ಆತ ಮಾತನಾಡುತ್ತಿದ್ದರೆ ಅದನ್ನು ಕೇಳುವ ತಾಳ್ಮೆಯಿಲ್ಲ.

ಮೊಬೈಲ್‌ನಲ್ಲಿ ಮೆಸೇಜ್ ಓದುತ್ತಲೋ, ಮತ್ತೇನನ್ನೋ ಮಾಡುತ್ತಿರುತ್ತೇವೆ. ಎದುರಿಗಿನ ವ್ಯಕ್ತಿಯೊಂದಿಗೆ ಸ್ನೇಹಪೂರ್ವಕವಾಗಿ ಮಾತನಾಡುವ ಸೌಜನ್ಯವೂ ಇಲ್ಲದಾಗಿದೆ. ಇನ್ನು ಆರೋಗ್ಯಪೂರ್ಣ ಆಹಾರ ನಮಗೆ ಬೇಕಾಗಿಲ್ಲ. ಬದಲಿಗೆ ನೋಡಲು ಸುಂದರ ಮತ್ತು ಬಾಯಿಗೆ ರುಚಿಯಿದ್ದರೆ ಸಾಕು. ಅದನ್ನು ಚಪ್ಪರಿಸಿ ತಿನ್ನುತ್ತೇವೆ.

ಬಯಕೆಯಿಲ್ಲದ ಮನುಷ್ಯ ಮನುಷ್ಯನೇ ಅಲ್ಲ, ಅದಕ್ಕೆ ಅಂತ್ಯವೂ ಇಲ್ಲ...

ಕಷ್ಟಪಟ್ಟು ಅಡುಗೆ ಮಾಡಿ ಅದನ್ನು ಸವಿದು ನೆಮ್ಮದಿಯಿಂದ ಕುಳಿತು ಸುಧಾರಿಸಿಕೊಳ್ಳಲು ಪುರುಸೊತ್ತಿಲ್ಲ. ಇನ್ನು ಜಂಜಾಟದ ನಡುವೆ ಸಂಬಂಧಿಕರನ್ನು ಕರೆದು ಊಟ ಹಾಕಿ ಉಪಚರಿಸುವ ಉದಾರತೆ ಅಂತು ಇಲ್ಲವೇ ಇಲ್ಲವಾಗಿದೆ. ಪೂರ್ವಜರು ಅತಿಥಿ ದೇವೋಭವ ಎಂದು ರಸ್ತೆಯಲ್ಲಿ ಹೋಗುತ್ತಿದ್ದವರನ್ನು ಕರೆದು ಉಪಚರಿಸಿ ಕಳುಹಿಸುತ್ತಿದ್ದರು.

ಅವತ್ತಿನ ದಿನದಲ್ಲಿ ಹಸಿದ ಹೊಟ್ಟೆಗೆ ಅನ್ನ ಹಾಕಿದರೆ ಪುಣ್ಯ ಬರುತ್ತೆ ಎಂದು ನಂಬಿದ್ದರು. ಆದರೆ ಈಗ ಅದು ಸಾಧ್ಯವಿಲ್ಲ ಬಿಡಿ. ಹೆತ್ತವರಿಗೆ ಊಟ ಹಾಕುವುದೇ ದುಸ್ತರ ಎನ್ನುವ ಪರಿಸ್ಥಿತಿಗೆ ಬಂದು ಬಿಟ್ಟಿದ್ದೇವೆ. ಬದಲಾದ ಕಾಲದಲ್ಲಿ ಎಲ್ಲವನ್ನು ಹಣದಿಂದಲೇ ಅಳೆಯುವುದರಿಂದಾಗಿ ಹಣದ ಸಂಪಾದನೆಗೆ ಬಿದ್ದ ಜನ ನೈತಿಕತೆಯನ್ನು ಮರೆತು ಅನೈತಿಕ ಹಾದಿ ಹಿಡಿಯುತ್ತಿದ್ದಾರೆ. ಮೋಸ, ಸುಲಿಗೆ, ವಂಚನೆ ಹೆಚ್ಚಾಗಿದೆ. ಯಾರನ್ನೂ ನಂಬಲಾರದ ಸ್ಥಿತಿಗೆ ಬಂದು ನಿಂತಿದ್ದೇವೆ.

