• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಚುನಾವಣಾ ಪೂರ್ವː ಕಾವಿ-ಖಾದಿಧಾರಿಗಳ ನಡುವೆ ಮೈತ್ರಿ ಏನು? ಎತ್ತ?

By Mahesh
|
   ಕರ್ನಾಟಕ ವಿಧಾನಸಭಾ ಚುನಾವಣೆ 2018 : ರಾಜಕೀಯಕ್ಕೆ ಬರಲಿರುವ ಹಲವು ಮಠಗಳ ಸ್ವಾಮೀಜಿಗಳು | Oneindia Kannada

   ಬೆಂಗಳೂರು, ನವೆಂಬರ್ 07: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಪ್ರಭಾವ ಕರ್ನಾಟಕದ ರಾಜಕೀಯದ ಮೇಲೆ ಬೀಳುತ್ತಿರುವುದು ಈಗ ಸ್ಪಷ್ಟವಾಗಿದೆ.

   ಸ್ವಾಮೀಜಿ, ಮಠಾಧೀಶರು ಚುನಾವಣೆ ಅಖಾಡಕ್ಕೆ ಇಳಿಯಲು ಮುಂದಾಗುತ್ತಿದ್ದಾರೆ. ಆರೆಸ್ಸೆಸ್, ಬಿಜೆಪಿ ಅಲ್ಲದೆ ಕಾಂಗ್ರೆಸ್ ಕೂಡಾ ಖಾವಿಧಾರಿಗಳ ಮನ ಓಲೈಕೆಯಲ್ಲಿ ತೊಡಗಿವೆ.

   ಉತ್ತರ ಪ್ರದೇಶದಲ್ಲಿ ಗೋರಖ್‌ ನಾಥ ಪರಂಪರೆಯ ಯೋಗಿ ಆದಿತ್ಯನಾಥ್ ಅವರು ದಿಗ್ವಿಜಯ ಸಾಧಿಸಿರುವುದು ಈಗ ಇತಿಹಾಸ. ಕರ್ನಾಟಕದಲ್ಲೂ ಇದೇ ರೀತಿ ಬದಲಾವಣೆಯ ಅಲೆ ತರಲು ಬಿಜೆಪಿ ಯತ್ನಿಸುತ್ತಿದೆ. ರಾಜ್ಯ ಕೆಲ ಪ್ರಮುಖ ಮಠಾಧೀಶರನ್ನು ಚುನಾವಣಾ ಕಣಕ್ಕಿಳಿಸುವ ಯೋಜನೆಯನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಕಿಕೊಂಡಿದ್ದಾರೆ.

   ಮತ ಬ್ಯಾಂಕಿಗೆ ಅನುಗುಣವಾಗಿ ಎಲ್ಲಾ ಜಾತಿ ವರ್ಗದ ಮಠಾಧೀಶರಿಗೆ ಗಾಳ ಹಾಕಲಾಗುತ್ತಿದೆ. ಮುಖ್ಯವಾಗಿ ಸಿಎಂ ಸಿದ್ದರಾಮಯ್ಯನವರ ಅಹಿಂದ ಮತ ಬ್ಯಾಂಕ್‌ ಒಡೆಯುವ ಕೆಲಸಕ್ಕೆ ಚಾಲನೆ ನೀಡಲಾಗಿದೆ. ಇದರಲ್ಲಿ ಯಾರು ಗೆಲ್ಲುವರೋ, ಖಾವಿಧಾರಿಗಳು ಖಾಕಿಧಾರಿಗಳ ನಡುವಿನ ಈ ಮೈತ್ರಿಯಿಂದ ರಾಜ್ಯಕ್ಕೇನು ಉಪಯೋಗ ಕಾದು ನೋಡಬೇಕಿದೆ. ಸದ್ಯಕ್ಕೆ ಯಾವ ಯಾವ ಸ್ವಾಮೀಜಿಗಳು ಚುನಾವಣೆ ಬಗ್ಗೆ ಆಸಕ್ತಿ ತೋರಿದ್ದಾರೆ? ಸ್ಪರ್ಧೆ ಬಗ್ಗೆ ಏನು ಹೇಳಿದ್ದಾರೆ ಮುಂದೆ ಓದಿ...

   ಕಣಕ್ಕಿಳಿಯಲು ಆಸಕ್ತಿ ತೋರಿದವರು ಯಾರು?

   ಕಣಕ್ಕಿಳಿಯಲು ಆಸಕ್ತಿ ತೋರಿದವರು ಯಾರು?

   * ಗುರುಪುರದ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ

   * ಮಾದರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ

   * ಧಾರವಾಡದ ಗುರು ಬಸವ ಮಹಾ ಮನೆಯ ಬಸವಾನಂದ ಸ್ವಾಮೀಜಿ

   * ಮಂಡ್ಯ ಜಿಲ್ಲೆಯ ಮೇಲುಕೋಟೆಯ ದೇವಿ ಗ್ರಾಮದ ಮಾರ್ಕಂಡೇಶ್ವರ

   * ಮಹಾಂತ ಶಿವಯೋಗಿ ಮಠದ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ

   * ಬಾಗಲ ಕೋಟೆಯ ರಾಮರುದ್ರ ಸ್ವಾಮೀಜಿ

   * ಹಾವೇರಿಯ ಶರಣ ಬಸವೇಶ್ವರ ಮಠದ ಪ್ರಣವನಂದ ಸ್ವಾಮೀಜಿ

   ಯಾರಿಗೆ ಯಾವ ಕ್ಷೇತ್ರ

   ಯಾರಿಗೆ ಯಾವ ಕ್ಷೇತ್ರ

   * ಚಿತ್ರದುರ್ಗದ ಮದಾರಾ ಚೆನ್ನಯ್ಯ ಸ್ವಾಮೀಜಿ-ಹೊಳೆಲ್ಕೆರೆ ಕ್ಷೇತ್ರ

   * ಧಾರವಾಡದ ಗುರು ಬಸವ ಮಹಾ ಮನೆಯ ಬಸವನಂದ ಸ್ವಾಮೀಜಿ-ಕಂಘಟಗಿ ಕ್ಷೇತ್ರ

   * ಮಂಡ್ಯ ಜಿಲ್ಲೆಯ ದೇವಿ ಮಠದ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ಮಂಡ್ಯ ಜಿಲ್ಲೆಯ ಮೇಲು ಕೋಟೆ.

   * ಶ್ರೀರಾಮ ರುದ್ರ ಸ್ವಾಮೀಜಿ-ಬಾಗಲಕೋಟೆ ಜಿಲ್ಲೆ ಬೀಳಗಿ ವಿಧಾನಸಭಾ ಕ್ಷೇತ್ರ.

   * ಪಾಲ್ಗುಣ ಶರಣ ಬಸವೇಶ್ವರ ಮಠದ ಪ್ರಣವನಂದ ಸ್ವಾಮೀಜಿ ಹಾವೇರಿ ವಿಧಾನಸಭಾ ಕ್ಷೇತ್ರ

   ರಾಜಶೇಖರಾನಂದ ಸ್ವಾಮೀಜಿ

   ರಾಜಶೇಖರಾನಂದ ಸ್ವಾಮೀಜಿ

   ಗುರುಪುರದ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಅವರು ಚುನಾವಣೆ ಅಖಾಡಕ್ಕೆ ಇಳಿಯಲು ಉತ್ಸುಕರಾಗಿದ್ದಾರೆ. ಸ್ವಾಮೀಜಿಗಳಿಗೆ ಅರೆಸ್ಸೆಸ್ ಹಾಗೂ ಬಿಜೆಪಿ ಮುಖಂಡರ ಬೆಂಬಲ ಸಿಕ್ಕಿದೆ. ಹಿಂದೂತ್ವವನ್ನು ಮುಂದಿಟ್ಟುಕೊಂಡು ಕರಾವಳಿಯ ಯಾವುದಾದರೂ ಒಂದು ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸುವುದಾಗಿ ಸ್ವಾಮೀಜಿ ಘೋಷಿಸಿದ್ದಾರೆ. ಈ ಬಗ್ಗೆ ಮಾತುಕತೆ ನಡೆಯುತ್ತಿದೆ. ನಮ್ಮ ಪ್ರಯತ್ನಕ್ಕೆ ಫಲ ಸಿಗುವ ನಿರೀಕ್ಷೆಯಿದೆ. ಉತ್ತರಪ್ರದೇಶಕ್ಕೆ ತೆರಳಿ ಅಧ್ಯಯನ ನಡೆಸಲಾಗುವುದು, ಯೋಗಿ ಆದಿತ್ಯಾನಾಥ್ ಅವರು ಉತ್ತರಪ್ರದೇಶದಲ್ಲಿ ಅಧಿಕಾರ ಸ್ವೀಕರಿಸಿ ಮಾದರಿಯಾಗಿದ್ದಾರೆ.

   ಮಾದಾರ ಚೆನ್ನಯ್ಯ ಸ್ವಾಮೀಜಿ

   ಮಾದಾರ ಚೆನ್ನಯ್ಯ ಸ್ವಾಮೀಜಿ

   ಮಾದಾರ ಚೆನ್ನಯ್ಯ ಸ್ವಾಮೀಜಿ ಅವರನ್ನು ಚುನಾವಣಾ ಅಖಾಡಕ್ಕೆ ಕರೆ ತರಲು ಬಿಜೆಪಿ ಸಿದ್ಧತೆ ನಡೆಸಲಾಗುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಮಾದರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಗಳನ್ನು ಮನೆಗೆ ಕರೆದು ಮಾತುಕತೆ ನಡೆಸಿ, ಊಟ ಹಾಕಿ ಕಳಿಸಿದ್ದಾರೆ. ಆದರೆ, 'ಯಾವ ರಾಯಕೀಯ ಪಕ್ಷದವರು ತಮ್ಮನ್ನು ಪಕ್ಷ ಸೇರುವಂತೆ ಆಹ್ವಾನಿಸಿಲ್ಲ' ಎಂದು ಸ್ವಾಮೀಜಿ ಹೇಳಿದ್ದಾರೆ.

   ಸುಭುಧೇಂದ್ರ ತೀರ್ಥರ ಕಿವಿಮಾತು

   ಸುಭುಧೇಂದ್ರ ತೀರ್ಥರ ಕಿವಿಮಾತು

   ರಾಜಕೀಯದಲ್ಲಿ ಧರ್ಮ ಇರಬೇಕೇ ಹೊರತೂ, ಧರ್ಮದಲ್ಲಿ ರಾಜಕೀಯ ಇರಬಾರದು. ಮಠ-ಮಾನ್ಯಗಳು ಧಾರ್ಮಿಕ, ಶೈಕ್ಷಣಿಕ ರಂಗ ಈ ಕಾರ್ಯಕ್ರಮಗಳೇ ಮುಖ್ಯ ಉದ್ದೇಶವಾಗಿರಬೇಕು. ಇತ್ತೀಚೆಗೆ ಮಠಾಧಿಪತಿಗಳು ರಾಜಕೀಯ ರಂಗ ಪ್ರವೇಶದ ಬಗ್ಗೆ ಸುದ್ದಿ ಬರುತ್ತಿದೆ. ಈ ಬಗ್ಗೆ ನಮ್ಮ ಸಹಮತವಿಲ್ಲ ಎಂದು ಎಂದ ಸುಭುಧೇಂದ್ರ ತೀರ್ಥರು ಹೇಳಿದ್ದಾರೆ.

   ಖ್ಯಾತ ಗಾಯಕ ವಿದ್ಯಾಭೂಷಣ

   ಖ್ಯಾತ ಗಾಯಕ ವಿದ್ಯಾಭೂಷಣ

   ಈ ಬಾರಿ ಸಿಎಂ ಸಿದ್ದರಾಮಯ್ಯ ವರುಣಾ ಬದಲು ಚಾಮುಂಡೇಶ್ವರಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಾರೆ. ಸಿದ್ದರಾಮಯ್ಯ ಅವರ ವಿರುದ್ಧ ಡಾ. ವಿದ್ಯಾಭೂಷಣರನ್ನು ಕಣಕ್ಕಿಳಿಸಲು ಬಿಜೆಪಿ ರಣತಂತ್ರ ಹೆಣೆದಿದೆ ಎಂಬ ಸುದ್ದಿ ಹಬ್ಬಿದೆ.

   ಇದಕ್ಕೆ ಪ್ರತಿಕ್ರಿಯಿಸಿರುವ ವಿದ್ಯಾಭೂಷಣ, 'ನಾನು ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಇದೊಂದು ಶುದ್ಧ ಸುಳ್ಳು ಹಾಗೂ ನನ್ನ ಮೇಲೆ ಅಪಪ್ರಚಾರ ಮಾಡುತ್ತಿರುವ ಮಾತುಗಳು' ಎಂದಿದ್ದಾರೆ.

   ಒಂದು ಕಾಲದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮಠಾಧೀಶರಾಗಿದ್ದ ಇವರು ಸದ್ಯ ಗೃಹಸ್ಥಾಶ್ರಮದಲ್ಲಿದ್ದಾರೆ. ಅಲ್ಲದೆ ಉಡುಪಿ ಅಷ್ಟಮಠಗಳು ಸೇರಿದಂತೆ ರಾಜ್ಯದ ಪ್ರಮುಖ ಮಠಗಳ ಸ್ವಾಮೀಜಿಗಳ ಜತೆ ಉತ್ತಮ ಸಂಬಂಧ ಹೊಂದಿದ್ದಾರೆ

   ಸದ್ಗುರು ಶ್ರೀ ಸಾಯಿ ಜ್ಯೋತಿಷ್ಯ ಪೀಠ- ದೈವಜ್ಞ ಪ್ರಧಾನ ಜ್ಯೋತಿಷ್ಯರು ಶ್ರೀ ಶ್ರೀನಿವಾಸ್ ಗುರೂಜಿ ಉದ್ಯೋಗದಲ್ಲಿ ತೊಂದರೆ, ಮದುವೆ ವಿಳಂಬ, ಸತಿ- ಪತಿ ಕಲಹ, ಡೈವರ್ಸ್ ಪ್ರಾಬ್ಲಮ್, ಶತ್ರು ಪೀಡೆ, ಅತ್ತೆ -ಸೊಸೆ ಕಲಹ, ಸಂತಾನ ಸಮಸ್ಯೆ, ಆರೋಗ್ಯ ಸಮಸ್ಯೆ, ರಾಜಕೀಯದಲ್ಲಿ ಶತ್ರುಗಳ ಕಾಟ, ಸಿನಿಮಾ ಪ್ರವೇಶ ಇನ್ನೂ ಯಾವುದೇ ಗುಪ್ತ ಸಮಸ್ಯೆಗೆ ಗುರೂಜಿ ಅವರನ್ನು ನೇರವಾಗಿ ಭೇಟಿಯಾಗಬಹುದು. ಗುರೂಜಿ ಅವರ ಸಲಹೆ ಮತ್ತು ಪರಿಹಾರ ಪಡೆದುಕೊಂಡಂಥ ಲಕ್ಷಾಂತರ ಜನರು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ. ವಿಳಾಸ # 37, 4th block, ಜಯನಗರ, ಬೆಂಗಳೂರು- 9986623344

   English summary
   Political entry of Seers in Karnataka Assembly Elections 2018ː Who are all likely to enter the battle field? Who rejected the offer? Who said what?. Here is a report. Raghavendra Mutt chieftain opposed the political entry of Swamijies. Vidyabhushana also denied rumours about him entering politics.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
   X