ಶಾಸಕರ ಮೌಲ್ಯ ಮಾಪನ; ಕುಮಾರಸ್ವಾಮಿ ಕಾರ್ಯ ವೈಖರಿಗೆ ಅಂಕ ನೀಡಿ
ರಾಮನಗರ, ಆಗಸ್ಟ್ 25; 2018ರ ಚುನಾವಣೆಯಲ್ಲಿ ಜೆಡಿಎಸ್ ನಾಯಕ ಎಚ್. ಡಿ. ಕುಮಾರಸ್ವಾಮಿ ಎರಡು ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದರು. ಎರಡೂ ಕ್ಷೇತ್ರಗಳಲ್ಲಿಯೂ ಗೆಲುವು ಕಂಡರು. ಅಂತಿಮವಾಗಿ ಚನ್ನಪಟ್ಟಣ ಉಳಿಸಿಕೊಂಡು, ರಾಮನಗರ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ಮಾಜಿ ಮುಖ್ಯಮಂತ್ರಿಯೂ ಆಗಿರುವ ಎಚ್. ಡಿ. ಕುಮಾರಸ್ವಾಮಿ ಶಾಸಕರಾಗಿ ಚನ್ನಪಟ್ಟಣದಲ್ಲಿ ಮಾಡಿದ ಕೆಲಸಗಳೇನು?. ಈಗ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವು ತಿಂಗಳು ಬಾಕಿ ಇದೆ. ನಿಮ್ಮ ಅಮೂಲ್ಯ ಮತವನ್ನು ನೀಡಿ ಆಯ್ಕೆ ಮಾಡಿದ ಶಾಸಕರು ನಾಲ್ಕೂವರೆ ವರ್ಷ ಮಾಡಿದ್ದೇನು? ಎಂದು ನೀವು ಈಗ ಮೌಲ್ಯ ಮಾಪನ ಮಾಡಬಹುದು.
ಒನ್ ಇಂಡಿಯಾ ಕನ್ನಡ ಶಾಸಕರ ಮೌಲ್ಯ ಮಾಪನ ಮಾಡಲು Rate your MLA ಎಂಬ ಅಭಿಯಾನ ಆರಂಭಿಸಿದೆ. ಇಲ್ಲಿ ನಿಮ್ಮ ಕ್ಷೇತ್ರದ ಶಾಸಕರು ಮಾಡಿದ ಕೆಲಸಗಳಿಗೆ ನೀವು ಸ್ಟಾರ್‌ಗಳನ್ನು ನೀಡುವ ಮೂಲಕ ಅಂಕ ನೀಡಬಹುದು.
ಒಟ್ಟು 9 ಅಂಶಗಳ ಆಧಾರದ ಮೇಲೆ ನೀವು ಶಾಸಕರ ಮೌಲ್ಯ ಮಾಪನ ಮಾಡಬಹುದು. ಇದರಲ್ಲಿ ನೀವು ಸ್ಟಾರ್ ರೇಟಿಂಗ್ ಮೂಲಕ ಅಂಕ ನೀಡಬಹುದು. ಈ ಪುಟವನ್ನು ನೀವು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಇತರರು ಸಹ ಮತ ನೀಡುವಂತೆ ಮನವಿ ಮಾಡಬಹುದಾಗಿದೆ.
ಶಾಸಕರ ಲಭ್ಯತೆ, ಕ್ಷೇತ್ರದ ಅಭಿವೃದ್ಧಿ ಕಾರ್ಯ, ವಿಧಾನಸಭೆಯಲ್ಲಿ ಮಾತನಾಡಿದ್ದು, ರಸ್ತೆ ಸೌಕರ್ಯ, ನೀರಿನ ಸೌಕರ್ಯ, ಮೂಲ ಸೌಕರ್ಯ ಮುಂತಾದ ಅಂಶಗಳ ಆಧಾರದ ಮೇಲೆ ಜನರು ವೋಟ್ ಮಾಡಬೇಕು.
ಈ ಪುಟದಲ್ಲಿ ನೀವು ಚನ್ನಪಟ್ಟಣ ಕ್ಷೇತ್ರದ ಜೆಡಿಎಸ್ ಶಾಸಕ ಎಚ್. ಡಿ. ಕುಮಾರಸ್ವಾಮಿಗೆ ವೋಟ್ ಮಾಡಬಹುದಾಗಿದೆ. ಪುಟದ ಕೊನೆಯಲ್ಲಿ ನೀವು ಎಷ್ಟು ಅಂಕ ನೀಡಿದ್ದೀರಿ? ಎಂಬ ಸರಾಸರಿ ತೋರಿಸುತ್ತದೆ.
ಈ ಪುಟದಲ್ಲಿ ಚನ್ನಪಟ್ಟಣ ಕ್ಷೇತ್ರದ ವಿವರ, 2018ರ ಚುನಾವಣೆಯಲ್ಲಿನ ಅಭ್ಯರ್ಥಿಗಳ ವಿವರ, ಪಡೆದ ಮತಗಳು ಸೇರಿದಂತೆ ಇತರ ವಿವರಗಳಿವೆ. ಚುನಾವಣೆ ಹತ್ತಿರವಾಗುತ್ತಿರುವಾಗ ನೀವು ಶಾಸಕರ ಮೌಲ್ಯ ಮಾಪನ ಮಾಡಿ, ಶಾಸಕರಿಗೆ ಮತ ನೀಡಿ.
ಎರಡು ಕಡೆ ಮತ ನೀಡಿ; 2018ರ ಚುನಾವಣೆಯಲ್ಲಿ ಎಚ್. ಡಿ. ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗಿ ಚನ್ನಪಟ್ಟಣದಲ್ಲಿ ಕಣಕ್ಕಿಳಿದರು. 87,995 ಮತಗಳನ್ನು ಪಡೆದು 21,530 ಮತಗಳ ಅಂತರದಿಂದ ಬಿಜೆಪಿಯ ಅಭ್ಯರ್ಥಿಯ ಸಿ. ಪಿ. ಯೋಗೇಶ್ವರ್ ಸೋಲಿಸಿದರು.
ರಾಮನಗರ ಕ್ಷೇತ್ರದಿಂದ ಸಹ ಎಚ್. ಡಿ. ಕುಮಾರಸ್ವಾಮಿ ಕಣಕ್ಕಿಳಿದಿದ್ದರು. 92,626 ಮತಗಳನ್ನು ಪಡೆದು, 69,990 ಮತಗಳನ್ನು ಪಡೆದಿದ್ದ ಕಾಂಗ್ರೆಸ್‌ನ ಇಕ್ಬಾಲ್ ಹುಸೇನ್ ಸೋಲಿಸಿದರು.
ಚನ್ನಪಟ್ಟಣ ಮತ್ತು ರಾಮನಗರ ಎರಡೂ ಕ್ಷೇತ್ರಗಳಲ್ಲಿ ಗೆದ್ದ ಎಚ್. ಡಿ. ಕುಮಾರಸ್ವಾಮಿ ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡುವುದು ಅನಿವಾರ್ಯವಾಯಿತು. ಆಗ ರಾಮನಗರ ಕ್ಷೇತ್ರಕ್ಕೆ ರಾಜೀನಾಮೆ ನೀಡಿ, ಚನ್ನಪಟ್ಟಣದ ಶಾಸಕರಾಗಿ ಉಳಿದರು. ಬಳಿಕ ರಾಮನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಜೆಡಿಎಸ್‌ನಿಂದ ಕಣಕ್ಕಿಳಿದು ಶಾಸಕರಾಗಿ ಆಯ್ಕೆಯಾಗಿದ್ದಾರೆ.
2018ರ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಿತು. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿತು. ಚನ್ನಪಟ್ಟಣದ ಶಾಸಕ ಎಚ್. ಡಿ. ಕುಮಾರಸ್ವಾಮಿ ಮೇ 23ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಮುಖ್ಯಮಂತ್ರಿಯಾದ ಬಳಿಕ ಕ್ಷೇತ್ರಕ್ಕೆ ಅನುದಾನ ತಂದರು.
ಆದರೆ ಕೆಲವು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ವಿರುದ್ಧ ಬಂಡಾಯದ ಬಾವುಟ ಹಾರಿಸಿದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿತು. ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನಕ್ಕೆ 23 ಜುಲೈ 2019ರಂದು ರಾಜೀನಾಮೆ ನೀಡಿದರು.













Click it and Unblock the Notifications