ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೊದಲು ಓದಿ: ಭಾರತದಲ್ಲಿ ಗರ್ಭಿಣಿಯರಿಗೆ ಕೊವ್ಯಾಕ್ಸಿನ್ ಲಸಿಕೆ ಸುರಕ್ಷಿತವೇ ಇಲ್ಲವೇ?

|
Google Oneindia Kannada News

ನವದೆಹಲಿ, ನವೆಂಬರ್ 8: ಭಾರತ್ ಬಯೋಟೆಕ್ ಸಂಸ್ಥೆಯು ಉತ್ಪಾದಿಸುವ ಕೊವ್ಯಾಕ್ಸಿನ್ ಲಸಿಕೆಯು ಗರ್ಭಿಣಿಯರಿಗೆ ಸುರಕ್ಷಿತ ಮತ್ತು ಪರಿಣಾಮಕಾರಿಯಾಗಿದೆ ಎಂದು ಸ್ಪಷ್ಟಪಡಿಸುವುದಕ್ಕೆ ವಾಸ್ತವದಲ್ಲಿ ಸಲ್ಲಿಸಿರುವ ದತ್ತಾಂಶಗಳು ಸಾಕಾಗುವುದಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. WHO ಪ್ರತಿಪಾದನೆಯು ಬೆಂಗಳೂರಿನ ವೈದ್ಯರು ಸೇರಿದಂತೆ ವೈದ್ಯಕೀಯ ವಲಯದಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ.

ಕಳೆದ ನವೆಂಬರ್ 3ರಂದು ವಿಶ್ವ ಆರೋಗ್ಯ ಸಂಸ್ಥೆಯು ಕೊವ್ಯಾಕ್ಸಿನ್ ಲಸಿಕೆಯನ್ನು ತುರ್ತು ಬಳಕೆಯ ಪಟ್ಟಿಗೆ ಸೇರಿಸುವುದಕ್ಕೆ ಅನುಮೋದನೆ ನೀಡಿತು. ಈ ವೇಳೆ ಕೆಲವು ಅಂಶಗಳ ಮೇಲೆ WHO ಗಮನ ಹರಿಸಿದ್ದು, ಗರ್ಭಿಣಿಯರಿಗೆ ಕೊವ್ಯಾಕ್ಸಿನ್ ಲಸಿಕೆಯನ್ನು ನೀಡಬೇಕೇ ಬೇಡವೇ ಎಂಬ ಕುರಿತು ಪ್ರಶ್ನೆಯನ್ನು ಹುಟ್ಟು ಹಾಕುವಂತಿದೆ.

ಗುಡ್ ನ್ಯೂಸ್: ಕೊವ್ಯಾಕ್ಸಿನ್ ಉತ್ಪಾದಿಸಿದ 12 ತಿಂಗಳವರೆಗೂ ಲಸಿಕೆ ಬಳಸಲು ಅನುಮೋದನೆ ಗುಡ್ ನ್ಯೂಸ್: ಕೊವ್ಯಾಕ್ಸಿನ್ ಉತ್ಪಾದಿಸಿದ 12 ತಿಂಗಳವರೆಗೂ ಲಸಿಕೆ ಬಳಸಲು ಅನುಮೋದನೆ

ಹಾಗಿದ್ದರೆ ಕೊವ್ಯಾಕ್ಸಿನ್ ಲಸಿಕೆಯನ್ನು ಗರ್ಭಿಣಿಯರಿಗೆ ಸುರಕ್ಷಿತವಾಗಿಲ್ಲವೇ, ಗರ್ಭಿಣಿಯರ ಮೇಲೆ ಲಸಿಕೆಯು ಹೆಚ್ಚು ಪರಿಣಾಮಕಾರಿಯಾಗಿಲ್ಲವೇ, ಅಸಲಿಗೆ ಗರ್ಭಿಣಿಯರ ಮೇಲೆ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆ ಮಾಡಬೇಕೇ ಬೇಡವೇ ಎಂಬ ಹಲವು ಪ್ರಶ್ನೆಗಳಿಗೆ ಇದೀಗ ಉತ್ತರ ಕಂಡುಕೊಳ್ಳಬೇಕಾಗಿದೆ. ಈ ಕುರಿತು ಒಂದು ವಿಶೇಷ ವರದಿ ಇಲ್ಲಿದೆ.

ಶೇ.80ರಷ್ಟು ಗರ್ಭಿಣಿಯರಿಗೆ ಕೊವ್ಯಾಕ್ಸಿನ್ ಲಸಿಕೆ ವಿತರಣೆ

ಶೇ.80ರಷ್ಟು ಗರ್ಭಿಣಿಯರಿಗೆ ಕೊವ್ಯಾಕ್ಸಿನ್ ಲಸಿಕೆ ವಿತರಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೊರೊನಾವೈರಸ್ ಲಸಿಕೆ ಪಡೆದುಕೊಂಡ ಗರ್ಭಿಣಿಯರ ಪೈಕಿ ಶೇ.80ರಷ್ಟು ಗರ್ಭಿಣಿಯರಿಗೆ ಭಾರತ್ ಬಯೋಟೆಕ್ ಉತ್ಪಾದಿಸುವ ಕೊವ್ಯಾಕ್ಸಿನ್ ಲಸಿಕೆಯನ್ನೇ ನೀಡಲಾಗಿದೆ. ಉಳಿದ ಶೇ.20ರಷ್ಟು ಗರ್ಭಿಣಿಯರಿಗೆ ಮಾತ್ರ ಕೊವಿಶೀಲ್ಡ್ ಲಸಿಕೆಯನ್ನು ವಿತರಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಈವರೆಗೂ 7,600 ಗರ್ಭಿಣಿಯರಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರಲ್ಲಿ 5,700 ಗರ್ಭಿಣಿಯರು ಕೊವ್ಯಾಕ್ಸಿನ್ ಲಸಿಕೆ ಪಡೆದುಕೊಂಡಿದ್ದರೆ, ಕೇವಲ 1,800 ಗರ್ಭಿಣಿಯರು ಮಾತ್ರ ಕೊವಿಶೀಲ್ಡ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ.

ಬೆಂಗಳೂರಿನ ವಾಸಿ ವಿಲಾಸ್ ಆಸ್ಪತ್ರೆಯಲ್ಲಿ 697 ಗರ್ಭಿಣಿಯರಿಗೆ ಲಸಿಕೆ ನೀಡಿದ್ದು, ಈ ಪೈಕಿ ಶೇ.80ರಷ್ಟು ಮಹಿಳೆಯರಿಗೆ ಕೊವ್ಯಾಕ್ಸಿನ್ ಲಸಿಕೆಯನ್ನು ನೀಡಲಾಗಿದೆ. ಇನ್ನೊಂದೆಡೆ ಹೆಚ್ಎಸ್ಐಎಸ್ ಗೋಷಾ ಆಸ್ಪತ್ರೆಯಲ್ಲಿ ಈವರೆಗೂ ಕೇವಲ 1,060 ಗರ್ಭಿಣಿಯರಿಗೆ ಮಾತ್ರ ಕೊವಿಶೀಲ್ಡ್ ಲಸಿಕೆಯನ್ನು ನೀಡಲಾಗಿದ್ದು, ಉಳಿದ ಬಹುಪಾಲು ಮಹಿಳೆಯರಿಗೆ ಕೊವ್ಯಾಕ್ಸಿನ್ ಲಸಿಕೆಯನ್ನೇ ವಿತರಣೆ ಮಾಡಿರುವುದು ಗೊತ್ತಾಗಿದೆ.

Breaking News: ಭಾರತದ ಕೊವ್ಯಾಕ್ಸಿನ್ ಲಸಿಕೆ ತುರ್ತು ಬಳಕೆಗೆ WHO ಅನುಮೋದನೆBreaking News: ಭಾರತದ ಕೊವ್ಯಾಕ್ಸಿನ್ ಲಸಿಕೆ ತುರ್ತು ಬಳಕೆಗೆ WHO ಅನುಮೋದನೆ

ಕೊವ್ಯಾಕ್ಸಿನ್ ಪಡೆದ ಗರ್ಭಿಣಿಯರು ಆತಂಕಪಡಬೇಕಿಲ್ಲ

ಕೊವ್ಯಾಕ್ಸಿನ್ ಪಡೆದ ಗರ್ಭಿಣಿಯರು ಆತಂಕಪಡಬೇಕಿಲ್ಲ

ಬೆಂಗಳೂರಿನಲ್ಲಿ ಕೊವ್ಯಾಕ್ಸಿನ್ ಲಸಿಕೆ ಪಡೆದುಕೊಂಡಿರುವ ಗರ್ಭಿಣಿಯರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಏಕೆಂದರೆ ಈವರೆಗೂ ಕೊವ್ಯಾಕ್ಸಿನ್ ಲಸಿಕೆಯನ್ನು ಪಡೆದ ನಂತರದಲ್ಲಿ ಅಡ್ಡ ಪರಿಣಾಮವನ್ನು ಎದುರಿಸಿದ ಒಂದೇ ಒಂದು ಪ್ರಕರಣವು ವರದಿಯಾಗಿಲ್ಲ ಎಂದು ಬಿಬಿಎಂಪಿ ಆರೋಗ್ಯ ಅಧಿಕಾರಿ ಡಾ. ಶೋಭಾ ಸುದರ್ಶನ್ ತಿಳಿಸಿದ್ದಾರೆ. ನಗರದ ವಾಣಿ ವಿಲಾಸ್ ಆಸ್ಪತ್ರೆಯಲ್ಲಿ ಬಹುತೇಕ ಗರ್ಭಿಣಿಯರಿಗೆ ಕೊವ್ಯಾಕ್ಸಿನ್ ಲಸಿಕೆಯನ್ನು ನೀಡಡಿದ್ದೇವೆ. ಆದ್ದರಿಂದಲೇ 28 ದಿನಗಳಲ್ಲಿ ಗರ್ಭಿಣಿಯರಿಗೆ ಲಸಿಕೆ ನೀಡುವ ಅಭಿಯಾನವನ್ನು ಪೂರ್ಣಗೊಳಿಸುವುದಕ್ಕೆ ಸಾಧ್ಯವಾಯಿತು. ಕೊವಿಶೀಲ್ಡ್ ಆಗಿದ್ದಲ್ಲಿ ಮೊದಲ ಡೋಸ್ ಪಡೆದ ಮಹಿಳೆಯು ಎರಡನೇ ಡೋಸ್ ಪಡೆಯುವುದಕ್ಕಾಗಿ 84 ದಿನಗಳವರೆಗೂ ಕಾಯಬೇಕಾಗಿತ್ತು ಎಂದು ಡಾ. ಶೋಭಾ ಸುದರ್ಶನ್ ಹೇಳಿದ್ದಾರೆ.

ಗರ್ಭಿಣಿಯರಿಗೆ ಲಸಿಕೆ ನೀಡುವ ಮೊದಲು ತಪಾಸಣೆ

ಗರ್ಭಿಣಿಯರಿಗೆ ಲಸಿಕೆ ನೀಡುವ ಮೊದಲು ತಪಾಸಣೆ

ಬೆಂಗಳೂರಿನಲ್ಲಿ ಗರ್ಭಿಣಿಯರಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡುವುದಕ್ಕೂ ಮೊದಲು ಅನುಸರಿಸುವ ಪ್ರಕ್ರಿಯೆ ಬಗ್ಗೆ ಬಿಬಿಎಂಪಿ ಆರೋಗ್ಯ ಅಧಿಕಾರಿ ಡಾ. ಶೋಭಾ ಸುದರ್ಶನ್ ವಿವರಿಸಿದ್ದಾರೆ. ಗರ್ಭಿಣಿಯರು ಹೆಚ್ಚು ಅಪಾಯವನ್ನು ಹೊಂದಿದ್ದಾರೆಯೇ ಇಲ್ಲವೇ ಎಂಬುದರ ಬಗ್ಗೆ ಮೊದಲು ತಪಾಸಣೆ ನಡೆಸಲಾಗುತ್ತಿತ್ತು. ಸ್ತ್ರಿರೋಗತಜ್ಞರು ಪರೀಕ್ಷಿಸಿದ ನಂತರ ಯಾವುದೇ ಅಡ್ಡಿ ಆತಂಕಗಳಿಲ್ಲ ಎಂದು ದೃಢಪಟ್ಟ ಬಳಿಕವಷ್ಟೇ ಗರ್ಭಿಣಿಯರಿಗೆ ಕೊವ್ಯಾಕ್ಸಿನ್ ಲಸಿಕೆ ನೀಡುವ ಬಗ್ಗೆ ಅನುಮೋದಿಸಲಾಗುತ್ತಿತ್ತು ಎಂದಿದ್ದಾರೆ.

ಕೊವ್ಯಾಕ್ಸಿನ್ ಲಸಿಕೆ ವಿತರಣೆ ಬಗ್ಗೆ ಅಂತಿಮ ಚರ್ಚೆ ಅತ್ಯಗತ್ಯ

ಕೊವ್ಯಾಕ್ಸಿನ್ ಲಸಿಕೆ ವಿತರಣೆ ಬಗ್ಗೆ ಅಂತಿಮ ಚರ್ಚೆ ಅತ್ಯಗತ್ಯ

ಬೆಂಗಳೂರು ಪ್ರಸೂತಿ ಮತ್ತು ಸ್ತ್ರಿರೋಗ ಸಮಾಜವು ಈವರೆಗೂ ಗರ್ಭಿಣಿಯರಿಗೆ ಕೊವಿಶೀಲ್ಡ್ ಲಸಿಕೆಯನ್ನು ನೀಡುವುದಕ್ಕೆ ಮಾತ್ರ ಶಿಫಾರಸ್ಸು ಮಾಡಿದೆ. ಗರ್ಭಿಣಿಯರಿಗೆ ಕೊವ್ಯಾಕ್ಸಿನ್ ಲಸಿಕೆ ಸುರಕ್ಷಿತವೇ ಅಲ್ಲವೇ ಎಂಬುದರ ಬಗ್ಗೆ ಭಾರತದ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರದ ಸಂಘಗಳ ಒಕ್ಕೂಟ(FOGSI)ದೊಂದಿಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಯಲಾಗುವುದು, ಎಂದು ಬೆಂಗಳೂರು ಪ್ರಸೂತಿ ಮತ್ತು ಸ್ತ್ರಿರೋಗ ಸಮಾಜದ ಅಧ್ಯಕ್ಷೆ ಡಾ ಪದ್ಮಾ ಪ್ರಸಾದ್ ಹೇಳಿದ್ದಾರೆ.

ಗರ್ಭಾವಸ್ಯೆಯಲ್ಲಿ ಇರುವ ಮಹಿಳೆಯರಿಗೆ ಕೊವಿಶೀಲ್ಡ್ ಲಸಿಕೆ ಅಥವಾ ಕೊವ್ಯಾಕ್ಸಿನ್ ಲಸಿಕೆಗಳಲ್ಲಿ ಯುವುದು ಸುರಕ್ಷಿತ ಎಂಬುದರ ಬಗ್ಗೆ ಚರ್ಚೆ ನಡೆಸಬೇಕಿದೆ. ಕೇಂದ್ರ FOGSI ಯಾವ ಲಸಿಕೆಯನ್ನು ನೀಡುವುದು ಉತ್ತಮ ಎಂಬುದರ ಬಗ್ಗೆ ಸ್ಪಷ್ಟ ಶಿಫಾರಸ್ಸು ಹಾಗೂ ಮಾರ್ಗಸೂಚಿಗಳನ್ನು ಹೊರಡಿಸಬೇಕಿದೆ ಎಂದು ಡಾ. ಪದ್ಮಾ ಪ್ರಸಾದ್ ತಿಳಿಸಿದ್ದಾರೆ.

ಬೂಸ್ಟರ್ ಡೋಸ್ ಲಸಿಕೆ ಬಗ್ಗೆ ಅಭಿಪ್ರಾಯ ಸಂಗ್ರಹಿಸುವ ಅಗತ್ಯ

ಬೂಸ್ಟರ್ ಡೋಸ್ ಲಸಿಕೆ ಬಗ್ಗೆ ಅಭಿಪ್ರಾಯ ಸಂಗ್ರಹಿಸುವ ಅಗತ್ಯ

"ವಿಶ್ವ ಆರೋಗ್ಯ ಸಂಸ್ಥೆಯು ಕೊವ್ಯಾಕ್ಸಿನ್ ಲಸಿಕೆಯ ಬಗ್ಗೆ ಈಗಷ್ಟೇ ಕೆಲವು ಅಂಶಗಳನ್ನು ಬಹಿರಂಗಪಡಿಸಿದೆ. ಆದರೆ ಈ ಬಗ್ಗೆ ನಾವು ಸ್ತ್ರಿರೋಗಿ ತಜ್ಞರ ಅಭಿಪ್ರಾಯವನ್ನು ಸಂಗ್ರಹಿಸಬೇಕಿದೆ. ಇದರ ಜೊತೆಗೆ ಈಗಾಗಲೇ ಎರಡು ಡೋಸ್ ಕೊವ್ಯಾಕ್ಸಿನ್ ಲಸಿಕೆಯನ್ನು ಪಡೆದುಕೊಂಡಿರುವ ಗರ್ಭಿಣಿಯರಿಗೆ ಕೊವಿಶೀಲ್ಡ್ ಲಸಿಕೆಯನ್ನು ಬೂಸ್ಟರ್ ಡೋಸ್ ಆಗಿ ನೀಡಬೇಕೇ ಎಂಬ ಕುರಿತು ಚರ್ಚಿಸಬೇಕಿದೆ," ಎಂದು ಡಾ. ಪದ್ಮಾ ಪ್ರಸಾದ್ ಹೇಳಿದ್ದಾರೆ.

ಗರ್ಭಿಣಿಯರಿಗೆ ಲಸಿಕೆ ನೀಡುವ ಬಗ್ಗೆ ಮಾರ್ಗಸೂಚಿ ನಿರೀಕ್ಷೆ

ಗರ್ಭಿಣಿಯರಿಗೆ ಲಸಿಕೆ ನೀಡುವ ಬಗ್ಗೆ ಮಾರ್ಗಸೂಚಿ ನಿರೀಕ್ಷೆ

ಬೆಂಗಳೂರಿನ ಎಲ್ಲಾ 33 ಸರ್ಕಾರಿ ಕೊವಿಡ್-19 ಲಸಿಕೆ ವಿತರಣೆ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಕೊವಿಶೀಲ್ಡ್ ಹಾಗೂ ಕೊವ್ಯಾಕ್ಸಿನ್ ಎರಡೂ ಮಾದರಿ ಲಸಿಕೆಗಳನ್ನು ವಿತರಿಸಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯು ಕೊವ್ಯಾಕ್ಸಿನ್ ಲಸಿಕೆಗೆ ಅನುಮೋದನೆ ನೀಡುವ ಸಂದರ್ಭದಲ್ಲಿ ಗರ್ಭಿಣಿರಿಗೆ ಈ ಲಸಿಕೆಯು ಸುರಕ್ಷಿತ ಹಾಗೂ ಪರಿಣಾಮಕಾರಿ ಎಂದು ದಗೃಢಪಡಿಸುವಂತಹ ಯಾವುದೇ ದತ್ತಾಂಶಗಳು ಸಿಕ್ಕಿಲ್ಲ ಎಂದು ಹೇಳಿತ್ತು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರವು ಗರ್ಭಿಣಿಯರಿಗೆ ಕೊವಿಡ್-19 ಲಸಿಕೆ ವಿತರಿಸುವುದಕ್ಕೆ ಪ್ರತ್ಯೇಕ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡುತ್ತದೆಯೇ ಎಂದು ನಿರೀಕ್ಷಿಸಲಾಗುತ್ತದೆ. ನಾವು ಕೊವ್ಯಾಕ್ಸಿನ್ ಲಸಿಕೆ ಪಡೆದುಕೊಂಡ ಗರ್ಭಿಣಿಯರಲ್ಲಿ ಆರೋಗ್ಯ ಸಸಮಸ್ಯೆಗಳು ಕಾಣಿಸಿಕೊಂಡಿವೆಯೇ, ಯಾವ ರೀತಿ ಅಡ್ಡಪಡಿರಿಣಾಮಗಳು ಗೋಚರಿಸುವೆ ಎಂಬುದರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ. ಗರ್ಭಿಣಿಯರಿಗೆ ಲಸಿಕೆ ವಿತರಿಸುವುದಕಕ್ಕೂ ಮೊದಲು ಅವರ ಆಯ್ಕೆಯನ್ನು ಕೇಳಲಾಗಿತ್ತು," ಎಂದು ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಡಾ. ಕೆ ವಿ ತ್ರಿಲೋಕ ಚಂದ್ರ ತಿಳಿಸಿದ್ದಾರೆ.

WHO ಕೊವ್ಯಾಕ್ಸಿನ್ ಲಸಿಕೆಗೆ ಅನುಮೋದನೆ ನೀಡಿದ್ದು ಯಾವಾಗ?

WHO ಕೊವ್ಯಾಕ್ಸಿನ್ ಲಸಿಕೆಗೆ ಅನುಮೋದನೆ ನೀಡಿದ್ದು ಯಾವಾಗ?

ಕಳೆದ ನವೆಂಬರ್ 3ರ ಬುಧವಾರ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡುವುದಕ್ಕೆ ಸಂಬಂಧಿಸಿದಂತೆ ಅಂತಿಮ ಮೌಲ್ಯಮಾಪನ ಪ್ರಕ್ರಿಯೆ ನಡೆಸಲಾಯಿತು. ಈ ವೇಳೆ ಕೊವ್ಯಾಕ್ಸಿನ್ ಲಸಿಕೆಯನ್ನು ತುರ್ತು ಬಳಕೆಗೆ ಅನುಮೋದಿಸುವ ಪಟ್ಟಿಗೆ ಸೇರಿಸುವಂತೆ ವಿಶ್ವ ಆರೋಗ್ಯ ಸಂಸ್ಥೆಗೆ ಶಿಫಾರಸ್ಸು ಕಳುಹಿಸಲಾಯಿತು. ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸಿನ ಮೇರೆಗೆ ಕೊವ್ಯಾಕ್ಸಿನ್ ಲಸಿಕೆಗೆ WHO ಅನುಮೋದನೆ ನೀಡಿತು.

ಭಾರತದಲ್ಲಿ ಉತ್ಪಾದಿಸುವ ಎರಡು ಕೊರೊನಾವೈರಸ್ ಲಸಿಕೆಗಳ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆಯು ಅನುಮೋದನೆ ನೀಡಿದೆ. ಈ ಮೊದಲು ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಮತ್ತು ಆಸ್ಚ್ರಾಜೆನಿಕಾ ಸಂಸ್ಥೆಗಳು ಸಂಶೋಧಿಸಿರುವ ಪುಣೆಯ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸುವ ಕೊವಿಶೀಲ್ಡ್ ಲಸಿಕೆಯ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆಯು ಅನುಮೋದನೆ ನೀಡಿತ್ತು. ಇದೀಗ ಅದೇ ಪಟ್ಟಿಗೆ ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯೂ ಸಹ ಸೇರ್ಪಡೆಯಾಗಿದೆ.

ಕೊವ್ಯಾಕ್ಸಿನ್ ಲಸಿಕೆ ಪರಿಣಾಮ ಎಷ್ಟು?

ಕೊವ್ಯಾಕ್ಸಿನ್ ಲಸಿಕೆ ಪರಿಣಾಮ ಎಷ್ಟು?

ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್ ಲಸಿಕೆಯು ಕೊರೊನಾವೈರಸ್ ವಿರುದ್ಧ ಶೇ.77.8ರಷ್ಟು ಪರಿಣಾಮಕಾರಿಯಾಗಿದೆ. ಅಲ್ಲದೇ ಕೊವಿಡ್-19 ರೂಪಾಂತರ ಡೆಲ್ಟಾ ವೈರಸ್ ವಿರುದ್ಧ ಶೇ.65.2ರಷ್ಟು ಪರಿಣಾಮಕಾರಿಯಾಗಿದೆ. ಜೂನ್ ತಿಂಗಳಿನಲ್ಲಿ 3ನೇ ಹಂತದ ವೈದ್ಯಕೀಯ ಪ್ರಯೋಗಗಳಿಗೆ ಸಂಬಂಧಿಸಿದಂತೆ ಅಂತಿಮ ವಿಶ್ಲೇಷಣೆಯನ್ನು ಪೂರ್ಣಗೊಳಿಸಲಾಗಿದೆ ಎಂದು ಭಾರತ್ ಬಯೋಟೆಕ್ ಕಂಪನಿ ಹೇಳಿದೆ.

ಎಷ್ಟು ಕೊವಿಡ್-19 ಲಸಿಕೆಗಳಿಗೆ WHO ಅನುಮೋದನೆ

ಎಷ್ಟು ಕೊವಿಡ್-19 ಲಸಿಕೆಗಳಿಗೆ WHO ಅನುಮೋದನೆ

ವಿಶ್ವ ಆರೋಗ್ಯ ಸಂಸ್ಥೆಯು ಈವರೆಗೆ ಹಲವು ಕಂಪನಿಗಳು ಉತ್ಪಾದಿಸುವ ಲಸಿಕೆಗಳ ತುರ್ತು ಬಳಕೆಗೆ ಅನುಮೋದನೆ ನೀಡಿದೆ. ಭಾರತದ ಮಟ್ಟಿಗೆ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಲಸಿಕೆ ಹಾಗೂ ಬುಧವಾರ ಅನುಮೋದನೆ ಪಡೆದ ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯು ತುರ್ತು ಬಳಕೆ ಅನುಮೋದನೆ ಪಟ್ಟಿಗೆ ಸೇರ್ಪಡೆಯಾಗಿವೆ. ಇದರ ಹೊರತಾಗಿ ಫೈಜರ್, ಬಯೋನಟೆಕ್, ಜಾನ್ಸನ್ ಆಂಡ್ ಜಾನ್ಸನ್, ಮಾಡರ್ನಾ ಮತ್ತು ಸಿನೋಫಾರ್ಮಾ ಕಂಪನಿಗಳು ಉತ್ಪಾದಿಸುವ ಲಸಿಕೆಯನ್ನು ತುರ್ತು ಬಳಕೆ ಪಟ್ಟಿಗೆ ಸೇರಿಸಲು ವಿಶ್ವ ಆರೋಗ್ಯ ಸಂಸ್ಥೆಯು ಅನುಮೋದನೆ ನೀಡಿದೆ.

English summary
Question Rised About to Give Covaxin Vaccine To pregnants after World Health Organization note.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X