ಶಾಸಕರ ಮೌಲ್ಯ ಮಾಪನ; ಡಿಕೆ ಶಿವಕುಮಾರ್ ಕಾರ್ಯ ವೈಖರಿಗೆ ಅಂಕ ನೀಡಿ
ರಾಮನಗರ, ಆಗಸ್ಟ್ 26; ಕರ್ನಾಟಕದಲ್ಲಿ ಚುನಾವಣೆ ಹತ್ತಿರವಾಗುತ್ತಿದೆ. 2018ರ ಚುನಾವಣೆಯಲ್ಲಿ ಜನರು ಮತದಾನ ಮಾಡಿ ಆಯ್ಕೆ ಮಾಡಿದ ಶಾಸಕರು ನಾಲ್ಕೂವರೆ ವರ್ಷಗಳಲ್ಲಿ ಮಾಡಿದ್ದೇನು? ಎಂಬುದನ್ನು ಈಗ ಮೌಲ್ಯ ಮಾಪನ ಮಾಡುವ ಸಮಯ ಬಂದಿದೆ.
ಒನ್ ಇಂಡಿಯಾ ಕನ್ನಡ ಶಾಸಕರ ಮೌಲ್ಯ ಮಾಪನ ಮಾಡಲು Rate your MLA ಎಂಬ ಅಭಿಯಾನ ಆರಂಭಿಸಿದೆ. ಇಲ್ಲಿ ನಿಮ್ಮ ಕ್ಷೇತ್ರದ ಶಾಸಕರು ಮಾಡಿದ ಕೆಲಸಗಳಿಗೆ ನೀವು ಸ್ಟಾರ್‌ಗಳನ್ನು ನೀಡುವ ಮೂಲಕ ಅಂಕ ನೀಡಬಹುದು. ಆನ್‌ಲೈನ್ ಮೂಲಕ ಮತದಾನ ಮಾಡಲು ಇದು ಒಂದು ವೇದಿಕೆ.
ಒಟ್ಟು 9 ಅಂಶಗಳ ಆಧಾರದ ಮೇಲೆ ನೀವು ನಿಮ್ಮ ಶಾಸಕರ ಮೌಲ್ಯ ಮಾಪನ ಮಾಡಬಹುದು. ಇದರಲ್ಲಿ ನೀವು ಸ್ಟಾರ್ ರೇಟಿಂಗ್ ಮೂಲಕ ಅಂಕ ನೀಡಬಹುದು. ನೀವು ವೋಟ್ ಮಾಡಿದ ಬಳಿಕ ಈ ಪುಟವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಇತರರು ಸಹ ಮತ ನೀಡುವಂತೆ ಮನವಿ ಮಾಡಬಹುದು. ವಾಟ್ಸಪ್, ಟೆಲಿಗ್ರಾಮ್ ಮೂಲಕ ಈ ಪುಟವನ್ನು ಶೇರ್ ಮಾಡಿ ಹೆಚ್ಚು ಜನರನ್ನು ತಲುಪುವಂತೆ ಮಾಡಬಹುದು.
ಶಾಸಕರ ಲಭ್ಯತೆ, ಕ್ಷೇತ್ರದ ಅಭಿವೃದ್ಧಿ ಕಾರ್ಯ, ವಿಧಾನಸಭೆಯಲ್ಲಿ ಮಾತನಾಡಿದ್ದು, ರಸ್ತೆ ಸೌಕರ್ಯ, ನೀರಿನ ಸೌಕರ್ಯ, ಮೂಲ ಸೌಕರ್ಯ ಮುಂತಾದ ಅಂಶಗಳ ಆಧಾರದ ಮೇಲೆ ಜನರು ವೋಟ್ ಮಾಡಬೇಕು.
ಈ ಪುಟದಲ್ಲಿ ನೀವು ರಾಮನಗರ ಜಿಲ್ಲೆಯ ಕನಕಪುರ ಕ್ಷೇತ್ರದ ಕಾಂಗ್ರೆಸ್ ಶಾಸಕರ ಡಿ. ಕೆ. ಶಿವಕುಮಾರ್‌ಗೆ ವೋಟ್ ಮಾಡಬಹುದಾಗಿದೆ. ವೋಟ್ ಪೂರ್ಣಗೊಂಡ ಬಳಿಕ ಪುಟದ ಕೊನೆಯಲ್ಲಿ ನೀವು ನೀಡಿದ ಸರಾಸರಿ ಅಂಕ ತೋರಿಸುತ್ತದೆ. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಲು ಲಿಂಕ್ ಸಿಗುತ್ತದೆ.
ಇದು ಚುನಾವಣಾ ಪುಟವಾಗಿದೆ. ಕನಕಪುರ ಕ್ಷೇತ್ರದ ವಿವರ, 2018ರ ಚುನಾವಣೆಯಲ್ಲಿನ ಅಭ್ಯರ್ಥಿಗಳ ವಿವರ, ಪಡೆದ ಮತಗಳು ಸೇರಿದಂತೆ ಇತರ ವಿವರಗಳಿವೆ. ಹಿಂದಿನ ಹಲವು ಚುನಾವಣೆಯಲ್ಲಿ ಕಣದಲ್ಲಿದ್ದ ಅಭ್ಯರ್ಥಿಗಳು, ಪಡೆದ ಮತಗಳು ಸೇರಿದಂತೆ ಇತರ ವಿವರವಿದೆ. ಚುನಾವಣೆ ಹತ್ತಿರವಾಗುತ್ತಿರುವಾಗ ನೀವು ಶಾಸಕರ ಮೌಲ್ಯ ಮಾಪನ ಮಾಡಿ, ಶಾಸಕರಿಗೆ ಮತ ನೀಡಿ.
2018ರ ಚುನಾವಣೆಯಲ್ಲಿ ಡಿ. ಕೆ. ಶಿವಕುಮಾರ್ 1,27,552 ಮತಗಳನ್ನು ಪಡೆಯು ಮೂಲಕ ಕನಕಪುರ ಕ್ಷೇತ್ರದಲ್ಲಿ ಸುಮಾರು 79 ಸಾವಿರ ಮತಗಳ ಅಂತರದಲ್ಲಿ ಜೆಡಿಎಸ್‌ನ ನಾರಾಯಣ ಗೌಡರನ್ನು ಸೋಲಿಸಿದ್ದಾರೆ. 2013ರ ಚುನಾವಣೆಯಲ್ಲಿಯೂ ಇದೇ ಕ್ಷೇತ್ರದಿಂದ ಡಿ. ಕೆ. ಶಿವಕುಮಾರ್ ಆಯ್ಕೆಯಾಗಿದ್ದರು.
ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಆಸ್ತಿತ್ವಕ್ಕೆ ಬಂದಿತು. ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾದರು. ಡಿ. ಕೆ. ಶಿವಕುಮಾರ್ ಸಚಿವರಾದರು. ಜಲಸಂಪನ್ಮೂಲ ಖಾತೆ ಸಿಕ್ಕಿತು. ಆದರೆ ಶಾಸಕರ ರಾಜೀನಾಮೆ ಬಳಿಕ 2019ರಲ್ಲಿ ಬಹುಮತ ಕಳೆದುಕೊಂಡು ಎಚ್. ಡಿ. ಕುಮಾರಸ್ವಾಮಿ ಸರ್ಕಾರ ಪತನಗೊಂಡಿತು.
ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಡಿ. ಕೆ. ಶಿವಕುಮಾರ್ ತಮ್ಮದೇ ಆದ ಪ್ರಭಾವ ಹೊಂದಿದ್ದಾರೆ. 2008ರಿಂದ ಸತತ ಮೂರು ಚುನಾವಣೆಗಳಲ್ಲಿ ಅವರು ಕನಕಪುರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಿದ್ದಾರೆ. ಅದಕ್ಕೂ ಮೊದಲು ಅವರು ಸಾತನೂರು ಕ್ಷೇತ್ರದಿಂದ ಶಾಸಕರಾಗಿದ್ದರು.
ಕೆಪಿಸಿಸಿ ಅಧ್ಯಕ್ಷರು ಆಗಿರುವ ಡಿ. ಕೆ. ಶಿವಕುಮಾರ್ 2023ರ ಚುನಾವಣೆಯಲ್ಲಿ ತಮ್ಮ ಕ್ಷೇತ್ರದ ಜೊತೆಗೆ ರಾಜ್ಯದ ಇತರ ಕ್ಷೇತ್ರಗಳ ಉಸ್ತುವಾರಿ ನೋಡಿಕೊಳ್ಳಬೇಕು. ಪ್ರಚಾರಕ್ಕಾಗಿ ರಾಜ್ಯ ಪ್ರವಾಸ ಮಾಡಬೇಕು, ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಒಂದು ವೇಳೆ ಮುಂದಿನ ಚುನಾವಣೆಯಲ್ಲಿ ಅವರು ಗೆದ್ದರೆ ಮುಖ್ಯಮಂತ್ರಿಯೂ ಆಗಬಹುದು.
ಕನಕಪುರ ಕ್ಷೇತ್ರದಲ್ಲಿ ಡಿ. ಕೆ. ಶಿವಕುಮಾರ್ ಮಾಡಿರುವ ಅಭಿವೃದ್ಧಿ ಕೆಲಸಗಳು ಏನು?. ಕೋವಿಡ್ ಸಮಯದಲ್ಲಿ ಶಾಸಕರು ಕ್ಷೇತ್ರದ ಜನರಿಗೆ ಹೇಗೆ ಸ್ಪಂದಿಸಿದ್ದಾರೆ?. ಸತತ ಮೂರು ಬಾರಿ ಗೆಲ್ಲಿಸಿರುವ ಕನಕಪುರದ ಜನರು ಶಾಸಕರಿಗೆ ನೀಡುವ ಅಂಕಗಳು ಎಷ್ಟು?.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್













Click it and Unblock the Notifications