ಶಾಸಕರ ಮೌಲ್ಯ ಮಾಪನ; ಅನಿತಾ ಕುಮಾರಸ್ವಾಮಿ ಕಾರ್ಯ ವೈಖರಿಗೆ ಅಂಕ ನೀಡಿ
2018ರ ಚುನಾವಣೆಯಲ್ಲಿ ಜನರು ಮತದಾನ ಮಾಡಿ ಆಯ್ಕೆ ಮಾಡಿದ ಶಾಸಕರು ಮಾಡಿದ ಕೆಲಸಗಳೇನು?, ಕ್ಷೇತ್ರದ ಸಮಸ್ಯೆಗೆ ಅವರು ಸ್ಪಂದಿಸಿದ್ದು ಹೇಗೆ?, ಕೋವಿಡ್ ಸಮಯದಲ್ಲಿ ಕಾರ್ಯ ವೈಖರಿ ಹೇಗಿತ್ತು?, ನಿಮ್ಮ ಶಾಸಕರು ಜನರ ಕೈಗ ಸುಲಭವಾಗಿ ಸಿಗುತ್ತಾರೆಯೇ? ಎಂದು ಜನರು ಮೌಲ್ಯ ಮಾಪನ ಮಾಡುವ ಸಮಯ ಬಂದಿದೆ.
ಒನ್ ಇಂಡಿಯಾ ಕನ್ನಡ ಶಾಸಕರ ಮೌಲ್ಯ ಮಾಪನ ಮಾಡಲು Rate your MLA ಎಂಬ ಅಭಿಯಾನ ನಡೆಸುತ್ತಿದೆ. ನಿಮ್ಮ ಕ್ಷೇತ್ರದ ಶಾಸಕರು ಮಾಡಿದ ಕೆಲಸಗಳಿಗೆ ನೀವು ಸ್ಟಾರ್‌ಗಳನ್ನು ನೀಡುವ ಮೂಲಕ ಅಂಕ ಕೊಡಬಹುದು. ಆನ್‌ಲೈನ್ ಮೂಲಕ ಮತದಾನ ಮಾಡಲು ಈ ಮೂಲಕ ವೇದಿಕೆ ಒದಗಿಸಲಾಗಿದೆ.
ಈ ಪುಟದಲ್ಲಿ ಜನರು ರಾಮನಗರ ಕ್ಷೇತ್ರದ ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಕಾರ್ಯ ವೈಖರಿಗೆ ಅಂಕ ನೀಡಬಹುದು. ವೋಟ್ ಪೂರ್ಣಗೊಂಡ ಬಳಿಕ ಪುಟದ ಕೊನೆಯಲ್ಲಿ ಜನರು ನೀಡಿದ ಸರಾಸರಿ ಅಂಕ ತೋರಿಸುತ್ತದೆ. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಈ ಪುಟವನ್ನು ಶೇರ್ ಮಾಡಲು ಲಿಂಕ್ ಸಿಗುತ್ತದೆ.

ಅನಿತಾ ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಪತ್ನಿ. 2018ರ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಲ್ಲಿ ಎಚ್. ಡಿ. ಕುಮಾರಸ್ವಾಮಿ 92,626 ಮತಗಳನ್ನು ಪಡೆದು ಜಯಗಳಿಸಿದ್ದರು. ಆದರೆ ಕುಮಾರಸ್ವಾಮಿ ಚುನಾವಣೆಗೆ ಚನ್ನಪಟ್ಟಣ ಮತ್ತು ರಾಮನಗರ ಎರಡು ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದರು.
ಎರಡು ಕ್ಷೇತ್ರಗಳಲ್ಲಿಯೂ ಅವರು ಜಯಗಳಿಸಿದರು. ಬಳಿಕ ರಾಮನಗರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇದರಿಂದಾಗಿ ಉಪ ಚುನಾವಣೆ ಎದುರಾಯಿತು. ಅಲ್ಲದೇ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿತ್ತು. ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರು.
ಆಗ ಅನಿತಾ ಕುಮಾರಸ್ವಾಮಿ ರಾಮನಗರ ಉಪ ಚುನಾವಣೆಯ ಜೆಡಿಎಸ್-ಕಾಂಗ್ರೆಸ್ ಒಮ್ಮತದ ಅಭ್ಯರ್ಥಿಯಾಗಿ ಕಣಕ್ಕಿಳಿದರು. ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಎಲ್. ಚಂದ್ರಶೇಖರ್ ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಸೇರಿ ಕಣದಿಂದ ಹಿಂದೆ ಸರಿದರು.
ಉಪ ಚುನಾವಣೆಯಲ್ಲಿ ಪ್ರಬಲ ಅಭ್ಯರ್ಥಿ ಇಲ್ಲದ ಕಾರಣ ಅನಿತಾ ಕುಮಾರಸ್ವಾಮಿ 1,25,043 ಮತಗಳನ್ನು ಪಡೆದು ಎರಡನೇ ಬಾರಿಗೆ ಶಾಸಕಿಯಾಗಿ ಆಯ್ಕೆಯಾದರು. 2008ರಲ್ಲಿ ನಡೆದಿದ್ದ ಉಪ ಚುನಾವಣೆಯಲ್ಲಿ ಅವರು ಮಧುಗಿರಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು.
ಉಪ ಚುನಾವಣೆ ಗೆಲುವಿನ ಬಳಿಕ ಅನಿತಾ ಕುಮಾರಸ್ವಾಮಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಎಚ್. ಡಿ. ಕುಮಾರಸ್ವಾಮಿ ಸಂಪುಟ ಸೇರಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಅವರು ಶಾಸಕರಾಗಿಯೇ ಉಳಿದರು. 2019ರಲ್ಲಿ ಮೈತ್ರಿ ಸರ್ಕಾರವೂ ಪತನಗೊಂಡಿತು.
ಇನ್ನು ಒಟ್ಟು 9 ಅಂಶಗಳ ಆಧಾರದ ಮೇಲೆ ಜನರು ಶಾಸಕಿ ಅನಿತಾ ಕುಮಾರಸ್ವಾಮಿ ಕಾರ್ಯ ವೈಖರಿ ಮೌಲ್ಯ ಮಾಪನ ಮಾಡಬಹುದು. ಸ್ಟಾರ್ ರೇಟಿಂಗ್ ಮೂಲಕ ಅಂಕ ನೀಡಬಹುದು. ಜನರು ವೋಟ್ ಮಾಡಿದ ಬಳಿಕ ಈ ಪುಟವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಇತರರು ಸಹ ಮತ ನೀಡುವಂತೆ ಮನವಿ ಮಾಡಬಹುದು.
ಶಾಸಕರ ಲಭ್ಯತೆ, ಕ್ಷೇತ್ರದ ಅಭಿವೃದ್ಧಿ ಕಾರ್ಯ, ವಿಧಾನಸಭೆಯಲ್ಲಿ ಮಾತನಾಡಿದ್ದು, ರಸ್ತೆ ಸೌಕರ್ಯ, ನೀರಿನ ಸೌಕರ್ಯ, ಮೂಲ ಸೌಕರ್ಯ ಮುಂತಾದ ಅಂಶಗಳ ಆಧಾರದ ಮೇಲೆ ಜನರು ವೋಟ್ ಮಾಡಲು ಅವಕಾಶ ಕೊಡಲಾಗಿದೆ, ಈಗಲೇ ನಿಮ್ಮ ಶಾಸಕರಿಗೆ ರೇಟಿಂಗ್ ಕೊಡಿ.
ಇನ್ನು ಇದು ಚುನಾವಣಾ ಪುಟವಾಗಿದೆ. ರಾಮನಗರ ಕ್ಷೇತ್ರದ ವಿವರ, 2018ರ ಚುನಾವಣೆಯಲ್ಲಿನ ಅಭ್ಯರ್ಥಿಗಳ ವಿವರ, ಪಡೆದ ಮತಗಳು ಸೇರಿದಂತೆ ಇತರ ವಿವರಗಳಿವೆ. ಹಿಂದಿನ ಹಲವು ಚುನಾವಣೆಯಲ್ಲಿ ಕಣದಲ್ಲಿದ್ದ ಅಭ್ಯರ್ಥಿಗಳು, ಪಡೆದ ಮತಗಳು ಸೇರಿದಂತೆ ಇತರ ವಿವರಗಳಿವೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications