ಒಂದು ವರ್ಷದ ಕಥೆ: ಭಾರತದಲ್ಲೇ ಕೊರೊನಾ ಮೊದಲ ಸಾವು ಸಂಭವಿಸಿದ್ದೆಲ್ಲಿ?

ಕಲಬುರಗಿ, ಮಾರ್ಚ್.10: ಭಾರತದಲ್ಲಿ ಕೊರೊನಾವೈರಸ್ ಸೋಂಕಿನಿಂದ ಈವರೆಗೂ 1,58,063 ಸೋಂಕಿತರು ಪ್ರಾಣ ಬಿಟ್ಟಿದ್ದಾರೆ. ಈ ಪೈಕಿ ಕೊವಿಡ್-19 ಸೋಂಕಿಗೆ ಬಲಿಯಾದ ವ್ಯಕ್ತಿ ಕರ್ನಾಟಕ ಮೂಲದವರು. ಅದರಲ್ಲೂ ಉತ್ತರ ಕರ್ನಾಟಕದ ಕಲಬುರಗಿ ಜಿಲ್ಲೆಯವರು.

ಹೌದು. ಜಗತ್ತಿನಾದ್ಯಂತ ಜನರ ಎದೆಯಲ್ಲಿ ನಡುಕ ಹುಟ್ಟಿಸಿರುವ ಕೊವಿಡ್-19 ಸೋಂಕಿನ ಭೀತಿ ಮೊದಲು ಕಲಬುರಗಿ ಜಿಲ್ಲೆಯಲ್ಲಿ ಹುಟ್ಟಿಕೊಂಡಿತ್ತು. ಸೌದಿ ಅರೇಬಿಯಾದಿಂದ ಜಿಲ್ಲೆಗೆ ಆಗಮಿಸಿದ 76 ವರ್ಷದ ವ್ಯಕ್ತಿಯು ಕೊರೊನಾವೈರಸ್ ಸೋಂಕಿಗೆ ಬಲಿಯಾಗಿದ್ದರು. ಈ ಘಟನೆ ನಡೆದು ಇಂದಿಗೆ ಒಂದು ವರ್ಷ ಪೂರ್ತಿಯಾಗಿದೆ.

ಕಳೆದ 2020ರ ಮಾರ್ಚ್.12ರಂದು ಮೊದಲ ಬಾರಿಗೆ ಕೊರೊನಾವೈರಸ್ ಸೋಂಕಿನಿಂದ ದೇಶದಲ್ಲಿ ಮೊದಲ ವ್ಯಕ್ತಿ ಸಾವನ್ನಪ್ಪಿರುವ ಘಟನೆ ವರದಿಯಾಯಿತು. ಅಂದು ಜಿಲ್ಲೆಯಲ್ಲಿ ನಡೆದ ಘಟನೆ ಇಡೀ ದೇಶಾದ್ಯಂತ ಸುದ್ದಿಯಾಗಿತ್ತು. ಜಿಲ್ಲೆಯ ಜನರ ಎದೆಯಲ್ಲಿ ನಡುಕ ಹುಟ್ಟಿತ್ತು. ಭಾರತದಲ್ಲೇ ಮೊದಲ ಬಾರಿಗೆ ಕೊವಿಡ್-19 ಶಿಷ್ಟಾಚಾರಗಳ ಪಾಲನೆ ಈ ಜಿಲ್ಲೆಯಿಂದಲೇ ಆರಂಭವಾಯಿತು. ಅದೇ ಕಲಬುರಗಿ ಜಿಲ್ಲೆಯಲ್ಲಿ ಇಂದು ಕೊರೊನಾವೈರಸ್ ಭೀತಿ ಮತ್ತು ನಿಯಮಗಳ ಪಾಲನೆಯ ರೀತಿ ನೀತಿ ಹೇಗಿದೆ ಎನ್ನುವುದರ ಕುರಿತು ಒಂದು ವಿಶೇಷ ವರದಿ ಇಲ್ಲಿದೆ ನೋಡಿ.

ಕಲಬುರಗಿಯಲ್ಲೇ ಮೊದಲು ಕೊರೊನಾ ಶಿಷ್ಟಾಚಾರ ಜಾರಿ

ಕಲಬುರಗಿಯಲ್ಲೇ ಮೊದಲು ಕೊರೊನಾ ಶಿಷ್ಟಾಚಾರ ಜಾರಿ

ಕೊರೊನಾವೈರಸ್ ಸೋಂಕಿನಿಂದ 76 ವರ್ಷದ ವೃದ್ಧ ಮೃತಪಟ್ಟಿರುವುದು ಗೊತ್ತಾಗುತ್ತಿದ್ದಂತೆ ಕಲಬುರಗಿ ಜಿಲ್ಲಾಡಳಿತವು ತೀವ್ರ ಮುನ್ನೆಚ್ಚರಿಕೆ ವಹಿಸಿತು. ಜಿಲ್ಲೆಯಲ್ಲೇ ಮೊದಲು ಕೊವಿಡ್-19 ಶಿಷ್ಟಾಚಾರ ಮತ್ತು ನಿಯಮಗಳನ್ನು ಜಾರಿಗೊಳಿಸಲಾಯಿತು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಮತ್ತು ಕೈಗಳನ್ನು ಆಗಾಗ ತೊಳೆಯುವುದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

ಕಲಬುರಗಿಯಲ್ಲಿ ಕೊವಿಡ್-19 ಸೋಂಕಿಗೆ ಕಡಿವಾಣ

ಕಲಬುರಗಿಯಲ್ಲಿ ಕೊವಿಡ್-19 ಸೋಂಕಿಗೆ ಕಡಿವಾಣ

ಕಲಬುರಗಿ ಜಿಲ್ಲೆಯಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ಇಳಿಮುಖವಾಗಿದೆ. ಸೋಂಕು ಹರಡುವಿಕೆಯನ್ನು ನಿಯಂತ್ರಿಸಲಾಗಿದೆ. ಎರಡು ದಿನಗಳ ಹಿಂದೆ ಕೊವಿಡ್-19 ಸೋಂಕಿನಿಂದ ಒಬ್ಬರು ಪ್ರಾಣ ಬಿಟ್ಟಿದ್ದರು. ಅಲ್ಲಿಂದ ಇಲ್ಲಿಯವರೆಗೂ ಯಾವುದೇ ಸಾವಿನ ಪ್ರಕರಣಗಳು ವರದಿಯಾಗಿಲ್ಲ ಎಂದು ಜಿಲ್ಲಾಧಿಕಾರಿ ಡಾ. ರಾಜಶೇಖರ್ ಮಾಲಿ ಹೇಳಿದ್ದಾರೆ. ಇನ್ನು, ಜಿಲ್ಲೆಯಲ್ಲಿ ವರದಿಯಾಗಿರುವ ಹೊಸ ಸೋಂಕಿತ ಪ್ರಕರಣಗಳಿಗೆ ಮಹಾರಾಷ್ಟ್ರದ ನಂಟು ಇರುವುದಾಗಿ ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

ಕಲಬುರಗಿಯಲ್ಲಿ ಕೊವಿಡ್-19 ಅಂಕಿ-ಸಂಖ್ಯೆಗಳು

ಕಲಬುರಗಿಯಲ್ಲಿ ಕೊವಿಡ್-19 ಅಂಕಿ-ಸಂಖ್ಯೆಗಳು

ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಲಬುರಗಿ ಜಿಲ್ಲಾಡಳಿತವು ಮಾಹಿತಿ ನೀಡಿದೆ. ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ಜಿಲ್ಲೆಯಲ್ಲಿ ಒಂದು ದಿನದಲ್ಲಿ 25 ಹೊಸ ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 22,208ಕ್ಕೆ ಏರಿಕೆಯಾಗಿದೆ. 24 ಗಂಟೆಗಳಲ್ಲಿ 17 ಮಂದಿ ಸೋಂಕಿತರು ಗುಣಮುಖರಾಗಿದ್ದು, ಈವರೆಗೂ 21665 ಸೋಂಕಿತರು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ 213 ಸಕ್ರಿಯ ಪ್ರಕರಣಗಳಿರುವುದು ವರದಿಯಾಗಿದೆ.

ಕಲಬುರಗಿಯಲ್ಲಿ ಕಂಟೇನ್ಮೆಂಟ್ ಝೋನ್ ಗಳಿಲ್ಲ ಎಂದು ಮಾಹಿತಿ

ಕಲಬುರಗಿಯಲ್ಲಿ ಕಂಟೇನ್ಮೆಂಟ್ ಝೋನ್ ಗಳಿಲ್ಲ ಎಂದು ಮಾಹಿತಿ

ಕಲಬುರಗಿಯಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ಪ್ರಮಾಣ ತಗ್ಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆ ಜಿಲ್ಲೆಯಲ್ಲಿ ಯಾವುದೇ ಕಂಟೇನ್ಮೆಂಟ್ ಝೋನ್ ಗಳಿಲ್ಲ. ಜಿಲ್ಲೆಯಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದೆ. ಜಿಲ್ಲೆಯಲ್ಲಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟವರ ಸಂಖ್ಯೆ ಸಂಪೂರ್ಣ ಶೂನ್ಯವಾಗಿದೆ. ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಇಳಿಮುಖವಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ರಾಜಶೇಖರ್ ಮಾಲಿ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣ

ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣ

ಬೆಂಗಳೂರಿನಲ್ಲಿ ಒಂದೇ ದಿನ 363 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಒಂದೇ ದಿನ 590 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 956041ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 6 ಮಂದಿ ಕೊವಿಡ್-19 ಸೋಂಕಿಗೆ ಬಲಿಯಾಗಿದ್ದು, ಈವರೆಗೂ 12373 ಜನರು ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ.

ಕರ್ನಾಟಕದಲ್ಲಿ ಒಂದು ದಿನದಲ್ಲಿ 366 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 936616 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 7033 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ.

ರಾಜ್ಯದ ಯಾವ ಜಿಲ್ಲೆಯಲ್ಲಿ ಎಷ್ಟು ಕೊವಿಡ್-19 ಕೇಸ್?

ರಾಜ್ಯದ ಯಾವ ಜಿಲ್ಲೆಯಲ್ಲಿ ಎಷ್ಟು ಕೊವಿಡ್-19 ಕೇಸ್?

ರಾಜ್ಯದಲ್ಲಿ ಒಟ್ಟು 590 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 3, ಬಳ್ಳಾರಿ 26, ಬೆಳಗಾವಿ 15, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು 363, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 11, ಚಿಕ್ಕಮಗಳೂರು 2, ಚಿತ್ರದುರ್ಗ 5, ದಕ್ಷಿಣ ಕನ್ನಡ 11, ದಾವಣಗೆರೆ 1, ಧಾರವಾಡ 7, ಗದಗ 4, ಹಾಸನ 8, ಹಾವೇರಿ 0, ಕಲಬುರಗಿ 25, ಕೊಡಗು 1, ಕೋಲಾರ 1, ಕೊಪ್ಪಳ 0, ಮಂಡ್ಯ 3, ಮೈಸೂರು 56, ರಾಯಚೂರು 1, ರಾಮನಗರ 1, ಶಿವಮೊಗ್ಗ 7, ತುಮಕೂರು 14, ಉಡುಪಿ 12, ಉತ್ತರ ಕನ್ನಡ 3, ವಿಜಯಪುರ 2, ಯಾದಗಿರಿ 2 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

ದೇಶದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳೆಷ್ಟು?

ದೇಶದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳೆಷ್ಟು?

ಕಲಬುರಗಿ ಕೊರೊನಾವೈರಸ್ ಸೋಂಕಿನಿಂದ ಸಾವನ್ನಪ್ಪಿರುವ ಘಟನೆ ಇಡೀ ದೇಶದಲ್ಲಿ ಅಂದು ಭಯ ಹುಟ್ಟಿಸಿತ್ತು. ಆದರೆ ಇಂದು ರಾಜ್ಯದ ಹೊರತಾಗಿ ದೇಶದಲ್ಲಿ ಎಷ್ಟು ಪ್ರಕರಣಗಳಿವೆ ಎನ್ನುವುದರ ಬಗ್ಗೆ ತಿಳಿದು ಕೊಳ್ಳುವುದಾದರೆ, ಕಳೆದ 24 ಗಂಟೆಗಳಲ್ಲೇ 17,921 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1,12,62,707ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 20652 ಸೋಂಕಿತರು ಗುಣಮುಖರಾಗಿದ್ದು, ಈವರೆಗೂ 1,09,20,046 ಸೋಂಕಿತರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾಮಾರಿಗೆ 1,58,063 ಮಂದಿ ಪ್ರಾಣ ಬಿಟ್ಟಿದ್ದರೆ, ಇದರ ಹೊರತಾಗಿ 1,84,598 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+