ಉಪಾಸನೆಯಂತೆ, ಪೂಜೆಯಂತೆ ಕೆಲಸ ಮಾಡಿದಾಗ ಮಾತ್ರ ಒಳ್ಳೆಯ ಫಲ

ಇದರಿಂದ ಅತಿಥಿ ದೇವೋಭವ ಹೋಗಿದೆ. ಮನೆಗೆ ಕಾಂಪೌಂಡ್ ನಿರ್ಮಿಸಿ ಸಂಬಂಧಗಳಿಂದ ದೂರವಾಗಿ ನಮ್ಮೊಳಗೆ ಬಂಧಿಯಾಗಿದ್ದೇವೆ. ಮನೆಗೆ ಕರೆದು ಉಪಚರಿಸಲು ಇಷ್ಟವಿಲ್ಲ. ಅಷ್ಟಕ್ಕೂ ಎಲ್ಲರೂ ದುಡಿಮೆಯಲ್ಲೇ ಇರುವುದರಿಂದ ಉಪಚರಿಸಲು ಸಮಯವೂ ಇಲ್ಲವಾಗಿದೆ. ಆದ್ದರಿಂದ ಮನೆ ಮುಂದೆ ನಾಯಿಗಳಿವೆ ಎಚ್ಚರಿಕೆ ಎಂಬ ನಾಮಫಲಕ ತೂಗು ಹಾಕುತ್ತಿದ್ದೇವೆ.

ಒಟ್ಟಾರೆ ಹೇಳಬೇಕೆಂದರೆ ನಾವು ಬೆಳಗ್ಗೆಯಿಂದ ಸಂಜೆವರೆಗೆ ನೂರೆಂಟು ಜವಾಬ್ದಾರಿಗಳನ್ನು ಹೊತ್ತುಕೊಂಡು ನೆಮ್ಮದಿಯಾಗಿ ತಿಂಡಿ, ಊಟ, ನಿದ್ದೆ ಮಾಡದೆ ಒದ್ದಾಡುತ್ತಿದ್ದೇವೆ. ಹಣ ಸಂಪಾದಿಸಿದರೆ ಸಾಕು. ಅದರಿಂದ ಎಲ್ಲವನ್ನೂ ಪಡೆದುಕೊಳ್ಳಬಹುದು ಎಂಬ ಕೆಟ್ಟ ಮನೋಭಾವ ನಮ್ಮಲ್ಲಿ ಬಂದು ಬಿಟ್ಟಿದೆ.

ಆದ್ದರಿಂದ ಹೇಗಾದರು ಆಗಲಿ ಹಣ ಸಂಪಾದಿಸಲೇ ಬೇಕು ಎಂಬ ಹಠಕ್ಕೆ ಬಿದ್ದಿರುವ ನಾವು ಅದರಲ್ಲಿ ಮಗ್ನರಾಗುತ್ತಿದ್ದೇವೆ. ಪರಿಣಾಮ ನಮ್ಮಲ್ಲಿನ ಸ್ವಾಭಾವಿಕತೆ ಮರೆಯಾಗುತ್ತಿದೆ. ನಾವು ಬೊಂಬೆಗಳಾಗುತ್ತಿದ್ದೇವೆ. ನಮಗೆ ಗೊತ್ತಿದೆ. ನಮ್ಮ ಬದುಕು ಶಾಶ್ವತವಲ್ಲ ಕೇವಲ ಮೂರು ದಿನವಷ್ಟೆ.

ಅದರಲ್ಲಿ ಹೆಚ್ಚಿನ ಸಮಯವನ್ನು ನಾವು ದುಡಿಯುವುದರಲ್ಲಿ, ಸಂಸಾರದ ಜಂಜಾಟದಲ್ಲಿ ಕಳೆದು ಬಿಡುತ್ತೇವೆ. ನಮ್ಮದು ಅಂಥ ಇಲ್ಲಿ ಯಾವುದೂ ಇಲ್ಲ. ಆದರೂ ನಾನು, ನನ್ನದು ಎಂಬ ಭ್ರಮೆಯಲ್ಲಿ ಓಡಾಡುತ್ತೇವೆ. ಭೂಮಿ ಮೇಲೆ ಜನ್ಮ ತಾಳಿರುವ ಕೋಟ್ಯಂತರ ಜೀವಿಗಳಲ್ಲಿ ಮಾನವ ಜನ್ಮ ಶ್ರೇಷ್ಠ ಎನ್ನುತ್ತಾರೆ.

ಹೀಗಿರುವಾಗ ಹುಟ್ಟಿದಕ್ಕೆ ಸಾರ್ಥಕವಾಗುವ, ನಾವು ಎದ್ದು ಹೋದ ಮೇಲೆಯೂ ನಮ್ಮ ಬಗ್ಗೆ ಒಂದಷ್ಟು ಒಳ್ಳೆಯ ಮಾತುಗಳನ್ನಾಡುವ ಕೆಲಸ ಮಾಡಿ ಹೋಗೋಣ. ಅದು ಸಾಧ್ಯವಿಲ್ಲ ಎನ್ನುವುದಾದರೆ, ತೆಪ್ಪಗಿರೋಣ ಉಪದ್ರವಿಯಾಗುವುದಂತು ಬೇಡವೇ ಬೇಡ...

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Now the life of man feels like artificial. Dearness is far away. Opportunity is increasing. Here's a detailed article about this.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more