ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವ್ಯಕ್ತಿಚಿತ್ರ: "ಶಿಸ್ತಿನ ಸಿಪಾಯಿ" ಯಡಿಯೂರಪ್ಪ ರಾಜಕೀಯ ಬದುಕಿನ ಚಿತ್ರಣ

|
Google Oneindia Kannada News

Recommended Video

ಬಿ ಎಸ್ ಯಡಿಯೂರಪ್ಪ ರಾಜಕೀಯ ಹಾಗು ವೈಯುಕ್ತಿಕ ಬದುಕಿನ ಒಂದು ಚಿತ್ರಣ | Oneindia Kannada

ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರ ಸವಿಯನ್ನು ಅನುಭವಿಸಿದ್ದು ಕರ್ನಾಟಕದಲ್ಲಿ; 2007ರಲ್ಲಿ. ಅವತ್ತು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಎಂಬುವವನಾದ ನಾನು ಎಂದು ಬಿಜೆಪಿಯ ಹಿರಿಯ ನಾಯಕ ಪ್ರಮಾಣವಚನ ಸ್ವೀರಿಸಿದರು. ಈ ಮೂಲಕ ದೇಶದ 7ನೇ ದೊಡ್ಡ ರಾಜ್ಯವಾದ ಕರ್ನಾಟಕದ ಮುಖ್ಯಮಂತ್ರಿ ಹುದ್ದೆಗೇರಿದರು. ಅಲ್ಲಿಂದಾಚೆಗೆ ಮತ್ತರಡು ಬಾರಿ ಇದೇ ಮಾದರಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದವರು ಯಡಿಯೂರಪ್ಪ. ಇದೀಗ ಮತ್ತೊಮ್ಮೆ ಅವರು ಮುಖ್ಯಮಂತ್ರಿ ಹುದ್ದೆಗೆ 4ನೇ ಬಾರಿ ಏರಿದ್ದಾರೆ.

ಬಲಪಂಥೀಯ ನಿಲುವಿನ ಬಿಜೆಪಿ ಪಕ್ಷದಲ್ಲಿದ್ದರೂ ಹಸಿರು ಶಾಲು ಹೊದ್ದುಕೊಂಡು ಪಕ್ಷ ಸಂಘಟಿಸಿದವರು ಯಡಿಯೂರಪ್ಪ. ಮೊದಲ ಬಾರಿಗೆ ಅಧಿಕಾರ ಸ್ವೀಕರಿಸುವ ಸಮಯದಲ್ಲಿ ದೇವರು ಮತ್ತು ರೈತರ ಹೆಸರನ್ನು ಉಲ್ಲೇಖಿಸಿದ್ದರು. ಮೂರು ದಶಕಗಳ ಕಾಲ ವಿರೋಧ ಪಕ್ಷದಲ್ಲಿದ್ದು ಕೆಲಸ ಮಾಡಿದ್ದ ಯಡಿಯೂರಪ್ಪ ಅವರು ಅಧಿಕಾರ ಗದ್ದುಗೆಗೆ ಸಾಗಿ ಬಂದ ಹಾದಿಯ ಮೆಲುಕು ಇಲ್ಲಿದೆ.

ಮಂಡ್ಯ ಜಿಲ್ಲೆಯಲ್ಲಿ ಜನಿಸಿ, ಶಿವಮೊಗ್ಗದ ಶಿಕಾರಿಪುರದಿಂದ ರಾಷ್ಟ್ರ ರಾಜಕೀಯಕ್ಕೆ ಜಿಗಿದು ನಂತರ ಕರುನಾಡಿಗೆ ಮರಳಿ ಮತ್ತೊಮ್ಮೆ ಕರ್ನಾಟಕದಲ್ಲಿ ಕಮಲ ಅರಳುವಂತೆ ಮಾಡಿದವರು.

ಯಡಿಯೂರಪ್ಪ ಎಂಬ ಹೆಸರಿನವನಾದ ನಾನು...

