ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾರ್ಚ್31ರಂದು ಪ್ಯಾನ್- ಆಧಾರ್ ಕಾರ್ಡ್ ಲಿಂಕ್ ಮಾಡದಿದ್ದರೆ 1,000 ದಂಡ!

|
Google Oneindia Kannada News

ನವದೆಹಲಿ, ಮಾರ್ಚ್ 31: ಆಧಾರ್ ಕಾರ್ಡ್ ಜೊತೆಗೆ ಪ್ಯಾನ್ ಕಾರ್ಡ್(Permanent Account Number) ಲಿಂಕ್ ಮಾಡುವುದಕ್ಕೆ ಮಾರ್ಚ್ 31 ಕೊನೆಯ ದಿನಾಂಕವಾಗಿದೆ. ಪ್ಯಾನ್ ಕಾರ್ಡ್ ಜೊತೆ ಆಧಾರ್ ಜೋಡಣೆ ಮಾಡದಿದ್ದಲ್ಲಿ ನಿಮ್ಮ ಪ್ಯಾನ್ ಸಂಖ್ಯೆ ಅಮಾನ್ಯಗೊಳ್ಳುವ ಅಪಾಯವಿದೆ.

ಆಧಾರ್ ಕಾರ್ಡ್ ಜೊತೆ ಪ್ಯಾನ್ ಕಾರ್ಡ್ ಲಿಂಕ್ ಮಾಡದಿದ್ದಲ್ಲಿ ಹಣಕಾಸು ಕಾಯ್ದೆ 2021ರ ಅಡಿಯಲ್ಲಿ 1000 ರೂಪಾಯಿ ದಂಡವನ್ನು ಪಾವತಿಸಬೇಕಾಗುತ್ತದೆ. ಇದರ ಜೊತೆಗೆ ಆಧಾರ್ ಕಾರ್ಡ್ ಜೊತೆ ಲಿಂಕ್ ಆಗದಿರುವ ಪ್ಯಾನ್ ಕಾರ್ಡ್ ಅನ್ನು ನಿಷ್ಕ್ರೀಯ ಎಂದು ಪರಿಗಣಿಸಲಾಗುತ್ತದೆ.

ಒಂದು ವೇಳೆ ಮಾರ್ಚ್ 31ರೊಳಗೆ ನಿಮ್ಮ ಪ್ಯಾನ್ ಕಾರ್ಡ್ ಸಂಖ್ಯೆಯನ್ನು ಆಧಾರ್ ಕಾರ್ಡ್ ಜೊತೆಗೆ ಲಿಂಕ್ ಮಾಡದಿದ್ದರೆ ಏಪ್ರಿಲ್ 1ರಿಂದಲೇ ನಿಮ್ಮ ಹಣಕಾಸು ವ್ಯವಹಾರಗಳಿಗೆ ಅಡ್ಡಿ ಉಂಟಾಗಲಿದೆ. ಹಾಗಿದ್ದರೆ ತಡವೇಕೆ ನಿಮ್ಮ ಪ್ಯಾನ್ ಕಾರ್ಡ್ ಆಧಾರ್ ಕಾರ್ಡ್ ಜೊತೆ ಲಿಂಕ್ ಆಗಿದೆಯೋ ಇಲ್ಲವೋ ಎಂಬುದನ್ನು ಈಗಲೇ ಪರೀಕ್ಷಿಸಿಕೊಳ್ಳಿ. ಒಂದು ವೇಳೆ ಮರೆತಿದ್ದರೆ ಈಗಲೇ ಲಿಂಕ್ ಮಾಡಿಕೊಳ್ಳಿ. ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡುವ ಪ್ರಕ್ರಿಯೆ ಹೇಗಿರುತ್ತದೆ ಎಂಬುದರ ಕುರಿತು ಒಂದು ವಿಶೇಷ ವರದಿ ಇಲ್ಲಿದೆ ನೋಡಿ.

ಆನ್ ಲೈನ್ ನಲ್ಲಿ ಪ್ಯಾನ್​ಗೆ ಆಧಾರ್ ಜೋಡಿಸುವುದು ಹೇಗೆ?ಆನ್ ಲೈನ್ ನಲ್ಲಿ ಪ್ಯಾನ್​ಗೆ ಆಧಾರ್ ಜೋಡಿಸುವುದು ಹೇಗೆ?

ಪ್ಯಾನ್, ಆಧಾರ್ ಲಿಂಕ್ ಮಾಡಲು ಎಸ್ಎಂಎಸ್ ಕಳುಹಿಸಿ

ಪ್ಯಾನ್, ಆಧಾರ್ ಲಿಂಕ್ ಮಾಡಲು ಎಸ್ಎಂಎಸ್ ಕಳುಹಿಸಿ

ತೆರಿಗೆಗಳ್ಳರಿಗೆ ಬಿಸಿ ಮುಟ್ಟಿಸುವ ದೃಷ್ಟಿಯಿಂದ ಆದಾಯ ತೆರಿಗೆ ಇಲಾಖೆಯು ಎಲ್ಲಾ ತೆರಿಗೆದಾರರು ತಮ್ಮ ಪ್ಯಾನ್​ ಕಾರ್ಡ್​ಗೆ ಆಧಾರ್​ ಸಂಖ್ಯೆಯನ್ನು ಲಿಂಕ್ ಮಾಡುವಂತೆ ಸೂಚನೆ ನೀಡಿದೆ. ಈ ಬಗ್ಗೆ ಎಲ್ಲಾ ಮಾಧ್ಯಮಗಳಲ್ಲಿ ಜಾಹೀರಾತು ನೀಡಲಾಗಿದೆ. ಆದಾಯ ತೆರಿಗೆ ಇಲಾಖೆಯು ಪ್ಯಾನ್​ ಕಾರ್ಡ್​ಗೆ ಆಧಾರ್​ ಲಿಂಕ್​ ಮಾಡಲು 567678 ಅಥವಾ 56161 ಗೆ SMS ಕಳುಹಿಸಬಹುದು. ಇದರ ಹೊರತಾಗಿ ಆನ್‌ಲೈನ್‌ನಲ್ಲಿ ಲಿಂಕ್ ಮಾಡಿಕೊಳ್ಳಲು ಅವಕಾಶವಿದೆ.

ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ಲಿಂಕ್ ಹೇಗೆ?

ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ಲಿಂಕ್ ಹೇಗೆ?

- ಆದಾಯ ತೆರಿಗೆ ಪಾವತಿ ವೆಬ್​ಸೈಟ್​ಗೆ (https://www.incometaxindiaefiling.gov.in/) ಭೇಟಿ ನೀಡಿ.

- ಆದಾಯ ತೆರಿಗೆ ಇಲಾಖೆಯ ವೆಬ್​ಸೈಟ್​ನಲ್ಲಿರುವ Quick Links ವಿಭಾಗದ Link Aadhar ಬಟನ್ ಮೇಲೆ ಕ್ಲಿಕ್ ಮಾಡಿ.

- ತೆರೆದುಕೊಳ್ಳುವ ಹೊಸ ಪುಟದ ಮೇಲ್ಭಾಗದಲ್ಲಿ ಮಿಣುಗುವ ನೀಲಿ-ಕೆಂಪು ಬಣ್ಣದ Click Here ಮೇಲೆ ಒತ್ತಿರಿ

- ಮುಂದಿನ ಪುಟದಲ್ಲಿ ಆಧಾರ್ ಸಂಖ್ಯೆ ಮತ್ತು ಪ್ಯಾನ್ ಸಂಖ್ಯೆಯನ್ನು ನಮೂದಿಸುವಂತೆ ಕೇಳಲಾಗುತ್ತದೆ

- ಆಧಾರ್ ಸಂಖ್ಯೆ ಮತ್ತು ಪ್ಯಾನ್ ಸಂಖ್ಯೆಯನ್ನು ನಮೂದಿಸಿ

ಆನ್‌ಲೈನ್‌ನಲ್ಲಿ ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ಲಿಂಕ್ ಹೇಗೆ?

ಆನ್‌ಲೈನ್‌ನಲ್ಲಿ ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ಲಿಂಕ್ ಹೇಗೆ?

- ಆಧಾರ್ ಕಾರ್ಡ್ ಜೊತೆ ಪ್ಯಾನ್ ಕಾರ್ಡ್ ಜೋಡಣೆಗೆ ಆದಾಯ ತೆರಿಗೆ ವೆಬ್​ಸೈಟ್​ನ E-Filling Portal ಗೆ ಭೇಟಿ ನೀಡಿ.

- ಎಡಭಾಗದಲ್ಲಿ ಇರುವ Link Aadhaar ವಿಭಾಗದ ಮೇಲೆ ಕ್ಲಿಕ್ ಮಾಡಿರಿ.

- ಪ್ಯಾನ್ ಸಂಖ್ಯೆ, ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡಿನಲ್ಲಿ ಇರುವಂತೆ ಹೆಸರನ್ನು ನಮೂದಿಸಬೇಕು

- Captcha Code : ಚಿತ್ರದಲ್ಲಿರುವಂತೆ ಸಂಖ್ಯೆ, ಅಂಕಿ ದಾಖಲಿಸಿ

- Link Aadhaar ಆಯ್ಕೆ ಮೇಲೆ ಕ್ಲಿಕ್ ಮಾಡಿದರೆ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಜೋಡಣೆ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ

ಆದಾಯ ತೆರಿಗೆ ಇಲಾಖೆಯಲ್ಲಿ ಹೆಸರು ನಮೂದು

ಆದಾಯ ತೆರಿಗೆ ಇಲಾಖೆಯಲ್ಲಿ ಹೆಸರು ನಮೂದು

ಆಧಾರ್ ಕಾರ್ಡ್ ಜೊತೆಗೆ ಪ್ಯಾನ್ ಕಾರ್ಡ್ ಪ್ರಕ್ರಿಯೆ ಪೂರ್ಣಗೊಂಡ ನಂತರದಲ್ಲಿ ಆದಾಯ ತೆರಿಗೆ ಇಲಾಖೆಯು ಎರಡು ದಾಖಲೆಗಳಲ್ಲಿ ನಮೂದಾಗಿರುವ ಹೆಸರು, ಹುಟ್ಟಿದ ದಿನಾಂಕ, ಪುರುಷ, ಸ್ತ್ರೀ ಎಂಬುದನ್ನು ಮರು ಪರಿಶೀಲನೆಗೊಳಪಡಿಸಿ ಎರಡು ದಾಖಲೆಗಳನ್ನು ಲಿಂಕ್ ಮಾಡುತ್ತದೆ. ಎರಡು ದಾಖಲೆಗಳು ಶಾಶ್ವತವಾಗಿ ಉಳಿಯುವಂತೆ ನೋಡಿಕೊಳ್ಳುತ್ತದೆ.

English summary
PAN-Aadhaar Linking Deadline Ends On March 31, Here's A Stepwise Guide To Do It Online In Kannada. Taker A Look.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X