ಶಾಸಕರ ಮೌಲ್ಯ ಮಾಪನ; ಕೊಡಗು ಜಿಲ್ಲೆಯ ಶಾಸಕರಿಗೆ ಅಂಕ ನೀಡಿ
ವಿಧಾನಸಭೆ ಚುನಾವಣೆಗೆ ಕರ್ನಾಟಕ ಸಿದ್ಧವಾಗುತ್ತಿದೆ. ರಾಜಕೀಯ ಪಕ್ಷಗಳು ಚುನಾವಣೆಯ ತಯಾರಿ ಆರಂಭಿಸಿವೆ. 2023ರ ಏಪ್ರಿಲ್ ಅಥವ ಮೇ ತಿಂಗಳಿನಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದೆ. ಕಳೆದ ಚುನಾವಣೆಯಲ್ಲಿ ಜನರು ಆಯ್ಕೆ ಮಾಡಿದ ಶಾಸಕರು ಮಾಡಿದ ಕೆಲಸಗಳಿಗೆ ಅಂಕ ನೀಡಲು ಈಗ ಜನರಿಗೆ ಅವಕಾಶ ನೀಡಲಾಗಿದೆ.
ಶಾಸಕರು ಕ್ಷೇತ್ರದ ಸಮಸ್ಯೆಗೆ ಸ್ಪಂದಿಸಿದ್ದು ಹೇಗೆ?, ಕೋವಿಡ್ ಸಮಯದಲ್ಲಿ ಶಾಸಕರ ಕಾರ್ಯ ವೈಖರಿ ಹೇಗಿತ್ತು?, ಎಂದು ಜನರು ಮೌಲ್ಯ ಮಾಪನ ಮಾಡಬಹುದು. ಒನ್ ಇಂಡಿಯಾ ಕನ್ನಡದ ಈ ಮೂಲಕ ಶಾಸಕರಿಗೆ ಅಂಕ ನೀಡಲು ಅವಕಾಶ ನೀಡಿದೆ.
ಚುನಾವಣೆ ಹಿನ್ನಲೆಯಲ್ಲಿ ಒನ್ ಇಂಡಿಯಾ ಕನ್ನಡ ಶಾಸಕರ ಮೌಲ್ಯ ಮಾಪನ ಮಾಡಲು Rate your MLA ಎಂಬ ಅಭಿಯಾನ ನಡೆಸುತ್ತಿದೆ. ನಿಮ್ಮ ಕ್ಷೇತ್ರದ ಶಾಸಕರು ಮಾಡಿದ ಕೆಲಸಗಳಿಗೆ ನೀವು ಇಲ್ಲಿ ಸ್ಟಾರ್‌ಗಳನ್ನು ನೀಡುವ ಮೂಲಕ ಅಂಕ ಕೊಡಬಹುದು. ಸಾಮಾಜಿಕ ಜಾಲತಾಣಗಳಲ್ಲಿ ಈ ಪುಟವನ್ನು ಶೇರ್ ಮಾಡಬಹುದಾಗಿದೆ.

ಈ ಪುಟದಲ್ಲಿ ಜನರು ಕೊಡಗು ಜಿಲ್ಲೆಯ ಶಾಸಕರ ಕಾರ್ಯ ವೈಖರಿಗೆ ಅಂಕ ನೀಡಬಹುದು. ಮತದಾನ ಪೂರ್ಣಗೊಂಡ ಬಳಿಕ ಪುಟದ ಕೊನೆಯಲ್ಲಿ ಜನರು ನೀಡಿದ ಸರಾಸರಿ ಅಂಕ ನೋಡಬಹುದು. ಫೇಸ್ ಬುಕ್, ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಪುಟ ಶೇರ್ ಮಾಡಬಹುದು.
ಒಟ್ಟು 9 ಅಂಶಗಳ ಆಧಾರದ ಮೇಲೆ ಜನರು ಶಾಸಕರ ಕಾರ್ಯ ವೈಖರಿ ಮೌಲ್ಯ ಮಾಪನ ಮಾಡಬಹುದು. ಸ್ಟಾರ್ ರೇಟಿಂಗ್ ಮೂಲಕ ಅಂಕ ನೀಡಬಹುದು. ಜನರು ವೋಟ್ ಮಾಡಿದ ಬಳಿಕ ಪುಟವನ್ನು ಹಂಚಿಕೆ ಮಾಡಬಹುದು.
ಶಾಸಕರ ಲಭ್ಯತೆ, ಕ್ಷೇತ್ರದ ಅಭಿವೃದ್ಧಿ ಕಾರ್ಯ, ವಿಧಾನಸಭೆಯಲ್ಲಿ ಮಾತನಾಡಿದ್ದು, ರಸ್ತೆ ಸೌಕರ್ಯ, ನೀರಿನ ಸೌಕರ್ಯ, ಮೂಲ ಸೌಕರ್ಯ ಮುಂತಾದ ಅಂಶಗಳ ಆಧಾರದ ಮೇಲೆ ಜನರು ವೋಟ್ ಮಾಡಲು ಅವಕಾಶ ಕೊಡಲಾಗಿದೆ. ಮತ್ತೇಕೆ ತಡ ಈಗಲೇ ವೋಟ್ ಮಾಡಿ.
ಕೊಡಗು ಜಿಲ್ಲೆ ರಾಜ್ಯದಲ್ಲಿಯೇ ಅತಿ ಕಡಿಮೆ ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಜಿಲ್ಲೆ. ಈ ಜಿಲ್ಲೆ ಲೋಕಸಭೆ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದ ವ್ಯಾಪ್ತಿಗೆ ಸೇರುತ್ತದೆ. ಜಿಲ್ಲೆಯಲ್ಲಿ ಕೇವಲ ಎರಡು ವಿಧಾನಸಭಾ ಕ್ಷೇತ್ರಗಳಿವೆ. ಮಡಿಕೇರಿ ಮತ್ತು ವಿರಾಜಪೇಟೆ ಎರಡು ಕ್ಷೇತ್ರಗಳಾಗಿದ್ದು, ಎರಡೂ ಕ್ಷೇತ್ರಗಳು ಸದ್ಯ ಬಿಜೆಪಿಯ ವಶದಲ್ಲಿವೆ.
ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರೇ ಇದ್ದಾರೆ. ಮಡಿಕೇರಿ ಕ್ಷೇತ್ರದ ಶಾಸಕರು ಅಪ್ಪಚ್ಚು ರಂಜನ್, ವಿರಾಜಪೇಟೆ ಕ್ಷೇತ್ರದ ಶಾಸಕರು ಕೆ. ಜಿ. ಬೋಪಯ್ಯ.
ಈ ಇಬ್ಬರೂ ಶಾಸಕರಿಗೆ ಮುಂದಿನ ಚುನಾವಣೆಯಲ್ಲಿಯೂ ಬಿಜೆಪಿ ಟಿಕೆಟ್ ಸಿಗುವುದರಲ್ಲಿ ಯಾವುದೇ ಸಂಶಯವಿಲ್ಲ. ಹಾಗಾದರೆ 2018ರಲ್ಲಿ ನೀವು ಆಯ್ಕೆ ಮಾಡಿದ ಶಾಸಕರು ಮಾಡಿದ ಕೆಲಸಗಳು ಏನು? ಎಂದು ಜನರು ಈಗ ಮೌಲ್ಯ ಮಾಪನ ಮಾಡಬಹುದಾಗಿದೆ.
ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ ಮಡಿಕೇರಿ, ವಿರಾಜಪೇಟೆ ಕ್ಷೇತ್ರದ ಚುನಾವಣಾ ಪುಟ ತೆರೆದುಕೊಳ್ಳುತ್ತದೆ. ಅದರ ಮೂಲಕ ನೀವು ಶಾಸಕರ ಕಾರ್ಯ ವೈಖರಿಗೆ ಅಂಕ ನೀಡಬಹುದಾಗಿದೆ. ಬಳಿಕ ಆ ಪುಟವನ್ನು ಶೇರ್ ಮಾಡಿ, ಜನರು ಸಹ ಮತದಾನ ಮಾಡುವಂತೆ ಮನವಿ ಮಾಡಬಹುದಾಗಿದೆ.
ಕೊಡಗು ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಶಾಸಕರು ಹೇಗೆ ಸ್ಪಂದಿಸಿದ್ದಾರೆ. ಕೋವಿಡ್, ಮಳೆ, ಪ್ರವಾಹದ ಸಂದರ್ಭದಲ್ಲಿ ಶಾಸಕರು ಹೇಗೆ ಕೆಲಸ ಮಾಡಿದರು? ಎಂದು ಜನರು ಆಲೋಚಿಸಿ ಮತದಾನ ಮಾಡಬಹುದಾಗಿದೆ. ನಿಮ್ಮ ಶಾಸಕರ ಕಾರ್ಯ ವೈಖರಿ ಗಮನಿಸಿ, ನೀವು ಅಂಕ ನೀಡಿ...
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications