ಶಾಸಕರ ಮೌಲ್ಯ ಮಾಪನ; ಬಾಗಲಕೋಟೆ ಜಿಲ್ಲೆಯ ಶಾಸಕರಿಗೆ ಅಂಕ ಕೊಡಿ
2023ರಲ್ಲಿ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ರಾಜಕೀಯ ಪಕ್ಷಗಳು, ನಾಯಕರು ಚುನಾವಣೆಯ ತಯಾರಿಯನ್ನು ಆರಂಭಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಜನರು ಆಯ್ಕೆ ಮಾಡಿದ ಶಾಸಕರು ಮಾಡಿದ ಕೆಲಸಗಳಿಗೆ ಅಂಕ ನೀಡಲು ಈಗ ಅವಕಾಶ ಸಿಕ್ಕಿದೆ.
ಶಾಸಕರು ಕ್ಷೇತ್ರದ ಸಮಸ್ಯೆಗೆ ಸ್ಪಂದಿಸಿದ್ದು ಹೇಗೆ?, ಕೋವಿಡ್ ಸಮಯದಲ್ಲಿ ಶಾಸಕರ ಕಾರ್ಯ ವೈಖರಿ ಹೇಗಿತ್ತು? ಎಂದು ಜನರು ಮೌಲ್ಯ ಮಾಪನ ಮಾಡಬಹುದು. ಒನ್ ಇಂಡಿಯಾ ಕನ್ನಡ ಶಾಸಕರ ಮೌಲ್ಯ ಮಾಪನ ಮಾಡಲು Rate your MLA ಎಂಬ ಅಭಿಯಾನ ನಡೆಸುತ್ತಿದೆ. ನಿಮ್ಮ ಕ್ಷೇತ್ರದ ಶಾಸಕರು ಮಾಡಿದ ಕೆಲಸಗಳಿಗೆ ನೀವು ಇಲ್ಲಿ ಸ್ಟಾರ್‌ಗಳನ್ನು ನೀಡುವ ಮೂಲಕ ಅಂಕ ಕೊಡಬಹುದು.
ಈ ಪುಟದಲ್ಲಿ ಜನರು ಬಾಗಲಕೋಟೆ ಜಿಲ್ಲೆಯ ಶಾಸಕರ ಕಾರ್ಯ ವೈಖರಿಗೆ ಅಂಕ ನೀಡಬಹುದು. ಮತದಾನ ಪೂರ್ಣಗೊಂಡ ಬಳಿಕ ಪುಟದ ಕೊನೆಯಲ್ಲಿ ಜನರು ನೀಡಿದ ಸರಾಸರಿ ಅಂಕ ನೋಡಬಹುದು. ಫೇಸ್ ಬುಕ್, ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಈ ಪುಟವನ್ನು ಶೇರ್ ಮಾಡಬಹುದು.
ಒಟ್ಟು 9 ಅಂಶಗಳ ಆಧಾರದ ಮೇಲೆ ಜನರು ಶಾಸಕರ ಕಾರ್ಯ ವೈಖರಿ ಮೌಲ್ಯ ಮಾಪನ ಮಾಡಬಹುದು. ಸ್ಟಾರ್ ರೇಟಿಂಗ್ ಮೂಲಕ ಅಂಕ ನೀಡಬಹುದು. ಜನರು ವೋಟ್ ಮಾಡಿದ ಬಳಿಕ ಪುಟವನ್ನು ಹಂಚಿಕೆ ಮಾಡಬಹುದು. ಶಾಸಕರ ಲಭ್ಯತೆ, ಕ್ಷೇತ್ರದ ಅಭಿವೃದ್ಧಿ ಕಾರ್ಯ, ವಿಧಾನಸಭೆಯಲ್ಲಿ ಮಾತನಾಡಿದ್ದು, ರಸ್ತೆ ಸೌಕರ್ಯ, ನೀರಿನ ಸೌಕರ್ಯ, ಮೂಲ ಸೌಕರ್ಯ ಮುಂತಾದ ಅಂಶಗಳ ಆಧಾರದ ಮೇಲೆ ಜನರು ವೋಟ್ ಮಾಡಲು ಅವಕಾಶ ಕೊಡಲಾಗಿದೆ.
ಬಾಗಲಕೋಟೆ ಜಿಲ್ಲೆಯಲ್ಲಿ ಮುಧೋಳ, ತೇರದಾಳ, ಜಮಖಂಡಿ, ಬೀಳಗಿ, ಬಾದಾಮಿ, ಬಾಗಲಕೋಟೆ ಮತ್ತು ಹುನಗುಂದ ವಿಧಾನಸಭಾ ಕ್ಷೇತ್ರಗಳಿವೆ. ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿನಿಧಿಸುವ ಬಾದಾಮಿ ಸಹ ಇದೇ ಜಿಲ್ಲೆಯ ವ್ಯಾಪ್ತಿಗೆ ಒಳಪಡುತ್ತದೆ.

ಗೋವಿಂದ ಎಂ. ಕಾರಜೋಳ
ಮುಧೋಳ ಕ್ಷೇತ್ರದ ಶಾಸಕರು ಬಿಜೆಪಿಯ ಗೋವಿಂದ ಕಾರಜೋಳ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಜಲಸಂಪನ್ಮೂಲ ಖಾತೆ ಸಚಿವರು. 2018ರ ಚುನಾವಣೆಯಲ್ಲಿ ಅವರು 76,431 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಶಾಸಕರ ಕಾರ್ಯ ವೈಖರಿಗೆ ಅಂಕ ನೀಡಲು ಕ್ಲಿಕ್ ಮಾಡಿ.

ತೇರದಾಳ ಕ್ಷೇತ್ರದ ಶಾಸಕರು
ತೇರದಾಳ ಕ್ಷೇತ್ರದ ಶಾಸಕರು ಬಿಜೆಪಿಯ ಸಿದ್ದು ಸವದಿ. 2018ರ ಚುನಾವಣೆಯಲ್ಲಿ ಅವರು 87,213 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ನಿಮ್ಮ ಶಾಸಕರ ಕಾರ್ಯ ವೈಖರಿಗೆ ಮತ ನೀಡಲು ಕ್ಲಿಕ್ ಮಾಡಿ.

ಬಿಜೆಪಿಯ ಮುರುಗೇಶ್ ನಿರಾಣಿ
ಬೀಳಗಿ ಕ್ಷೇತ್ರದ ಶಾಸಕರು ಬಿಜೆಪಿಯ ಮುರುಗೇಶ್ ನಿರಾಣಿ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಖಾತೆ ಸಚಿವರು. 2018ರ ಚುನಾವಣೆಯಲ್ಲಿ ಅವರು 85,135 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ನಿಮ್ಮ ಶಾಸಕರಿಗೆ ಅಂಕ ನೀಡಲು ಕ್ಲಿಕ್ ಮಾಡಿ.

ಕಾಂಗ್ರೆಸ್‌ನ ಸಿದ್ದರಾಮಯ್ಯ
ಬಾದಾಮಿ ವಿಧಾನಸಭಾ ಕ್ಷೇತ್ರದ ಶಾಸಕರು ಕಾಂಗ್ರೆಸ್‌ನ ಸಿದ್ದರಾಮಯ್ಯ. 2018ರ ಚುನಾವಣೆಯಲ್ಲಿ 67,599 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ನಿಮ್ಮ ಶಾಸಕರಿಗೆ ಅಂಕ ನೀಡಲು ಇಲ್ಲಿ ಕ್ಲಿಕ್ ಮಾಡಿ.

ಬಿಜೆಪಿಯ ವೀರಣ್ಣ ಚಿರಂತಿಮಠ
ಬಾಗಲಕೋಟೆ ಕ್ಷೇತ್ರದ ಶಾಸಕರು ಬಿಜೆಪಿಯ ವೀರಣ್ಣ ಚಿರಂತಿಮಠ. 2018ರ ಚುನಾವಣೆಯಲ್ಲಿ 85,653 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ನಿಮ್ಮ ಶಾಸಕರ ಕಾರ್ಯ ವೈಖರಿಗೆ ಅಂಕ ನೀಡಲು ಕ್ಲಿಕ್ ಮಾಡಿ.

ಬಿಜೆಪಿಯ ದೊಡ್ಡನಗೌಡ ಜಿ ಪಾಟೀಲ
ಹುನಗುಂದ ಕ್ಷೇತ್ರದ ಶಾಸಕರು ಬಿಜೆಪಿಯ ದೊಡ್ಡನಗೌಡ ಜಿ. ಪಾಟೀಲ. 2018ರ ಚುನಾವಣೆಯಲ್ಲಿ 65,012 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಶಾಸಕರಿಗೆ ಮತ ನೀಡಲು ಕ್ಲಿಕ್ ಮಾಡಿ.

ಕಾಂಗ್ರೆಸ್‌ನ ಸಿದ್ದು ನ್ಯಾಮಗೌಡ
ಜಮಖಂಡಿ ಕ್ಷೇತ್ರದಲ್ಲಿ 2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸಿದ್ದು ನ್ಯಾಮಗೌಡ ಆಯ್ಕೆಯಾಗಿದ್ದರು. ಅವರ ಅಕಾಲಿಕ ಮರಣದ ಕಾರಣ ಉಪ ಚುನಾವಣೆ ಎದುರಾಯಿತು. ಕಾಂಗ್ರೆಸ್ ಪಕ್ಷ ಸಿದ್ದು ನ್ಯಾಮಗೌಡ ಪುತ್ರ ಆನಂದ್ ನ್ಯಾಮಗೌಡಗೆ ಟಿಕೆಟ್ ನೀಡಿತು. ಆನಂದ್ ನ್ಯಾಮಗೌಡ 97,017 ಮತಗಳನ್ನು ಪಡೆದು ಜಯಗಳಿಸಿದರು. ಶಾಸಕರ ಕಾರ್ಯ ವೈಖರಿಗೆ ಅಂಕ ನೀಡಲು ಕ್ಲಿಕ್ ಮಾಡಿ.
-
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್












Click it and Unblock the Notifications