ನೂತನ ಡಿಜಿ & ಐಜಿಪಿ ಪ್ರವೀಣ್ ಸೂದ್ ಪರಿಚಯ
ಬೆಂಗಳೂರು, ಜನವರಿ 31 : ಕರ್ನಾಟಕದ ನೂತನ ಪೊಲೀಸ್ ಮಹಾ ನಿರ್ದೇಶಕರು ಯಾರು? ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. 1986ನೇ ಬ್ಯಾಚ್ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ರಾಜ್ಯದ ನೂತನ ಡಿಜಿ & ಐಜಿಪಿಯಾಗಿ ಅಧಿಕಾರ ಸ್ವೀಕರಿಸಿದರು.
ಕರ್ನಾಟಕ ಪೊಲೀಸ್ ಇಲಾಖೆಯ ಅತ್ಯುನ್ನತ ಹುದ್ದೆ ಡಿಜಿ & ಐಜಿಪಿ. ಶುಕ್ರವಾರ ಕರ್ನಾಟಕ ಸರ್ಕಾರ ಪ್ರವೀಣ್ ಸೂದ್‌ರನ್ನು ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ನೇಮಕ ಮಾಡಿ ಆದೇಶ ಹೊರಡಿಸಿತು.
ಸಿಐಡಿಯ ಡಿಜಿಪಿಯಾಗಿ ಅವರು ಕಾರ್ಯ ನಿರ್ವಹಣೆ ಮಾಡುತ್ತಿದ್ದರು.
ಡಿಜಿ & ಐಜಿಪಿಯಾಗಿದ್ದ ನೀಲಮಣಿ ಎನ್. ರಾಜು ಶುಕ್ರವಾರ ನಿವೃತ್ತರಾದರು. ಅವರ ಸ್ಥಾನಕ್ಕೆ ಯಾರು ನೇಮಕವಾಗಲಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿತ್ತು. ಸಂಜೆ ಈ ಕುತೂಹಲಕ್ಕೆ ತೆರೆ ಬಿದ್ದಿದೆ.

ಪ್ರವೀಣ್ ಸೂದ್ ಪರಿಚಯ
* ಪ್ರವೀಣ್ ಸೂದ್ ಹಿಮಾಚಲ ಪ್ರದೇಶದ ಕಂಗ್ರಾ ಜಿಲ್ಲೆಯವರು
* ಬಿ. ಟೆಕ್ ಪದವಿ ಮತ್ತು ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ
* 1986ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ
* 1989ರಲ್ಲಿ ಮೈಸೂರು ಎಎಸ್ಪಿಯಾಗಿ ವೃತ್ತಿ ಆರಂಭಿಸಿದರು
* ಬಳ್ಳಾರಿ, ರಾಯಚೂರಿನಲ್ಲಿ ಎಸ್‌ಪಿಯಾಗಿ ಕರ್ತವ್ಯ ನಿರ್ಹಹಣೆ ಮಾಡಿದ್ದಾರೆ
* ಮಾರಿಷಸ್ ದೇಶದ ಪೊಲೀಸ್ ಸಲಹೆಗಾರರಾಗಿ ಮೂರು ವರ್ಷ ಸೇವೆ ಸಲ್ಲಿಸಿದ್ದಾರೆ
* 2004-2007ರ ತನಕ ಮೈಸೂರು ಪೊಲೀಸ್ ಆಯುಕ್ತರಾಗ ಕಾರ್ಯ ನಿರ್ವಹಣೆ
* 2008ರಲ್ಲಿ ಬೆಂಗಳೂರು ನಗರದ ಸಂಚಾರ ವಿಭಾಗದ ಹೆಚ್ಚುವರಿ ಆಯುಕ್ತರಾಗಿ ಸೇವೆ
* 203-14ರಲ್ಲಿ ಕರ್ನಾಟಕ ಹೌಸಿಂಗ್ ಕಾರ್ಪೊರೇಷನ್ ಎಂಡಿಯಾಗಿ ಕೆಲಸ
* 2017ರಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕೆಲಸ ಮಾಡಿದ್ದಾರೆ
* 1996ರಲ್ಲಿ ಮುಖ್ಯಮಂತ್ರಿಗಳ ಪದಕ ಪಡೆದಿದ್ದಾರೆ
* 2011ರಲ್ಲಿ ರಾಷ್ಟ್ರಪತಿಗಳ ಪದಕ ಪಡೆದಿದ್ದಾರೆ
* ಪ್ರವೀಣ್ ಸೂದ್ ಪುತ್ರಿಯನ್ನು ಕ್ರಿಕೆಟಿಗ ಮಾಯಾಂಕ್ ಅರ್ಗವಾಲ್ ವಿವಾಹವಾಗಿದ್ದಾರೆ.












Click it and Unblock the Notifications