• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ನಿವೃತ್ತ ಪ್ರಾಧ್ಯಾಪಕ ಆರ್‌.ರಾಮಕೃಷ್ಣಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

By ಚಾಮರಾಜನಗರ ಪ್ರತಿನಿಧಿ
|

ಚಾಮರಾಜನಗರ, ಅಕ್ಟೋಬರ್ 28: 2020ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಚಾಮರಾಜನಗರ ಜಿಲ್ಲೆಯ ನಿವೃತ್ತ ಪ್ರಾಧ್ಯಾಪಕ ಹಾಗೂ ಯಕ್ಷಗಾನ ಕಲಾವಿದ ಡಾ.ಆರ್‌.ರಾಮಕೃಷ್ಣ ಭಾಜನರಾಗಿದ್ದಾರೆ.

ಇವರು ಮೂಲತಃ ಚಾಮರಾಜನಗರದ ರಾಮಸಮುದ್ರ ಬಡಾವಣೆಯ ನಿವಾಸಿಯಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ. ಮೈಸೂರಿನ ಮಾನಸ ಗಂಗೋತ್ರಿಯ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ 35 ವರ್ಷ ಇವರು ಸೇವೆ ಸಲ್ಲಿಸಿದ್ದು, ಭಾಷಾ ಸಾಹಿತ್ಯ ಹಾಗೂ ಜನಪದ ಸಾಹಿತ್ಯದಲ್ಲಿ 15ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.

ಹಿರಿಯೂರಿನ ತಿಪ್ಪೇಸ್ವಾಮಿ ಅವರಿಗೆ ರಂಗಭೂಮಿ ಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ

ರಾಜ್ಯೋತ್ಸವ ಪ್ರಶಸ್ತಿ ದೊರೆತಿರುವುದು ಖುಷಿ ತಂದಿದ್ದು, ಪ್ರಶಸ್ತಿಯನ್ನು ನನ್ನ ವಿದ್ಯಾರ್ಥಿಗಳು ಹಾಗೂ ಗುರುಗಳಿಗೆ ಅರ್ಪಿಸುತ್ತೇನೆ ಎಂದು ಡಾ.ಆರ್‌.ರಾಮಕೃಷ್ಣ ಖುಷಿ ಹಂಚಿಕೊಂಡರು.

ರಾಮಕೃಷ್ಣ ಅವರು ಪ್ರಾಥಮಿಕ ಶಿಕ್ಷಣದಿಂದ ಪದವಿವರೆಗೂ ಬೆಂಗಳೂರಿನಲ್ಲಿ ವ್ಯಾಸಂಗ ಮಾಡಿದರು. ಬಳಿಕ ಎಂ.ಎ ಕನ್ನಡ, ಎಂ.ಎ ಭಾಷಾ ವಿಜ್ಞಾನವನ್ನು ಮೈಸೂರಿನ ಕನ್ನಡ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿದರು.

೧೯೮೭ ರಲ್ಲಿ ಕುವೆಂಪು ಅವರ ಶ್ರೀರಾಮಾಯಣ ದರ್ಶನಂ, ಎ ಲಿಂಗ್ವೆಸ್ಟಿಕ್ ಸ್ಟಡಿ ಎಂಬ ವಿಷಯವಾಗಿ ಪಿ.ಎಚ್.ಡಿ ಮಾಡಿದರು.

ನಂತರ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಭಾಷಾ ವಿಜ್ಞಾನ ಉಪನ್ಯಾಸಕರಾಗಿ, ರೀಡರ್, ಪ್ರಾಧ್ಯಾಪಕ, ಹಿರಿಯ ಪ್ರಾಧ್ಯಾಪಕ, ನಿರ್ದೇಶಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದಾರೆ.

English summary
Dr.Ramakrishna, a retired professor and Yakshagana artist from Chamarajanagar district, has been selected for the Karnataka Rajyotsava Award for the year 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X