ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಡಾ.ಅಶೋಕ ಸೊನ್ನದ ಪರಿಚಯ

|
Google Oneindia Kannada News

ಬಾಗಲಕೋಟೆ, ಅಕ್ಟೋಬರ್ 28: ಸ್ಥಳೀಯವಾಗಿ ಹುಂಡಿ ಕಾಣಿಕೆ ವೈದ್ಯ ಎಂದೇ ಜನಜನಿತರಾಗಿರುವ ಬಾಗಲಕೋಟೆ ನಗರದ ತಜ್ಞ ವೈದ್ಯ ಡಾ.ಅಶೋಕ ಸೊನ್ನದ ಅವರಿಗೆ ಈ ಬಾರಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗೌರವ ಸಂದಿದೆ.

ನಮ್ಮ ನಾಡು ಕಂಡ ಅಪರೂಪದ ಅನುಭವಿ ವೈದ್ಯ, ಸೇವೆಗೆ ನಿಂತ ಸಂತ, ಲಕ್ಷಾಂತರ ಜನರ ಆರೋಗ್ಯಕರ ಬದುಕಿನ ಸಂಜೀವಿನಿ ಎನಿಸಿದವರು ಡಾ.ಅಶೋಕ ಸೊನ್ನದ ಅವರು. ಶಿಕ್ಷಣ ಪ್ರೇಮ ಹಾಗೂ ಕೃಷಿ ಕುಟುಂಬದಲ್ಲಿ ಬೆಳೆದ ಇವರು ತವರು ನೆಲದ ಜನರ ಸೇವೆಗಾಗಿ ಉನ್ನತ ಅವಕಾಶ, ವೈಭೋಗದ ಜೀವನ, ಅಷ್ಟೇ ಅಲ್ಲದೆ ವೈಯಕ್ತಿಕ ಕುಟುಂಬವನ್ನು ತೊರೆದು ಬಂದ ತ್ಯಾಗಮೂರ್ತಿ ಎನಿಸಿದವರು.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಿ.ಮಹೇಶ್ವರನ್ ಪರಿಚಯಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಿ.ಮಹೇಶ್ವರನ್ ಪರಿಚಯ

ಮುಧೋಳ ತಾಲ್ಲೂಕು ಭಂಟನೂರಿನ ಡಾ.ಅಶೋಕ ಸೊನ್ನದ, ಅಮೆರಿಕದ ಮಿಚಿಗನ್ ರಾಜ್ಯದ ಸಮುದಾಯ ಆರೋಗ್ಯ ಕೇಂದ್ರದಲ್ಲಿ 38 ವರ್ಷಗಳ ಕಾಲ ತಜ್ಞ ವೈದ್ಯರಾಗಿ ಕೆಲಸ ಮಾಡಿರುವ ಡಾ.ಅಶೋಕ ಸೊನ್ನದ 2010ರಲ್ಲಿ ಭಾರತಕ್ಕೆ ಮರಳಿದ್ದಾರೆ.

Bagalakote: Profile Of Karnataka Rajyotsava Awardee Dr Ashok Sonnad

ಅಮೆರಿಕದಿಂದ ಬಂದ ನಂತರ ಹಳೇ ಬಾಗಲಕೋಟೆಯಲ್ಲಿ ತಾಯಿ ಪಾರ್ವತಿಬಾಯಿ ಹೆಸರಿನಲ್ಲಿ ಕ್ಲಿನಿಕ್ ನಡೆಸುತ್ತಿದ್ದಾರೆ. ಡಾ.ಅಶೋಕ ಸೊನ್ನದ ಅವರ ಬಳಿ ಚಿಕಿತ್ಸೆ ಪಡೆದರೆ ಹಣ ಕೊಡುವಂತಿಲ್ಲ. ಅವರ ಸೇವೆ ತೃಪ್ತಿಯಾದರೆ ಮಾತ್ರ ಕ್ಲಿನಿಕ್‌ನ ಪ್ರವೇಶ ದ್ವಾರದಲ್ಲಿ ಇಟ್ಟಿರುವ ಕಾಣಿಕೆ ಹುಂಡಿಗೆ ನಿಮ್ಮ ಕೈಲಾದಷ್ಟು ದುಡ್ಡು ಹಾಕಬಹುದಾಗಿದೆ.

ಹಣ ಹಾಕುವುದು ಕೂಡಾ ಕಡ್ಡಾಯವಲ್ಲ. ನೀವು ಹುಂಡಿಗೆ ಹಾಕಿದ ದುಡ್ಡನ್ನು ಅವರ ಉಪಯೋಗಕ್ಕೆ ಬಳಸುವುದಿಲ್ಲ. ಬದಲಿಗೆ ಮತ್ತೊಬ್ಬ ಬಡ ರೋಗಿಯ ಔಷಧಿ ಖರ್ಚಿಗೆ ಸಂದಾಯವಾಗುತ್ತದೆ.

ಡಾ.ಅಶೋಕ ಅವರ ಕ್ಲಿನಿಕ್‌ನಲ್ಲಿ ದಿನಕ್ಕೆ 10 ರೋಗಿಗಳಿಗೆ ಮಾತ್ರ ತಪಾಸಣೆ ಹಾಗೂ ಚಿಕಿತ್ಸೆ ನೀಡಲಾಗುತ್ತದೆ. ರೋಗಿಯೊಬ್ಬರ ತಪಾಸಣೆ ಕಾರ್ಯ ಕನಿಷ್ಠ ಒಂದರಿಂದ ಒಂದೂವರೆ ಗಂಟೆ ನಡೆಯುತ್ತದೆ. ರೋಗಿ ಬಡವರಿದ್ದರೆ ಉಚಿತವಾಗಿ ಔಷಧಿ ನೀಡುತ್ತಾರೆ. ಮಧುಮೇಹ ಬಾರದಂತೆ ರೂಢಿಸಿಕೊಳ್ಳಬೇಕಾದ ಜೀವನ ಪದ್ಧತಿ ಬಗ್ಗೆ ಶಾಲಾ-ಕಾಲೇಜುಗಳಿಗೆ ತೆರಳಿ ಪೋಷಕರಲ್ಲಿ ಜಾಗೃತಿ ಮೂಡಿಸುತ್ತಾರೆ.

ಭಂಟನೂರಿನ ರಾಮಪ್ಪ ಸೊನ್ನದ ಹಾಗೂ ಪಾರ್ವತಿ ಬಾಯಿ ದಂಪತಿಯ 12 ಮಕ್ಕಳಲ್ಲಿ ಅಶೋಕ ಎಂಟನೆಯವರು. ಬಾಗಲಕೋಟೆಯ ಸಕ್ರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ, ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಪಿಯುಸಿ, ಹುಬ್ಬಳ್ಳಿಯ ಕಿಮ್ಸ್ ನಲ್ಲಿ 1965ರಲ್ಲಿ ಎಂ.ಬಿ.ಬಿ.ಎಸ್ ಮುಗಿಸಿದ್ದರು.

ನಂತರ ಅಹಮದಾಬಾದ್‌ನಲ್ಲಿ ಎಂ.ಡಿ ಮುಗಿಸಿದ ಅಶೋಕ್, 1972ರಲ್ಲಿ ಅಮೆರಿಕಗೆ ತೆರಳಿ ಅಲ್ಲಿಯೇ ನೆಲೆ ನಿಂತಿದ್ದರು. ಅಮೆರಿಕ ಪ್ರಜೆ ಐಲಿನ್ ಅವರನ್ನು ಮದುವೆಯಾಗಿದ್ದು, ದಂಪತಿಗೆ ನಾಲ್ವರು ಮಕ್ಕಳಿದ್ದಾರೆ

English summary
Dr. Asoka Sonnada, a specialist Doctor in Bagalakote City, has been honored with the Karnataka Rajyotsava Award this time.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X