Punjab K News India Exit Poll 2022: ಎಎಪಿಗೆ ಗದ್ದು‌ಗೆ

ಚಂಡೀಗಢ, ಮಾರ್ಚ್ 07: ಪಂಜಾಬ್‌ ವಿಧಾನಸಭೆ ಚುನಾವಣೆಯು ಫೆಬ್ರವರಿ 20ರಂದು ನಡೆದಿದ್ದು, ಚುನಾವಣೆಯ ಫಲಿತಾಂಶವು ಮಾರ್ಚ್ 10ರಂದು ಹೊರಬೀಳಲಿದೆ. ಇದಕ್ಕೂ ಮುನ್ನ ಕೆ ನ್ಯೂಸ್‌ ಇಂಡಿಯಾ ಹಾಗೂ ಪೀಪಲ್‌ ಪಲ್ಸ್‌ನ ಚುನಾವಣೋತ್ತರ ಸಮೀಕ್ಷೆಯು ಹೊರಬಿದ್ದಿದೆ. ಈ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಎಎಪಿ ಪಂಜಾಬ್‌ನಲ್ಲಿ ಗದ್ದುಗೆಯನ್ನು ಪಡೆಯುವ ಸಾಧ್ಯತೆ ಇದೆ.

ಎಎಪಿ ಪಕ್ಷವು 59 - 66 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಕಾಂಗ್ರೆಸ್‌ 23 - 28 ಸ್ಥಾನಗಳನ್ನು ತನ್ನದಾಗಿಸಿಕೊಳ್ಳಲಿದೆ. 17 - 21 ಸ್ಥಾನಗಳಲ್ಲಿ ಶಿರೋಮಣಿ ಅಕಾಲಿದಳವು ಜಯ ಗಳಿಸಲಿದೆ. ಇನ್ನುಳಿದಂತೆ ಬಿಜೆಪಿಯು 2 - 6 ರಷ್ಟು ಸ್ಥಾನದಲ್ಲಿ ಮಾತ್ರ ವಿಜಯ ಸಾಧಿಸಲಿದೆ. ಇನ್ನುಳಿದಂತೆ ಇತರೆ ಪಕ್ಷಗಳು 1 - 4 ಕ್ಷೇತ್ರಗಳಲ್ಲಿ ಗೆಲುವು ಪಡೆಯಲಿದೆ.

ಮ್ಯಾಜಿಕ್‌ ಸಂಖ್ಯೆಯಷ್ಟೇ ಅಥವಾ ಅದಕ್ಕೂ ಅಧಿಕ ಕ್ಷೇತ್ರದಲ್ಲಿ ಎಎಪಿ ಗೆಲುವು ಸಾಧಿಸಿ ಕಾಂಗ್ರೆಸ್‌ನಿಂದ ಚುನಾವಣಾ ಚುಕ್ಕಾಣಿಯನ್ನು ತನ್ನ ಕೈಗೆ ಪಡೆಯುವ ಸಾಧ್ಯತೆಯನ್ನುಕೆ ನ್ಯೂಸ್‌ ಇಂಡಿಯಾ ಚುನಾವಣೋತ್ತರ ಸಮೀಕ್ಷೆಯು ವ್ಯಕ್ತಪಡಿಸಿದೆ. ಇನ್ನು ಎಎಪಿ ಶೇಕಡ 40ರಷ್ಟು, ಕಾಂಗ್ರೆಸ್‌ ಶೇಕಡ 30, ಎಸ್‌ಎಡಿ ಶೇಕಡ 20ರಷ್ಟು, ಬಿಜೆಪಿ ಶೇಕಡ 8ರಷ್ಟು ಹಾಗೂ ಇನ್ನುಳಿದ ಪಕ್ಷಗಳು ಶೇಕಡ 2ರಷ್ಟು ಮತವನ್ನು ಪಡೆಯಲಿದೆ.

Punjab Election K News India Exit Poll Results 2022 in Kannada

ಪಂಜಾಬ್‌ನಲ್ಲಿ ಒಂದೇ ಹಂತದಲ್ಲಿ ಚುನಾವಣೆ

ಪಂಜಾಬ್‌ನಲ್ಲಿ ಒಟ್ಟು 117 ವಿಧಾನಸಭೆ ಕ್ಷೇತ್ರಗಳು ಇದೆ. ಫೆಬ್ರವರಿ 20ರಂದು ಎಲ್ಲಾ ವಿಧಾನಸಭೆ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಸಲಾಗಿದೆ. ಮಾರ್ಚ್ 10ರಂದು ಇಲ್ಲಿ ಚುನಾವಣೆ ಫಲಿತಾಂಶ ಹೊರಬೀಳಲಿದೆ. ಪ್ರಸ್ತುತ ಕಾಂಗ್ರೆಸ್‌ ಕೈಯಲ್ಲಿ ಇರುವ ಪಂಜಾಬ್‌ ಅಧಿಕಾರ ಮುಂದೆ ಯಾರ ಕೈಗೆ ಸೇರುತ್ತದೆ ಅಥವಾ ಕಾಂಗ್ರೆಸ್‌ನ ಕೈಯಲ್ಲೇ ಉಳಿಯಲಿದೆಯೇ ಎಂದು ಕಾದು ನೋಡಬೇಕಾಗಿದೆ.

ಮಾ.10ರಂದು ಪಂಚರಾಜ್ಯಗಳ ಚುನಾವಣಾ ಭವಿಷ್ಯ

ಪಂಜಾಬ್‌ನ 117 ವಿಧಾನಸಭೆ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಸಲಾಗಿದೆ. ಪಂಜಾಬ್‌ ಹೊರತಾಗಿ ನಾಲ್ಕು ರಾಜ್ಯಗಳಲ್ಲೂ ವಿಧಾನಸಭೆ ಚುನಾವಣೆ ನಡೆದಿದೆ. ಉತ್ತರ ಪ್ರದೇಶ, ಗೋವಾ, ಉತ್ತರಾಖಂಡ ಮತ್ತು ಮಣಿಪುರದಲ್ಲೂ ಚುನಾವಣೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3, 7 ರಂದು ಚುನಾವಣೆ ನಡೆದಿದೆ. ಗೋವಾ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆದಿದೆ. ಪಂಜಾಬ್‌ನಲ್ಲಿ ಫೆಬ್ರವರಿ 20 ರಂದು ಮತದಾನ ನಡೆಯಲಿದೆ. ಮಣಿಪುರದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆದಿದೆ. ಮಾರ್ಚ್ 10ರಂದು ಪಂಚ ರಾಜ್ಯಗಳಲ್ಲಿ ಮತ ಎಣಿಕೆ ನಡೆಯಲಿದೆ.

ಕಳೆದ 2017ರಲ್ಲಿ ಪಂಜಾಬ್‌ ಮತದಾರರ ತೀರ್ಪು ಏನಿತ್ತು?

2017 ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ, 117 ವಿಧಾನಸಭೆ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 77 ಸ್ಥಾನಗಳನ್ನು ಗೆದ್ದುಕೊಂಡಿದೆ. ಭಾರತೀಯರ ಜನತಾ ಪಾರ್ಟಿ (ಬಿಜೆಪಿ) ಕೇವಲ ಮೂರು ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಶಿರೋಮಣಿ ಅಕಾಲಿದಳವು ಕೇವಲ 15 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಮತ್ತೊಂದೆಡೆ, ಎಎಪಿ 20 ಸ್ಥಾನಗಳೊಂದಿಗೆ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಲೋಕ ಇನ್ಸಾಫ್‌ ಪಕ್ಷವು ಎರಡು ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಪಂಜಾಬ್‌ನಲ್ಲಿ ಯಾವುದೇ ಪಕ್ಷ ಅಧಿಕಾರ ಸ್ಥಾಪಿಸಲು ಬೇಕಿರುವ ಮ್ಯಾಜಿಕ್ ನಂಬರ್ 59. (ಒನ್‌ ಇಂಡಿಯಾ ಸುದ್ದಿ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+