ನೂತನ ಸಚಿವರು ಎಲ್ಲಿ, ಯಾವ ಕೊಠಡಿಗಳಲ್ಲಿ ಸಿಗುತ್ತಾರೆ?
ಬೆಂಗಳೂರು, ಫೆಬ್ರವರಿ 6: ಗುರುವಾರ ನೂತನವಾಗಿ ಪ್ರಮಾಣವಚನ ಸ್ವೀಕರಿಸಿದ ಹತ್ತು ಸಚಿವರಿಗೆ ವಿಧಾನಸೌಧ ಮತ್ತು ವಿಕಾಸ ಸೌಧಗಳಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ. ಆರು ಮಂದಿ ಹೊಸ ಸಚಿವರಿಗೆ ವಿಧಾನಸೌಧದಲ್ಲಿ ಕೊಠಡಿ ನೀಡಲಾಗಿದ್ದರೆ, ಇನ್ನು ನಾಲ್ವರಿಗೆ ವಿಕಾಸ ಸೌಧದಲ್ಲಿ ಕಚೇರಿ ಕೊಠಡಿ ಕೊಡಲಾಗಿದೆ.
ರಾಜ್ಯಪಾಲ ವಜೂಬಾಯಿ ವಾಲಾ ಅವರ ಆದೇಶಕ್ಕೆ ಅನುಸಾರವಾಗಿ ನೂತನ ಸಚಿವರಿಗೆ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಸರ್ಕಾರದ ಉಪ ಕಾರ್ಯದರ್ಶಿ ಎಚ್.ಎಸ್. ಚನ್ನಬಸಪ್ಪ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ಆಗಸ್ಟ್‌ನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದ 17 ಕ್ಯಾಬಿನೆಟ್ ಸಚಿವರಿಗೆ ವಿಧಾನಸೌಧ ಮತ್ತು ವಿಕಾಸ ಸೌಧಗಳಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಲಾಗಿತ್ತು. ಈಗ ನೂತನ ಸಚಿವರು ಅವರ ಅಕ್ಕಪಕ್ಕದ ಕೊಠಡಿಗಳನ್ನು ಪಡೆದುಕೊಂಡಿದ್ದಾರೆ.
ಸಚಿವ ರಮೇಶ್ ಜಾರಕಿಹೊಳಿ ಅವರು ವಿಧಾನಸೌಧದ ಕೊಠಡಿ ಸಂಖ್ಯೆ 336ಅನ್ನು ನೀಡುವಂತೆ ಪಟ್ಟು ಹಿಡಿದಿದ್ದರು. ಆದರೆ ಈಗಾಗಲೇ ಆ ಕೊಠಡಿಯನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಹದೇವ ಪ್ರಕಾಶ್ ಅವರಿಗೆ ನೀಡಲಾಗಿರುವುದರಿಂದ, ರಮೇಶ್ ಜಾರಕಿಹೊಳಿ ಅವರಿಗೆ 342 ಮತ್ತು 342ಎ ಸಂಖ್ಯೆಯ ಕೊಠಡಿಗಳನ್ನು ನೀಡಲಾಗಿದೆ.

ಜಾರಕಿಹೊಳಿಗೆ ಸಿಗದ ಡಿಕೆಶಿ ಕೊಠಡಿ
ತಮ್ಮ ಪ್ರಬಲ ಎದುರಾಳಿ ಡಿ.ಕೆ. ಶಿವಕುಮಾರ್ ಅವರ ಕೊಠಡಿಯಲ್ಲಿ ಕೂರುವ ಬೆಳಗಾವಿ ಸಾಹುಕಾರ್ ಕನಸು ಈಡೇರಿಲ್ಲ. ಡಿ.ಕೆ. ಶಿವಕುಮಾರ್ ನಿರ್ವಹಿಸಿದ್ದ ಜಲಸಂಪನ್ಮೂಲ ಖಾತೆಯ ಮೇಲೆ ಕಣ್ಣಿಟ್ಟಿರುವ ರಮೇಶ್ ಜಾರಕಿಹೊಳಿ ಅವರಿಗೆ ಬಯಸಿದ ಖಾತೆ ಸಿಕ್ಕರೆ ತಮ್ಮ ಯುದ್ಧದಲ್ಲಿ ಒಂದನ್ನು ಗೆದ್ದಂತಾಗಲಿದೆ. ಹಾಗೆಯೇ ಡಿ.ಕೆ. ಶಿವಕುಮಾರ್ ಸಚಿವರಾಗಿದ್ದಾಗ ವಾಸಿಸುತ್ತಿದ್ದ ಸರ್ಕಾರಿ ಬಂಗಲೆ ಕೂಡ ಅವರಿಗೆ ಸಿಗಲಿದೆಯೇ ಎಂದು ಕಾದುನೋಡಬೇಕು.

ಯಡಿಯೂರಪ್ಪ ಕೊಠಡಿ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಧಾಸೌಧದ 323 ಎ ಕೊಠಡಿಯಲ್ಲಿರುತ್ತಾರೆ. ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ 340A, 341, ಡಾ. ಅಶ್ವತ್ಥ್ ನಾರಾಯಣ್ ವಿಕಾಸಸೌಧದ 242, 243 ಮತ್ತು ಲಕ್ಷ್ಮಣ ಸವದಿ ಅವರಿಗೆ ವಿಕಾಸಸೌಧದ 344, 345 ಕೊಠಡಿಗಳನ್ನು ಹಂಚಲಾಗಿದೆ.

ವಿಧಾನಸೌಧದಲ್ಲಿ ಯಾರು?
ರಮೇಶ್ ಜಾರಕಿಹೊಳಿ, ಶಿವರಾಂ ಹೆಬ್ಬಾರ್, ಕೆ. ಸುಧಾಕರ್, ಶ್ರೀಮಂತ್ ಪಾಟೀಲ್, ಬೈರತಿ ಬಸವರಾಜ್ ಮತ್ತು ಕೆ. ಗೋಪಾಲಯ್ಯ ಅವರಿಗೆ ವಿಧಾನಸೌಧದಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ. ಖಾತೆ ಹಂಚಿಕೆಯಾದ ಬಳಿಕ ಈ ಕೋಠಡಿಗಳಿಗೆ ಅವರ ಖಾತೆಯ ನಾಮಫಲಕ ಅಳವಡಿಕೆಯಾಗಲಿದೆ.

ವಿಕಾಸಸೌಧದಲ್ಲಿ ಯಾರು?
ನಾಲ್ವರು ಸಚಿವರಾದ ಎಸ್‌ಟಿ ಸೋಮಶೇಖರ್, ಬಿ.ಸಿ. ಪಾಟೀಲ್, ಆನಂದ್ ಸಿಂಗ್ ಮತ್ತು ಕೆ.ಸಿ. ನಾರಾಯಣ ಗೌಡ ಅವರಿಗೆ ವಿಧಾನಸೌಧದ ಪಕ್ಕದಲ್ಲಿರುವ ವಿಕಾಸಸೌಧದಲ್ಲಿ ಕೊಠಡಿಗಳನ್ನು ಹಂಚಲಾಗಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ










Click it and Unblock the Notifications