ಗ್ರೌಂಡ್ ರಿಪೋರ್ಟ್: ಇದು ಯಡಿಯೂರಪ್ಪನವರ ಬೂಕನಕೆರೆಗ್ರೌಂಡ್ ರಿಪೋರ್ಟ್: ಇದು ಯಡಿಯೂರಪ್ಪನವರ ಬೂಕನಕೆರೆ

ಎಂದು 4 ಬಾರಿ ದೇವರು, ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪ ಅವರ ರಾಜಕೀಯ ಬದುಕಿನ ಚಿತ್ರಣ ಇಲ್ಲಿದೆ...

4ನೇ ಬಾರಿಗೆ ಮುಖ್ಯಮಂತ್ರಿಯಾದ ಬಿಎಸ್ವೈ

4ನೇ ಬಾರಿಗೆ ಮುಖ್ಯಮಂತ್ರಿಯಾದ ಬಿಎಸ್ವೈ

2007 ರ ನವೆಂಬರ್ 12 ರಂದು ಮೊದಲ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪ ಅವರು ನವೆಂಬರ್ 19(7ದಿನ)ರ ತನಕ ಪಟ್ಟದಲ್ಲಿದ್ದರು.

2008 ರ ಮೇ 30 ರಂದು ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ 2011 ರ ಜುಲೈ 31 ರವರೆಗೆ 3 ವರ್ಷ 62 ದಿನಗಳ ಕಾಲ (39 ತಿಂಗಳು) ಅವರು ಮುಖ್ಯಮಂತ್ರಿಯಾಗಿದ್ದರು.

3 ನೇ ಬಾರಿಗೆ ಮುಖ್ಯಮಂತ್ರಿಯಾಗಿ ಮೇ 18, 2018ರಂದು ಪ್ರಮಾಣ ವಚನ ಸ್ವೀಕರಿಸಿ 55 ಗಂಟೆಗಳ ಕಾಲ ಸಿಎಂ ಆಗಿ ಅಲ್ಪಾವಧಿ ಸರ್ಕಾರದ ದೊರೆ ಎನಿಸಿಕೊಂಡರು.

4ನೇ ಬಾರಿಗೆ ಸಿಎಂ ಆಗಿ ಜುಲೈ 26ರಂದು ಸಂಜೆ 6 ಗಂಟೆ ನಂತರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಕರ್ನಾಟಕದ ಧೀಮಂತ ನಾಯಕ

ಕರ್ನಾಟಕದ ಧೀಮಂತ ನಾಯಕ

ಬೂಕನಕೆರೆ ಎಂಬ ಕುಗ್ರಾಮದ ಬಡ ರೈತ ಕುಟುಂಬದ ಯಡಿಯೂರಪ್ಪ ದಿಢೀರ್ ನಾಯಕರಾದವರಲ್ಲ. ಯಾವುದೇ ಗಾಡ್ ಫಾದರ್ ಇಲ್ಲದೇ ಸ್ವಂತ ಪರಿಶ್ರಮ ಮೇಲೆ ಹಂತಹಂತವಾಗಿ ಬೆಳೆದು ಬಂದ ಧೀಮಂತ ನಾಯಕ. ಹಳ್ಳಿಯಿಂದಲೇ ಹೋರಾಟ ಆರಂಭಿಸಿ ರಾಜಕೀಯ ನೆಲೆಗಟ್ಟನ್ನು ಕಂಡುಕೊಂಡವರು. ಯಡಿಯೂರಪ್ಪ ಧೃತಿಗೆಡದೆ 80ರ ದಶಕದಲ್ಲಿ ಎರಡು ಶಾಸಕರಿದ್ದ ಪಕ್ಷವನ್ನು ಹಂತಹಂತವಾಗಿ ಬೆಳೆಸುತ್ತಾ ಇಂದು 110 ಶಾಸಕರ ಪಕ್ಷವಾಗಿ ಮಾಡಿದ್ದು ಕಡಿಮೆ ಸಾಧನೆ ಏನಲ್ಲ. ಹೀಗಾಗಿ ವಿರೋಧ ಪಕ್ಷದ ದ್ವೇಷಿಗಳಿಗೂ ಸಕಾರಣವಾಗಿ ಬೆದರಿಕೆ ಹುಟ್ಟಿಸಬಲ್ಲ ಛಾತಿಯುಳ್ಳವರು.

ಅವಸರವೇನಿಲ್ಲ, ಹೈಕಮಾಂಡ್ ಸೂಚನೆಯಂತೇ ನಡೆಯುತ್ತಿದ್ದೇವೆ: ಸೋಮಣ್ಣಅವಸರವೇನಿಲ್ಲ, ಹೈಕಮಾಂಡ್ ಸೂಚನೆಯಂತೇ ನಡೆಯುತ್ತಿದ್ದೇವೆ: ಸೋಮಣ್ಣ

ಹಗರಣಗಳ ನಡುವೆ ಫೀನಿಕ್ಸ್ ನಂತೆ ಎದ್ದ ಬಿಎಸ್ವೈ

ಹಗರಣಗಳ ನಡುವೆ ಫೀನಿಕ್ಸ್ ನಂತೆ ಎದ್ದ ಬಿಎಸ್ವೈ

ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪ ಅವರ ಅಧಿಕಾರ ಅವಧಿಯಲ್ಲಿ ಗೋಲಿಬಾರ್ ನಲ್ಲಿ ರೈತನೊಬ್ಬ ಮೃತಪಟ್ಟ ಘಟನೆ ಮರೆಯುವಂತಿಲ್ಲ. ಅಮಾಯಕ ರೈತ ಬಲಿಯಾದ ಹಾವೇರಿಯಲ್ಲೇ ಉದಯವಾದ ಹೊಸ ಪ್ರಾದೇಶಿಕ ಪಕ್ಷದ ಚುಕ್ಕಾಣಿ ಹಿಡಿದ ಯಡಿಯೂರಪ್ಪ ಅವರ ಸುತ್ತ ಇನ್ನೂ ಅನೇಕ ಹಗರಣಗಳ ಬಲೆ ಇದ್ದೇ ಇದೆ. ಡಿ ನೋಟಿಫಿಕೇಷನ್, ಸ್ವಜನಪಕ್ಷಪಾತ, ಭೂ ಹಗರಣಗಳ ಜೊತೆ ಯಡಿಯೂರಪ್ಪ ಅವರ ಸಿಡುಕು ಕಂಡರೆ ಜನ ಮುಖ ಬೇರೆಡೆ ತಿರುಗಿಸುತ್ತಾರೆ ಎಂಬ ದೂರಿದೆ. ಕೆಜೆಪಿ ಅಳಿವು ಉಳಿವಿನೊಂದಿಗೆ ಯಡಿಯೂರಪ್ಪ ಅವರ ರಾಜಕೀಯ ಭವಿಷ್ಯ ನಿರ್ಧಾರ ಎನ್ನಲಾಗಿತ್ತು. ಪ್ರಬಲ ಲಿಂಗಾಯತ ನಾಯಕರಾಗಿರುವ ಯಡಿಯೂರಪ್ಪ ಅವರು ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ, ಗೊಂದಲಗಳಲ್ಲಿ ಸರಿ ಮಾರ್ಗವನ್ನು ತಮ್ಮ ಅನುಯಾಯಿಗಳಿಗೆ ತೋರಲಿಲ್ಲ ಎಂಬ ಕೊರಗಿದೆ. ಆದರೆ, ಮತ್ತೊಮ್ಮೆ ಬಿಜೆಪಿ ಸೇರ್ಪಡೆಯೊಂದಿಗೆ ಅಂತ್ಯ ಕಂಡಿತು. ಬಿಜೆಪಿ ಹಿರಿಯ ನಾಯಕರು, ವಿಪಕ್ಷಗಳ ವಿರೋಧದ ನಡುವೆ ಬಿಎಸ್ ವೈ ಮತ್ತೊಮ್ಮೆ ಏಳಿಗೆ ಕಂಡಿದ್ದಾರೆ.

ಶಿಕಾರಿಪುರ ಕ್ಷೇತ್ರದಿಂದ ವಿಧಾನಸೌಧಕ್ಕೆ

ಶಿಕಾರಿಪುರ ಕ್ಷೇತ್ರದಿಂದ ವಿಧಾನಸೌಧಕ್ಕೆ

ಕೆಜೆಪಿಯಿಂದ ಬಿಜೆಪಿಗೆ ಮರಳಿದ ಬಳಿಕ ಬಿಎಸ್ ಯಡಿಯೂರಪ್ಪ ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಕಣಕ್ಕೆ ಇಳಿದು ಜಯಗಳಿಸಿದರು. ರಾಷ್ಟ್ರರಾಜಕಾರಣದಲ್ಲಿ ಮಿಂಚುವ ಅವಕಾಶ ಸಿಕ್ಕರೂ, ರಾಜ್ಯಕ್ಕೆ ಮರಳಿದರು. ಶಿವಮೊಗ್ಗದ ಸಂಸದರಾಗಿ ಕಾರ್ಯ ನಿರ್ವಹಿಸಿದ ನಂತರ ಬಿಜೆಪಿಯ ರಾಜ್ಯಾಧ್ಯಕ್ಷರಾದರು. ಚುನಾವಣೆಗೆ ಕಾರ್ಯಕರ್ತರನ್ನು ಹುರಿದುಂಬಿಸಿದರು. 'ಮಾಸ್ ಲೀಡರ್' ಎಂದೆನಿಸಿಕೊಂಡಿರುವ ಯಡಿಯೂರಪ್ಪ ಅವರು ಪಕ್ಷದ ಇತರೆ ನಾಯಕರ ಜತೆ ಮನಸ್ತಾಪಗಳಿದ್ದರೂ ಪಕ್ಷಕ್ಕಾಗಿ ಅವಡುಗಚ್ಚಿಕೊಂಡು ಕಣಕ್ಕಿಳಿದರು. 2018ರ ವಿಧಾನಸಭೆ ಚುನಾವಣೆ ವೇಳೆ 'ಮತ್ತೊಮ್ಮೆ ಸಿಎಂ ಆಗುವ ಕನಸಿಗಿಂತ ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ನನಗೆ ಮುಖ್ಯ' ಎಂದರು. ಪ್ರತಿಷ್ಠೆಯ ಸಮರದಲ್ಲಿ ಬಿಎಸ್ವೈ, ಅಂದುಕೊಂಡಿದ್ದನ್ನು ಸಾಧಿಸಿದರು. 2018ರ ವಿಧಾನಸಭೆ ಚುನಾವಣೆಗೆ ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿ.ಎಸ್.ಯಡಿಯೂರಪ್ಪ ಅವರು 86983 ಮತಗಳನ್ನು ಪಡೆದು ಜಯಗಳಿಸಿದರು. ಆದರೆ, ಬಿಜೆಪಿ ಶಾಸಕರ ಸಂಖ್ಯಾಬಲ 105 ದಾಟಲಿಲ್ಲ. ಆತುರವಾಗಿ ಸಿಎಂ ಆಗಿ ಕೆಲ ದಿನಗಳ ಅಲ್ಪಾವಧಿ ಸರ್ಕಾರದ ಸಿಎಂ ಆಗಬೇಕಾಯಿತು.

ರಾಜ್ಯಕ್ಕೆ ಹೆಚ್ಚು ಯೋಜನೆಗಳನ್ನು ಪರಿಚಯಿಸಿದವರು

ರಾಜ್ಯಕ್ಕೆ ಹೆಚ್ಚು ಯೋಜನೆಗಳನ್ನು ಪರಿಚಯಿಸಿದವರು

39 ತಿಂಗಳ ಅಧಿಕಾರ ಅವಧಿಯಲ್ಲಿ ರೈತರ ಸಾಲ ಮನ್ನಾ, ಸಾರಾಯಿ ನಿಷೇಧ. ಲಾಟರಿ ನಿಷೇಧ, ರೈತರಿಗೆ ಶೇ.4 ಬಡ್ಡಿದರದಲ್ಲಿ ಸಾಲ, ಬಿಪಿಎಲ್ ಕುಟುಂಬಗಳ ಹೆಣ್ಣುಮಕ್ಕಳ ಸಬಲೀಕರಣಕ್ಕೆ ಭಾಗ್ಯಲಕ್ಷ್ಮಿ ಯೋಜನೆ, ಉಚಿತ ಬೈಸಿಕಲ್ ವಿತರಣೆ ಯೋಜನೆ, ನಿರುದ್ಯೋಗ ನಿವಾರಣೆಗೆ ಸುವರ್ಣ ಕಾಯಕ ಉದ್ಯೋಗ ತರಬೇತಿ ಯೋಜನೆ, ಹಿರಿಯ ನಾಗರಿಕರ ಸಾಮಾಜಿಕ ಭದ್ರತೆಗೆ ಸಂಧ್ಯಾ ಸುರಕ್ಷಾ ಯೋಜನೆ, ಮೊದಲಾದ ಕ್ರಾಂತಿಕಾರಿ ಕಾರ್ಯಕ್ರಮಗಳನ್ನು ಬಜೆಟ್ ನಲ್ಲಿ ಅಳವಡಿಸಿ ಅನುಷ್ಠಾನಗೊಳಿಸಿದ ಹೆಗ್ಗಳಿಕೆ. ರೈತರಿಗಾಗಿ ಪ್ರತ್ಯೇಕ ಕೃಷಿ ಬಜೆಟ್ ಮಂಡನೆ ಮಾಡಿ, ರೈತ ಪರ ಕಾಳಜಿ ಮೆರೆದರು.

ವಯಸ್ಸಿಗೆ ಮೀರಿದ ಉತ್ಸಾಹ, ಚಟುವಟಿಕೆ

ವಯಸ್ಸಿಗೆ ಮೀರಿದ ಉತ್ಸಾಹ, ಚಟುವಟಿಕೆ

ಬಿ.ಎಸ್.ಯಡಿಯೂರಪ್ಪ ಅವರ ಪಾಲಿಗೆ ವಯಸ್ಸು ಕೇವಲ ನಂಬರ್. 2018ರ ವಿಧಾನಸಭೆ ಚುನಾವಣೆ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿದಾಗಲೇ 75 ವಸಂತಗಳನ್ನು ಕಂಡಿದ್ದವರು. 75 ವರ್ಷ ಮೇಲ್ಪಟ್ಟವರಿಗೆ ಉನ್ನತ ಹುದ್ದೆ ಸಿಗುವುದಿಲ್ಲ ಎಂಬ ಬಿಜೆಪಿಯ ಅಲಿಖಿತ ನಿಯಮದಿಂದ ಯಡಿಯೂರಪ್ಪ ಅವರಿಗೆ ವಿನಾಯಿತಿ ಸಿಕ್ಕಿದೆ. ಇದಲ್ಲದೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಂತೆ ಕರ್ನಾಟಕ ರಾಜ್ಯಾಧ್ಯಕ್ಷ ಯಡಿಯೂರಪ್ಪ ಕೂಡಾ ಎರಡು ಹುದ್ದೆಗಳನ್ನು ನಿಭಾಯಿಸುತ್ತಿರುವುದು ಗಮನಾರ್ಹ.

English summary
BS. Yeddyurappa is the 26th Chief Minister of Karnataka. Here is brief profile, biography and political career of lingayat leader and state bjp president.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X