ವರ್ಷದ ವಿಶೇಷ; ಕೋವಿಡ್ ಭೀತಿಯಲ್ಲಿ ನಡೆಯಿತು ಚುನಾವಣೆ!
ಭಾರತ ಮತ್ತು ವಿಶ್ವದಾದ್ಯಂತ ಈ ವರ್ಷ ಕೋವಿಡ್ ಸುದ್ದಿಯೇ ಹೆಚ್ಚು. ಪ್ರಜಾಪ್ರಭುತ್ವವನ್ನು ಹೊಂದಿರುವ ಭಾರತದಲ್ಲಿ ಕೋವಿಡ್ ಭೀತಿಯ ನಡುವೆಯೇ ವಿಧಾನಸಭೆ ಚುನಾವಣೆಯನ್ನು ನಡೆಸಲಾಯಿತು. 243 ಕ್ಷೇತ್ರಗಳಿಗೆ ಚುನಾವಣೆ ನಡೆಸುವುದು ಸವಾಲಿನ ಕೆಲಸವಾಗಿತ್ತು. ಪ್ರಚಾರ, ಜನಸಂದಣಿ ಸೇರದಂತೆ ಎಚ್ಚರವಹಿಸಿ ಚುನಾವಣೆಯನ್ನು ನಡೆಸಲಾಯಿತು.
ಬಿಹಾರ ವಿಧಾನಸಭೆಯ 243 ಸ್ಥಾನಗಳಿಗೆ ಒಟ್ಟು 3 ಹಂತದಲ್ಲಿ ಚುನಾವಣೆಯನ್ನು ನಡೆಸಲಾಯಿತು. ಅಕ್ಟೋಬರ್ 28ರಿಂದ ನವೆಂಬರ್ 7ರ ತನಕ ಚುನಾವಣೆ ನಡೆಯಿತು. ಪ್ರಚಾರ, ಮತದಾನದ ದಿನಕ್ಕಾಗಿಯೇ ವಿಶೇಷ ಮಾರ್ಗಸೂಚಿಗಳನ್ನು ರಚನೆ ಮಾಡಲಾಗಿತ್ತು. ರಾಜಕೀಯ ಪಕ್ಷಗಳು ಮತ್ತು ಜನರು ಅದನ್ನು ಪಾಲನೆ ಮಾಡುವಂತೆ ಎಚ್ಚರವಹಿಸಲಾಯಿತು.
ಭಾರತದಲ್ಲಿ ಚುನಾವಣೆಯನ್ನು ನಡೆಸುವ ಹೊಣೆ ಹೊತ್ತಿರುವ ಚುನಾವಣಾ ಆಯೋಗ ಬೇರೆ ದೇಶಗಳಲ್ಲಿ ಕೋವಿಡ್ ಸಂದರ್ಭದಲ್ಲಿಯೇ ಚುನಾವಣೆ ನಡೆಸಿದ ಬಗ್ಗೆ ಅಧ್ಯಯನ ನಡೆಸಿತು. ದಕ್ಷಿಣ ಕೋರಿಯಾದಲ್ಲಿ ಕೋವಿಡ್ ನಡುವೆಯೇ ರಾಷ್ಟ್ರೀಯ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಕೋವಿಡ್ ಸಮಯದಲ್ಲಿಯೇ ವಿಶ್ವದ 34 ದೇಶಗಳಲ್ಲಿ ವಿವಿಧ ಚುನಾವಣೆಗಳು ನಡೆದಿವೆ.

ಚುನಾವಣೆ ನಡೆಸಬೇಕೆ? ಬೇಡವೆ? ಎಂದು ಆಯೋಗ ಸರಣಿ ಸಭೆಗಳನ್ನು ನಡೆಸಿತು. ರಾಜಕೀಯ ಪಕ್ಷಗಳು ಚುನಾವಣೆಯನ್ನು ಮುಂದೂಡುವುದು ಬೇಡ ಎಂದು ಅಭಿಪ್ರಾಯಪಟ್ಟವು. ಆರೋಗ್ಯ ಸಚಿವಾಲಯದ ಅಧಿಕಾರಿಗಳ ಜೊತೆ ಚರ್ಚಿಸಿ ಅಂತಿಮವಾಗಿ ಚುನಾವಣೆ ವೇಳಾಪಟ್ಟಿಯನ್ನು ಘೋಷಣೆ ಮಾಡಲಾಯಿತು.
ಆಗಸ್ಟ್‌ನಲ್ಲಿ ಚುನಾವಣಾ ಆಯೋಗ ಬಿಹಾರ ವಿಧಾನಸಭೆ ಚುನಾವಣೆಗೆ ಮಾರ್ಗಸೂಚಿಯನ್ನು ಪ್ರಕಟಿಸಿತು. ಮನೆ-ಮೆನೆಗೆ ತೆರಳಿ ಪ್ರಚಾರ ಮಾಡಲು ಸಹ ಹಲವಾರು ನಿಬಂಧನೆಗಳನ್ನು ಹಾಕಿತು. ಮನೆಗಳಿಗೆ ಅಭ್ಯರ್ಥಿ ಸೇರಿ 5 ಜನರು ಮಾತ್ರ ಪ್ರಚಾರಕ್ಕೆ ಹೋಗಬೇಕು ಎಂದು ನಿಯಮ ರೂಪಿಸಲಾಯಿತು.

ಮತದಾನದ ದಿನವೂ ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆಗೆ ಮಾರ್ಗಸೂಚಿ ರಚನೆ ಮಾಡಲಾಯಿತು. 1500 ಜನರಿಗೆ ಒಂದು ಮತಗಟ್ಟೆ ಸ್ಥಾಪನೆ ಮಾಡಲಾಗುತ್ತದೆ. ಆದರೆ, ಕೋವಿಡ್ ಸಂದರ್ಭದಲ್ಲಿ ಅದನ್ನು 1000ಕ್ಕೆ ಇಳಿಕೆ ಮಾಡಲಾಯಿತು. ಈ ಮೂಲಕ ಮತಗಟ್ಟೆಯಲ್ಲಿ ಹೆಚ್ಚು ಜನಸಂದಣಿ ಸೇರದಂತೆ ತಡೆಯಲಾಯಿತು.
ಸುಮಾರು 40 ಸಾವಿರ ಹೆಚ್ಚು ಮತಗಟ್ಟೆ ಸ್ಥಾಪಿಸಲಾಯಿತು. ಇವುಗಳಿಗೆ ಇವಿಎಂ, ಮೂಲ ಸೌಲಭ್ಯಗಳನ್ನು ಒದಗಿಸಬೇಕಾದ ಸವಾಲು ಎದುರಾಗಿತ್ತು. ಮತಎಣಿಕೆ ದಿನವೂ 14 ಟೇಬಲ್‌ಗಳನ್ನು 7ಕ್ಕೆ ಇಳಿಕೆ ಮಾಡಲಾಯಿತು. ಅಲ್ಲಿಯೂ ಜನಸಂದಣಿ ಸೇರುವುದಕ್ಕೆ ಕಡಿವಾಣ ಹಾಕಲಾಯಿತು.
ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಅಭ್ಯರ್ಥಿ ಮತ್ತು ಬೆಂಬಲಿಗರ 10 ಕಾರುಗಳಿಗೆ ಅವಕಾಶ ನೀಡಲಾಗುತ್ತಿತ್ತು. ಅದನ್ನು 5ಕ್ಕೆ ಇಳಿಕೆ ಮಾಡಲಾಯಿತು. ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸುವ ಜನರಿಗೂ ನಿರ್ಬಂಧ ಹೇರಲಾಯಿತು. ನಾಮಪತ್ರ ಸಲ್ಲಿಸಲು, ಠೇವಣಿ ಇಡಲು ಆನ್‌ಲೈನ್ ವ್ಯವಸ್ಥೆಯನ್ನು ಕಲ್ಪಿಸಲಾಯಿತು. ಈ ಮೂಲಕ ಸರ್ಕಾರಿ ಕಚೇರಿಗಳಲ್ಲಿ ಜನಜಂಗುಳಿ ನಿಯಂತ್ರಣ ಮಾಡಲಾಯಿತು.
ಕೋವಿಡ್ ಸೋಂಕು ತಗುಲಿ ಹೋಂ ಐಸೋಲೇಷನ್, ಕ್ವಾರಂಟೈನ್‌ನಲ್ಲಿದ್ದ ಸೋಂಕಿತರು ಸಹ ಮತದಾನ ಮಾಡಲು ಅವಕಾಶ ನೀಡಲಾಯಿತು. ಮತದಾನದ ದಿನ ಕೊನೆಯ ಒಂದು ಗಂಟೆ ಸೋಂಕಿತರು ಮತದಾನವನ್ನು ಮಾಡಿದರು. ಈ ಮೂಲಕ ಎಲ್ಲರಿಗೂ ಮತದಾನದ ಹಕ್ಕನ್ನು ನೀಡಲಾಯಿತು.
ಕೋವಿಡ್ ಭೀತಿಯ ನಡುವೆಯೂ ಜನರು ಬಂದು ಮತದಾನ ಮಾಡಿದರು. ಶೇ 57.05ರಷ್ಟು ಮತದಾನ ನಡೆಯಿತು. 2015ರ ಚುನಾವಣೆಯಲ್ಲಿ ರಾಜ್ಯದಲ್ಲಿ 56.66ರಷ್ಟು ಮತದಾನವಾಗಿತ್ತು. ವಿಧಾನಸಭೆ ಚುನಾವಣೆ ಮಾತ್ರವಲ್ಲ ಕೆಲವು ರಾಜ್ಯಸಭೆ ಸೀಟು, ವಿಧಾನ ಪರಿಷತ್ ಸ್ಥಾನಗಳ ಚುನಾವಣೆಯೂ ನಡೆಯಿತು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications