ಮೈಸೂರು ಅರಮನೆಯಲ್ಲಿ ಅಲಮೇಲಮ್ಮನಿಗೆ ಪೂಜೆ ಯಾಕೆ ಮಾಡಲಾಗುತ್ತದೆ ಗೊತ್ತಾ? ಇಲ್ಲಿದೆ ರೋಚಕ ಸ್ಟೋರಿ
ಮೈಸೂರು, ಅಕ್ಟೋಬರ್, 10: ಐತಿಹಾಸಿಕ ಮೈಸೂರು ದಸರಾದಲ್ಲಿ ಜಂಬೂಸವಾರಿ ಒಂದೆಡೆಯಾದರೆ, ಮತ್ತೊಂದೆಡೆ ಅರಮನೆಯಲ್ಲಿ ನವರಾತ್ರಿಗೆ ಸಂಬಂಧಿಸಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. ಈ ಪೈಕಿ ಹೆಚ್ಚಿನ ಪೂಜೆಗಳನ್ನು ಖುದ್ದು ಮಹಾರಾಜರೇ ನಡೆಸಿಕೊಂಡು ಬಂದಿದ್ದರು. ಅದು ಇಂದಿಗೂ ಮುಂದುವರೆಯುತ್ತಿದ್ದು, ಅದರಲ್ಲಿ ಅಲಮೇಲಮ್ಮನ ಪೂಜೆಯೂ ಒಂದಾಗಿದೆ.
ಈ ಅಲಮೇಲಮ್ಮನ ಪೂಜೆ ಏಕೆ ಮಾಡಲಾಗುತ್ತದೆ ಎಂಬುದನ್ನು ನೋಡುತ್ತಾ ಹೋದರೆ, ಇತಿಹಾಸದಲ್ಲಿ ಹುದುಗಿಹೋದ ಕಥೆಯೊಂದು ಬೆಳಕಿಗೆ ಬರುತ್ತದೆ. ಅಷ್ಟೇ ಅಲ್ಲದೆ, ಅಲಮೇಲಮ್ಮನ ಶಾಪ ಮೈಸೂರು ಸಂಸ್ಥಾನದ ಮೇಲಿದೆ ಎಂಬ ಮಾತುಗಳು ಇವತ್ತಿಗೂ ಜನವಲಯದಲ್ಲಿದೆ.

ಮೈಸೂರು ಸಂಸ್ಥಾನದ ಆಡಳಿತದ ಬಗ್ಗೆ ಮಾತನಾಡುವಾಗಲೆಲ್ಲ ಅಲಮೇಲಮ್ಮನ ಶಾಪದ ಬಗ್ಗೆ ಕಥೆಯೊಂದು ಹೊರ ಬರುತ್ತದೆ. ಇದನ್ನು ಕೆಲವರು ದಂತ ಕಥೆ ಎನ್ನುತ್ತಾರೆ. ಆದರೆ, ಇವತ್ತಿಗೂ ಅಲಮೇಲಮ್ಮನಿಗೆ ಪೂಜೆ ಮಾಡುತ್ತಿರುವುದನ್ನು ಗಮನಿಸಿದರೆ, ಮೈಸೂರು ಸಂಸ್ಥಾನಕ್ಕೂ ಅಲಮೇಲಮ್ಮನಿಗೂ ಸಂಬಂಧವಿರುವುದು ಖಚಿತವಾಗುತ್ತದೆ. ಇಷ್ಟಕ್ಕೂ ಯಾರು ಈ ಅಲಮೇಲಮ್ಮ? ಆಕೆಗೇಕೆ ಪೂಜೆ ಮಾಡುತ್ತಾರೆ? ಎಂಬ ಪ್ರಶ್ನೆಗಳು ನಮ್ಮೆಲ್ಲರನ್ನು ಕಾಡದಿರದು.
ಇದಕ್ಕೆ ಉತ್ತರ ಹುಡುಕುತ್ತಾ ಹೋದರೆ ಇತಿಹಾಸದ ಪುಟಗಳನ್ನು ತಿರುವಿ ಹಾಕಬೇಕಾಗುತ್ತದೆ. ಅದರಂತೆಯೇ ವಿಜಯನಗರದ ಅರಸರ ಪ್ರತಿನಿಧಿಯಾಗಿ ಶ್ರೀರಂಗಪಟ್ಟಣ ಪ್ರದೇಶವನ್ನು ಆಳುತ್ತಿದ್ದ ರಾಜ ಶ್ರೀರಂಗರಾಯನ ಪತ್ನಿಯೇ ಅಲಮೇಲಮ್ಮ. ಮೈಸೂರಿನ ರಾಜಒಡೆಯರು ಶ್ರೀರಂಗಪಟ್ಟಣವನ್ನು ವಶಪಡಿಸಿಕೊಂಡ ನಂತರ ಅಲ್ಲಿದ್ದ ಶ್ರೀರಂಗರಾಯ ತಲಕಾಡಿಗೆ ಓಡಿಹೋಗಿ ಅಲ್ಲಿಯೇ ಪತ್ನಿಯೊಡನೆ ವಾಸಿಸುತ್ತಿರುತ್ತಾನೆ. ಕೆಲದಿನಗಳ ನಂತರ ಶ್ರೀರಂಗರಾಯ ಮರಣ ಹೊಂದುತ್ತಾನೆ.
ಅಲಮೇಲಮ್ಮ ಶಾಪ ನೀಡಿದ್ದು ಯಾವಾಗ?: ಆ ಸಮಯದಲ್ಲಿ ನವರಾತ್ರಿ ಉತ್ಸವಕ್ಕೆ ಶ್ರೀರಂಗನಾಥ ಸ್ವಾಮಿಯನ್ನು ಅಲಂಕರಿಸಲು ತಲಕಾಡಿನಲ್ಲಿದ್ದ ಅಲಮೇಲಮ್ಮನಿಗೆ ಅವಳ ಬಳಿಯಿದ್ದ ಒಡವೆಗಳನ್ನು ತಂದು ತಮಗೊಪ್ಪಿಸುವಂತೆ ರಾಜಾಜ್ಞೆ ಮಾಡಲಾಗುತ್ತದೆ. ಆದರೆ, ಅಲಮೇಲಮ್ಮ ರಾಜಾಜ್ಞೆಯನ್ನು ತಿರಸ್ಕರಿಸುತ್ತಾಳೆ. ಆಗ ಆಕೆಯಿಂದ ಬಲವಂತವಾಗಿ ಒಡವೆಗಳನ್ನು ಕಿತ್ತುಕೊಂಡು ಬರುವಂತೆ ರಾಜಒಡೆಯರು ಅಪ್ಪಣೆ ಮಾಡುತ್ತಾರೆ. ಆಗ ರಾಜಧಾನಿ ಶ್ರೀರಂಗಪಟ್ಟಣದಿಂದ ರಾಜಭಟರು ಅಲಮೇಲಮ್ಮ ವಾಸವಿದ್ದ ತಲಕಾಡಿನತ್ತ ಹೊರಡುತ್ತಾರೆ.
ರಾಜಭಟರು ತಲಕಾಡಿನತ್ತ ಬರುತ್ತಿರುವ ವಿಷಯ ತಿಳಿದ ಅಲಮೇಲಮ್ಮ ಅವರಿಂದ ತಪ್ಪಿಸಿಕೊಳ್ಳುವ ಸಲುವಾಗಿ ತಲಕಾಡಿನಿಂದ ಮಾಲಂಗಿಯತ್ತ ಓಡಿಹೋಗುತ್ತಾಳೆ. ಆದರೆ, ರಾಜಭಟ್ಟರು ಅವಳ ಬೆನ್ನಟ್ಟುತ್ತಾರೆ. ಆಗ ಅವಳಿಗೆ ಅವರಿಂದ ತಪ್ಪಿಸಿಕೊಂಡು ಮುಂದೆ ಸಾಗಲು ಸಾಧ್ಯವಾಗುವುದಿಲ್ಲ. ಬೇರೆ ದಾರಿ ಕಾಣದ ಆಕೆ ಕೋಪದಿಂದ "ಮಾಲಂಗಿ ಮಡುವಾಗಿ, ತಲಕಾಡು ಮರಳಾಗಿ, ಮೈಸೂರು ಅರಸರಿಗೆ ಮಕ್ಕಳಾಗದಿರಲಿ" ಎಂದು ಶಾಪ ನೀಡಿ ತನ್ನಲಿದ್ದ ಒಡವೆ ಗಂಟನ್ನು ಉಡಿಯಲ್ಲಿ ಕಟ್ಟಿಕೊಂಡು ಮಾಲಂಗಿ ಸಮೀಪದ ಕಾವೇರಿ ನದಿಗೆ ಹಾರಿ ಪ್ರಾಣ ಬಿಡುತ್ತಾಳೆ.
ನಿರಂತರವಾಗಿ ನಡೆದು ಬರುತ್ತಿರುವ ಪೂಜೆ: ಅಲಮೇಲಮ್ಮನ ಶಾಪದ ಪ್ರಭಾವ ಎನ್ನುವಂತೆ ಅಂದಿನಿಂದ ಇಂದಿನ ತನಕವೂ ತಲಕಾಡು ಮರಳು ತುಂಬಿದ ಪ್ರದೇಶವಾಗಿದೆ. ಹಾಗೆಯೇ ಇದರ ಸಮೀಪದ ಮಾಲಂಗಿ ಕೂಡ ಮಡುವಾಗಿ ಭಯಂಕರ ಪ್ರಪಾತವಾಗಿದೆ. ಅಷ್ಟೇ ಅಲ್ಲ, ಆ ಕಾಲದಿಂದಲೂ ಮೈಸೂರು ಅರಸರಿಗೆ ಮಕ್ಕಳಾಗದೆ ಅವರು ದತ್ತುಪಡೆದವರಿಗೆ ಮಾತ್ರ ಸಂತಾನ ಪ್ರಾಪ್ತವಾಗುವುದು ನಡೆದುಕೊಂಡು ಬರುತ್ತಿದೆ.
ಈ ಘಟನೆ ನಡೆದ ಬಳಿಕ ಮಹಾರಾಜರು ಅಲಮೇಲಮ್ಮನ ಶಾಪ ನಿವಾರಣೆಗಾಗಿ ರಾಜ ಒಡೆಯರು ಅಲಮೇಲಮ್ಮನ ಚಿನ್ನದ ವಿಗ್ರಹವೊಂದನ್ನು ಮಾಡಿಸಿ ಅವರ ಕಾಲದಿಂದಲೇ ನವರಾತ್ರಿ ಹಬ್ಬದಲ್ಲಿ ಅದಕ್ಕೆ ವಿಶೇಷ ಪೂಜೆ ಸಲ್ಲಿಸುವ ಸಂಪ್ರದಾಯ ಜಾರಿಗೆ ತಂದರು ಎನ್ನಲಾಗಿದೆ. ಅಲ್ಲಿಂದ ಇಲ್ಲಿವರೆಗೂ ನಿರಂತರವಾಗಿ ಪೂಜೆ ನಡೆದುಕೊಂಡು ಬಂದಿದೆ.
ಅದು ಏನೇ ಇರಲಿ ಅರಮನೆಯಲ್ಲಿ ನಡೆಯುವ ವಿವಿಧ ಪೂಜೆಗಳಲ್ಲಿ ಅಲಮೇಲಮ್ಮನ ಪೂಜೆಯೂ ಒಂದಾಗಿರುವುದ ಗಮನಾರ್ಹವಾಗಿದೆ. ಇಲ್ಲಿ ಎಲ್ಲವೂ ಸಂಪ್ರದಾಯ ಬದ್ಧವಾಗಿ ನಡೆಯುತ್ತಿರುವುದು ಅಷ್ಟೇ ಸತ್ಯ. ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಎಲ್ಲಾ ರೀತಿಯ ಪೂಜಾ ಕೈಂಕರ್ಯಗಳನ್ನು ಮಾಡುತ್ತಾ ಬಂದಿದ್ದು, ರಾಜಪುರೋಹಿತರು ನೀಡಿದ ಮಾರ್ಗದರ್ಶನದಂತೆ, ಎಲ್ಲ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಗುತ್ತದೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications