ಶಾಸಕರ ಮೌಲ್ಯ ಮಾಪನ; ಜಗದೀಶ್ ಶೆಟ್ಟರ್ ಕಾರ್ಯ ವೈಖರಿಗೆ ಅಂಕ ನೀಡಿ
ಹುಬ್ಬಳ್ಳಿ, ಆಗಸ್ಟ್ 30; ಕರ್ನಾಟಕದಲ್ಲಿ ಚುನಾವಣೆ ಹತ್ತಿರವಾಗುತ್ತಿದೆ. 2018ರ ಚುನಾವಣೆಯಲ್ಲಿ ಜನರು ಮತದಾನ ಮಾಡಿ ಆಯ್ಕೆ ಮಾಡಿದ ಶಾಸಕರು ಮಾಡಿದ ಕೆಲಸಗಳೇನು?, ಕ್ಷೇತ್ರದ ಸಮಸ್ಯೆಗೆ ಅವರು ಸ್ಪಂದಿಸಿದ್ದು ಹೇಗೆ? ಎಂದು ಜನರು ಮೌಲ್ಯ ಮಾಪನ ಮಾಡುವ ಸಮಯ ಬಂದಿದೆ.
ಒನ್ ಇಂಡಿಯಾ ಕನ್ನಡ ಶಾಸಕರ ಮೌಲ್ಯ ಮಾಪನ ಮಾಡಲು Rate your MLA ಎಂಬ ಅಭಿಯಾನ ಆರಂಭಿಸಿದೆ. ಇಲ್ಲಿ ನಿಮ್ಮ ಕ್ಷೇತ್ರದ ಶಾಸಕರು ಮಾಡಿದ ಕೆಲಸಗಳಿಗೆ ನೀವು ಸ್ಟಾರ್‌ಗಳನ್ನು ನೀಡುವ ಮೂಲಕ ಅಂಕ ಕೊಡಬಹುದು. ಜನರು ತಮ್ಮ ಶಾಸಕರಿಗೆ ಆನ್‌ಲೈನ್ ಮೂಲಕ ಮತದಾನ ಮಾಡಲು ಇದು ಒಂದು ವೇದಿಕೆ.
ಈ ಪುಟದಲ್ಲಿ ಜನರು ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದ ಶಾಸಕ ಜಗದೀಶ್ ಶೆಟ್ಟರ್ ಕಾರ್ಯ ವೈಖರಿಗೆ ಅಂಕ ನೀಡಬಹುದು. ವೋಟ್ ಪೂರ್ಣಗೊಂಡ ಬಳಿಕ ಪುಟದ ಕೊನೆಯಲ್ಲಿ ನೀವು ನೀಡಿದ ಸರಾಸರಿ ಅಂಕ ತೋರಿಸುತ್ತದೆ. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಲು ಲಿಂಕ್ ಸಿಗುತ್ತದೆ.

ಜಗದೀಶ್ ಶೆಟ್ಟರ್ 2018ರ ಚುನಾವಣೆಯಲ್ಲಿ ಹುಬ್ಭಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದಲ್ಲಿ 21,306 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಶೆಟ್ಟರ್ 10 ತಿಂಗಳ ಕಾಲ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದರು.
ಸತತ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಜಗದೀಶ್ ಶೆಟ್ಟರ್ 2019ರಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾದರು. ಆದರೆ 2021ರಲ್ಲಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ಸಂಪುಟ ಸೇರುವುದಿಲ್ಲ ಎಂದು ಘೋಷಣೆ ಮಾಡಿದರು.
1994ರಲ್ಲಿ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾದ ಜಗದೀಶ್ ಶೆಟ್ಟರ್ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ, ಕಂದಾಯ ಸಚಿವರಾಗಿ, ವಿಧಾನಸಭೆಯ ಸ್ಪೀಕರ್ ಆಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿ, ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಣೆ ಮಾಡಿ ಅಪಾರ ಅನುಭವ ಪಡೆದಿದ್ದಾರೆ.
2019ರಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ಸೇರಿದ ಜಗದೀಶ್ ಶೆಟ್ಟರ್‌ಗೆ ಬೃಹತ್ ಮತ್ತು ಮಧ್ಯ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಖಾತೆ ಹೊಣೆ ನೀಡಲಾಗಿತ್ತು. ಬಳಿಕ ಮುಖ್ಯಮಂತ್ರಿ ಬದಲಾವಣೆಗೊಂಡ ನಂತರ ತಮಗಿಂತ ಕಿರಿಯ ವಯಸ್ಸಿನ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗುವುದಿಲ್ಲ ಎಂದು ಜಗದೀಶ್ ಶೆಟ್ಟರ್ ಘೋಷಿಸಿದರು.
ಒಟ್ಟು 9 ಅಂಶಗಳ ಆಧಾರದ ಮೇಲೆ ಜನರು ಶಾಸಕ ಜಗದೀಶ್ ಶೆಟ್ಟರ್ ಮೌಲ್ಯ ಮಾಪನ ಮಾಡಬಹುದು. ಸ್ಟಾರ್ ರೇಟಿಂಗ್ ಮೂಲಕ ಅಂಕ ನೀಡಬಹುದು. ಜನರು ವೋಟ್ ಮಾಡಿದ ಬಳಿಕ ಈ ಪುಟವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಇತರರು ಸಹ ಮತ ನೀಡುವಂತೆ ಮನವಿ ಮಾಡಬಹುದು. ವಾಟ್ಸಪ್, ಟೆಲಿಗ್ರಾಮ್, ಫೇಸ್‌ಬುಕ್, ಟ್ವೀಟ್ ಮೂಲಕ ಈ ಪುಟವನ್ನು ಶೇರ್ ಮಾಡಿ ಹೆಚ್ಚು ಜನರನ್ನು ತಲುಪುವಂತೆ ಮಾಡಬಹುದು.
ಶಾಸಕರ ಲಭ್ಯತೆ, ಕ್ಷೇತ್ರದ ಅಭಿವೃದ್ಧಿ ಕಾರ್ಯ, ವಿಧಾನಸಭೆಯಲ್ಲಿ ಮಾತನಾಡಿದ್ದು, ರಸ್ತೆ ಸೌಕರ್ಯ, ನೀರಿನ ಸೌಕರ್ಯ, ಮೂಲ ಸೌಕರ್ಯ ಮುಂತಾದ ಅಂಶಗಳ ಆಧಾರದ ಮೇಲೆ ಜನರು ವೋಟ್ ಮಾಡಲು ಅವಕಾಶ ನೀಡಲಾಗಿದೆ. ಇನ್ನೇಕೆ ತಡ ಈಗಲೇ ವೋಟ್ ಮಾಡಿ.
ಇನ್ನು ಇದು ಚುನಾವಣಾ ಪುಟವಾಗಿದೆ. ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದ ವಿವರ, 2018ರ ಚುನಾವಣೆಯಲ್ಲಿನ ಅಭ್ಯರ್ಥಿಗಳ ವಿವರ, ಪಡೆದ ಮತಗಳು ಸೇರಿದಂತೆ ಇತರ ವಿವರಗಳಿವೆ. ಹಿಂದಿನ ಹಲವು ಚುನಾವಣೆಯಲ್ಲಿ ಕಣದಲ್ಲಿದ್ದ ಅಭ್ಯರ್ಥಿಗಳು, ಪಡೆದ ಮತಗಳು ಸೇರಿದಂತೆ ಇತರ ವಿವರಗಳಿವೆ. ಚುನಾವಣೆ ಹತ್ತಿರವಾಗುತ್ತಿರುವಾಗ ನೀವು ಶಾಸಕರ ಮೌಲ್ಯ ಮಾಪನ ಮಾಡಿ, ಶಾಸಕರಿಗೆ ಮತ ನೀಡಿ, ಪುಟವನ್ನು ಇತರರ ಜೊತೆ ಶೇರ್ ಮಾಡಿ.











Click it and Unblock the Notifications