RR Nagar exit poll result 2020; ಮುನಿರತ್ನಗೆ ಗೆಲುವು
ಬೆಂಗಳೂರು, ನವೆಂಬರ್ 07 : ಬೆಂಗಳೂರಿನ rajarajeshwari nagarಕ್ಷೇತ್ರದ ಉಪ ಚುನಾವಣೆ ಮುಕ್ತಾಯಗೊಂಡಿದೆ. ನವೆಂಬರ್ 3ರಂದು ನಡೆದ ಚುನಾವಣೆಯಲ್ಲಿ ಶೇ 45.24ರಷ್ಟು ಮತದಾನ ನಡೆದಿದೆ. ಉಪ ಚುನಾವಣೆಯ ಚುನಾವಣೋತ್ತರ ಫಲಿತಾಂಶ ಪ್ರಕಟವಾಗಿದೆ.
Recommended Video
ಶನಿವಾರ ವಿವಿಧ ವಾಹಿನಿಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶ ಪ್ರಕಟವಾಗಿದೆ. ಆರ್. ಆರ್. ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಗೆಲವು ಸಾಧಿಸಲಿದ್ದಾರೆ ಎಂದು ಸಮೀಕ್ಷೆಗಳು ಹೇಳಿವೆ.
ಆರ್. ಆರ್. ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಇತ್ತು. ಕಾಂಗ್ರೆಸ್‌ನಿಂದ ಹೆಚ್. ಕುಸುಮಾ, ಜೆಡಿಎಸ್‌ನಿಂದ ವಿ. ಕೃಷ್ಣಮೂರ್ತಿ ಅವರು ಕಣದಲ್ಲಿದ್ದಾರೆ. ನವೆಂಬರ್ 10ರಂದು ಮತ ಎಣಿಕೆ ನಡೆಯಲಿದೆ.

ಕನ್ನಡ ಸುದ್ದಿ ವಾಹಿನಿ ಟಿವಿ 9 ಸಿ-ವೋಟರ್ ನಡೆಸಿದ ಚುನಾವಣೋತ್ತರ ಸಮೀಕ್ಷೆ ವರದಿಯನ್ನು ಪ್ರಕಟಿಸಿದೆ. ಸಮೀಕ್ಷೆ ಪ್ರಕಾರ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಗೆಲುವು ಸಾಧಿಸಲಿದ್ದಾರೆ. ಈ ಮೂಲಕ 3ನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಲಿದ್ದಾರೆ.
ಬಿಜೆಪಿ ಅಭ್ಯರ್ಥಿಯಾದ ಮುನಿರತ್ನ ಶೇ 37.8ರಷ್ಟು, ಕಾಂಗ್ರೆಸ್‌ನ ಹೆಚ್. ಕುಸುಮಾ ಶೇ 31.1ರಷ್ಟು ಮತ್ತು ಜೆಡಿಎಸ್‌ನ ವಿ. ಕೃಷ್ಣಮೂರ್ತಿ ಶೇ 14ರಷ್ಟು ಮತಗಳನ್ನು ಪಡೆಯಲಿದ್ದಾರೆ ಎಂದು ಸಮೀಕ್ಷೆ ಹೇಳಿದೆ. ಇತರ ಅಭ್ಯರ್ಥಿಗಳು ಶೇ 17.2ರಷ್ಟು ಮತಗಳನ್ನು ಪಡೆಯಲಿದ್ದಾರೆ.











Click it and Unblock the Notifications