ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಸಭೆ ಚುನಾವಣೆ : ಕರ್ನಾಟಕದಲ್ಲಿ ಸೋತ ಘಟಾನುಘಟಿ ನಾಯಕರು!

|
Google Oneindia Kannada News

ಬೆಂಗಳೂರು, ಮೇ 24 : ಕರ್ನಾಟಕದ 28 ಕ್ಷೇತ್ರಗಳ ಲೋಕಸಭಾ ಚುನಾವಣೆ ಫಲಿತಾಂಶ ಅಚ್ಚರಿಗೆ ಕಾರಣವಾಗಿದೆ. ಘಟಾನುಘಟಿ ನಾಯಕರು ಚುನಾವಣೆಯಲ್ಲಿ ಸೋಲು ಅನುಭವಿಸಿದ್ದಾರೆ. ಸೋಲನ್ನು ಕಾಣದ ನಾಯಕರು ಈ ಬಾರಿ ಮುಗ್ಗರಿಸಿದ್ದಾರೆ.

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 25 ಕ್ಷೇತ್ರಗಳಲ್ಲಿ ಜಯಗಳಿಸಿದೆ. ಕಾಂಗ್ರೆಸ್ 1, ಜೆಡಿಎಸ್ 1 ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮೊದಲ ಬಾರಿಗೆ ಗೆಲುವು ದಾಖಲಿಸಿದ್ದಾರೆ.

ಲೋಕಸಭಾ ಚುನಾವಣೆ 2019 : ಕರ್ನಾಟಕದಲ್ಲಿ ಗೆದ್ದವರು, ಸೋತವರುಲೋಕಸಭಾ ಚುನಾವಣೆ 2019 : ಕರ್ನಾಟಕದಲ್ಲಿ ಗೆದ್ದವರು, ಸೋತವರು

ಮಾಜಿ ಪ್ರಧಾನಿ, ಲೋಕಸಭಾ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವರು, ಕರ್ನಾಟಕ ಸರ್ಕಾರದ ಸಚಿವರು ಚುನಾವಣಾ ಕಣದಲ್ಲಿದ್ದರು. ಘಟಾನುಘಟಿ ನಾಯಕರು ಈ ಬಾರಿಯ ಚುನಾವಣೆಯಲ್ಲಿ ಸೋತಿದ್ದಾರೆ. ಜನರ ತೀರ್ಪನ್ನು ಎಲ್ಲರೂ ಗೌರವಿಸಬೇಕಾಗಿದೆ.

ಮುಂದಿನ ಬಾರಿ ಖರ್ಗೆ ಸಂಸತ್ತಿಗೆ ಬರಲ್ಲ ಅಂತ ಮೋದಿ ಹೇಳಿದ್ದರು!ಮುಂದಿನ ಬಾರಿ ಖರ್ಗೆ ಸಂಸತ್ತಿಗೆ ಬರಲ್ಲ ಅಂತ ಮೋದಿ ಹೇಳಿದ್ದರು!

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಕೇಂದ್ರ ಸಚಿವರಾದ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್.ಮುನಿಯಪ್ಪ, ವೀರಪ್ಪ ಮೊಯ್ಲಿ ಸೋಲು ಕಂಡಿದ್ದಾರೆ. ಕರ್ನಾಟಕ ಸರ್ಕಾರದಲ್ಲಿ ಸಚಿವರಾಗಿದ್ದ ಎ.ಮಂಜು, ಈಶ್ವರ ಖಂಡ್ರೆ, ವಿನಯ್ ಕುಲಕರ್ಣಿ ಸೋತಿದ್ದಾರೆ. ಸೋತ ಘಟಾನುಘಟಿ ನಾಯಕರ ಪಟ್ಟಿ ಇಲ್ಲಿದೆ...

ಲೋಕಸಭಾ ಚುನಾವಣೆ : ದೇವೇಗೌಡರ ಕುಟುಂಬದ ಕಥೆ ಏನು?ಲೋಕಸಭಾ ಚುನಾವಣೆ : ದೇವೇಗೌಡರ ಕುಟುಂಬದ ಕಥೆ ಏನು?

ಎಚ್.ಡಿ.ದೇವೇಗೌಡ ಸೋಲು

ಎಚ್.ಡಿ.ದೇವೇಗೌಡ ಸೋಲು

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ತುಮಕೂರು ಕ್ಷೇತ್ರದಲ್ಲಿ ಬಿಜೆಪಿಯ ಜಿ.ಎಸ್. ಬಸವರಾಜು ಅವರ ವಿರುದ್ಧ 13,339 ಮತಗಳ ಅಂತರದಿಂದ ಸೋತಿದ್ದಾರೆ. 5 ಬಾರಿ ಹಾಸನ ಕ್ಷೇತ್ರದಿಂದ ಆಯ್ಕೆಯಾಗಿದ್ದ ದೇವೇಗೌಡರು ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಬಿಟ್ಟುಕೊಟ್ಟು ತುಮಕೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದರು.

ಮಲ್ಲಿಕಾರ್ಜುನ ಖರ್ಗೆ ಸೋಲು

ಮಲ್ಲಿಕಾರ್ಜುನ ಖರ್ಗೆ ಸೋಲು

ಸೋಲಿಲ್ಲದ ಸರದಾ ಎಂಬ ಕಿರೀಟ ಕಳಚಿ ಬಿದ್ದಿದೆ. ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜು ಖರ್ಗೆ ಅವರು 95,452 ಮತಗಳ ಅಂತರದಿಂದ ಗುಲ್ಬರ್ಗ ಕ್ಷೇತ್ರದಲ್ಲಿ ಬಿಜೆಪಿಯ ಡಾ.ಉಮೇಶ್ ಜಾಧವ್ ವಿರುದ್ಧ ಸೋತಿದ್ದಾರೆ. 1972 ರಿಂದ 12 ಚುನಾವಣೆ ಎದುರಿಸಿದ್ದ ಖರ್ಗೆ ಸತತ 9 ಬಾರಿ ವಿಧಾನಸಭೆಗೆ, 2 ಬಾರಿ ಲೋಕಸಭೆಗೆ ಆಯ್ಕೆಯಾಗಿ ಸೋಲಿಲ್ಲದ ಸರದಾರ ಎಂಬ ಕಿರೀಟ ಪಡೆದಿದ್ದರು.

ಕೆ.ಎಚ್.ಮುನಿಯಪ್ಪ

ಕೆ.ಎಚ್.ಮುನಿಯಪ್ಪ

ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಬಿಜೆಪಿಯ ಎಸ್.ಮುನಿಸ್ವಾಮಿ ವಿರುದ್ಧ 210021 ಮತಗಳ ಅಂತರದಿಂದ ಸೋಲು ಅನುಭವಿಸಿದರು. ಕೋಲಾರ ಕ್ಷೇತ್ರದಿಂದ 7 ಬಾರಿ ಮುನಿಯಪ್ಪ ಅವರು ಲೋಕಸಭೆಗೆ ಆಯ್ಕೆಯಾಗಿದ್ದರು. ಆದರೆ, ಈ ಚುನಾವಣೆಯಲ್ಲಿ ಸೋಲಾಗಿದೆ.

ಎಂ.ವೀರಪ್ಪ ಮೊಯ್ಲಿ

ಎಂ.ವೀರಪ್ಪ ಮೊಯ್ಲಿ

ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ಅವರು ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದಾರೆ. ಬಿಜೆಪಿಯ ಬಿ.ಎನ್.ಬಚ್ಚೇಗೌಡ ವಿರುದ್ಧ 182110 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.

ಬಿ.ಕೆ.ಹರಿಪ್ರಸಾದ್ ಸೋಲು

ಬಿ.ಕೆ.ಹರಿಪ್ರಸಾದ್ ಸೋಲು

ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದಾರೆ. ಬಿಜೆಪಿಯ ತೇಜಸ್ವಿ ಸೂರ್ಯ ವಿರುದ್ಧ 331192 ಮತಗಳ ಅಂತರದಿಂದ ಬಿ.ಕೆ.ಹರಿಪ್ರಸಾದ್ ಸೋಲು ಕಂಡಿದ್ದಾರೆ.

ಧ್ರುವ ನಾರಾಯಣ್

ಧ್ರುವ ನಾರಾಯಣ್

ಚಾಮರಾಜನಗರ ಕ್ಷೇತ್ರದಿಂದ 2 ಬಾರಿ ಆಯ್ಕೆಯಾಗಿದ್ದ ಕಾಂಗ್ರೆಸ್‌ನ ಧ್ರುವ ನಾರಾಯಣ್ ಅವರು ಈ ಬಾರಿಯ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದಾರೆ. ಬಿಜೆಪಿಯ ವಿ.ಶ್ರೀನಿವಾಸ ಪ್ರಸಾದ್ ವಿರುದ್ಧ 1817 ಮತಗಳ ಅಂತರದಲ್ಲಿ ಸೋಲು ಕಂಡಿದ್ದಾರೆ.

ಕೃಷ್ಣ ಬೈರೇಗೌಡ

ಕೃಷ್ಣ ಬೈರೇಗೌಡ

ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿರುವ ಕೃಷ್ಣ ಬೈರೇಗೌಡ ಅವರು ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದಾರೆ. ಬಿಜೆಪಿಯ ಡಿ.ವಿ.ಸದಾನಂದ ಗೌಡ ವಿರುದ್ಧ 147518 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.

ವಿ.ಎಸ್.ಉಗ್ರಪ್ಪ

ವಿ.ಎಸ್.ಉಗ್ರಪ್ಪ

ಕಾಂಗ್ರೆಸ್ ಹಿರಿಯ ನಾಯಕ ವಿ.ಎಸ್.ಉಗ್ರಪ್ಪ ಬಳ್ಳಾರಿ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದಾರೆ. 2018ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಗೆದ್ದಿದ್ದ ಉಗ್ರಪ್ಪ 55707 ಮತಗಳ ಅಂತರದಿಂದ ಬಿಜೆಪಿಯ ವೈ.ದೇವೇಂದ್ರಪ್ಪ ಅವರ ವಿರುದ್ಧ ಸೋತಿದ್ದಾರೆ.

ಚಿಕ್ಕೋಡಿಯಲ್ಲಿ ಸೋಲು

ಚಿಕ್ಕೋಡಿಯಲ್ಲಿ ಸೋಲು

ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಪ್ರಕಾಶ್ ಹುಕ್ಕೇರಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದಾರೆ. ಬಿಜೆಪಿಯ ಅಣ್ಣಾ ಸಾಹೇಬ್ ಜೊಲ್ಲೆ ವಿರುದ್ಧ 1,18,877 ಮತಗಳ ಅಂತರದಲ್ಲಿ ಪ್ರಕಾಶ್ ಹುಕ್ಕೇರಿ ಸೋತಿದ್ದಾರೆ.

ಹಾಸನ ಲೋಕಸಭಾ ಕ್ಷೇತ್ರ

ಹಾಸನ ಲೋಕಸಭಾ ಕ್ಷೇತ್ರ

ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಎ.ಮಂಜು ಸೋಲು ಕಂಡಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿದ್ದ ಮಂಜು ಅವರು ಚುನಾವಣೆ ಸಮಯದಲ್ಲಿ ಬಿಜೆಪಿ ಸೇರಿ ಚುನಾವಣಾ ಕಣಕ್ಕಿಳಿದಿದ್ದರು. ಕಾಂಗ್ರೆಸ್-ಜೆಡಿಎಸ್‌ ಮೈತ್ರಿಕೂಟದ ಪ್ರಜ್ವಲ್ ರೇವಣ್ಣ ವಿರುದ್ಧ 1,41,324 ಮತಗಳ ಅಂತರದಲ್ಲಿ ಸೋಲು ಕಂಡಿದ್ದಾರೆ.

ಮೂವರು ಮಾಜಿ ಸಚಿವರು

ಮೂವರು ಮಾಜಿ ಸಚಿವರು

* ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್‌-ಜೆಡಿಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಅವರು ಬಿಜೆಪಿಯ ಶೋಭಾ ಕರಂದ್ಲಾಜೆ ವಿರುದ್ಧ 3,49,599 ಮತಗಳ ಅಂತರದಲ್ಲಿ ಸೋತಿದ್ದಾರೆ.

* ಬೀದರ್ ಕ್ಷೇತ್ರದಲ್ಲಿ ಕಾಂಗ್ರೆಸ್‌-ಜೆಡಿಎಸ್‌ನ ಈಶ್ವರ ಖಂಡ್ರೆ ಅವರು ಬಿಜೆಪಿಯ ಭಗವಂತ ಖೂಬಾ ವಿರುದ್ಧ 1,16,834 ಮತಗಳ ಅಂತರದಿಂದ ಸೋತಿದ್ದಾರೆ.

* ಧಾರವಾಡ ಕ್ಷೇತ್ರದಲ್ಲಿ ಕಾಂಗ್ರೆಸ್‌-ಜೆಡಿಎಸ್‌ನ ವಿನಯ್ ಕುಲಕರ್ಣಿ ಅವರು ಬಿಜೆಪಿಯ ಪ್ರಹ್ಲಾದ್ ಜೋಶಿ ವಿರುದ್ಧ 205072 ಮತಗಳ ಅಂತರದಿಂದ ಸೋತಿದ್ದಾರೆ.

English summary
2019 lok sabha election result announced. Prominent leaders like H.D.Deve Gowda, Mallikarjun Kharge, Veerappa Moily and others defeated in election. Who lost here are the list.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X