ಶಾಸಕರ ಮೌಲ್ಯ ಮಾಪನ; ಹಾವೇರಿ ಜಿಲ್ಲೆಯ ಶಾಸಕರಿಗೆ ಅಂಕ ಕೊಡಿ
ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭವಾಗಿದೆ. ರಾಜಕೀಯ ಪಕ್ಷಗಳು ಚುನಾವಣೆಯ ತಯಾರಿಯನ್ನು ಬಿರುಸಿನಿಂದ ಆರಂಭಿಸಿವೆ. 2023ರ ಮೇ ತಿಂಗಳಿನಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದೆ. ಕಳೆದ ಚುನಾವಣೆಯಲ್ಲಿ ಜನರು ಆಯ್ಕೆ ಮಾಡಿದ ಶಾಸಕರು ಮಾಡಿದ ಕೆಲಸಗಳಿಗೆ ಅಂಕ ನೀಡಲು ಈಗ ಅವಕಾಶ ಸಿಕ್ಕಿದೆ.
ಶಾಸಕರು ಕ್ಷೇತ್ರದ ಸಮಸ್ಯೆಗೆ ಸ್ಪಂದಿಸಿದ್ದು ಹೇಗೆ?, ಕೋವಿಡ್ ಸಮಯದಲ್ಲಿ ಶಾಸಕರ ಕಾರ್ಯ ವೈಖರಿ ಹೇಗಿತ್ತು? ಎಂದು ಜನರು ಮೌಲ್ಯ ಮಾಪನ ಮಾಡಬಹುದು. ಒನ್ ಇಂಡಿಯಾ ಕನ್ನಡ ಶಾಸಕರ ಮೌಲ್ಯ ಮಾಪನ ಮಾಡಲು Rate your MLA ಎಂಬ ಅಭಿಯಾನ ನಡೆಸುತ್ತಿದೆ. ನಿಮ್ಮ ಕ್ಷೇತ್ರದ ಶಾಸಕರು ಮಾಡಿದ ಕೆಲಸಗಳಿಗೆ ನೀವು ಇಲ್ಲಿ ಸ್ಟಾರ್‌ಗಳನ್ನು ನೀಡುವ ಮೂಲಕ ಅಂಕ ಕೊಡಬಹುದು.
ಈ ಪುಟದಲ್ಲಿ ಜನರು ಹಾವೇರಿ ಜಿಲ್ಲೆಯ ಶಾಸಕರ ಕಾರ್ಯ ವೈಖರಿಗೆ ಅಂಕ ನೀಡಬಹುದು. ಮತದಾನ ಪೂರ್ಣಗೊಂಡ ಬಳಿಕ ಪುಟದ ಕೊನೆಯಲ್ಲಿ ಜನರು ನೀಡಿದ ಸರಾಸರಿ ಅಂಕ ನೋಡಬಹುದು. ಫೇಸ್ ಬುಕ್, ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಈ ಪುಟವನ್ನು ಶೇರ್ ಮಾಡಬಹುದು.
ಒಟ್ಟು 9 ಅಂಶಗಳ ಆಧಾರದ ಮೇಲೆ ಜನರು ಶಾಸಕರ ಕಾರ್ಯ ವೈಖರಿ ಮೌಲ್ಯ ಮಾಪನ ಮಾಡಬಹುದು. ಸ್ಟಾರ್ ರೇಟಿಂಗ್ ಮೂಲಕ ಅಂಕ ನೀಡಬಹುದು. ಜನರು ವೋಟ್ ಮಾಡಿದ ಬಳಿಕ ಪುಟವನ್ನು ಹಂಚಿಕೆ ಮಾಡಬಹುದು. ಶಾಸಕರ ಲಭ್ಯತೆ, ಕ್ಷೇತ್ರದ ಅಭಿವೃದ್ಧಿ ಕಾರ್ಯ, ವಿಧಾನಸಭೆಯಲ್ಲಿ ಮಾತನಾಡಿದ್ದು, ರಸ್ತೆ ಸೌಕರ್ಯ, ನೀರಿನ ಸೌಕರ್ಯ, ಮೂಲ ಸೌಕರ್ಯ ಮುಂತಾದ ಅಂಶಗಳ ಆಧಾರದ ಮೇಲೆ ಜನರು ವೋಟ್ ಮಾಡಲು ಅವಕಾಶ ಕೊಡಲಾಗಿದೆ.

ಮುಖ್ಯಮಂತ್ರಿಗಳಿಗೆ ಅಂಕ ನೀಡಿ
ಹಾವೇರಿ ಜಿಲ್ಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತವರು ಜಿಲ್ಲೆ. ಜಿಲ್ಲೆಯಲ್ಲಿ ಶಿಗ್ಗಾಂವ, ಹಾನಗಲ್, ಹಾವೇರಿ, ಬ್ಯಾಡಗಿ, ಹಿರೇಕೆರೂರು ಮತ್ತು ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರಗಳಿವೆ.
ಶಿಗ್ಗಾಂವ ಕ್ಷೇತ್ರದ ಶಾಸಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. 2018ರ ಚುನಾವಣೆಯಲ್ಲಿ ಅವರು 83,868 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಶಾಸಕರಿಗೆ ಅಂಕ ನೀಡಲು ಇಲ್ಲಿ ಕ್ಲಿಕ್ ಮಾಡಿ.

ಕಾಂಗ್ರೆಸ್‌ನ ಶ್ರೀನಿವಾಸ ಮಾನೆ
ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕರು ಕಾಂಗ್ರೆಸ್ ಶ್ರೀನಿವಾಸ ಮಾನೆ. 2018ರ ಚುನಾವಣೆಯಲ್ಲಿ ಬಿಜೆಪಿಯ ಸಿ. ಎಂ. ಉದಾಸಿ ಜಯಗಳಿಸಿದ್ದರು. ಅವರ ಅಕಾಲಿಕ ಮರಣದ ನಂತರ ಉಪ ಚುನಾವಣೆ ಎದುರಾಯಿತು. 2021ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನ ಶ್ರೀನಿವಾಸ ಮಾನೆ 7,373 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಶಾಸಕರಿಗೆ ಅಂಕ ನೀಡಲು ಇಲ್ಲಿ ಕ್ಲಿಕ್ ಮಾಡಿ.

ಹಾವೇರಿ ವಿಧಾನಸಭಾ ಕ್ಷೇತ್ರ
ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕರು ಬಿಜೆಪಿಯ ನೆಹರೂ ಓಲೇಕರ್. 2018ರ ಚುನಾವಣೆಯಲ್ಲಿ 86,565 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ನಿಮ್ಮ ಶಾಸಕರ ಕಾರ್ಯ ವೈಖರಿಗೆ ಅಂಕ ನೀಡಲು ಇಲ್ಲಿ ಕ್ಲಿಕ್ ಮಾಡಿ.

ಬ್ಯಾಡಗಿ ವಿಧಾನಸಭಾ ಕ್ಷೇತ್ರ
ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಶಾಸಕರು ಬಿಜೆಪಿಯ ವಿರೂಪಾಕ್ಷಪ್ಪ ಬಳ್ಳಾರಿ. 2018ರ ಚುನಾವಣೆಯಲ್ಲಿ ಅವರು 91,721 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ನಿಮ್ಮ ಶಾಸಕರ ಕಾರ್ಯಗಳಿಗೆ ಅಂಕ ನೀಡಲು ಇಲ್ಲಿ ಕ್ಲಿಕ್ ಮಾಡಿ.

ಹಿರೇಕೆರೂರ ವಿಧಾನಸಭಾ ಕ್ಷೇತ್ರ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಕೃಷಿ ಸಚಿವರಾಗಿರುವ ಬಿ. ಸಿ. ಪಾಟೀಲ್ ಹಿರೇಕೆರೂರ ವಿಧಾನಸಭಾ ಕ್ಷೇತ್ರದ ಶಾಸಕರು. 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು 72,461 ಮತಗಳನ್ನು ಪಡೆದು ಜಯಗಳಿಸಿದ್ದರು. ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಿ 2019ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಶಾಸಕರಿಗೆ ಅಂಕ ನೀಡಲು ಇಲ್ಲಿ ಕ್ಲಿಕ್ ಮಾಡಿ.

ರಾಣೆಬೆನ್ನೂರ ವಿಧಾನಸಭಾ ಕ್ಷೇತ್ರ
ರಾಣೆಬೆನ್ನೂರ ವಿಧಾನಸಭಾ ಕ್ಷೇತ್ರದ ಶಾಸಕರು ಬಿಜೆಪಿಯ ಅರುಣ್ ಕುಮಾರ್ ಪೂಜಾರಿ. 2018ರ ಚುನಾವಣೆಯಲ್ಲಿ ಕೆಜೆಪಿಯ ಆರ್. ಶಂಕರ್ 63,910 ಮತಗಳನ್ನು ಪಡೆದು ಜಯಗಳಿಸಿದ್ದರು. ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. 2019ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಅರುಣ್ ಕುಮಾರ್ ಪೂಜಾರಿ ಗೆಲುವು ಸಾಧಿಸಿದ್ದಾರೆ. ಶಾಸಕರಿಗೆ ಅಂಕ ನೀಡಲು ಕ್ಲಿಕ್ ಮಾಡಿ.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications