ಮೈಸೂರು ಜಿಲ್ಲೆಯ ಶಾಸಕರ ಕಾರ್ಯವೈಖರಿಗೆ ಅಂಕ ಕೊಡಿ
2023ರಲ್ಲಿ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ರಾಜಕೀಯ ಪಕ್ಷಗಳು, ನಾಯಕರು ಚುನಾವಣೆಯ ತಯಾರಿಯನ್ನು ಆರಂಭಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಜನರು ಆಯ್ಕೆ ಮಾಡಿದ ಶಾಸಕರು ಮಾಡಿದ ಕೆಲಸಗಳಿಗೆ ಅಂಕ ನೀಡಲು ಈಗ ಅವಕಾಶ ಸಿಕ್ಕಿದೆ.
ಶಾಸಕರು ಕ್ಷೇತ್ರದ ಸಮಸ್ಯೆಗೆ ಸ್ಪಂದಿಸಿದ್ದು ಹೇಗೆ?, ಕೋವಿಡ್ ಸಮಯದಲ್ಲಿ ಶಾಸಕರ ಕಾರ್ಯ ವೈಖರಿ ಹೇಗಿತ್ತು? ಎಂದು ಜನರು ಮೌಲ್ಯ ಮಾಪನ ಮಾಡಬಹುದು. ಒನ್ ಇಂಡಿಯಾ ಕನ್ನಡ ಶಾಸಕರ ಮೌಲ್ಯ ಮಾಪನ ಮಾಡಲು Rate your MLA ಎಂಬ ಅಭಿಯಾನ ನಡೆಸುತ್ತಿದೆ. ನಿಮ್ಮ ಕ್ಷೇತ್ರದ ಶಾಸಕರು ಮಾಡಿದ ಕೆಲಸಗಳಿಗೆ ನೀವು ಇಲ್ಲಿ ಸ್ಟಾರ್‌ಗಳನ್ನು ನೀಡುವ ಮೂಲಕ ಅಂಕ ಕೊಡಬಹುದು.
ಈ ಪುಟದಲ್ಲಿ ಜನರು ಮೈಸೂರು ಜಿಲ್ಲೆಯ ಶಾಸಕರ ಕಾರ್ಯ ವೈಖರಿಗೆ ಅಂಕ ನೀಡಬಹುದು. ಮತದಾನ ಪೂರ್ಣಗೊಂಡ ಬಳಿಕ ಪುಟದ ಕೊನೆಯಲ್ಲಿ ಜನರು ನೀಡಿದ ಸರಾಸರಿ ಅಂಕ ನೋಡಬಹುದು. ಫೇಸ್ ಬುಕ್, ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಈ ಪುಟವನ್ನು ಶೇರ್ ಮಾಡಬಹುದು.
ಒಟ್ಟು 9 ಅಂಶಗಳ ಆಧಾರದ ಮೇಲೆ ಜನರು ಶಾಸಕರ ಕಾರ್ಯ ವೈಖರಿ ಮೌಲ್ಯ ಮಾಪನ ಮಾಡಬಹುದು. ಸ್ಟಾರ್ ರೇಟಿಂಗ್ ಮೂಲಕ ಅಂಕ ನೀಡಬಹುದು. ಜನರು ವೋಟ್ ಮಾಡಿದ ಬಳಿಕ ಪುಟವನ್ನು ಹಂಚಿಕೆ ಮಾಡಬಹುದು. ಶಾಸಕರ ಲಭ್ಯತೆ, ಕ್ಷೇತ್ರದ ಅಭಿವೃದ್ಧಿ ಕಾರ್ಯ, ವಿಧಾನಸಭೆಯಲ್ಲಿ ಮಾತನಾಡಿದ್ದು, ರಸ್ತೆ ಸೌಕರ್ಯ, ನೀರಿನ ಸೌಕರ್ಯ, ಮೂಲ ಸೌಕರ್ಯ ಮುಂತಾದ ಅಂಶಗಳ ಆಧಾರದ ಮೇಲೆ ಜನರು ವೋಟ್ ಮಾಡಲು ಅವಕಾಶ ಕೊಡಲಾಗಿದೆ.
ಮೈಸೂರು ಜಿಲ್ಲೆಯಲ್ಲಿ ಪಿರಿಯಾಪಟ್ಟಣ, ಕೆ. ಆರ್. ನಗರ, ಹುಣಸೂರು, ಹೆಚ್. ಡಿ. ದೇವೇಗೌಡ, ನಂಜನಗೂಡು, ಚಾಮುಂಡೇಶ್ವರಿ, ಕೃಷ್ಣರಾಜ, ಚಾಮರಾಜ, ನರಸಿಂಹರಾಜ, ವರುಣ, ಟಿ. ನರಸೀಪುರ ವಿಧಾನಸಭಾ ಕ್ಷೇತ್ರಗಳಿವೆ.

ಜೆಡಿಎಸ್‌ನ ಕೆ. ಮಹಾದೇವ
ಪಿರಿಯಾಪಟ್ಟಣ ಕ್ಷೇತ್ರದ ಶಾಸಕರು ಜೆಡಿಎಸ್‌ನ ಕೆ. ಮಹಾದೇವ. 2018ರ ಚುನಾವಣೆಯಲ್ಲಿ ಅವರು 77,770 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ನಿಮ್ಮ ಶಾಸಕರ ಕಾರ್ಯ ವೈಖರಿಗೆ ಅಂಕವನ್ನು ನೀಡಿ.

ಜೆಡಿಎಸ್‌ನ ಸಾ. ರಾ. ಮಹೇಶ್
ಕೃಷ್ಣರಾಜನಗರ ಕ್ಷೇತ್ರದ ಶಾಸಕರು ಜೆಡಿಎಸ್‌ನ ಸಾ. ರಾ. ಮಹೇಶ್. 2018ರ ಚುನಾವಣೆಯಲ್ಲಿ ಅವರು 85,011 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ನಿಮ್ಮ ಶಾಸಕರಿಗೆ ಅಂಕ ನೀಡಲು ಇಲ್ಲಿ ಕ್ಲಿಕ್ ಮಾಡಿ.

ಕಾಂಗ್ರೆಸ್‌ನ ಎಚ್. ಪಿ. ಮಂಜುನಾಥ್
ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕರು ಕಾಂಗ್ರೆಸ್‌ನ ಎಚ್. ಪಿ. ಮಂಜುನಾಥ್. 2018ರ ಚುನಾವಣೆಯಲ್ಲಿ ಅವರು 83,092 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಶಾಸಕರ ಕಾರ್ಯವೈಖರಿಗೆ ಅಂಕ ನೀಡಲು ಇಲ್ಲಿ ಕ್ಲಿಕ್ ಮಾಡಿ.

ಕಾಂಗ್ರೆಸ್‌ನ ಸಿ. ಅನಿಲ್ ಕುಮಾರ್
ಹೆಗ್ಗಡದೇವನಕೋಟೆ ಕ್ಷೇತ್ರದ ಶಾಸಕರು ಕಾಂಗ್ರೆಸ್‌ನ ಸಿ. ಅನಿಲ್ ಕುಮಾರ್. 2018ರ ಚುನಾವಣೆಯಲ್ಲಿ 76,652 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ನಿಮ್ಮ ಶಾಸಕರ ಕಾರ್ಯ ವೈಖರಿಗೆ ಅಂಕ ನೀಡಿ.

ಬಿಜೆಪಿಯ ಬಿ. ಹರ್ಷವರ್ಧನ್
ನಂಜನಗೂಡು ಕ್ಷೇತ್ರದ ಶಾಸಕರು ಬಿಜೆಪಿಯ ಬಿ. ಹರ್ವವರ್ಧನ್. 2018ರ ಚುನಾವಣೆಯಲ್ಲಿ ಅವರು 78,030 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ನಿಮ್ಮ ಶಾಸಕರಿಗೆ ಅಂಕ ನೀಡಲು ಇಲ್ಲಿ ಕ್ಲಿಕ್ ಮಾಡಿ.

ಜೆಡಿಎಸ್‌ನ ಜಿ. ಟಿ. ದೇವೇಗೌಡ
ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರು ಜೆಡಿಎಸ್‌ನ ಜಿ. ಟಿ. ದೇವೇಗೌಡ. 2018ರ ಚುನಾವಣೆಯಲ್ಲಿ 121,325 ಮತಗಳನ್ನು ಪಡೆದು ಅವರು ಜಯಗಳಿಸಿದ್ದಾರೆ. ನಿಮ್ಮ ಕ್ಷೇತ್ರದ ಶಾಸಕರ ಕಾರ್ಯವೈಖರಿಗೆ ಅಂಕ ನೀಡಲು ಇಲ್ಲಿ ಕ್ಲಿಕ್ ಮಾಡಿ.

ಬಿಜೆಪಿಯ ಎಸ್. ಎ. ರಾಮದಾಸ್
ಕೃಷ್ಣರಾಜ ಕ್ಷೇತ್ರದ ಶಾಸಕರು ಬಿಜೆಪಿಯ ಎಸ್. ಎ. ರಾಮದಾಸ್. 2018ರ ಚುನಾವಣೆಯಲ್ಲಿ 78,573 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ನಿಮ್ಮ ಶಾಸಕರಿಗೆ ಅಂಕ ನೀಡಲು ಇಲ್ಲಿ ಕ್ಲಿಕ್ ಮಾಡಿ.

ಬಿಜೆಪಿಯ ಎಲ್. ನಾಗೇಂದ್ರ
ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರು ಬಿಜೆಪಿಯ ಎಲ್. ನಾಗೇಂದ್ರ. 2018ರ ಚುನಾವಣೆಯಲ್ಲಿ 51,683 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ನಿಮ್ಮ ಶಾಸಕರಿಗೆ ಅಂಕ ನೀಡಲು ಕ್ಲಿಕ್ ಮಾಡಿ.

ಕಾಂಗ್ರೆಸ್‌ನ ತನ್ವೀರ್ ಸೇಠ್
ನರಸಿಂಹರಾಜ ಕ್ಷೇತ್ರದ ಶಾಸಕರು ಕಾಂಗ್ರೆಸ್‌ನ ತನ್ವೀರ್ ಸೇಠ್. 2018ರ ಚುನಾವಣೆಯಲ್ಲಿ 62,268 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ನಿಮ್ಮ ಶಾಸಕರ ಕಾರ್ಯ ವೈಖರಿಗೆ ಅಂಕ ನೀಡಲು ಕ್ಲಿಕ್ ಮಾಡಿ.

ಕಾಂಗ್ರೆಸ್‌ನ ಯತೀಂದ್ರ ಸಿದ್ದರಾಮಯ್ಯ
ವರುಣ ಕ್ಷೇತ್ರದ ಶಾಸಕರು ಕಾಂಗ್ರೆಸ್‌ನ ಯತೀಂದ್ರ ಸಿದ್ದರಾಮಯ್ಯ. 2018ರ ಚುನಾವಣೆಯಲ್ಲಿ 96,435 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ನಿಮ್ಮ ಶಾಸಕರಿಗೆ ಅಂಕ ನೀಡಲು ಕ್ಲಿಕ್ ಮಾಡಿ.

ಜೆಡಿಎಸ್‌ನ ಎಂ. ಅಶ್ವಿನ್ ಕುಮಾರ್
ಟಿ. ನರಸೀಪುರ ಕ್ಷೇತ್ರದ ಶಾಸಕರು ಜೆಡಿಎಸ್‌ನ ಎಂ. ಅಶ್ವಿನ್ ಕುಮಾರ್. 2018ರ ಚುನಾವಣೆಯಲ್ಲಿ 83,929 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ನಿಮ್ಮ ಶಾಸಕರಿಗೆ ಅಂಕ ನೀಡಲು ಕ್ಲಿಕ್ ಮಾಡಿ.
-
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ












Click it and Unblock the Notifications