ಮಾರ್ಚ್31ರಂದು ಪ್ಯಾನ್- ಆಧಾರ್ ಕಾರ್ಡ್ ಲಿಂಕ್ ಮಾಡದಿದ್ದರೆ 1,000 ದಂಡ!
ನವದೆಹಲಿ, ಮಾರ್ಚ್ 31: ಆಧಾರ್ ಕಾರ್ಡ್ ಜೊತೆಗೆ ಪ್ಯಾನ್ ಕಾರ್ಡ್(Permanent Account Number) ಲಿಂಕ್ ಮಾಡುವುದಕ್ಕೆ ಮಾರ್ಚ್ 31 ಕೊನೆಯ ದಿನಾಂಕವಾಗಿದೆ. ಪ್ಯಾನ್ ಕಾರ್ಡ್ ಜೊತೆ ಆಧಾರ್ ಜೋಡಣೆ ಮಾಡದಿದ್ದಲ್ಲಿ ನಿಮ್ಮ ಪ್ಯಾನ್ ಸಂಖ್ಯೆ ಅಮಾನ್ಯಗೊಳ್ಳುವ ಅಪಾಯವಿದೆ.
ಆಧಾರ್ ಕಾರ್ಡ್ ಜೊತೆ ಪ್ಯಾನ್ ಕಾರ್ಡ್ ಲಿಂಕ್ ಮಾಡದಿದ್ದಲ್ಲಿ ಹಣಕಾಸು ಕಾಯ್ದೆ 2021ರ ಅಡಿಯಲ್ಲಿ 1000 ರೂಪಾಯಿ ದಂಡವನ್ನು ಪಾವತಿಸಬೇಕಾಗುತ್ತದೆ. ಇದರ ಜೊತೆಗೆ ಆಧಾರ್ ಕಾರ್ಡ್ ಜೊತೆ ಲಿಂಕ್ ಆಗದಿರುವ ಪ್ಯಾನ್ ಕಾರ್ಡ್ ಅನ್ನು ನಿಷ್ಕ್ರೀಯ ಎಂದು ಪರಿಗಣಿಸಲಾಗುತ್ತದೆ.
ಒಂದು ವೇಳೆ ಮಾರ್ಚ್ 31ರೊಳಗೆ ನಿಮ್ಮ ಪ್ಯಾನ್ ಕಾರ್ಡ್ ಸಂಖ್ಯೆಯನ್ನು ಆಧಾರ್ ಕಾರ್ಡ್ ಜೊತೆಗೆ ಲಿಂಕ್ ಮಾಡದಿದ್ದರೆ ಏಪ್ರಿಲ್ 1ರಿಂದಲೇ ನಿಮ್ಮ ಹಣಕಾಸು ವ್ಯವಹಾರಗಳಿಗೆ ಅಡ್ಡಿ ಉಂಟಾಗಲಿದೆ. ಹಾಗಿದ್ದರೆ ತಡವೇಕೆ ನಿಮ್ಮ ಪ್ಯಾನ್ ಕಾರ್ಡ್ ಆಧಾರ್ ಕಾರ್ಡ್ ಜೊತೆ ಲಿಂಕ್ ಆಗಿದೆಯೋ ಇಲ್ಲವೋ ಎಂಬುದನ್ನು ಈಗಲೇ ಪರೀಕ್ಷಿಸಿಕೊಳ್ಳಿ. ಒಂದು ವೇಳೆ ಮರೆತಿದ್ದರೆ ಈಗಲೇ ಲಿಂಕ್ ಮಾಡಿಕೊಳ್ಳಿ. ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡುವ ಪ್ರಕ್ರಿಯೆ ಹೇಗಿರುತ್ತದೆ ಎಂಬುದರ ಕುರಿತು ಒಂದು ವಿಶೇಷ ವರದಿ ಇಲ್ಲಿದೆ ನೋಡಿ.

ಪ್ಯಾನ್, ಆಧಾರ್ ಲಿಂಕ್ ಮಾಡಲು ಎಸ್ಎಂಎಸ್ ಕಳುಹಿಸಿ
ತೆರಿಗೆಗಳ್ಳರಿಗೆ ಬಿಸಿ ಮುಟ್ಟಿಸುವ ದೃಷ್ಟಿಯಿಂದ ಆದಾಯ ತೆರಿಗೆ ಇಲಾಖೆಯು ಎಲ್ಲಾ ತೆರಿಗೆದಾರರು ತಮ್ಮ ಪ್ಯಾನ್ ಕಾರ್ಡ್ಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡುವಂತೆ ಸೂಚನೆ ನೀಡಿದೆ. ಈ ಬಗ್ಗೆ ಎಲ್ಲಾ ಮಾಧ್ಯಮಗಳಲ್ಲಿ ಜಾಹೀರಾತು ನೀಡಲಾಗಿದೆ. ಆದಾಯ ತೆರಿಗೆ ಇಲಾಖೆಯು ಪ್ಯಾನ್ ಕಾರ್ಡ್ಗೆ ಆಧಾರ್ ಲಿಂಕ್ ಮಾಡಲು 567678 ಅಥವಾ 56161 ಗೆ SMS ಕಳುಹಿಸಬಹುದು. ಇದರ ಹೊರತಾಗಿ ಆನ್‌ಲೈನ್‌ನಲ್ಲಿ ಲಿಂಕ್ ಮಾಡಿಕೊಳ್ಳಲು ಅವಕಾಶವಿದೆ.

ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ಲಿಂಕ್ ಹೇಗೆ?
- ಆದಾಯ ತೆರಿಗೆ ಪಾವತಿ ವೆಬ್ಸೈಟ್ಗೆ (https://www.incometaxindiaefiling.gov.in/) ಭೇಟಿ ನೀಡಿ.
- ಆದಾಯ ತೆರಿಗೆ ಇಲಾಖೆಯ ವೆಬ್ಸೈಟ್ನಲ್ಲಿರುವ Quick Links ವಿಭಾಗದ Link Aadhar ಬಟನ್ ಮೇಲೆ ಕ್ಲಿಕ್ ಮಾಡಿ.
- ತೆರೆದುಕೊಳ್ಳುವ ಹೊಸ ಪುಟದ ಮೇಲ್ಭಾಗದಲ್ಲಿ ಮಿಣುಗುವ ನೀಲಿ-ಕೆಂಪು ಬಣ್ಣದ Click Here ಮೇಲೆ ಒತ್ತಿರಿ
- ಮುಂದಿನ ಪುಟದಲ್ಲಿ ಆಧಾರ್ ಸಂಖ್ಯೆ ಮತ್ತು ಪ್ಯಾನ್ ಸಂಖ್ಯೆಯನ್ನು ನಮೂದಿಸುವಂತೆ ಕೇಳಲಾಗುತ್ತದೆ
- ಆಧಾರ್ ಸಂಖ್ಯೆ ಮತ್ತು ಪ್ಯಾನ್ ಸಂಖ್ಯೆಯನ್ನು ನಮೂದಿಸಿ

ಆನ್‌ಲೈನ್‌ನಲ್ಲಿ ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ಲಿಂಕ್ ಹೇಗೆ?
- ಆಧಾರ್ ಕಾರ್ಡ್ ಜೊತೆ ಪ್ಯಾನ್ ಕಾರ್ಡ್ ಜೋಡಣೆಗೆ ಆದಾಯ ತೆರಿಗೆ ವೆಬ್ಸೈಟ್ನ E-Filling Portal ಗೆ ಭೇಟಿ ನೀಡಿ.
- ಎಡಭಾಗದಲ್ಲಿ ಇರುವ Link Aadhaar ವಿಭಾಗದ ಮೇಲೆ ಕ್ಲಿಕ್ ಮಾಡಿರಿ.
- ಪ್ಯಾನ್ ಸಂಖ್ಯೆ, ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡಿನಲ್ಲಿ ಇರುವಂತೆ ಹೆಸರನ್ನು ನಮೂದಿಸಬೇಕು
- Captcha Code : ಚಿತ್ರದಲ್ಲಿರುವಂತೆ ಸಂಖ್ಯೆ, ಅಂಕಿ ದಾಖಲಿಸಿ
- Link Aadhaar ಆಯ್ಕೆ ಮೇಲೆ ಕ್ಲಿಕ್ ಮಾಡಿದರೆ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಜೋಡಣೆ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ

ಆದಾಯ ತೆರಿಗೆ ಇಲಾಖೆಯಲ್ಲಿ ಹೆಸರು ನಮೂದು
ಆಧಾರ್ ಕಾರ್ಡ್ ಜೊತೆಗೆ ಪ್ಯಾನ್ ಕಾರ್ಡ್ ಪ್ರಕ್ರಿಯೆ ಪೂರ್ಣಗೊಂಡ ನಂತರದಲ್ಲಿ ಆದಾಯ ತೆರಿಗೆ ಇಲಾಖೆಯು ಎರಡು ದಾಖಲೆಗಳಲ್ಲಿ ನಮೂದಾಗಿರುವ ಹೆಸರು, ಹುಟ್ಟಿದ ದಿನಾಂಕ, ಪುರುಷ, ಸ್ತ್ರೀ ಎಂಬುದನ್ನು ಮರು ಪರಿಶೀಲನೆಗೊಳಪಡಿಸಿ ಎರಡು ದಾಖಲೆಗಳನ್ನು ಲಿಂಕ್ ಮಾಡುತ್ತದೆ. ಎರಡು ದಾಖಲೆಗಳು ಶಾಶ್ವತವಾಗಿ ಉಳಿಯುವಂತೆ ನೋಡಿಕೊಳ್ಳುತ್ತದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications